Connect with us

ಮಂಗಳೂರು ಖಾಝಿಗೆ ಜೀವ ಬೆದರಿಕೆ: ನಂತೂರಿನಲ್ಲಿ ನಡೆದಿತ್ತಾ ಹತ್ಯೆಗೆ ಸ್ಕೆಚ್..!?

Published

on

ಮಂಗಳೂರು ಖಾಝಿಗೆ ಜೀವ ಬೆದರಿಕೆ: ಕಮೀಷನರ್, ಡಿಜಿಪಿ ಮುಂದೆ ಭದ್ರತೆಗೆ ಆಪ್ತರಿಂದ ಮನವಿ

ಮಂಗಳೂರು: ಮಂಗಳೂರು ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್, ತನಗೆ ಜೀವ ಬೆದರಿಕೆ ಇರುವುದಾಗಿ ಮಂಗಳೂರು ಪೊಲೀಸ್ ಆಯುಕ್ತ ಹಾಗೂ ರಾಜ್ಯ ಡಿಜಿ ಮತ್ತು ಐಜಿ ಅವರಿಗೆ ದೂರು ಸಲ್ಲಿಸಿದ್ದಾರೆ.

ಮುಸ್ಲಿಂ ಧರ್ಮದ ಉನ್ನತ ನಾಯಕರಾದ ಖಾಝಿ ಅವರು ಫೆಬ್ರವರಿ 8 ರಂದು ಹಳೆಯಂಗಡಿಯ ಬೊಳ್ಳೂರಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಾಸ್ ಹೋಗುವ ಸಂದರ್ಭ ಕೊಲೆ ಯತ್ನ ನಡೆಸಲಾಗಿತ್ತು ಎನ್ನಲಾಗಿದೆ.

ವಾಪಾಸ್ ಕಾಸರಗೋಡು ಹೋಗುವಂತಹ ಸಂದರ್ಭ ಕಾರಿನ ಟೈಯರಿನಲ್ಲಿ ಮಾರಕವಾದ ವಸ್ತುವನ್ನು ಸಿಕ್ಕಿಸಿದ್ದ ಪರಿಣಾಮ ಕಾರು ಮಂಗಳೂರು ನಗರದ ನಂತೂರು ಸಮೀಪಿಸುತ್ತಿದ್ದಂತೆ ಪಂಕ್ಚರ್ ಆಗಿತ್ತು.

ಇದರಿಂದ ಚಾಲಕ ಕೆಳಗಿಳಿದು ರಿಪೇರಿ ಮಾಡುತ್ತಿದ್ದಂತೆ ಅಪರಿಚಿತ ವ್ಯಕ್ತಿಯೊಬ್ಬ ಅಲ್ಲಿಗೆ ಆಗಮಿಸಿದ್ದ ಎಂದು ಖಾಝಿ ಅವರು ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಅಲ್ಲದೇ ಈ ಹಿಂದೆಯೇ ಇಂತಹ ಯತ್ನಗಳು ನಡೆದಿತ್ತು ಎನ್ನಲಾಗಿದೆ.

ಹತ್ತು ವರುಷಗಳ ಹಿಂದೆ ಚೆಂಬರಿಕ ಉಸ್ತಾದ್ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ರಿಂದ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರಿಗೆ ಕೊಲೆ ಬೆದರಿಕೆ ಬರುತ್ತಲೇ ಇದೆ ಎಂದು ಖಾಝಿ ಅವರ ಆಪ್ತರು ತಿಳಿಸಿದ್ದಾರೆ.

ಇನ್ನೊಂದೆಡೆ ಖಾಝಿ ಅವರು ಇತ್ತೀಚೆಗೆ ಸಿಎಎ ಪರವಹಿಸಿ ಮಾತಾಡಿದ್ದಾರೆ ಅಂತ ಕೇರಳದ ಮಾಧ್ಯಮವೊಂದು ಅಪಪ್ರಚಾರ ನಡೆಸಿದ್ದು ಕೂಡಾ ಕಿಡಿಗೇಡಿಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಇದೀಗ ಖಾಝಿ ಅವರ ಕಾರು ಚಾಲಕ ಹಾಗೂ ಆಪ್ತರು ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಡಿಜಿಪಿ ಮುಂದೆ ಹಾಜರಾಗಿ ಸೂಕ್ತ ಕಾನೂನು ಕ್ರಮಕ್ಕೆ ಹಾಗೂ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.

ಇನ್ನು ಘಟನೆ ಗಂಭೀರತೆ ಅರಿತ ಮಂಗಳೂರು ನಗರ ಪೊಲೀಸ್ ಆಯುಕ್ತರು ಖಾಝಿ ಅವರಿಗೆ ಗನ್ ಮ್ಯಾನ್ ಹಾಗೂ ಎಸ್ಕಾರ್ಟ್ ವ್ಯವಸ್ಥೆಯನ್ನ ಮಾಡಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

bangalore

ಬೆಂಗಳೂರಲ್ಲಿ ಜ್ಯೂ. ಎನ್‌ಟಿಆರ್ ಕ್ರೇಜ್: ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರಿಂದ ಲಾಠಿಚಾರ್ಜ್‌

Published

on

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕಿಮ್ಸ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಜ್ಯೂ. ಎನ್‌ಟಿಆರ್ ಅವರನ್ನು ನೋಡಲು ಅಭಿಮಾನಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.


ತಮ್ಮ ನೆಚ್ಚಿನ ನಟನನ್ನು ಹತ್ತಿರದಿಂದ ನೋಡಲು ಅಭಿಮಾನಿಗಳು ಮುಗಿಬಿದ್ದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ನಿಯಂತ್ರಣಕ್ಕೆ ಬರದಿದ್ದಾಗ, ಲಘು ಲಾಠಿ ಪ್ರಹಾರ ಮಾಡಿ ಜನರನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಇದನ್ನೂ ಓದಿ: ಒಂದೇ ದಿನ 3 ಕಡೆ ಸರಗಳ್ಳತನ ಮಾಡಿದ್ದ ಖದೀಮರ ಬಂಧನ

ನೂಕುನುಗ್ಗಲಿದ್ದರಿಂದ ಎಸ್ಕಲೇಟರ್ ಮುರಿದು ಹೋಗಿದೆ. ಈ ನಡುವೆಯೂ ಜ್ಯೂ. ಎನ್‌ಟಿಆರ್ ಅವರು ಅಭಿಮಾನಿಗಳಿಗೆ ಕೈಬೀಸಿ ವಂದಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Continue Reading

LATEST NEWS

ಒಂದೇ ದಿನ 3 ಕಡೆ ಸರಗಳ್ಳತನ ಮಾಡಿದ್ದ ಖದೀಮರ ಬಂಧನ

Published

on

ರಾಮನಗರ: ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ ಎಸಗಿದ್ದ ಆರೋಪಿಗಳನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಪ್ರಭು(39), ವಸಂತಿ(37) ಮತ್ತು ಜ್ಯೋತಿ(32) ಬಂಧಿತ ಆರೋಪಿಗಳು.


ಮಾ.3ರಂದು ಕುದೂರು ಸಮೀಪದ ಕಳ್ಳಿಪಾಳ್ಯದಲ್ಲಿ ಮೂವರು ಕಾರಿನಲ್ಲಿ ಬಂದು ವಿಳಾಸ ಕೇಳುತ್ತಾ ಚೈನ್ ಕದ್ದು ಎಸ್ಕೇಪ್ ಆಗಿದ್ದರು. ಮುನೇಶ್ವರ ಸ್ವಾಮಿ ರಥೋತ್ಸವಕ್ಕೆ ಹೋಗ್ತಿದ್ದ ಭಕ್ತರ ಬಳಿ, ದೇವಸ್ಥಾನಕ್ಕೆ ಹೋಗುವ ದಾರಿ ಕೇಳಿ ಅವರ ಸರಗಳನ್ನೇ ಕದ್ದು ಪರಾರಿಯಾಗಿದ್ದರು.

ಈ ಕುರಿತು ಸಾರ್ವಜನಿಕರು ನೀಡಿದ ದೂರಿನ ಅನ್ವಯ ಕಾರ್ಯಚರಣೆ ನಡೆಸಿದ ಪೊಲೀಸರು ಕೇವಲ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮನೆಯಲ್ಲೇ ಹರಿಯಿತು ರಕ್ತದೋಕುಳಿ: ಅವಳಿ ಸಹೋದರಿಯ ಮೇಲೆ 40ಕ್ಕೂ ಹೆಚ್ಚು ಬಾರಿ ಇರಿದ ಕಿರಾತಕ ಸಹೋದರ!

ಬಂಧಿತರಿಂದ 112 ಗ್ರಾಂ ತೂಕದ ಮೂರು ಚಿನ್ನದ ಸರ, ಕೃತ್ಯಕ್ಕೆ ಬಳಸಿದ್ದ ಒಂದು ವ್ಯಾಗನಾರ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ. ಈ ಗ್ಯಾಂಗ್‌ ಒಟ್ಟು 7 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿತ್ತು ಎಂದು ತಿಳಿದು ಬಂದಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Continue Reading

LATEST NEWS

ಮನೆಯಲ್ಲೇ ಹರಿಯಿತು ರಕ್ತದೋಕುಳಿ: ಅವಳಿ ಸಹೋದರಿಯ ಮೇಲೆ 40ಕ್ಕೂ ಹೆಚ್ಚು ಬಾರಿ ಇರಿದ ಕಿರಾತಕ ಸಹೋದರ!

Published

on

ಮೊರಾದಾಬಾದ್: ಬ್ರೇಕಪ್ ಬಳಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಅವಳಿ ಸಹೋದರಿಯರಿಗೆ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.


ಮೊರಾದಾಬಾದ್‌ನ ಮಜೋಲಾ ಪೊಲೀಸ್ ಠಾಣೆ ವ್ಯಾಪ್ತಿಯ ಬುದ್ಧಿ ವಿಹಾರ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. 25 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಹಾರ್ದಿಕ್, ತನ್ನ ಅವಳಿ ಸಹೋದರಿ ಹಿಮಶಿಖಾಳನ್ನು 40ಕ್ಕೂ ಹೆಚ್ಚು ಬಾರಿ ಇರಿದು ಹತ್ಯೆ ಮಾಡಿದ್ದಾನೆ ಇಬ್ಬರೂ ಗುರುಗ್ರಾಮದಲ್ಲಿ ಕೆಲಸ ಮಾಡುತ್ತಿದ್ದು, ಹೋಳಿ ಆಚರಿಸಲು ಮನೆಗೆ ಬಂದಿದ್ದರು.

ಇತ್ತೀಚೆಗೆ ಹಾರ್ದಿಕ್ ತನ್ನ ಗೆಳತಿಯೊಂದಿಗೆ ಬ್ರೇಕ್ಅಪ್ ಮಾಡಿಕೊಂಡಿದ್ದನು. ತನ್ನ ಪ್ರೀತಿ ವಿಫಲವಾಗಲು ತನ್ನ ತಾಯಿ ಮತ್ತು ಸಹೋದರಿಯೇ ಕಾರಣ ಎಂದು ಆತ ನಂಬಿದ್ದನು. ಈ ದ್ವೇಷ ಹಾಗೂ ಬ್ರೇಕ್ಅಪ್‌ನಿಂದ ಉಂಟಾದ ಖಿನ್ನತೆಯಿಂದಾಗಿ ಆತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಮನೆಯ ಬೆಡ್‌ರೂಮ್‌ನಿಂದ ಅಡುಗೆ ಮನೆಯವರೆಗೆ ರಕ್ತದ ಕಲೆಗಳು ಹರಡಿಕೊಂಡಿದ್ದವು. ಹಾರ್ದಿಕ್ ತನ್ನ ತಾಯಿಯ ಮೇಲೆಯೂ ಮಾರಣಾಂತಿಕ ದಾಳಿ ಮಾಡಿದ್ದು, ತಾಯಿಯ ಕಿರುಚಾಟ ಕೇಳಿ ಪಕ್ಕದ ಮನೆಯವರು ಒಳಗೆ ಓಡಿ ಬಂದು ದೃಶ್ಯ ನೋಡಿ ದಿಗ್ಭ್ರಮೆಗೊಂಡರು.

ಇದನ್ನೂ ಓದಿ: ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್: ಲಿಂಗಸೂಗೂರು ನ್ಯಾಯಾಲಯದಿಂದ ಆರೋಪಿಗೆ ಜೀವಾವಧಿ ಶಿಕ್ಷೆ

ತಕ್ಷಣವೇ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಇಬ್ಬರನ್ನೂ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಹಿಮ್ಶಿಖಾ ದಾರಿ ಮಧ್ಯೆಯೇ ಮೃತಪಟ್ಟಿದ್ದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಶನಿವಾರದಂದು(ಮಾ.7) ಬಂಧಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page