Connect with us

LATEST NEWS

ವಿವಾದಿತ ಮಳಲಿ ಮಸೀದಿ: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಕೋರ್ಟ್

Published

on

ಮಂಗಳೂರು: ವಿವಾದಿತ ಮಳಲಿ ಮಸೀದಿಯ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿ ಮಂಗಳೂರಿನ 3ನೇ ಹೆಚ್ಚುವರಿ ಕೋರ್ಟ್‌ ಆದೇಶಿಸಿದೆ.


ಮಳಲಿ ಮಸೀದಿ ವಿವಾದ ವಿಚಾರದಲ್ಲಿ ವಿಹೆಚ್‌ಪಿ ಅರ್ಜಿ ವಜಾ ಮಾಡುವಂತೆ ಮಳಲಿಯ ಮಸೀದಿ ಆಡಳಿತ ಸಮಿತಿಯಿಂದ ನ್ಯಾಯಾಲಯಕ್ಕೆ, ಅರ್ಜಿ ಸಲ್ಲಿಕೆಯಾಗಿತ್ತು. ಇಂದು ಆ ಅರ್ಜಿ ವಿಚಾರಣೆ ನಡೆದು
ಮಳಲಿಯಲ್ಲಿ ಮಸೀದಿ ಇದ್ದ ಜಾಗದಲ್ಲಿ ನವೀಕರಣಕ್ಕಾಗಿ ಹಳೆ ಕಟ್ಟಡ ತೆರವು ಮಾಡುವ ಸಂದರ್ಭ ದೇಗುಲ ಆಕೃತಿಯ ಕಟ್ಟಡ ನಿರ್ಮಾಣವಾದ ಹಿನ್ನೆಲೆಯಲ್ಲಿ ವಿಹೆಚ್‌ಪಿ ನ್ಯಾಯಾಲಯದ ಮೆಟ್ಟಲೇರಿತ್ತು.
ಈ ಅರ್ಜಿಯನ್ನು ವಜಾಗೊಳಿಸುವಂತೆ ಮಸೀದಿ ಆಡಳಿತ ಮಂಡಳಿ ಮಂಗಳೂರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ವಕ್ಫ್‌ಬೋರ್ಡ್‌ ಕಾಯಿದೆ ಮತ್ತು 1991ರ ಪೂಜಾ ಸ್ಥಳಗಳ ಕಾಯ್ದೆಯಡಿ ವಜಾ ಮಾಡುವಂತೆ ತಾಂತ್ರಿಕ ಕಾರಣ ನೀಡಿ ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಈ ಪ್ರಕರಣದಲ್ಲಿ ವಿಚ್‌ಪಿ ನೇತೃತ್ವದಲ್ಲಿ ಕೆಲ ದಿನಗಳ ಹಿಂದೆ ತಾಂಬೂಲ ಪ್ರಶ್ನೆ ನಡೆದಿತ್ತು. ಅದಾದ ನಂತರ ಸ್ಥಳೀಯ ಶಾಸಕ ಭರತ್‌ ಶೆಟ್ಟಿ ನೇತೃತ್ವದಲ್ಲಿ ಸಂಧಾನ ಸಭೆಯೂ ನಡೆದಿತ್ತು.

bangalore

ಬರಹದ ಮೂಲಕ ಮಹಿಳೆಯರಿಗೆ ಧೈರ್ಯ ತುಂಬಿದ ಆಟೋ ಡ್ರೈವರ್; ಅಂತದ್ದೇನಿದೆ?

Published

on

ಬೆಂಗಳೂರು: ಇತ್ತೀಚೆಗೆ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಹಾಗೂ ವಿವಿಧ ವಾಹನಗಳಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿರುವ ಹಲವು ಉದಾಹರಣೆಗಳು ಇದೆ. ರಾತ್ರಿ ವೇಳೆ ಕೆಲಸ ಮುಗಿಸಿ ಮನೆಗೆ ಬರುವ ಮಹಿಳೆಯರಲ್ಲಿ ಅಸುರಕ್ಷತೆಯ ಭಾವನೆ ಹೆಚ್ಚಾಗಿದೆ.


ಇಂತಹ ವಾತಾವರಣದ ನಡುವೆ ಬೆಂಗಳೂರಿನಲ್ಲಿ ಓರ್ವ ಆಟೋ ಚಾಲಕನ ವ್ಯಕ್ತಿತ್ವ ಎಲ್ಲರ ಗಮನ ಸೆಳೆದಿದೆ. ಚಾಲಕನ ಹಿಂದಿನ ಭಾಗದಲ್ಲಿ, ನಾನೂ ಒಬ್ಬ ಅಣ್ಣ/ತಂದೆ. ನಿಮ್ಮ ಸುರಕ್ಷತೆಯೇ ಮುಖ್ಯ. ಆರಾಮವಾಗಿ ಕುಳಿತುಕೊಳ್ಳಿ ಎಂದು ಬರೆದು ಆಟೋ ಚಾಲಕರೊಬ್ಬರು ಪ್ರಯಾಣಿಕರಿಗೆ ಧೈರ್ಯ ತುಂಬಿದ್ದಾರೆ.

ಈ ರೀತಿಯ ಬರಹವನ್ನು ಗಮನಿಸಿದ ಯುವತಿಯೊಬ್ಬರು, ರಾತ್ರಿ 12 ಗಂಟೆಗೆ ರ್ಯಾಪಿಡೊ ಆಟೋದಲ್ಲಿ ಪ್ರಯಾಣಿಸುತ್ತಿದ್ದೆ. ಆಟೋದಲ್ಲಿ ಕುಳಿತ ತಕ್ಷಣ ಈ ಬರಹ ಓದಿದೆ. ಆಗ ನನಗೆ ನಿಜವಾಗಿಯೂ ಸುರಕ್ಷಿತ ಭಾವನೆ ಮೂಡಿತು ಎಂದು ತಮ್ಮ ಅನುಭವವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ವಿಳಾಸ ಕೇಳುವ ನೆಪದಲ್ಲಿ ವೃದ್ಧೆ ಕುತ್ತಿಗೆಯಿಂದ ಚಿನ್ನದ ಸರ ದೋಚಿದ ಕಳ್ಳರು

ಆದರೆ, ಆಟೋ ಚಾಲಕನ ಹೆಸರು, ವಿವರಗಳನ್ನು ಅವರು ಹಂಚಿಕೊಂಡಿಲ್ಲ. ಆತನ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

DAKSHINA KANNADA

ಕರಾವಳಿಯಲ್ಲಿ ‘ಸಿಲ್ವರ್ ವುಡ್’ ಮರಗಳ ಹೊಸ ಪ್ರಯೋಗ!

Published

on

ಪುತ್ತೂರು: ಕೊಡಗು ಮತ್ತು ಚಿಕ್ಕಮಗಳೂರಿನಂತಹ ತಂಪಾದ ಹವಾಗುಣದಲ್ಲಿ ಬೆಳೆಯುವ ಸಿಲ್ವರ್ ವುಡ್ ಮರಗಳನ್ನು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳೆಸಲು ನಡೆಸಿದ ಮೊದಲ ಪ್ರಯತ್ನ ಯಶಸ್ವಿಯಾಗಿದೆ.


ಫ್ಲೈವುಡ್ ಮತ್ತು ಇತರ ಪೀಠೋಪಕರಣಗಳ ತಯಾರಿಕೆಗಾಗಿ ಬಳಸುವ ಈ ಮರಗಳನ್ನು ದೊಡ್ಡ ಮಟ್ಟದಲ್ಲಿ ಬೆಳೆಸಲು ಪುತ್ತೂರಿನ ಕೃಷಿಕರೊಬ್ಬರು ಮುಂದಾಗಿದ್ದು, ದಾರಂದಕುಕ್ಕ ಕಾಯರ್ತಡಿ ನಿವಾಸಿ ಅಜಿತಪ್ರಸಾದ್ ರೈ ತಮ್ಮ ಬಳಿ ಇರುವ ಸುಮರು 20 ಎಕರೆ ಕೃಷಿಭೂಮಿಯಲ್ಲಿ ಈ ಸಿಲ್ವರ್ ವುಡ್ ಬೆಳೆಯಲು ನಿರ್ಧರಿಸಿದ್ದರು.

ಉಷ್ಣಾಂಶ ಹೆಚ್ಚಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಾತಾವರಣದಲ್ಲಿ ಈ ಮರಗಳು ಉಳಿಯುತ್ತದೋ ಎನ್ನುವ ಪ್ರಶ್ನೆಗಳ ಮಧ್ಯೆ ಸುಮಾರು 3 ಸಾವಿರದಷ್ಟು ಸಿಲ್ವರ್ ವುಡ್ ಸಸಿಗಳನ್ನು ನಾಟಿ ಮಾಡಿದ್ದಾರೆ. ಗಿಡಗಳನ್ನು ನಾಟಿ ಮಾಡಿ ಎರಡು ವರ್ಷಗಳಾಗುತ್ತಿದ್ದಂತೆ ಉತ್ತಮ ರೀತಿಯಲ್ಲಿ ಬೆಳೆದು ನಿಂತಿವೆ.

ಇದನ್ನೂ ಓದಿ: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕಾಗಮಿಸಿದ ಆದಿ ಯೋಗಿ ರಥದ ಶಿವ ಯಾತ್ರೆ

ಜಿಲ್ಲೆಯ ಹವಾಗುಣದಲ್ಲೂ ಸಿಲ್ವರ್ ವುಡ್ ಮರಗಳನ್ನು ಬೆಳೆಸಬಹುದು ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ. ಸಿಲ್ವರ್ ವುಡ್ ಮರದಿಂದ ಎರಡು ಆದಾಯವನ್ನು ಪಡೆದುಕೊಳ್ಳುತ್ತಿದ್ದಾರೆ. ಗಿಡ ಬೆಳೆಯುತ್ತಿದ್ದಂತೆ ಈ ಗಿಡಗಳಿಗೆ ಕಾಳುಮೆಣಸಿನ ಬಳ್ಳಿಯನ್ನು ಬಿಡುತ್ತಿದ್ದು, ಈ ಬಳ್ಳಿಗಳಿಗೆ ಈ ಗಿಡಗಳು ಉತ್ತಮ ರೀತಿಯ ಆಸರೆಯನ್ನು ನೀಡುವ ಹಿನ್ನಲೆಯಲ್ಲಿ ಕಾಳುಮೆಣಸಿನ‌ ಗಿಡಗಳಲ್ಲೂ ಉತ್ತಮ‌ ಬೆಳೆ ಪಡೆಯುತ್ತಿದ್ದಾರೆ.

ನೇರವಾಗಿ, ಎತ್ತರವಾಗಿ‌ ಬೆಳೆಯವ ಈ ಮರಕ್ಕೆ ಭಾರೀ ಬೇಡಿಕೆಯೂ ಇದೆ. ಹೆಚ್ಚಾಗಿ ಪ್ಲೈವುಡ್ ತಯಾರಿಕೆಗೆ, ಪೀಠೋಪಕರಣಗಳ ತಯಾರಿಕೆಯಲ್ಲೂ ಈ ಮರವನ್ಮು ಬಳಸುತ್ತಾರೆ. ಎಲ್ಲಾ ಸಿಲ್ವರ್ ವುಡ್ ಮರಗಳು ಹುಲುಸಾಗಿ ಬೆಳೆಯುತ್ತಿದ್ದು, ಮುಂದಿನ ಎರಡು-ಮೂರು ವರ್ಷದ ಒಳಗೆ ಕಟಾವು ಮಾಡಿದಲ್ಲಿ, ಮರದಿಂದ ಉತ್ತಮ ಆದಾಯ ಬರುವ ನಿರೀಕ್ಷೆಯಿದೆ.

Continue Reading

LATEST NEWS

ವಿಳಾಸ ಕೇಳುವ ನೆಪದಲ್ಲಿ ವೃದ್ಧೆ ಕುತ್ತಿಗೆಯಿಂದ ಚಿನ್ನದ ಸರ ದೋಚಿದ ಕಳ್ಳರು

Published

on

ಭಟ್ಕಳ: ವಿಳಾಸ ಕೇಳುವ ನೆಪದಲ್ಲಿ ಇಬ್ಬರು ಕಳ್ಳರು ವೃದ್ಧೆಯೊಬ್ಬರ ಚಿನ್ನದ ಸರ ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಳಕೆ ಗರಡಿ ಹಿತ್ತಲು ಪ್ರದೇಶದಲ್ಲಿ ಶನಿವಾರ(ಡಿ.13)ಮಧ್ಯಾಹ್ನ ನಡೆದಿದೆ.


ಬೆಳಕೆ ಗರಡಿ ಹಿತ್ತಲು ನಿವಾಸಿ, ಹೊನ್ನಮ್ಮ ಮಾದೇವ ನಾಯ್ಕ(70) ಚಿನ್ನದ ಸರ ಕಳೆದು ಕೊಂಡ ಮಹಿಳೆ.

ತಾಲೂಕಿನ ಬೆಳಕೆ ಗರಡಿ ಹಿತ್ತಲು ಪ್ರದೇಶದಲ್ಲಿ ಮನೆ ಸಮೀಪವೇ ನಿಂತಿದ್ದ ವೃದ್ಧೆ ಬಳಿ ಬೈಕಿನಲ್ಲಿ ಇಬ್ಬರು ಅಪರಿಚಿತರು ಬಂದಿದ್ದರು. ಆ ವೇಳೆ ವೃದ್ಧೆ ಬಳಿ ವಿಳಾಸ ಕೇಳುವ ನೆಪದಲ್ಲಿ ಅವರ ಗಮನವನ್ನು ಬೇರೆ ಕಡೆ ಸೆಳೆದು ಕುತ್ತಿಗೆಯಲ್ಲಿದ್ದ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.


ಹೊನ್ನಮ್ಮ ಅವರು ಕೂಗಿಕೊಂಡ ಕಾರಣ ಅಕ್ಕಪಕ್ಕದವರು ಕಳ್ಳರನ್ನು ಹಿಂಬಾಲಿಸಿದರು. ಕಳ್ಳರು ಶಿರೂರು ಟೋಲ್‌ಗೇಟ್‌ ಮಾರ್ಗವಾಗಿ ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಡಿವೈಎಸ್‌ಪಿ ಮಹೇಶ್‌, ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ತಾವರೆ ಬೆಳೆದ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾ*ವು

ಘಟನೆಯ ಕುರಿತು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರನ್ನು ಪತ್ತೆ ಹಚ್ಚಲು ತನಿಖೆ ಕೈಗೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page