Connect with us

LATEST NEWS

ಗಂಡನ ಬಿಟ್ಟು………..ಜೊತೆ ಹೋಗಲು ಹಠಕಟ್ಟಿದ ಆಂಟಿಯ ಕಥೆ ಮುಗಿಸಿದ ಪ್ರಿಯಕರ…!

Published

on

ನನ್ನನ್ನು ಮದುವೆಯಾಗು ಇಲ್ಲದಿದ್ರೆ ಗಂಡನನ್ನು ಬಿಟ್ಟು ನಿನ್ನ ಜೊತೆ ಇರುತ್ತೇನೆಂದು ಪೀಡಿಸುತ್ತಿದ್ದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರನೇ ಕತ್ತು ಹಿಸುಕಿ ಕೊಂದ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರು: ನನ್ನನ್ನು ಮದುವೆಯಾಗು ಇಲ್ಲದಿದ್ರೆ ಗಂಡನನ್ನು ಬಿಟ್ಟು ನಿನ್ನ ಜೊತೆ ಇರುತ್ತೇನೆಂದು ಪೀಡಿಸುತ್ತಿದ್ದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರನೇ ಕತ್ತು ಹಿಸುಕಿ ಕೊಂದ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.


ಸರಗುಣಂ (35) ಮೃತ ಮಹಿಳೆಯಾಗಿದ್ದು, ಕೊಲೆಗೈದ ಆರೋಪಿಯನ್ನು ಗಣೇಶ್(22) ಎಂದು ಗುರುತಿಸಲಾಗಿದೆ.

ಘಟನೆ ವಿವರ
ಮೃತ ಸರಗುಣಂಗೆ ಈಗಾಗಲೇ ಮದುವೆಯಾಗಿತ್ತು. 17 ವರ್ಷದ ಮಗನೂ ಇದ್ದಾನೆ. ಆಕೆಯ ಪತಿ ಕೂಲಿ ಕೆಲಸ ಮಾಡಿಕೊಂಡಿದ್ದು, ಈಕೆ ಮನೆಕೆಲಸ ಮಾಡಿಕೊಂಡಿದ್ದಳು. ನಾಲ್ಕು ವರ್ಷದ ಹಿಂದೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ವಾಸವಿದ್ದಾಗ ಸರಗುಣಂಗೆ ಆಟೊ ಚಾಲಕನಾಗಿದ್ದ ಗಣೇಶ್ ಎಂಬಾತನ ಪರಿಚಯವಾಗಿತ್ತು.

ಪರಿಚಯ ಸ್ನೇಹಕ್ಕೆ ತಿರುಗಿ ಅಕ್ರಮ ಸಂಬಂಧದ ತನಕ ಹೋಗಿತ್ತು.
ಸರಗುಣಂ ಕೆಲಸ ನೆಪ ಹೇಳಿ ಗಂಡನಿಗೆ ಗೊತ್ತಾಗದಂತೆ ಗಣೇಶನನ್ನು ಆಗಾಗ ಭೇಟಿ ಮಾಡುತ್ತಿದ್ದಳು. ಅಲ್ಲದೆ ಗಣೇಶನಿಗೆ 50 ಸಾವಿರ ರೂ. ಹಣ ಸಹಾಯ ಮಾಡಿದ್ದಳು. ಜೊತೆಗೆ ಗಣೇಶನಿಗಾಗಿ ಬಾಡಿಗೆ ಮನೆಯ ವ್ಯವಸ್ಥೆ ಮಾಡಿದ್ದಳು. ಅಲ್ಲಿ ಸರಗುಣಂ ಆಗಾಗ ಬಂತು ಗಣೇಶನ ಜೊತೆ ಕಾಲ ಕಳೆಯುತ್ತಿದ್ದಳು.

ಈ ಮಧ್ಯೆ ಗಣೇಶ್‍ಗೆ ಮತ್ತೊಬ್ಬ ಸುಂದರಿಯ ಪರಿಚಯವಾಗಿತ್ತು. ಹೀಗಾಗಿ ಗಣೇಶ್ ಸರಗುಣಂಯಿಂದ ಅಂತರ ಕಾಯ್ದುಕೊಳ್ಳಲು ಶುರು ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ಅನುಮಾನ ಬಂದ ಸರಗುಣಂ “ನೀನು ನನ್ನಿಂದ ಅಂತರ ಕಾಯ್ದುಕೊಳ್ಳುತ್ತಿದ್ದು, ನಾನು ಕೊಟ್ಟ ಹಣ ವಾಪಸ್ ಕೊಡು. ಇಲ್ಲವಾದರೆ ಗಂಡನನ್ನು ಬಿಟ್ಟು ನಿನ್ನ ಜೊತೆ ಬರುತ್ತೇನೆ ಎಂದು ಪೀಡಿಸಿದ್ದಾಳೆ.

ಇದರಿಂದ ಕೋಪಗೊಂಡ ಗಣೇಶನ ಆಕೆಯನ್ನು ಕತ್ತುಹಿಸುಕಿ ಕೊಲೆಗೈದಿದ್ದಾನೆ. ನಂತರ ಆಕೆಯನ್ನು ನೇಣಿಗೇರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಥೆ ಕಟ್ಟಿದ್ದ. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಅಸಲಿ ಕಥೆ ಗೊತ್ತಾಗಿದೆ. ಸದ್ಯ ಗಣೇಶ್‌ ಜೈಲು ಕಂಬಿ ಎಣಿಸುತ್ತಿದ್ದಾನೆ.

LATEST NEWS

ಏರ್‌ ಇಂಡಿಯಾ ವಿಮಾನ ದುರಂತ: ಸಹೋದರನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ವಿಶ್ವಾಸ್ ರಮೇಶ್‌

Published

on

ಮಂಗಳೂರು/ಅಹಮದಾಬಾದ್: ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬ್ರಿಟನ್ ಪ್ರಜೆ ವಿಶ್ವಾಸ್ ಕುಮಾರ್ ರಮೇಶ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಅದೇ ದುರಂತದಲ್ಲಿ ಮೃತಪಟ್ಟ ಸಹೋದರ ಅಜಯ್ ರಮೇಶ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.


ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಲು ಬ್ರಿಟನ್‌ನಿಂದ ದಿಯುಗೆ ಬಂದಿದ್ದ ಸಹೋದರರು ಜೂನ್ 12ರಂದು ಮರಳಿ ಲಂಡನ್‌ಗೆ ಹೊರಟಿದ್ದರು. ಈ ವೇಳೆ ವಿಮಾನ ಅಪಘಾತ ಸಂಭವಿಸಿತ್ತು.

ವಿಮಾನದಲ್ಲಿ ರಮೇಶ್ ತುರ್ತು ನಿರ್ಗಮನ ದ್ವಾರದ ಪಕ್ಕದಲ್ಲಿ 11A ನಲ್ಲಿ ಕುಳಿತಿದ್ದರು. ಅಪಘಾತದ ಸಂದರ್ಭದಲ್ಲಿ ಅವರ ಸೀಟು ಬೇರ್ಪಟ್ಟು ದೂರ ಹಾರಿತ್ತು. ಹೀಗಾಗಿ ಬೆಂಕಿಯಿಂದ ಪಾರಾಗಿದ್ದರು. ಸೀಟಿನ ಸಮೇತ ಕೆಳಗೆ ಹಾರಿದ್ದರು. ವಿಮಾನ ತುಂಡಾಗಿ ಸೀಟು ಕೂಡ ಕಳಚಿಬಂದಿತ್ತು ಎಂದು ವೈದ್ಯರಿಗೆ ರಮೇಶ್​ ತಿಳಿಸಿದ್ದರು.

ತಾನು ಇಳಿದ ಸ್ಥಳ ತಗ್ಗಾಗಿತ್ತು, ಸೀಟ್ ಬೆಲ್ಟ್​ ತೆಗೆದೆ ಒಂದು ಕ್ಷಣ ಮೈಯೆಲ್ಲಾ ಕಂಪಿಸಿತ್ತು, ಆದರೆ ನಾನು ಭೂಮಿಗೆ ತುಂಬಾ ಹತ್ತಿರವಾಗಿದ್ದೆ, ಹಾಗಾಗಿ ಹೊರಬರಲು ಪ್ರಯತ್ನಿಸಿದೆ ಎಂದು ತಿಳಿಸಿದ್ದಾರೆ. ವಿಮಾನ ಅಪಘಾತದ ಸ್ವಲ್ಪ ಸಮಯದ ನಂತರ ಅವರು ಬಿಜೆ ವೈದ್ಯಕೀಯ ಕ್ಯಾಂಪಸ್‌ನಿಂದ ಹೊರಬರುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು.

ವಿಮಾನದಲ್ಲಿ ರಮೇಶ್ ತುರ್ತು ನಿರ್ಗಮನ ದ್ವಾರದ ಪಕ್ಕದಲ್ಲಿ 11A ನಲ್ಲಿ ಕುಳಿತಿದ್ದರು. ಅಪಘಾತದ ಸಂದರ್ಭದಲ್ಲಿ ಅವರ ಸೀಟು ಬೇರ್ಪಟ್ಟು ದೂರ ಹಾರಿತ್ತು. ಹೀಗಾಗಿ ಬೆಂಕಿಯಿಂದ ಪಾರಾಗಿದ್ದರು. ಸೀಟಿನ ಸಮೇತ ಕೆಳಗೆ ಹಾರಿದ್ದರು. ವಿಮಾನ ತುಂಡಾಗಿ ಸೀಟು ಕೂಡ ಕಳಚಿಬಂದಿತ್ತು ಎಂದು ವೈದ್ಯರಿಗೆ ರಮೇಶ್​ ತಿಳಿಸಿದ್ದರು.

ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ; ಕೊನೆಗೂ ಎರಡನೇ ಬ್ಲ್ಯಾಕ್​ಬಾಕ್ಸ್​ ಪತ್ತೆ

ತಾನು ಇಳಿದ ಸ್ಥಳ ತಗ್ಗಾಗಿತ್ತು, ಸೀಟ್ ಬೆಲ್ಟ್​ ತೆಗೆದೆ ಒಂದು ಕ್ಷಣ ಮೈಯೆಲ್ಲಾ ಕಂಪಿಸಿತ್ತು, ಆದರೆ ನಾನು ಭೂಮಿಗೆ ತುಂಬಾ ಹತ್ತಿರವಾಗಿದ್ದೆ, ಹಾಗಾಗಿ ಹೊರಬರಲು ಪ್ರಯತ್ನಿಸಿದೆ ಎಂದು ತಿಳಿಸಿದ್ದಾರೆ. ವಿಮಾನ ಅಪಘಾತದ ಸ್ವಲ್ಪ ಸಮಯದ ನಂತರ ಅವರು ಬಿಜೆ ವೈದ್ಯಕೀಯ ಕ್ಯಾಂಪಸ್‌ನಿಂದ ಹೊರಬರುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು.

ವಿಪರ್ಯಾಸವೆಂದರೆ ವಿಶ್ವಾಸ್ ಅವರ ಸಹೋದರ ಅಜಯ್ ರಮೇಶ್ ಸಾವನ್ನಪ್ಪಿದ್ದರು. ಹೀಗಾಗಿ ಅವರ ಡಿಎನ್‌ಎ ಗುರುತಿಸಲಾಗಿದ್ದು, ಇಂದು ದಿಯುವಿನಲ್ಲಿ ಬೆಳಿಗ್ಗೆ ಅಜಯ್ ಅವರ ಅಂತ್ಯಕ್ರಿಯೆ ನಡೆದಿದ್ದು, ವಿಶ್ವಾಸ್ ಕೂಡ ಅಲ್ಲಿ ಹಾಜರಿದ್ದರು ಎಂದು ವರದಿಯಾಗಿದೆ.

Continue Reading

LATEST NEWS

ಇನ್ನು ಮುಂದೆ 3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್‌!

Published

on

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ಹೆದ್ದಾರಿಯಲ್ಲಿ ತೊಂದರೆಯಿಲ್ಲದೆ ಪಯಾಣಕ್ಕೆ ಅನುಕೂಲವಾಗುವಂತೆ ಫಾಸ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ಘೋಷಿಸಿದೆ.

3 ಸಾವಿರ ರೂಪಾಯಿಗೆ ವಾರ್ಷಿಕ ಟೋಲ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಖಾತೆಯ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ.

ಈ ಪಾಸ್ ಅನ್ನು ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ. ನವೀಕರಣಕ್ಕಾಗಿ ಮೀಸಲಾದ ಲಿಂಕ್ ಅನ್ನು ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ.

READ IN ENGLISH : https://www.nammakudlaenglish.com/annual-toll-pass-for-%e2%82%b93000-from-now-on/

ಇದನ್ನೂ ಓದಿ: 6 ವರ್ಷದ ಮಗುವಿನ ಸಾವಿಗೆ ಕಾರಣವಾಯಿತೇ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್!?

ಈ ಪಾಸ್‌ನಿಂದ 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ. ಟೋಲ್‌ಗಳಲ್ಲಿ ಕಾಯುವ ಸಮಯ ಮತ್ತು ದಟ್ಟಣೆ ಕಡಿಮೆ ಯಾಗಲಿದೆ.

Continue Reading

LATEST NEWS

ಉಡುಪಿ: ಶಾಲಾ ಬಸ್ ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

Published

on

ಉಡುಪಿ: ಖಾಸಗಿ ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ನಡೆದಿದೆ.


ಬ್ರಹ್ಮಾವರ ಜಿ.ಎಂ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿಂದ ಬಂದು ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವಾಗ ಹಿಂದಿನಿಂದ ಬಂದ ಲಾರಿ ಡಿ*ಕ್ಕಿಯಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

ಅಪಘಾತದ ಸಂದರ್ಭದಲ್ಲಿ ವ್ಯಾನ್‌ನಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page