Connect with us

LATEST NEWS

ಭಾರಿ ಮಳೆ: ಮಂಗಳೂರು-ಮಡಿಕೇರಿ ಹೆದ್ದಾರಿಯಲ್ಲಿ ಭೂಕುಸಿತ

Published

on

ಕೊಡಗು: ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಮಡಿಕೇರಿ ಮಂಗಳೂರು ಹೆದ್ದಾರಿಯ ಕೆಳಭಾಗದಲ್ಲಿ 2018 ರಲ್ಲಿ ಭೂಕುಸಿತವಾಗಿದ್ದ ಸ್ಥಳದಲ್ಲಿ ಕುಸಿಯುವ ಆತಂಕ ಎದುರಾಗಿದೆ. ಹೀಗಾಗಿ ಅಲ್ಲಿರುವ ಆರು ಕುಟುಂಬಗಳು ಭೂಕುಸಿತದ ಭೀತಿಯಲ್ಲಿವೆ.

ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಮಡಿಕೇರಿಯಲ್ಲಿ ವರುಣಾರ್ಭಟಕಳೆದ ಮೂರು ವರ್ಷಗಳಿಂದ ಮಳೆಯ ಅಬ್ಬರದಿಂದ ಕಂಗಾಲಾಗಿದ್ದ ಜಿಲ್ಲೆಯ ಜನರು ಮತ್ತೆ ಭೀತಿಯಲ್ಲಿದ್ದಾರೆ. ಗುಡ್ಡ ಕುಸಿತದಿಂದ ಮನೆಗಳಿಗೆ ಯಾವುದೇ ತೊಂದರೆಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರಕ್ಕೆ ಅಲ್ಲಿನ ನಿವಾಸಿಗಳನ್ನು ಕಳುಹಿಸಲಾಗಿದೆ ಎಂದು ತಹಶೀಲ್ದಾರ್ ಮಹೇಶ್​​ ಹೇಳಿದರು. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಆರಂಭವಾಗಿದೆ. ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ನದಿ‌ಪಾತ್ರದ ಜನರು ಮತ್ತು ಬೆಟ್ಟಗುಡ್ಡದಲ್ಲಿ ನೆಲೆಸಿರುವವವರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಟವರ್ ಕೆಳಭಾಗದಲ್ಲಿ ಮಣ್ಣು ಕುಸಿತ ಮಡಿಕೇರಿಯ ಆಕಾಶವಾಣಿ ಟವರ್ ಕೆಳಭಾಗದಲ್ಲಿ ಮಣ್ಣು ಕುಸಿತವಾಗಿದೆ.

ಟವರ್ ಕೆಳ ಭಾಗದಲ್ಲಿ ಹಲವಾರು ಮನೆಗಳಿದ್ದು ನಿವಾಸಿಗಳು ಆತಂಕದಲ್ಲಿದ್ದಾರೆ. ಮಡಿಕೇರಿಯ ಎತ್ತರದ ಪ್ರದೇಶದಲ್ಲಿ ಟವರ್ ನಿರ್ಮಾಣ ಮಾಡಲಾಗಿದೆ. ಹೆಚ್ಚು ಮಳೆ ಬೀಳುತ್ತಿದ್ದು ಮಣ್ಣು ಜಾರಿದರೆ ಟವರ್ ಕುಸಿತವಾಗಿ ಮನೆಗಳ ಮೇಲೆ ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಭಯದಲ್ಲಿದ್ದಾರೆ. ಹಿಂದೆಯೂ ಟವರ್​ ಕೆಳಗೆ ಮಣ್ಣು ಕುಸಿದಿದ್ದು, ತಡೆಗೋಡೆ ನಿರ್ಮಾಣ ಮಾಡಲಾಗಿತ್ತು. ನಗರಸಭೆ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳದಲ್ಲಿ ಬ್ಯಾರಿಕೇಡ್ ಅಳವಡಿಸಿದ್ದರು. ಆದರೆ ಈಗ ಮತ್ತೆ ಮಣ್ಣು ಕುಸಿತವಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

LATEST NEWS

ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭ; 160 ದೇಶಗಳ ಗಣ್ಯರು ಭಾಗಿ

Published

on

ಮಂಗಳೂರು/ವ್ಯಾಟಿಕನ್ ಸಿಟಿ: ಅನಾರೋಗ್ಯದಿಂದ ಕಳೆದ ಸೋಮವಾರ (ಏ.21)ದಂದು ನಿಧ*ನರಾದ ಕ್ರಿಶ್ಚಿಯನ್ ಕ್ಯಾಥೋಲಿಕ್ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಇಂದು (ಏ.26 ಶನಿವಾರ) ವ್ಯಾಟಿಕನ್‌ನಲ್ಲಿ ನಡೆಯಲಿದೆ. ಈಗಾಗಲೇ ಸಿದ್ದತೆಗಳು ಆರಂಭವಾಗಿದೆ. ಸೆಂಟ್ ಪೀಟರ್ಸ್ ಸ್ಕ್ವೇರ್‌ನಲ್ಲಿ ಜಗತ್ತಿನ ಹಲವು ರಾಷ್ಟ್ರಗಳ ಗಣ್ಯರು ಪಾಲ್ಗೊಂಡಿದ್ದಾರೆ.


ಇಹಲೋಕ ತ್ಯಜಿಸಿರುವ ಕ್ರಿಶ್ಚಿಯನ್ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತಿಮ ದರ್ಶನಕ್ಕಾಗಿ ವ್ಯಾಟಿಕನ್ ಸಿಟಿಗೆ ಭಕ್ತಸಾಗರವೇ ಹರಿದುಬಂದಿದೆ. ನಿನ್ನೆ (ಏ.25 ಶುಕ್ರವಾರ) 2,50,000 ಜನರು ಪೋಪ್ ಫ್ರಾನ್ಸಿಸ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಇಂದು ಸುಮಾರು 2 ಲಕ್ಷಕ್ಕೂ ಅಧಿಕ ಜನ ತಮ್ಮ ಗುರುವಿನ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ.

160 ದೇಶಗಳ ಗಣ್ಯರು ಭಾಗಿ
ಪೋಪ್ ಫ್ರಾನ್ಸಿಸ್ ಅವರ ಮೃತದೇಹವನ್ನು ವ್ಯಾಟಿಕನ್ ಸಿಟಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಜಗತ್ತಿನ ಸುಮಾರು 160 ದೇಶಗಳ ಗಣ್ಯರು ಅಗಲಿದ ಧರ್ಮಗುರುವಿನ ಅಂತಿಮ ದರ್ಶನ ಪಡೆದಿದ್ದಾರೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸೇರಿದಂತೆ ಹಲವು ಜಾಗತಿಕ ಗಣ್ಯರು ಪೋಪ್‌ ಫ್ರಾನ್ಸಿಸ್‌ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹೊಸ ಪೋಪ್ ಆಯ್ಕೆ ಪ್ರಕ್ರಿಯೆ ಹೇಗೆ? ಮುಂದಿನ ಪೋಪ್ ಯಾರಾಗಬಹುದು..!?

ಸೇಂಟ್ ಮೇರಿ ಮೇಜರ್ ಬೆಸಿಲಿಕಾದಲ್ಲಿ ಅಂತ್ಯಕ್ರಿಯೆ
ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಸೇಂಟ್ ಮೇರಿ ಮೇಜರ್ ಬೆಸಿಲಿಕಾದಲ್ಲಿ ನಡೆಯಲಿದೆ. ಇದು ರೋಮ್‌ನ ಮುಖ್ಯ ರೈಲ್ವೇ ಸ್ಟೇಷನ್ ಬಳಿ ಇದೆ. ಇಲ್ಲಿ ಸರಳವಾದ ಸಮಾಧಿಗೆ ಸಿದ್ಧತೆ ನಡೆದಿದೆ. ಸಮಾಧಿ ಮೇಲೆ ‘ಫ್ರಾನ್ಸಿಸ್’ ಎಂದಷ್ಟೇ ಇರಲಿದೆ.

Continue Reading

DAKSHINA KANNADA

ಪುತ್ತೂರಿನಲ್ಲಿದೆಯಂತೆ ನಕಲಿ ವೈದ್ಯರ ಹಾವಳಿ; ಪ್ರತಿಭಟನೆಯಲ್ಲಿ ಬಯಲಾಯ್ತು ರಹಸ್ಯ!

Published

on

ಪುತ್ತೂರು : ಪುತ್ತೂರಿನಲ್ಲಿ ಸರ್ಕಾರಿ ವೈದ್ಯಾಧಿಕಾರಿ ಮೇಲೆ ಹ*ಲ್ಲೆಗೆ ಮುಂದಾದ ಪ್ರಕರಣದ ವಿಚಾರದಲ್ಲಿ ವೈದ್ಯರು ಪ್ರತಿಭಟನೆ ನಡೆಸಿದ್ದರು. ಸೂಕ್ತ ಕಾನೂನು ಭರವಸೆ ಬಳಿಕ ವೈದ್ಯರ ಪ್ರತಿಭಟನೆ ಅಂತ್ಯವಾಗಿದೆಯಾದ್ರೂ ಶನಿವಾರ(ಎ.26) ಸಂಜೆ ತನಕ ಗಡುವು ನೀಡಲಾಗಿದೆ. ಆದ್ರೆ, ಈ ನಡುವೆ ಪುತ್ತೂರಿನಲ್ಲಿ ನಕಲಿ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಚಾರ ಕೂಡ ಬಯಲಿಗೆ ಬಂದಿದೆ.

ಪುತ್ತೂರಿನಲ್ಲಿರುವ ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿಗೆ ದೂರು ನೀಡಲಾಗಿದೆ ಅಂತ ಸ್ವತಃ ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಹೇಳಿದ್ದಾರೆ. ವಿಪರ್ಯಾಸ ಅಂದ್ರೆ, ಈ ವಿಚಾರವಾಗಿ ದೂರು ನೀಡಿ ಎರಡು ವರ್ಷವಾಗಿದ್ರೂ ಕ್ರಮ ಕೈಗೊಂಡಿಲ್ಲ ಎಂಬ ವಿಚಾರವನ್ನೂ ಅವರೇ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಜನಿವಾರ ಪ್ರಕರಣ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವುದು ಅತ್ಯಂತ ಅಗತ್ಯದ ವಿಚಾರವಾಗಿದ್ದು, ಇದರ ವಿಚಾರವಾಗಿ ವೈದ್ಯಕೀಯ ಸಂಘ ನೀಡಿದ ದೂರಿಗೆ ಕ್ರಮ ಆಗದೇ ಇದ್ರೂ ಮೌನವಾಗಿರುವುದೇ ಅಚ್ಚರಿಯ ಸಂಗತಿ. ಈ ಬಗ್ಗೆ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

 

 

Continue Reading

LATEST NEWS

ದುರ್ಗಮ ಹಾದಿ ಪಹಲ್ಗಾಮ್‌ನ ಬೈಸರನ್‌ನಲ್ಲಿ ಯೋಧರೇಕೆ ಇರಲಿಲ್ಲ: ಕೇಂದ್ರ ಸ್ಪಷ್ಟನೆ

Published

on

ಮಂಗಳೂರು/ನವದೆಹಲಿ: ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಮುಗ್ದ ಪ್ರವಾಸಿಗರ ಭೀಕರ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಯ ಬೆನ್ನಲ್ಲೇ ಭದ್ರತಾ ವೈಫಲ್ಯದ ಬಗ್ಗೆ ಹಲವಾರು ಭಾರತೀಯರು ಆತಂಕ ವ್ಯಕ್ತಪಡಿಸಿದ್ದರು. ಸರ್ವ ಪಕ್ಷ ಸಭೆಯಲ್ಲಿಯೂ ಭದ್ರತಾ ವೈಫಲ್ಯದ ಬಗ್ಗೆ ವಿಪಕ್ಷಗಳು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದವು.

ದುರ್ಗಮ ಹಾದಿಯಾದ ಪಹಲ್ಗಾಮ್‌ನ ಬೈಸರನ್‌ನಲ್ಲಿ ಯೋಧರೇಕೆ ಇರಲಿಲ್ಲ ಎಂಬ ಪ್ರಶ್ನೆಗೆ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಉತ್ತರಿಸಿದೆ.

ಭದ್ರತಾ ಪಡೆ ನಿಯೋಜನೆಗೂ ಮುನ್ನ ಮಾಹಿತಿ ನೀಡದೇ, ಬೈಸರನ್‌ನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದೇ ಈ ಅನಾಹುತಕ್ಕೆ ಕಾರಣ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.

ಸರ್ವಪಕ್ಷ ಸಭೆಯಲ್ಲಿ ಬೈಸರನ್ ಹುಲ್ಲುಗಾವಲಿನಲ್ಲಿ ಭದ್ರತಾ ಪಡೆಗಳ ಅಲಭ್ಯತೆಯ ಬಗ್ಗೆ ಪ್ರಶ್ನೆಯೆದ್ದ ಹಿನ್ನೆಲೆಯಲ್ಲಿ ಉತ್ತರಿಸಿದ ಸರಕಾರ, ‘ಜೂನ್ ತಿಂಗಳಿನಲ್ಲಿ ಪ್ರಾರಂಭವಾಗುವ ವಾರ್ಷಿಕ ಅಮರನಾಥ ಯಾತ್ರೆಗೂ ಮುನ್ನ ಈ ಪ್ರದೇಶದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗುತ್ತದೆ ಹಾಗೂ ಇಲ್ಲಿಗೆ ಪ್ರವಾಸಿಗರ ಭೇಟಿಗೂ ಅವಕಾಶ ಕಲ್ಪಿಸಲಾಗುತ್ತದೆ.

ಇದನ್ನೂ ಓದಿ: ಪಹಲ್ಗಾಮ್ ಉಗ್ರ ದಾಳಿ ವಿರೋಧಿಸಿ ಪ್ರತಿಭಟನೆ; ಕುತ್ತಿಗೆ ಕತ್ತರಿಸುವುದಾಗಿ ಬೆದರಿಕೆ ಹಾಕಿದ ಪಾಕ್ ಸೇನಾ ಅಧಿಕಾರಿ

ಆದರೆ ಪ್ರವಾಸಿ ಮಾರ್ಗದರ್ಶಿಗಳು ಸ್ಥಳೀಯಾಡಳಿತಗಳ ಗಮನಕ್ಕೆ ತಾರದೇ ಎ.20ರಿಂದಲೇ ಈ ಪ್ರದೇಶಕ್ಕೆ ಪ್ರವಾಸಿಗರನ್ನು ಕರೆ ತರಲು ಪ್ರಾರಂಭಿಸಿದ್ದರು. ಈ ವಿಷಯ ಪೊಲೀಸರಿಗಾಗಲೀ, ಸೇನೆಗಾಗಲೀ ಗೊತ್ತಿರಲಿಲ್ಲ. ಅವಧಿಗಿಂತ ಮೊದಲೇ ಪ್ರವಾಸೋದ್ಯಮ ಪ್ರಾರಂಭವಾಗಿದ್ದರಿಂದ ಸೈನಿಕರ ನಿಯೋಜನೆ ಸಾಧ್ಯವಾಗಿರಲಿಲ್ಲ’ ಎಂದು ಸ್ಪಷ್ಟಪಡಿಸಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page