Connect with us

ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ಇನಿಲ್ಲ..!!

Published

on

ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ಇನಿಲ್ಲ..!!

ಬೆಂಗಳೂರು : ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ ಇಂದು ಬೆಳಗ್ಗೆ ಹೃದಯಾಘಾತದಿಂದಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ನಿನ್ನೆ ರಾತ್ರೀಯೇ. ಚಿಕಿತ್ಸೆಗಾಗಿ ಬೆಂಗಳೂರಿನ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಇಂದು ಮುಂಜಾನೆ ಅವರು ಮೃತಪಟ್ಟಿದ್ದಾರೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದ ಮಹೇಂದ್ರ ಕುಮಾರ್‌ ಆರಂಭದ ದಿನಗಳಲ್ಲಿ ಭಜರಂಗ ದಳದಲ್ಲಿ ಗುರುತಿಸಿಕೊಂಡಿದ್ದರು.

ಆದರೆ, 2008ರ ಮಂಗಳೂರು ಚರ್ಚ್‌ ದಾಳಿ ಪ್ರಕರಣದ ನಂತರ ಅವರು ಬಜರಂಗ ದಳಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ, ಕಳೆದ ಒಂದು ದಶಕದಿಂದ ನಿರಂತರವಾಗಿ ಬಿಜೆಪಿ ಮತ್ತು ಬಲಪಂಥೀಯ ಸಂಘಟನೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ಬಜರಂಗದಳದ ಮೂಲಕ ತಮ್ಮ ಸಾಮಾಜಿಕ ಜೀವನ ಆರಂಭಿಸಿದ್ದ ಮಹೇಂದ್ರ ಕುಮಾರ್ ಬಳಿಕ ಸಂಘಟನೆಯನ್ನು ಬಿಟ್ಟು ಸರ್ವಧರ್ಮ ಸೌಹಾರ್ದ, ಸಾಮಾರಸ್ಯದ ಕುರಿತು ಕಾಳಜಿಯಿಂದ ದುಡಿಯುತ್ತಿದ್ದರು.

ರಾಜ್ಯದಾದ್ಯಂತ ಅಪಾರ ಜನಮನ್ನಣೆ ಗಳಿಸಿದ್ದರು. ಸಿಎಎ, ಎನ್‌ಆರ್‌ಸಿ ವಿರೋಧಿ ಹೋರಾಟದ ಸಂದರ್ಭದಲ್ಲಿ ಮಂಚೂಣಿಯಲ್ಲಿದ್ದು ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದರು.

ಇತ್ತೀಚೆಗೆ ನಮ್ಮ ಧ್ವನಿ ಎಂಬ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದ ಅವರು ಈ ಚಾನೆಲ್ ಮೂಲಕ ಕೇಂದ್ರ ಸರ್ಕಾರದ ಇಬ್ಬಗೆಯ ನೀತಿ, ಸಿಎಎ, ಎನ್‌ಆರ್‌ಸಿ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಅನೇಕ ನಡೆಗಳನ್ನು ಉಗ್ರವಾಗಿ ಟೀಕಿಸಿದ್ದರು.

ಆದರೆ, ಇವರ ಅಕಾಲಿಕ ಅಗಲಿಕೆ ಇದೀಗ ಪ್ರಗತಿಪರ ವಲಯದಲ್ಲಿ ಆಘಾತವನ್ನು ಉಂಟು ಮಾಡಿದೆ. ಮಹೇಂದ್ರ ಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಮಹೇಂದ್ರ ಕುಮಾರ್‌ ನಿಧನಕ್ಕೆ ಶಾಸಕ ಯು.ಟಿ ಖಾದರ್ ಸಂತಾಪ :

ಮಹೇಂದ್ರ ಕುಮಾರ್ ನಿಧನಕ್ಲೆ ಶಾಸಕ ಯು.ಟಿ. ಖಾದರ್ ಸಂತಾಪ ವ್ಯಕ್ತಪಡಿಸಿದ್ದಾರೆ.  ವ್ಯಕ್ತಿತ್ವ ಬದಲಿಸಿ ಸಮಾಜದಲ್ಲಿ ಎಲ್ಲರೂ ಒಗ್ಗಟ್ಟು ಏಕತೆಯಿಂದ ಬದುಕುವ ವಾತವರಣ ನಿರ್ಮಾಣ ಮಾಡಿದ್ದರು. ತಪ್ಪು ಸಹಜ ಕ್ಷಮೆ ದೊಡ್ಡ ಗುಣ ಎಂಬ ಧ್ಯೇಯ ಇಟ್ಟುಕೊಂಡು ದೇಶಕ್ಕೆ ಕಂಠಕವಾಗಿದ್ದ ಎನ್.ಆರ್.ಸಿ, ಸಿ.ಎ.ಎ ವಿರೋಧಿಸಿ ರಾಜ್ಯದ ಮೂಲೆ ಮೂಲೆಗೂ ತೆರಳಿ ತನ್ನ ನಿಲುವನ್ನು ಜನವರಿಗೆ ಮನವರಿಕೆ ಮಾಡಿದ್ದರು. ಯುವ ಜನಾಂಗ ಇಂದು ಉತ್ತಮ ಮಾರ್ಗದರ್ಶಕ ನನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಂತಾಪ ಸಂದೇಶದಲ್ಲಿ ಖಾದರ್ ಹೇಳಿದ್ದಾರೆ.

 

5 ತಿಂಗಳ ಹಿಂದೆ ಮಹೆಂದ್ರ ಕುಮಾರ್ ಅವರೊಂದಿಗೆ ನಮ್ಮ ಕುಡ್ಲ ವಾಹಿನಿ ನಡೆಸಿದ ನೇರಾಮಾತು..!!

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page