Connect with us

LATEST NEWS

ಮದ್ವೆ ಗಿಫ್ಟ್ ನಲ್ಲಿ ಬಾಂಬ್ ಇಟ್ಟ ಮದುಗಳ ಎಕ್ಸ್ ಬಾಯ್ ಫ್ರೆಂಡ್..!!

Published

on

ಛತ್ತೀಸ್‌ಗಢ ಏಪ್ರಿಲ್ 5: ತನ್ನ ಎಕ್ಸ್ ಗರ್ಲ್ ಪ್ರೆಂಡ್ ಮದುವೆಯಾಗುವುದನ್ನು ಸಹಿಸದ ಬಾಯ್ ಪ್ರೆಂಡ್ ಒಬ್ಬ ಮದುವೆಗೆ ಬಾಂಬ್ ಇರುವ ಹೋಮ್ ಥಿಯೇಟರ್ ನ್ನು ಗಿಫ್ಟ್ ಆಗಿ ನೀಡಿ ಗರ್ಲ್ ಪ್ರೆಂಡ್ ನ ಗಂಡ ಹಾಗೂ ಆತನ ಸಹೋದರನ ಸಾವಿಗೆ ಕಾರಣನಾಗಿದ್ದಾನೆ. ಈ ಘಟನೆ ಛತ್ತೀಸ್‌ಗಢದ ಕಬೀರ್‌ಧಾಮ್‌ ಜಿಲ್ಲೆಯಲ್ಲಿ ನಡೆದಿದೆ.


ಆರೋಪಿಯನ್ನು ಸರಜೂ ಎಂದು ಗುರುತಿಸಿದ ಪೊಲೀಸರು ನಂತರ ಆತನನ್ನು ಬಂಧಿಸಿದ್ದಾರೆ. ತನ್ನ ಮಾಜಿ ಗೆಳತಿ ಬೇರೆಯವನ ಜತೆ ಮದುವೆಯಾಗುತ್ತಿರುವುದಕ್ಕೆ ಕೋಪಗೊಂಡು ಈ ರೀತಿ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆ ಸ್ಫೋಟಕಗಳನ್ನು ಹಾಕಿದ ಹೋಮ್ ಥಿಯೇಟರ್ ಸಿಸ್ಟಂ ಅನ್ನು ಉಡುಗೊರೆಯಾಗಿ ನೀಡಿದ್ದಾಗಿ ಹೇಳಿಕೊಂಡಿದ್ದಾನೆ.
ಆರೋಪಿ ಹೋಮ್ ಥಿಯೇಟರ್ ನಲ್ಲಿ ಬಾಂಬ್ ಇಟ್ಟು ಅದನ್ನು ಮದುವೆ ಉಡುಗೊರೆಯಾಗಿ ನೀಡಿದ್ದ, ಇದನ್ನು ಮದುಮಗ ಮತ್ತು ಆತನ ಸಹೋದರರು ಪ್ಲಗ್‌ಗೆ ಜೋಡಿಸಿದ ನಂತರ ಹೋಮ್ ಥಿಯೇಟರ್ ಸಿಸ್ಟಮ್ ಅನ್ನು ಸ್ವಿಚ್ ಆನ್ ಮಾಡಿದಾಗ, ಭಾರಿ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ಪರಿಣಾಮ ಹೋಮ್ ಥಿಯೇಟರ್ ವ್ಯವಸ್ಥೆ ಇರಿಸಲಾಗಿದ್ದ ಕೊಠಡಿಯ ಗೋಡೆಗಳು ಮತ್ತು ಛಾವಣಿ ಕುಸಿದು ಬಿದ್ದಿದೆ. ಇಬ್ಬರು ಸಾವನಪ್ಪಿದರೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೋಮ್ ಥಿಯೇಟರ್ ಸಿಸ್ಟಂನಲ್ಲಿ ಯಾರೋ ಸ್ಫೋಟಕಗಳನ್ನು ಇಟ್ಟಿದ್ದರಿಂದ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ತನಿಖೆಯಲ್ಲಿ ಕಂಡುಬಂದಿತ್ತು. ನಂತರ, ಪೊಲೀಸರು ಮದುವೆಯ ಸಮಯದಲ್ಲಿ ಪಡೆದ ಉಡುಗೊರೆಗಳ ಪಟ್ಟಿಯನ್ನು ತನಿಖೆ ಮಾಡಲು ಪ್ರಾರಂಭಿಸಿದಾಗ, ಈ ಮ್ಯೂಸಿಕ್ ಸಿಸ್ಟಮ್ ಅನ್ನು ವಧುವಿನ ಮಾಜಿ ಪ್ರೇಮಿ ಉಡುಗೊರೆಯಾಗಿ ನೀಡಿದ್ದು ಎಂದು ಅವರು ಕಂಡುಕೊಂಡರು.
ಹೇಮೇಂದ್ರ ಮೆರಾವಿ ಏಪ್ರಿಲ್ 1 ರಂದು ವಿವಾಹವಾಗಿದ್ದರು. ಇನ್ನು, ಈ ಸ್ಫೋಟದಲ್ಲಿ ಅವರ ಸಹೋದರ ರಾಜ್‌ಕುಮಾರ್, 30, ಮತ್ತು ಒಂದೂವರೆ ವರ್ಷದ ಬಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಅವರನ್ನು ಕವ್ರಾದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಜ್‌ಕುಮಾರ್ ಮೃತಪಟ್ಟಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಛತ್ತೀಸ್‌ಗಢ ಪೊಲೀಸರು ಮಾಹಿತಿ ನೀಡಿದ್ದಾರೆ.

LATEST NEWS

ಇವನೆಂಥಾ ಸೈಕೋ ಕಾಮಿ..! ಪಬ್ಲಿಕ್ ಟಾಯ್ಲೆಟ್ ನಲ್ಲಿ ನಾಯಿ ಮರಿಯ ಮೇಲೆ ಅತ್ಯಾಚಾರ..!

Published

on

ಮುಂಬೈ: ಇವನೆಂಥಾ ಕಾಮ ಪಿಶಾಚಿ. ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಈ ಕಾಮುಕನೊಬ್ಬ ಸಾರ್ವಜನಿಕ ಶೌಚಾಲಯದಲ್ಲಿ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಅರೆಬೆತ್ತಲೆಯಾಗಿ ಮತ್ತು ಶಾರ್ಟ್ಸ್ ಧರಿಸಿ ಕಾಣಿಸಿಕೊಂಡ ಆರೋಪಿಯನ್ನು  ವಶಕ್ಕೆ ತೆಗೆದುಕೊಳ್ಳಲಾಗಿದೆ.

ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ವೀಡಿಯೋದಲ್ಲಿ ಆ ವ್ಯಕ್ತಿ ಆರಂಭದಲ್ಲಿ ಬಾಗಿಲು ತೆರೆಯಲು ನಿರಾಕರಿಸುವುದನ್ನು ಕಾಣಬಹುದು. ನಂತರ ಪೊಲೀಸರು ಬಲವಂತವಾಗಿ ಒಳಗೆ ಪ್ರವೇಶಿಸಿ ಆತನನ್ನು ವಶಕ್ಕೆ ಪಡೆದರು.

ನಾಯಿಮರಿಯನ್ನು ತಕ್ಷಣವೇ ರಕ್ಷಿಸಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಯಿತು. ನಾಯಿಮರಿ ಈಗ ವೈದ್ಯಕೀಯ ಆರೈಕೆಯಲ್ಲಿದೆ ಮತ್ತು ಗಂಭೀರ ಸ್ಥಿತಿಯಲ್ಲಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

Continue Reading

LATEST NEWS

ವೃದ್ಧ ದಂಪತಿ ದುರಂತ ಅಂತ್ಯಕ್ಕೆ ಬಿಗ್ ಟ್ವಿಸ್ಟ್, ಮುಹೂರ್ತ ಇಟ್ಟಿದ್ದ ತಮ್ಮನ ವೈದ್ಯ ಮಗ ಅರೆಸ್ಟ್..!

Published

on

ಶಿವಮೊಗ್ಗ: ಇಲ್ಲಿನ ಭದ್ರಾವತಿ ನಗರದ ಭೂತನಗುಡಿ ಬಡಾವಣೆಯಲ್ಲಿ ವಯೋವೃದ್ದ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಕಿರಾತಕ ವೈದ್ಯನೊಬ್ಬ ತನ್ನ ದೊಡ್ಡಪ್ಪ, ದೊಡ್ಡಮ್ಮನನ್ನೇ  ಕೊಲೆಗೈದ ವಿಚಾರ ಬೆಳಕಿಗೆ ಬಂದಿದೆ.

ವಿಐಎಸ್‌ಎಲ್ ನಿವೃತ್ತ ನೌಕರ ಚಂದ್ರಪ್ಪ (78) ಮತ್ತು ಅವರ ಪತ್ನಿ ಜಯಮ್ಮ  (75) ಹತ್ಯೆಗೀಡಾದ ಮೃತ ದುರ್ದೈವಿಗಳು. ಮೃತ ಚಂದ್ರಪ್ಪ ಅವರ ಸಹೋದರ ಫಾಲಾಕ್ಷಪ್ಪ ಅವರ ಪುತ್ರ ಡಾ.ಮಲ್ಲೇಶ್ ಬಂಧಿತ ಆರೋಪಿ.

ವಿಶೇಷವೆಂದರೆ ವೃದ್ಧ ದಂಪತಿಗೆ ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಈತನ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದಂಪತಿಯ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ವೈದ್ಯ, ಅವರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಯಾವುದೇ ಗಾಯ ಮಾಡದೆ ಅತ್ಯಂತ ಚಾಣಾಕ್ಷತನದಿಂದ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ವೃದ್ಧ ದಂಪತಿ ಕೊಲೆಯಾದ ಬಳಿಕ ನಾಪತ್ತೆಯಾಗಿದ್ದ ಚಿನ್ನಾಭರಣಗಳ ಜಾಡು ಹಿಡಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ತನಿಖೆಯ ಸಂದರ್ಭದಲ್ಲಿ ಡಾ. ಮಲ್ಲೇಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಆರೋಪಿ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಹಣ ಮತ್ತು ಚಿನ್ನದ ಆಸೆಗಾಗಿ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಲ್ಲಲು ಈತ ಮುಂದಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

Continue Reading

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವೀಡಿಯೊ ನೋಡಿ:

 

Continue Reading
Advertisement

Trending

Copyright © 2025 Namma Kudla News

You cannot copy content of this page