Connect with us

LATEST NEWS

ಕೊಚ್ಚಿ: ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ಇನ್ನಿಲ್ಲ..

Published

on

ಕೊಚ್ಚಿ: ರಂಗಭೂಮಿ, ಸಿನಿಮಾ ಮತ್ತು ಕಿರುತೆರೆಯಲ್ಲಿ ರಂಜಿಸಿದ ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ತಮ್ಮ 74ನೇ ಜನ್ಮದಿನಕ್ಕೆ ಮೂರು ದಿನಗಳ ಮುನ್ನ ಕೊಚ್ಚಿಯಲ್ಲಿ ನಿಧನರಾಗಿದ್ದಾರೆ.


ಕಳೆದ ಕೆಲವು ತಿಂಗಳುಗಳಿಂದ ಯಕೃತ್ತು ವೈಫಲ್ಯ ಮತ್ತು ಇತರ ಹಲವಾರು ಆರೋಗ್ಯ ಸಮಸ್ಯೆಗಳೊಂದಿಗೆ ಲಲಿತ ಹೋರಾಡುತ್ತಿದ್ದರು.

ಐದು ದಶಕಗಳ ವೃತ್ತಿಜೀವನದಲ್ಲಿ ಮಲಯಾಳಂ ಮತ್ತು ತಮಿಳಿನಲ್ಲಿ 550ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಜೊತೆಗೆ ಐದು ವರ್ಷಗಳ ಕಾಲ ಕೇರಳ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿಯೂ ಸಹ ಕಾರ್ಯನಿರ್ವಹಿಸಿದ್ದಾರೆ.

ಮಲಯಾಳಂ ಚಲನಚಿತ್ರರಂಗದ ನಿರ್ಮಾಪಕ ದಿವಂಗತ ಭರತನ್ ಅವರನ್ನು ವಿವಾಹವಾದ ಲಲಿತಾ ಅವರಿಗೆ ಸಿದ್ಧಾರ್ಥ್ ಎಂಬ ಮಗ ಮತ್ತು ಶ್ರೀಕುಟ್ಟಿ ಎಂಬ ಮಗಳಿದ್ದಾಳೆ.

ಲಲಿತಾ ಅವರ ಸಾಧನೆಯನ್ನು ಗುರುತಿಸಿ ನಾಲ್ಕು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳೊಂದಿಗೆ ಅತ್ಯುತ್ತಮ ಪೋಷಕ ನಟಿ ಎಂದು ಎರಡು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

1999ರಲ್ಲಿ ‘ಅಮರಂ’ ಮತ್ತು 2000 ರಲ್ಲಿ ‘ಶಾಂತಂ’ ಪಾತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.

ಲಲಿತಾ ನಿಧನಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ. ”ಲಲಿತಾ ಅವರು ತಮ್ಮ ನಟನಾ ಕೌಶಲ್ಯದಿಂದ ವಿವಿಧ ತಲೆಮಾರುಗಳ ಜನರ ಹೃದಯವನ್ನು ಗೆದ್ದಿದ್ದಾರೆ.

ಕೇರಳ ಲಲಿತಾ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷೆಯಾಗಿ ಅವರು ನೀಡಿದ ಕೊಡುಗೆ ಅನನ್ಯ. ಯಾವಾಗಲೂ ಪ್ರಗತಿಪರ ಚಳವಳಿಯೊಂದಿಗೆ ಸಂಬಂಧ ಹೊಂದಿದ್ದರು ಎಂದು ಕೊಂಡಾಡಿದ್ದಾರೆ.

bangalore

ಜನಿವಾರಕ್ಕೆ ಕತ್ತರಿ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ; ಸಿ.ಎಂ.ಸಿದ್ಧರಾಮಯ್ಯ

Published

on

ಬೆಂಗಳೂರು : ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ಜನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಡೆದ ಪ್ರೆಸ್‌ಮೀಟ್‌ನಲ್ಲಿ ಸಿ.ಎಂ.ಸಿದ್ಧರಾಮಯ್ಯ ಮಾತನಾಡಿದ್ದಾರೆ. “ಸಿಇಟಿ ಪರೀಕ್ಷೆ ವೇಳೆ ಬೀದರ್, ಶಿವಮೊಗ್ಗ, ಸಾಗರ, ಧಾರವಾಡಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಮುಖ್ಯಮಂತ್ರಿ ತಿಳಿಸಿದರು.

ಜನಿವಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು :

“ವಿದ್ಯಾರ್ಥಿಗಳ ಜನಿವಾರ ಕತ್ತರಿಸಿರುವ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಳ್ಳಬೇಕು. ಜನಿವಾರವನ್ನು ಕೇವಲ ಬ್ರಾಹ್ಮಣ ಸಮಾಜದವರಷ್ಟೇ ಹಾಕುವುದಿಲ್ಲ. ಬೇರೆ ಬೇರೆ ಸಮುದಾಯಗಳು ಪವಿತ್ರ ದಾರವನ್ನು ಧರಿಸುತ್ತಿದ್ದಾರೆ. ಆ ಎಲ್ಲ ಸಮುದಾಯಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಜನಿವಾರ ಪ್ರಕರಣಕ್ಕೆ ಶಾಶ್ವತ ಪರಿಹಾರ :

ಸಿಇಟಿಯಲ್ಲಿ ನಡೆದ ಜನಿವಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ಸರಕಾರ, ಈ ಸಂಬಂಧ ಪ್ರತ್ಯೇಕ ತಜ್ಞರ ಸಮಿತಿ ರಚಿಸಲು ನಿರ್ಧರಿಸಿದೆ. ಇಂಥ ಘಟನೆ ಪುನರಾವರ್ತನೆ ಆಗದಿರಲು ಶಾಶ್ವತ ಪರಿಹಾರ ಕಂಡು ಕೊಳ್ಳಲು ಈಗ ಸರಕಾರ ಪ್ರತ್ಯೇಕ ತಜ್ಞರ ಸಮಿತಿ ರಚಿಸಲು ಉದ್ದೇಶಿಸಿದೆ.

Continue Reading

DAKSHINA KANNADA

ಉಡುಪಿ : ಪತ್ರಕರ್ತ ರಾಮ್ ಅಜೆಕಾರ್ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ

Published

on

ಉಡುಪಿ : ಕನ್ನಡ ರಿಪೋರ್ಟರ್ ರಾಮ್ ಅಜೆಕಾರ್‌ ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಆಯಕೆಯಾಗಿದ್ದಾರೆ.

ಹಿರಿಯ ಉದ್ಯಮಿ ಅಶ್ರಫ್ ಷಾ ಮಂತೂರು ಅವರ ದತ್ತಿನಿಧಿಯಿಂದ ನೀಡಲಾಗುವ ಪ್ರಶಸ್ತಿಗೆ ಪತ್ರಕರ್ತ ರಾಮ್ ಅಜೆಕಾರ್ ವರ ‘ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕೀತೇ?’ ಶೀರ್ಷಿಕೆಯಡಿಯ ಸುದ್ಧಿ ಆಯ್ಕೆಯಾಗಿದೆ. ಕನ್ನಡಪ್ರಭ ಪತ್ರಿಕೆಯಲ್ಲಿ ಈ ಸುದ್ಧಿ ಬಿಡುಗಡೆಯಾಗಿತ್ತು.

ದತ್ತಿನಿಧಿಯಿಂದ ನೀಡಲಾಗುವ ಈ ಪ್ರಶಸ್ತಿಯು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮೇ ೩ರಂದು ಸೀತಾಂಗೋಳಿಯ ಎಲೈನ್ಸ್ ಸಭಾಂಗಣದಲ್ಲಿ ನಡೆಯಲಿದೆ.

Continue Reading

LATEST NEWS

ದನ ಅಡ್ಡ ಬಂದು ಸ್ಕೂಟರ್ ಪಲ್ಟಿ; ಸವಾರ ಸಾವು

Published

on

ಬ್ರಹ್ಮಾವರ : ದನ ಅಡ್ಡ ಬಂದ ಪರಿಣಾಮ ರಸ್ತೆಯಲ್ಲಿ ಚಲಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಸವಾರ ಮೃತಪಟ್ಟ ಘಟನೆ ಉಡುಪಿಯ ಉಪ್ಪೂರು ಗ್ರಾಮದ ಕೊಳಲಗಿರಿ-ಆರೂರು ರಸ್ತೆಯ ಶ್ರೀ ವೀರಾಂಜನೆಯ ಭಜನಾ ಮಂದಿರದ ಬಳಿ ಏ.20 ರಂದು ಸಂಜೆ ವೇಳೆ ನಡೆದಿದೆ.

ಮಣಿಪಾಲ ಹೊಟೇಲ್ ಒಂದರ ಮೆನೇಜರ್ ಪ್ರವೀಣ್ ಸಾಲ್ಯಾನ್(44) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮೃತ ಪ್ರವೀಣ್ ಸ್ಕೂಟರ್‌ನಲ್ಲಿ ಮಣಿಪಾಲದಿಂದ ನೀಲಾವರದಲ್ಲಿರುವ ಸಂಬಂಧಿಕರ ಮನೆಯ ಹೋಗು ತ್ತಿದ್ದಾಗ ದನವೊಂದು ಒಮ್ಮೇಲೆ ರಸ್ತೆಗೆ ಅಡ್ಡ ಬಂತ್ತೆನ್ನಲಾಗಿದೆ. ಇದರ ಪರಿಣಾಮ ಪ್ರವೀಣ್ ಒಮ್ಮೇಲೆ ಬ್ರೇಕ್ ಹಾಕಿದ್ದರಿಂದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರವೀಣ್‌ನನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಆಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಎ.21ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಈ ಘಟನೆ ಕುರಿತು  ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page