Connect with us

NATIONAL

ಕೇಂದ್ರ ಬಜೆಟ್‌ ದಿನವೇ ಎಲ್‌ಪಿಜಿ ಸಿಲಿಂಡರ್‌ ಬೆಲೆ ಹೆಚ್ಚಳ

Published

on

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಆದರೆ ಬಜೆಟ್ ಮಂಡನೆಗೂ ಮುನ್ನವೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ.


ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 49 ರೂ. ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಬೆಲೆಯನ್ನು 1,740.50 ರೂ.ಗೆ ಪರಿಷ್ಕರಿಸಲಾಗಿದೆ. ಆದರೆ, 14.2 ಕೆಜಿ ದೇಶೀಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಬದಲಾಗದೆ ಉಳಿದಿದೆ.

ಇದನ್ನೂ ಓದಿ: ಬಜೆಟ್‌ ಮಂಡನೆಗೂ ಮೊದಲೇ ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್!

ಜನವರಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯಾದ ನಂತರ ಇದು ಸಂಭವಿಸಿದೆ. ಇದು ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವಾಣಿಜ್ಯ ಬಳಕೆದಾರರಿಗೆ ವೆಚ್ಚದ ಹೊರೆಯನ್ನು ಹೆಚ್ಚಿಸಿದೆ.‌ ಆದರೆ ದೇಶೀಯ LPG ಸಿಲಿಂಡರ್ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲದ ಕಾರಣ ಗೃಹ ಗ್ರಾಹಕರಿಗೆ ಯಾವುದೇ ಆತಂಕವಿಲ್ಲ.

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading

LATEST NEWS

ಮೆಟ್ರೋ ಸ್ಲ್ಯಾಬ್ ಕು*ಸಿದು ಬಿ*ದ್ದು ದುರಂ*ತ; ಓರ್ವ ಸಾ*ವು, ಗುತ್ತಿಗೆದಾರರಿಗೆ 6 ಕೋಟಿ ದಂಡ!

Published

on

ಮಂಗಳೂರು/ಮುಂಬೈ : ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಲೇನ್-4 ರ ಸ್ಲ್ಯಾಬ್‌ ಕು*ಸಿದು ಕೆಳಗೆ ಚಲಿಸುತ್ತಿದ್ದ ಆಟೋ, ಕಾರಿನ ಮೇಲೆ ಬಿದ್ದ ಪರಿಣಾಮ ಓರ್ವ ಪ್ರಾ*ಣ ಕಳೆದುಕೊಂಡ  ಘಟನೆ ಮುಂಬೈನ ಮುಲುಂಡ್ ಪ್ರದೇಶದ ಜಾನ್ಸನ್ & ಜಾನ್ಸನ್ ಕಂಪನಿಯ ಬಳಿ ನಡೆದಿದೆ.

ಈ ದುರಂತದಲ್ಲಿ ಸಮಾಜವಾದಿ ಪಕ್ಷದ ಮುಖಂಡ ರಾಮಧನ್ ಯಾದವ್ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಈ ಪ್ರಕರಣ ಸಂಬಂಧ ಯೋಜನಾ ನಿರ್ದೇಶಕರು, ಗುತ್ತಿಗೆದಾರರು ಸೇರಿ ಐವರನ್ನ ಬಂಧಿಸಲಾಗಿದೆ. ಕಾರ್ಯನಿರ್ವಾಹಕ ಇಂಜಿನಿಯರ್‌ನನ್ನ ಅಮಾನತುಗೊಳಿಸಲಾಗಿದೆ.

ಅಲ್ಲದೆ,  ಯೋಜನೆಯಲ್ಲಿ ಭಾಗಿಯಾಗಿರುವ ಗುತ್ತಿಗೆದಾರರು ಮತ್ತು ಸಲಹೆಗಾರರಿಗೆ 6 ಕೋಟಿ ದಂಡ ವಿಧಿಸಿದೆ. ಯೋಜನಾ ನಿರ್ದೇಶಕ ಹರೀಶ್ ಚೌಹಾಣ್, ಇಬ್ಬರು ಯೋಜನಾ ವ್ಯವಸ್ಥಾಪಕರು ಸೇರಿದಂತೆ ಮಿಲನ್ ರೋಡ್ ಬಿಲ್‌ ಟೆಕ್‌ ನ ನಾಲ್ವರು ಉದ್ಯೋಗಿಗಳು ಮತ್ತು ಡಿಬಿ ಹಿಲ್ ಎಲ್‌ ಬಿಜಿ ಸೂಪರ್‌ ವೈಸರಿ ಕಂಪನಿಯ ಓರ್ವ ಉದ್ಯೋಗಿಯನ್ನ  ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ :ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯ ಶ*ವ ಪತ್ತೆ

ವಡಾಲಾದಿಂದ ಥಾಣೆಗೆ ಸಂಪರ್ಕಿಸುವ ಮೆಟ್ರೋ ಮಾರ್ಗದಲ್ಲಿ ಈ ದುರಂ*ತ ಸಂಭವಿಸಿದೆ.  ಘಟನೆಯಿಂದ ಆಟೋ ರಿಕ್ಷಾ ಮತ್ತು ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ.

Continue Reading

LATEST NEWS

ಪಿಯುಸಿ ವಿದ್ಯಾರ್ಥಿನಿ ಮೇಲೆ ನಾಲ್ಕು ಕಾರಿನಲ್ಲಿ ಅ*ತ್ಯಾಚಾ*ರ…ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್!

Published

on

ಮಂಗಳೂರು/ ಭೋಪಾಲ್ : 11 ನೇ ತರಗತಿ ಬಾಲಕಿ ಜೊತೆ ಪ್ರೀತಿಯ ನಾಟಕವಾಡಿ ಅ*ತ್ಯಾಚಾ*ರ ಎಸಗಿರುವ ಘಟನೆ ಭೋಪಾಲ್‌ನಲ್ಲಿ ನಡೆದಿದೆ.  ಅಸೌಫ್ ಅಲಿ ಖಾನ್ ಎಂಬಾತ ಬಾಲಕಿಯನ್ನು ಹಿಂಬಾಲಿಸಿ ಪುಸಲಾಯಿಸಿ ಪ್ರೀತಿ ಪ್ರೇಮವೆಂದು ನಾಟಕವಾಡಿದ್ದಾನೆ. ಆ ಕಿರಾತನ ಮಾತನ್ನು ನಂಬಿ ಬಾಲಕಿ ಪ್ರೀತಿಗೆ ಬಿದ್ದಿದ್ದಾಳೆ. ಪ್ರವಾಸಕ್ಕೆಂದು ಕಾರಿನಲ್ಲಿ ಕರೆದೊಯ್ದ ಆತ ಅ*ತ್ಯಾಚಾ*ರ ಎಸಗಿದ್ದಾನೆ. ಈ ವೇಳೆ ಕಾರಿನ ಹೊರಗಡೆ ಕಾವಲಾಗಿ ನಿಂತಿದ್ದ ಮಜ್ ಖಾನ್ ಎಂಬಾತ ವೀಡಿಯೋ ಮಾಡಿದ್ದಾನೆ ಎನ್ನಲಾಗಿದೆ.

ವೀಡಿಯೋ ಮಾಡಿ ಬೆದರಿಕೆ :

ತನ್ನ ಐಫೋನ್‌ನಲ್ಲಿ ಮಜ್ ಖಾನ್ ವೀಡಿಯೋ  ಮಾಡಿದ್ದಾನೆ. ಬಳಿಕ ಆಕೆಯನ್ನು ಬೇಟಿಯಾಗಿ ವೀಡಿಯೋ ತೋರಿಸಿದ್ದಾನೆ. ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವುದಾಗಿ ಹೆದರಿಸಿದ್ದಾನೆ. ಬಾಲಕಿಯನ್ನು ಮಜ್ ಖಾನ್ ಹಾಗೂ ಆತನ ಸ್ನೇಹಿತರು ಮೂರು ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಬಳಸಿಕೊಂಡಿದ್ದಾರೆ. ಒಂದೊಂದು ಕಾರಿನಲ್ಲಿ ಒಬ್ಬರ ಹಿಂದೆ ಒಬ್ಬರಂತೆ ಬಳಸಿಕೊಂಡಿದ್ದಾರೆ.

ಬಳಿಕ ಪ್ರತಿ ದಿನ ಬಾಲಕಿಯನ್ನು ಬಳಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಆದರೆ ಬಾಲಕಿ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳಲು ಶುರು ಮಾಡಿದಾಗ ಕೆರಳಿದ ಆರೋಪಿಗಳು 40,000 ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಬಾಲಕಿಯ ಕುಗ್ಗಿದ ಮನಸ್ಥಿತಿ ಕಂಡ ಪೋಷಕರು ಆಕೆಯನ್ನು ವಿಚಾರಿಸಿದಾಗ ಸತ್ಯ ಬಯಲಾಗಿದೆ.

ಇದನ್ನೂ ಓದಿ : ಅವಳಿ ಮಕ್ಕಳ ಹೆಸರು ರಿವೀಲ್ ಮಾಡಿದ ನಟ ರಾಮ್ ಚರಣ್; ವ್ಹಾವ್ ಅಂದ್ರು ಫ್ಯಾನ್ಸ್!

ಸದ್ಯ ಪ್ರಕರಣ ದಾಖಲಾಗಿದ್ದು, ಮಜ್ ಖಾನ್ ಬಂಧಿಸಿ ವಿಚಾರಿಸಿದಾಗ ಅಸೌಫ್ ಅಲಿ ಖಾನ್ ಕೃ*ತ್ಯ ಬೆಳಕಿಗೆ ಬಂದಿದೆ. ಹೀಗಾಗಿ ಅಸೌಫ್ ಅಲಿ ಖಾನ್‌ನನ್ನೂ ಬಂಧಿಸಲಾಗಿದೆ. ಇತ್ತ ಪೊಲೀಸ್ ಠಾಣೆಯ ಪೊಲೀಸ್ ಪೇದೆಯ ಜೊತೆ ಆರೋಪಿಗಳು ಸಂಪರ್ಕದಲ್ಲಿರುವ ವಿಚಾರವೂ ಬಹಿರಂಗವಾಗಿದೆ. ಪೇದೆಯ ನೆರವಿನಿಂದ ಆರೋಪಿಗಳು ಮತ್ತಷ್ಟು ಕೃ*ತ್ಯ ಎಸಗಿರುವುದು ಪತ್ತೆಯಾಗಿದೆ. ಹೀಗಾಗಿ ಪೊಲೀಸ್ ಪೇದೆಯನ್ನು ಅಮಾನತು ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page