Connect with us

BELTHANGADY

ಮುಂಡಾಜೆಯಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದ ಲಾರಿ

Published

on

ಬೆಳ್ತಂಗಡಿ: ನಿಯಂತ್ರಣದ ತಪ್ಪಿದ ಲಾರಿಯೊಂದು ರಸ್ತೆ ಬದಿಗೆ ಮಗುಚಿ ಬಿದ್ದ ಘಟನೆ ಮುಂಡಾಜೆಯ ಸೀಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.


ಚಿಕ್ಕಮಗಳೂರು ಕಡೆಯಿಂದ ಉಜಿರೆಗೆ ಬರುತ್ತಿದ್ದ ಲಾರಿ ಸೀಟು ಎಂಬಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಕೂಡಲೇ ಧಾವಿಸಿದ ಸ್ಥಳೀಯರು ಗಾಯಾಳು ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

BELTHANGADY

ಮನೆಗೇ ನುಗ್ಗಿದ ಚಿರತೆ: ನಾಯಿಯನ್ನು ಹೊತ್ತೊಯ್ಯುವ ವೀಡಿಯೋ ವೈರಲ್

Published

on

ಬೆಳ್ತಂಗಡಿ: ಚಿರತೆಯೊಂದು ಮನೆಯ ಜಗುಲಿಯ ಮೇಲೆ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಎಂಬಲ್ಲಿ ನಡೆದಿದೆ. ಈ ಭಯಾನಕ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.


ದಿಡುಪೆಯ ಕೊಂಡಾಳು ಎಂಬಲ್ಲಿರುವ ನಾರಾಯಣ ಗೌಡ ಎಂಬುವವರ ಮನೆಯ ಜಗುಲಿಯಲ್ಲಿ ಈ ದಾಳಿ ನಡೆದಿದೆ. ತಡರಾತ್ರಿ ಮನೆಯ ಕಂಪೌಂಡ್ ಒಳಗೆ ಲಗ್ಗೆ ಇಟ್ಟ ಚಿರತೆ, ಮನೆಯ ಜಗುಲಿಯ ಮೇಲೆ ಮಲಗಿದ್ದ ಸಾಕು ನಾಯಿಯನ್ನು ಕಚ್ಚಿ ಹಿಡಿದು ಕ್ಷಣಾರ್ಧದಲ್ಲಿ ಹೊತ್ತೊಯ್ದಿದೆ.

ಇದನ್ನೂ ಓದಿ: ಮನೆಯಲ್ಲೇ ನಾಡ ಬಂದೂಕು ತಯಾರಿ; ಪೊಲೀಸರ ಬಲೆಗೆ ಬಿದ್ದ ಆರೋಪಿ

ಈ ವೀಡಿಯೋ ಕಂಡು ಸ್ಥಳೀಯ ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅರಣ್ಯ ಇಲಾಖೆಯವರು ಚಿರತೆಯನ್ನು ಸೆರೆಹಿಡಿಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Continue Reading

BELTHANGADY

ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ-ಸಮಗ್ರ ತನಿಖೆಗೆ ಗೃಹಸಚಿವರಿಗೆ ಶಾಸಕ ಪೂಂಜ ಮನವಿ

Published

on

ಬೆಳ್ತಂಗಡಿ: ಧನುರ್ಮಾಸದ ಕೊನೆಯ ಪೂಜೆಗೆಂದು ಹೋಗಿದ್ದ  ಬಾಲಕ ಸುಮಂತ್ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಶಾಸಕ ಹರೀಶ್ ಪೂಂಜಾ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಜನವರಿ 14 ರಂದು ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಂಜಾನೆಯೇ ಮನೆಯಿಂದ ಹೊರಟಿದ್ದ ಸುಮಂತ್ ನಿಗೂಢವಾಗಿ ನಾಪತ್ತೆಯಾಗಿದ್ದ. ಬಳಿಕ ಮನೆ ಸಮೀಪದ ಕೆರೆಯಲ್ಲಿ ಆತನ ಶವ ಪತ್ತೆಯಾಗಿತ್ತು. ಅಲ್ಲದೆ ತಲೆಯಲ್ಲಿ ಬಲವಾಗಿ ಹೊಡೆದ ಗಾಯದ ಗುರುತುಗಳಿದ್ದು, ಇದು ಆಕಸ್ಮಿಕವಾಗಿ ಸಂಭವಿಸಿದ ಸಾವು ಅಲ್ಲ, ಇದೊಂದು ಕೊಲೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಲ್ಲಿಯವರೆಗೆ ಪ್ರಕರಣದ ಕುರಿತಂತೆ ಯಾವುದೇ ಮಾಹಿತಿ ಕೂಡ ಪೊಲೀಸ್ ಇಲಾಖೆ ನೀಡಿಲ್ಲ. ಇದೀಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಧಾನಸೌಧದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿ ಓಡಿಲ್ನಾಳ ಗ್ರಾಮದ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ತನಿಖೆ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕು. ಅದೇ ರೀತಿ ಈ ಸಾವು ಕೊಲೆಯಾಗಿದಲ್ಲಿ ತಪ್ಪಿತ್ಸಥರಿಗೆ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದಾರೆ.

Continue Reading

BELTHANGADY

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಚಾರ್ಮಾಡಿಯ ನಿವಾಸಿ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. 1990 ರಲ್ಲಿ ಈತನ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. 1992 ರಲ್ಲಿ ಇದನ್ನು ಎಲ್‌ಪಿಸಿ ಪ್ರಕರಣ ಎಂಬುದಾಗಿ ಪರಿಗಣಿಸಲಾಗಿತ್ತು. ಈತನ ಪತ್ತೆ ಹಚ್ಚುವ ಬಗ್ಗೆ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ: ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿ*ಕ್ಕಿ; ಸವಾರ ಸ್ಥಳದಲ್ಲೇ ಸಾ*ವು

ಇದೀಗ ಆರೋಪಿ ರವೀಂದ್ರನನ್ನು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ಪೊಲೀಸರು ದಸ್ತಗಿರಿ ಮಾಡಿ ಜನವರಿ 6 ರಂದು ಮಂಗಳವಾರ ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page