Connect with us

ತೀವ್ರ ಅನಾರೋಗ್ಯ ಪೀಡಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಆಸ್ಪತ್ರೆಗಳ ವಿರುದ್ಧ ಸರ್ಕಾರದ ಕ್ರಮಕ್ಕೆ ಎಸ್.ಡಿ.ಪಿ.ಐ ಒತ್ತಾಯ

Published

on

ತೀವ್ರ ಅನಾರೋಗ್ಯ ಪೀಡಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಆಸ್ಪತ್ರೆಗಳ ವಿರುದ್ಧ ಸರ್ಕಾರದ ಕ್ರಮಕ್ಕೆ ಎಸ್.ಡಿ.ಪಿ.ಐ ಒತ್ತಾಯ

ಮಂಗಳೂರು: ತೀವ್ರತರವಾಗಿ ಆರೋಗ್ಯ ಸಮಸ್ಯೆ ಇರುವ ರೋಗಿಗಳಿಗೆ ಕೊರೊನಾ ನೆಪದಲ್ಲಿ ಚಿಕಿತ್ಸೆ ನಿರಾಕರಿಸುವುದು, ಆಸ್ಪತ್ರೆಯಿಂದ ಆಸ್ಪತ್ರೆಗೆ ಸಾಗ ಹಾಕುವುದು ರಾಜ್ಯಾದ್ಯಂತ ವರದಿಯಾಗುತ್ತಿದೆ.

ಇದು ಸಾರ್ವಜನಿಕ ವಲಯದಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಸಾಂಕ್ರಾಮಿಕ ಕ್ಕಿಂತಲೂ ಹೆಚ್ಚಾಗಿ ಜನರು ಇಂತಹ ಆತಂಕಕಾರಿ ಸ್ಥಿತಿಯ ಬಗ್ಗೆ ಭಯಪಟ್ಟುಕೊಂಡಿದ್ದಾರೆ.

ಅನಾರೋಗ್ಯಪೀಡಿತರ ಜೀವವನ್ನು ಉಳಿಸಲು ವೈದ್ಯಕೀಯ ಸಂಸ್ಥೆಗಳಿಗೆ ಸೂಕ್ತ ನಿರ್ದೇಶನವನ್ನು ರಾಜ್ಯ ಸರ್ಕಾರ ನೀಡಬೇಕು.

ಹಾಗೂ ಸಾರ್ವಜನಿಕರಿಂದ ದೂರು ಸ್ವೀಕರಿಸಿ ಕ್ರಮ ಕೈಗೊಳ್ಳಲು ಪ್ರತೀ ಜಿಲ್ಲೆಗಳಲ್ಲಿ ಪ್ರತ್ಯೇಕ ಮೆಡಿಕಲ್ ಕಮಿಷನ್ ನೇಮಿಸಬೇಕೆಂದು ಎಸ್.ಡಿ.ಪಿ,ಐ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ತಿಳಿಸಿದ್ದಾರೆ.

ಹಲವು ವರ್ಷಗಳಿಂದ ಉಸಿರಾಟದ ಅಥವಾ ಶ್ವಾಸಕೋಶದ ಸಮಸ್ಯೆ ಇದ್ದು ನಿರಂತರವಾಗಿ ಶುಶ್ರೂಷೆ ಪಡೆಯುತ್ತಿರುವವರಿಗೆ ಆಸ್ಪತ್ರೆಗಳು ಚಿಕಿತ್ಸೆ ನೀಡದಿರುವುದು.

ನ್ಯೂಮೋನಿಯಾದಿಂದ ಬಳಲುತ್ತಿರುವವರಿಗೆ ತಕ್ಷಣವೇ ಚಿಕಿತ್ಸೆ ನೀಡಲು ನಿರಾಕರಿಸುತ್ತಿರುವುದು. ರೋಗಿಗಳನ್ನು ಸರಕಾರಿ ಆಸ್ಪತ್ರೆಗೆ ಕೋವಿಡ್ ಪರೀಕ್ಷೆಗೆ ಸಾಗಿಸುತ್ತಿರುವ ಆಂಬುಲೆನ್ಸ್ ಗಳಲ್ಲಿ ವೆಂಟಿಲೇಟರ್ ಇಲ್ಲದಿರುವುದು.

ಪರೀಕ್ಷೆಯ ವರದಿಗಾಗಿ ಎರಡು ದಿನಗಳವರೆಗೆ ಕಾಯುತ್ತಾ ಚಿಕಿತ್ಸೆ ನೀಡದಿರುವುದು ಸಾಮಾನ್ಯವಾಗಿದ್ದು, ಇದರಿಂದ ಕೆಲವು ಸಾವುಗಳು ಸಂಭವಿಸಿದ ಘಟನೆಗಳು ವರದಿಯಾಗಿವೆ.

ಇಂತಹ ಮಾನವ ಹಕ್ಕುಗಳ ಉಲ್ಲಂಘನೆಯ ಘಟನೆಗಳಿಂದ ಜನರು ತೀರಾ ಆತಂಕಕ್ಕೀಡಾಗಿದ್ದಾರೆ.

ರೋಗಿಗಳನ್ನು ದಾಖಲಿಸಲು ಆಸ್ಪತ್ರೆಗಳು ಹಿಂಜರಿಯುತ್ತಾ ಸರಕಾರಿ ಆಸ್ಪತ್ರೆಗಳಿಗೆ ಸಾಗಹಾಕುವುದು ಹಾಗೂ ಅಲ್ಲಿಂದ ಮತ್ತೆ ಮೆಡಿಕಲ್ ಕಾಲೇಜುಗಳಿಗೆ ಸಾಗಹಾಕುವುದು.

ರೋಗಿಗಳಿಗೂ ಉಪಚಾರಕರಿಗೂ ಭಾರೀ ಮಾನಸಿಕ ಹಿಂಸೆ ನೀಡುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಉಪಚಾರಕರನ್ನು ಸಾಮಾನ್ಯ ಕೊಠಡಿಗಳಲ್ಲಿ ತುಂಬಿಸಿ ಅತ್ಯಂತ ಕಳಪೆ ಆಹಾರವನ್ನು ಒದಗಿಸುತ್ತಿರುವುದು ಕೂಡಾ ತೀರಾ ಶೋಚನೀಯವಾಗಿದೆ.

ರಾಜ್ಯದ ಹಲವು ಜಿಲ್ಲೆಗಳಿಂದ ಇಂತಹ ಘಟನೆಗಳು ವರದಿಯಾಗುತ್ತಿದೆ. ಘಟನೆಗಳ ವಿವರಗಳನ್ನು ಸಂಗ್ರಹಿಸಲಾಗಿವೆ.

ಕೊರೋನ ಸಾಂಕ್ರಾಮಿಕ ಕ್ಕಿಂತಲೂ ಹೆಚ್ಚಾಗಿ ಇಂತಹ ಜೀವ ಹಿಂಡುವ ಗಂಭೀರ ಪರಿಸ್ಥಿತಿಯನ್ನು ನಿರ್ಮಿಸಿದ ಸನ್ನಿವೇಶದಲ್ಲಿ ಸರಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದೂ,

ರಾಜ್ಯ ಸರಕಾರವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ ಎಂದು ಇಲ್ಯಾಸ್ ಮುಹಮ್ಮದ್ ತುಂಬೆ ಪ್ರತಿಕ್ರಿಯಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page