Connect with us

DAKSHINA KANNADA

ಕುದ್ರೋಳಿ: ನಾರಾಯಣ ಗುರುಗಳ ಸ್ತಬ್ಧ ಚಿತ್ರ ನಿರಾಕರಣೆ ಬಗ್ಗೆ ಸಮಾಲೋಚನೆ ಸಭೆ

Published

on

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದೆಹಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರ ನಿರಾಕಾರಣೆ ಬಗ್ಗೆ ಬಿಲ್ಲವ ಸಂಘಗಳು ಮತ್ತು ಬ್ರಹ್ಮ ಶ್ರೀ ನಾರಾಯಣ ಗುರು ಸಂಘಗಳ ಪ್ರಮುಖರ ಸಭೆಯು ಜರಗಿತು.

ಜನಾರ್ಧನ ಪೂಜಾರಿಯವರ ಮಾರ್ಗದರ್ಶನದಂತೆ ಸಭೆಯಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಯಿತು.

ವೇದಿಕೆಯಲ್ಲಿ ಯಾರು ಕುಳಿತುಕೊಳ್ಳದೆ ಬ್ರಹ್ಮ ನಾರಾಯಣ ಗುರುಗಳ ಭಾವ ಚಿತ್ರ ಮಾತ್ರ ಇದ್ದು ಉಳಿದವರು ಸ್ವಯಂ ಸೇವಕರಂತೆ ಎದುರು ಕುಳಿತು ತಮ್ಮ ಅನಿಸಿಕೆಗಳನ್ನು ಹೇಳಿದರು.

ಈ ಸಂದರ್ಭದಲ್ಲಿ ಅನೇಕ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಹಳದಿ ವಸ್ತ್ರಧಾರಣೆ ಮಾಡಿ ಪ್ರತಿ ನಾರಾಯಣ ಗುರು ಸಂಘದಲ್ಲಿ ಗುರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಮಾಡಿ ಗುರು ಚಿಂತನೆಗಳನ್ನು ಹೇಳುವುದು,

ಪ್ರತಿ ತಾಲೂಕಿನಲ್ಲಿ ಹಳದಿ ವಸ್ತ್ರ ಧಾರಣೆ ಮಾಡಿ ಬ್ರಹ್ಮ ಶ್ರೀ ನಾರಾಯಣ ಗುರು ಟ್ಯಾಬ್ಲೋ ದಲ್ಲಿ ಗುರುದೇವರ ಸ್ತಬ್ಧ ಚಿತ್ರ ಮೆರವಣಿಗೆ ಮಾಡಬೇಕು ಹಾಗೂ 26 ನೇ ತಾರೀಖಿಗೆ ಎಲ್ಲರೂ ತಮ್ಮ ವಾಟ್ಸಾಪ್ ಡಿಪಿ ಗಳಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸಂದೇಶ ಮತ್ತು ಚಿತ್ರವನ್ನು ಹಾಕುವುದು.

ಗುರುಭಕ್ತರು ಜನವರಿ 26 ರಂದು ತಮ್ಮ ವಾಹನಗಳಲ್ಲಿ ಗುರುದೇವರ ಹಳದಿ ಧ್ವಜ ಹಾಕುವುದು ಅಷ್ಟೇ ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಹೊರಡುವ ಗುರುದೇವರ ಟ್ಯಾಬ್ಲೋ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಸಂಜೆ 6 ಘಂಟೆಗೆ ಬಂದು ಸೇರುವುದು.

ಕ್ಷೇತ್ರದಲ್ಲಿ ಜನಾರ್ಧನ ಪೂಜಾರಿ ಗುರುಭಕ್ತರನ್ನು ಸ್ವಾಗತಿಸಲಿದ್ದಾರೆ.

ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಕಟಪಾಡಿ ವಿಶ್ವನಾಥ ಕ್ಷೇತ್ರಕ್ಕೆ ಟ್ಯಾಬ್ಲೋ ಗಳ ಮೂಲಕ ಬಂದು ಜನ ಸೇರಲಿರುವುದು ಎಂದು ತೀರ್ಮಾನಿಸಲಾಯಿತು.

ಸಭೆಯಲ್ಲಿ ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಭಾಗವಹಿಸಿದರು ಹಾಗೂ ಒಕ್ಕೊರಲಿನಿಂದ ಗುರುದೇವರ ಸ್ತಬ್ಧ ಚಿತ್ರ ನಿರಾಕರಣೆಯ ಬಗ್ಗೆ ಖಂಡಿಸಿದರು.

ಬಿಲ್ಲವ ಸಂಘ ಮತ್ತು ಶ್ರೀ ನಾರಾಯಣ ಗುರುಸಂಘಗಳ ಪ್ರಮುಖರು ಬೃಹತ್ ಸಂಖ್ಯೆಯಲ್ಲಿ ಆಗಮಿಸಿದ್ದರು.

DAKSHINA KANNADA

ಮಂಗಳೂರು: ಡ್ರಗ್ಸ್‌ ನಿರ್ಮೂಲನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಬಸ್ಸು ಮಾಲಕರ ಸಂಘ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 110 ವರ್ಷಗಳ ಇತಿಹಾಸವನ್ನು ಹೊಂದಿರುವ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಿಕೊಂಡು ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ವತಿಯಿಂದ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಇದುವರೆಗೆ ಕೋಟಿಗಟ್ಟಲೆ ರೂಪಾಯಿಗಳ ರಿಯಾಯಿತಿ ದರದ ಬಸ್ಸು ಪಾಸುಗಳನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದೇವೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಲು ಮುಂದಾಗಿರುವ ನಗರ ಪೊಲೀಸ್‌ ಕಮಿಷನರ್‌ ಅವರ ಜೊತೆಗೆ ಜಿಲ್ಲಾ ಬಸ್ಸು ಮಾಲಕರ ಸಂಘವೂ ಕೈಜೋಡಿಸಿ ಡ್ರಗ್ ನಿರ್ಮೂಲನೆ ಮಾಡಲು ಬೀದಿ ನಾಟಕ ಪ್ರದರ್ಶನ ಮಾಡಲಿದ್ದೇವೆ ಎಂದು ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡ್ರಗ್ ಜಾಲಕ್ಕೆ ಕಡಿವಾಣ, ನಶೆಗೆ ಒಳಗಾಗುವ ವಿದ್ಯಾರ್ಥಿಗಳನ್ನು ಅದರಿಂದ ಹೊರತರುವ ಕೆಲಸ ಮಾಡುತ್ತಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ನುಡಿದರು. ಅಲ್ಲದೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆಗೆ ನಾವು ಕೈಜೋಡಿಸಿದ್ದೇವೆ. ಜನವರಿ 27ರ ಮಂಗಳವಾರ ರೋಶನಿ ನಿಲಯ ಕಾಲೇಜಿನ ಸಹಭಾಗಿತ್ವದೊಂದಿಗೆ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಹಲವು ಕಡೆ ಡ್ರಗ್‌ ವಿರೋಧಿ ಬೀದಿನಾಟಕ ಆಯೋಜನೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಮಂಗಳೂರು: ಹಂಚಿನ ಫ್ಯಾಕ್ಟರಿಯಲ್ಲಿ ಅ*ಗ್ನಿ ಅ*ವಘ*ಡ

ನಗರದ ಸೆಂಟ್ರಲ್‌ ಬಸ್ಸು ನಿಲ್ದಾಣ, ತೊಕ್ಕೊಟ್ಟು ಬಸ್ಸು ನಿಲ್ದಾಣ, ತಲಪಾಡಿ, ಉಳ್ಳಾಲ, ಲಾಲ್‌ಭಾಗ್‌ ಸೇರಿದಂತೆ ಹಲವು ಕಡೆಗಳ ಬಸ್ಸು ನಿಲ್ದಾಣಗಳಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎಲ್ಲಾ ಬಸ್ಸುಗಳಲ್ಲಿ ಸ್ಟಿಕ್ಕರ್‌ ಹಚ್ಚಿ ಜಾಗೃತಿ ಮೂಡಿಸಲಿದ್ದೇವೆ. ಇದಕ್ಕೆ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆಗಮಿಸಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ ರಾಮಚಂದ್ರ ನಾಯ್ಕ , ರಾಮಚಂದ್ರ ಪಿಲಾರ್ ಹಾಗೂ ಜೊತೆ ಕಾರ್ಯದರ್ಶಿ ರಾಜೇಶ್ ಟಿ ಯವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ರಿಗೆ ‘ಕನ್ನಡ ಪಯಸ್ವಿನಿ ಅವಾರ್ಡ್- 2026’ ಪ್ರದಾನ 

Published

on

ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026’ ಅಂತಾರಾಜ್ಯ ಪ್ರಶಸ್ತಿಯನ್ನು  ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆರಿಗೆ ಪ್ರದಾನ ಮಾಡಲಾಯಿತು.

ಕಾಸರಗೋಡು ನುಳ್ಳಿಪಾಡಿಯಲ್ಲಿ ನಡೆದ ಕನ್ನಡ ಭವನ ರಜತ ಸಂಭ್ರಮ – ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನುಅವರು  ಸ್ವೀಕರಿಸಿದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ  ಅಂಕಣಕಾರರಾಗಿ ಹಾಗೂ ಕ್ರೀಡಾ  ವಿಮರ್ಶಾತ್ಮಕ ಲೇಖನಗಳ  ಮೂಲಕ ಎಸ್. ಜಗದೀಶ್ಚಂದ್ರ ಅಂಚನ್ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

ಕಾರ್ಯಕ್ರಮದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಡಾ.ಕೆ.ವಾಮನ್ ರಾವ್, ನಿರ್ದೇಶಕ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ , ಕರ್ನಾಟಕ ಬ್ಯಾರಿ‌ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ , ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ , ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟ್ಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ , ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು  ಮೊದಲಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

Published

on

 

ಸಾಂದರ್ಭಿಕ ಚಿತ್ರ

ಮಂಗಳೂರು : ವಿವಿಧ ಡಾಕ್ಯುಮೆಂಟ್ಸ್‌ ಗಳಿದ್ದ ಪರ್ಸೊಂದು ಕಳೆದುಹೋಗಿದೆ. ಚೇತನ್ ಎಂಬವರು ಬಂಟ್ವಾಳದಿಂದ ಕುಂಟಲ್ ಪಲ್ಕೆಯವರೆಗೆ ಆಟೋದಲ್ಲಿ ಪ್ರಯಾಣಿಸಿದ್ದು, ಈ ವೇಳೆ ಅವರ ಪರ್ಸ್  ಜೇಬಿನಿಂದ ಕೆಳಗೆ ಬಿದ್ದಿದೆ. ಅದರಲ್ಲಿ ಆಧಾರ್ ಕಾರ್ಡ್, ಹಣ ಹಾಗೂ ಇತರೆ ಡಾಕ್ಯುಮೆಂಟ್ಸ್‌ ಗಳಿದ್ದವು. ಯಾರಿಗಾದರೂ ಪರ್ಸ್ ಸಿಕ್ಕಿದ್ದಲ್ಲಿ 9036015784 ನಂಬರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page