Connect with us

LATEST NEWS

ಹಿಂದಿ ಹೇರಿಕೆ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮದ್ರಾಸ್ ಹೈಕೋರ್ಟ್

Published

on

ಚೆನ್ನೈ: ಹಿಂದಿ ಹೇರಿಕೆ ಬಗ್ಗೆ ಮಧುರೈ ಕ್ಷೇತ್ರದ ಸಂಸದ ವೆಂಕಟೇಸನ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.


ಭಾಷಾಂಧತೆ ಬಹಳ ಅಪಾಯಕಾರಿ ಎಂದು ಅಭಿಪ್ರಾಯ ಪಟ್ಟ ಉಚ್ಛ ನ್ಯಾಯಪೀಠ, ಹಿಂದಿ ಅಧಿಕೃತ ರಾಜ್ಯಭಾಷೆ ಅಲ್ಲದ ರಾಜ್ಯಗಳಿಗೆ ಹಿಂದಿಯಲ್ಲಿ ಸಂವಹನ ನಡೆಸಬಾರದು ಎಂದು ಕೇಂದ್ರಕ್ಕೆ ತಿಳಿಹೇಳಿತು.

“ಯಾವುದೇ ರೀತಿಯ ಮತಾಂಧತೆಯು ಸಮಾಜಕ್ಕೆ ಒಳ್ಳೆಯದಲ್ಲ. ಯಾವುದೇ ರೀತಿಯಲ್ಲಿ ವ್ಯಕ್ತವಾಗುವ ಮತಾಂಧತೆಯನ್ನ ಖಂಡಿಸಬೇಕು. ಅದರಲ್ಲೂ ಭಾಷಾಂಧತೆ ಇನ್ನೂ ಅಪಾಯಕಾರಿಯಾಗಿದೆ.

ಎಂದು ಮದ್ರಾಸ್ ಹೈಕೋರ್ಟ್​ನ ನಿವೃತ್ತ ನ್ಯಾ. ಎನ್ ಕಿರುಬಾಗರಣ್ ಮತ್ತು ನ್ಯಾ. ಎಂ ದುರೈಸ್ವಾಮಿ ಅವರಿದ್ದ ನ್ಯಾಯಪೀಠ ಈ ಸಂದೇಶ ರವಾನಿಸಿದೆ.
ಮಾರ್ಕ್ಸ್​ವಾದಿ ಕಮ್ಯೂನಿಸ್ಟ್ ಪಕ್ಷದ ಸಂಸದ ಸು ವೆಂಕಟೇಸನ್ ಅವರು ಇಂಗ್ಲೀಷ್​ನಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಕೇಂದ್ರ ಸರ್ಕಾರ ಹಿಂದಿ ಭಾಷೆಯಲ್ಲಿ ಉತ್ತರ ಕೊಟ್ಟಿತ್ತು.

ಇದನ್ನು ಆಕ್ಷೇಪಿಸಿ ವೆಂಕಟೇಸನ್ ಅವರು ಮದ್ರಾಸ್ ಉಚ್ಛ ನ್ಯಾಯಾಲಯದಲ್ಲಿ ಪಿ ಐ ಎಲ್ ಹಾಕಿದ್ದರು.

ತಮಿಳುನಾಡಿನಲ್ಲಿ ಸಿಆರ್​ಪಿಎಫ್ ನೇಮಕಾತಿಗೆ ಸ್ಥಾಪಿಸಲಾಗುತ್ತಿರುವ ಪರೀಕ್ಷಾ ಕೇಂದ್ರಗಳ ಬಗ್ಗೆ ಮಾಹಿತಿ ಕೋರಿ ಮದುರೈ ಸಂಸದರು ಕೇಂದ್ರಕ್ಕೆ ಇಂಗ್ಲೀಷ್ ಭಾಷೆಯಲ್ಲಿ ಮನವಿ ಪತ್ರ ಬರೆದಿದ್ದರು.

ಇದಕ್ಕೆ ಗೃಹ ಇಲಾಖೆಯಿಂದ ಹಿಂದಿಯಲ್ಲೇ ಉತ್ತರ ಬಂದಿತ್ತು. ಇದರ ವಿರುದ್ಧ ಹೈಕೋರ್ಟ್​ನಲ್ಲಿ ಪಿಎಎಲ್ ಹಾಕಿದ ಸಂಸದರು,

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಧ್ಯೆ ಇಂಗ್ಲೀಷ್​ನಲ್ಲಿ ಮಾತ್ರ ಸಂವಹನ ನಡೆಯಬೇಕೆಂದು ಕೇಂದ್ರಕ್ಕೆ ನಿರ್ದೇಶನ ಕೊಡಬೇಕು ಎಂದು ತಮ್ಮ ಅರ್ಜಿಯಲ್ಲಿ ಕೇಳಿಕೊಂಡಿದ್ದರು.
“ಅಧಿಕೃತ ಭಾಷೆಗಳಲ್ಲೊಂದಾದ ಹಿಂದಿಯನ್ನು ತಮಿಳುನಾಡು ರಾಜ್ಯದೊಂದಿಗೆ ಅಧಿಕೃತ ಸಂವಹನ ನಡೆಸಲು ಬಳಕೆ ಮಾಡಬಾರದು.

ಹಿಂದಿಯು ಅಧಿಕೃತ ಭಾಷೆಯಾಗಿ ಅಳವಡಿಕೆಯಾಗದ ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ಸಂವಹ ನಡೆಸಲು ಇಂಗ್ಲೀಷ್ ಬಳಸಬೇಕೆಂದು ಸಂಸತ್ ಕಾಯ್ದೆ ಹೇಳುತ್ತದೆ. ಕೇಂದ್ರ ಸರ್ಕಾರ ಇದಕ್ಕೆ ಬದ್ಧವಾಗಿರಬೇಕು” ಎಂದು ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿತು.

LATEST NEWS

NSUI ನಾಯಕನ ಮೇಲೆ ತಲವಾರು ದಾ*ಳಿ ಪ್ರಕರಣ; ಐವರು ಅರೆಸ್ಟ್

Published

on

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಎನ್.ಎಸ್.ಯು.ಐ ಜಿಲ್ಲಾ ನಾಯಕ ಶರತ್ ಕುಂದರ್ ಮೇಲೆ ನಡೆದ ಹ*ಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕುಂಜಿಬೆಟ್ಟು ನಿವಾಸಿ ಅಕ್ಷತ್ ಪೈ (27), ಸುಶಾಂತ್ (25), ರಮಾನಂದ ಪೈ (42), ಸಂತೋಷ್ ಕೊರಗ (38), ಅಲೆವೂರು ನಿವಾಸಿ ಶಂಶಾಂಕ್ ನಾಯಕ್ (25) ಬಂಧಿತ ಆರೋಪಿಗಳು.

ಜನವರಿ 30 ರಂದು ರಾತ್ರಿ 9 ಗಂಟೆ ಸುಮಾರಿಗೆ ಚಿಟ್ಟಾಡಿ ಬೈಲೂರು ಬಡಗುಬೆಟ್ಟು ನಿವಾಸಿ ಶರತ್ ಕುಂದರ್ (25) ಅವರು ತಮ್ಮ ಸ್ನೇಹಿತನ ಕಾರಿನಲ್ಲಿ ಮಣಿಪಾಲದ ಹೋಟೆಲೊಂದಕ್ಕೆ ಊಟಕ್ಕೆಂದು ತೆರಳಿದ್ದರು. ಅಲ್ಲಿ ಅಕ್ಷತ್ ಪೈ, ಶಶಾಂಕ್ ಹಾಗೂ ಉಡುಪಿಯ ಜನರಲ್ ಸ್ಟೋರೊಂದರ ಮಾಲಕರ ಮಗನೊಂದಿಗೆ ಸಣ್ಣ ವಿಚಾರಕ್ಕೆ ಸಂಬಂಧಿಸಿ ಬಾಯಿ ಮಾತಿನ ಗಲಾಟೆ ನಡೆದಿದೆ.

ನಂತರ ಶರತ್ ಕುಂದ‌ರ್ ಮನೆಗೆ ವಾಪಸ್ಸಾಗುತ್ತಿದ್ದಾಗ ಕಲ್ಸಂಕ ಬಳಿ ತಲುಪುವ ಸಂದರ್ಭದಲ್ಲಿ ಅಕ್ಷತ್ ಪೈ ಕರೆ ಮಾಡಿ, ಹೋಟೆಲ್‌ನ ಗಲಾಟೆ ವಿಚಾರವಾಗಿ ಮಾತನಾಡಲು ಪಿಪಿಸಿ ಕ್ರಾಸ್ ಬಳಿ ನಿಲ್ಲುವಂತೆ ತಿಳಿಸಿದ್ದಾನೆ. ರಾತ್ರಿ ಸುಮಾರು 11.30ರ ವೇಳೆಗೆ ಪಿಪಿಸಿ ಕ್ರಾಸ್ ಸಮೀಪ ಕೋಸ್ಟಲ್ ಚಿಕನ್ ಅಂಗಡಿಯ ಎದುರು ರಸ್ತೆಯ ಬದಿಯಲ್ಲಿ ಶರತ್ ಕುಂದರ್ ತಮ್ಮ ಸ್ನೇಹಿತರಾದ ಧ್ರುವಾ, ಸಿಲಾನ್ ಗಗನ್ ಹಾಗೂ ರೋಹಿತ್ ಜೊತೆ ಮಾತನಾಡುತ್ತ ನಿಂತಿದ್ದ ವೇಳೆ ಟಾಟಾ ಸಫಾರಿ ಮತ್ತು ಮಹೀಂದ್ರ ಥಾರ್ ವಾಹನಗಳು ಏಕಾಏಕಿ ಬಂದು ನಿಂತಿವೆ.

ವಾಹನಗಳಿಂದ ಇಳಿದ ಅಕ್ಷತ್ ಪೈ, ಶಶಾಂಕ್ ಸೇರಿದಂತೆ ಆರೇಳು ಮಂದಿ ಕೈಯಲ್ಲಿ ತಲವಾರಿನಂತಹ ಆಯುಧ ಹಾಗೂ ಕಬ್ಬಿಣದ ಚೈನ್ ಹಿಡಿದು ಶರತ್ ಕುಂದ‌ರ್ ಮೇಲೆ ಹಲ್ಲೆ ನಡೆಸಿದರೆಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆ ಬಳಿಕ  ಆರೋಪಿಗಳು ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದರು. ಗಾಯಾಳುವನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ : ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ ಹುಂಡೈ ಅವೆನ್ಯೂ ಕಾರು (ಅಂದಾಜು ಮೌಲ್ಯ 8 ಲಕ್ಷ) ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

FILM

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಅಭಿಮಾನಿಗಳ ಮನಗೆದ್ದ ರಾಧಿಕಾ ಪಂಡಿತ್ ಪೋಸ್ಟ್!

Published

on

ಕನ್ನಡ ಚಿತ್ರರಂಗದ ಮಾದರಿ ದಂಪತಿಗಳಾದ ಯಶ್ ಮತ್ತು ರಾಧಿಕಾ ಪಂಡಿತ್ ಈ ಬಾರಿಯ ವ್ಯಾಲೆಂಟೈನ್ಸ್ ದಿನವನ್ನು ಪ್ರೀತಿಯಿಂದ ಆಚರಿಸಿದ್ದಾರೆ. ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪತಿ ಯಶ್ ಅವರೊಂದಿಗೆ ಇರುವ ಸುಂದರವಾದ ಫೋಟೋವನ್ನು ಹಂಚಿಕೊಳ್ಳುವ ಮೂಲಕ ವಿಶ್ ಮಾಡಿದ್ದಾರೆ.


ರಾಧಿಕಾ ಪಂಡಿತ್‌ ಮತ್ತು ಯಶ್‌ ಇಬ್ಬರೂ ಧಾರಾವಾಹಿ ಮೂಲಕ ಪರಿಚಯ ಆಗಿದ್ದು, ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿ, ಬಳಿಕ ಒಟ್ಟಾಗಿ ಸಿನಿಮಾ ಮಾಡಿದರು. ತೆರೆಮೇಲೆ ಜೋಡಿಯಾಗಿದ್ದ ಇವರು ತೆರೆಹಿಂದೆಯೂ ಕಪಲ್‌ ಆಗಿದ್ದಾರೆ. ಇದೀಗ ಯಶ್‌ ಅವರ ಕುರಿತು ರಾಧಿಕಾ ಪಂಡಿತ್‌ ಹಂಚಿಕೊಂಡಿರೋ ಪೋಸ್ಟ್‌ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

ಯಶ್ ಅವರಿಗೆ ಧನ್ಯವಾದ ಅರ್ಪಿಸಿರುವ ರಾಧಿಕಾ, ‘ನನ್ನ ಅಭದ್ರತೆಯನ್ನು ತೆಗೆದು ಹಾಕಿದವನು ನೀನು. ನಿನ್ನ ಕಣ್ಣುಗಳಲ್ಲಿ ದಣಿವು, ಬೇರೆ ಯಾರೂ ಗಮನಿಸದ ತ್ಯಾಗ, ದೂರು ನೀಡದೆ ನೀನು ಹೊತ್ತುಕೊಂಡ ದೀರ್ಘ ಭಾರ ನನಗೆ ಕಾಣುತ್ತಿದೆ. ಅದು ನಮಗಾಗಿ ಎಂದು ನನಗೆ ತಿಳಿದಿದೆ. ನನ್ನನ್ನು ದಿನವೂ ಆಯ್ಕೆ ಮಾಡಿದ್ದಕ್ಕೆ ನಿನಗೆ ಧನ್ಯವಾದ, ಹ್ಯಾಪಿ ವ್ಯಾಲೆಂಟೈನ್ಸ್ ಡೇ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮದುವೆಗೆಂದು ಬಂದಿದ್ದ ಮಹಿಳೆ ನಾಪತ್ತೆ: ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ

ಇಬ್ಬರೂ ಜೊತೆಯಾಗಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಪ್ರೇಮಿಗಳ ದಿನದ ಶುಭಾಶಯ ಕೋರಿದ್ದಾರೆ. ರಾಧಿಕಾ ಪಂಡಿತ್ ಅವರ ಈ ಪೋಸ್ಟ್ ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, ಸಾವಿರಾರು ಅಭಿಮಾನಿಗಳು ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

Continue Reading

LATEST NEWS

ಚರಂಡಿಗೆ ಬಿ*ದ್ದು ಬಾಲಕ ಸಾ*ವು

Published

on

ಮಂಗಳೂರು/ಬೀದರ್ : ಮನೆಯ ಮುಂದೆ ಆಟ ಆಡುತ್ತಿದ್ದ ಬಾಲಕ  ಚರಂಡಿಗೆ ಬಿ*ದ್ದು ಸಾ*ವನ್ನಪ್ಪಿದ ಘಟನೆ ಬೀದರ್ ತಾಲೂಕಿನ ಮಲ್ಲಿಕ್‌ ಮರ್ಜಾಪುರ ಗ್ರಾಮದಲ್ಲಿ ನಡೆದಿದೆ.

5 ವರ್ಷದ ಅವಿನಾಶ್ ಮೃ*ತ ಬಾಲಕ. ಮನೆಯ ಮುಂದೆ ಆಡುತ್ತಿದ್ದ ಬಾಲಕ ಕಾಣೆಯಾಗಿದ್ದ. ಹೀಗಾಗಿ  ಕುಟುಂಬಸ್ಥರು ಹುಡುಕಾಡಿದ್ದು, ಬಾಲಕನ ಸುಳಿವು ಸಿಕ್ಕಿರಲಿಲ್ಲ. ಬಳಿಕ ಮನೆಯ ಮುಂದಿನ ಚರಂಡಿಗೆ ಬಿದ್ದು ಮಗು ಸಾ*ವನ್ನಪ್ಪಿರುವುದು ಗೊತ್ತಾಗಿದೆ.

ಇದನ್ನೂ ಓದಿ : ಬ್ಯಾಂಕ್‌ನಲ್ಲಿಟ್ಟಿದ್ದ 4 ಕೋಟಿ  ಮೌಲ್ಯದ ಚಿನ್ನಾಭರಣಕ್ಕೆ ಕನ್ನ; ತನಿಖೆ ವೇಳೆ ಬಯಲಾಯ್ತು ಶಾಕಿಂಗ್ ವಿಚಾರ!

ಬಗದಲ್ ಪೊಲೀಸ್ ವ್ಯಾಪ್ತಿಯಲ್ಲಿ ಈ ದುರಂ*ತ ಸಂಭವಿಸಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page