Connect with us

LATEST NEWS

ಕೊಲೆ ಆರೋಪಿಯ ಮದುವೆಯಲ್ಲಿ ಭಾಗಿಯಾದ ಪೊಲೀಸರು ; ಕೊಪ್ಪಳದ ಮೂವರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ..!

Published

on

ಕೊಪ್ಪಳ: ಕೊಲೆ ಆರೋಪಿಯ ಮದುವೆಯಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಕೊಪ್ಪಳದ ಮೂವರು ಪೊಲೀಸ್ ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ.

ಕೊಪ್ಪಳ ಜಿಲ್ಲೆ ಗಂಗಾವತಿಯ ಡಿವೈಎಸ್​ಪಿ ರುದ್ರೇಶ್ ಉಜ್ಜನಕೊಪ್ಪ,ಗಂಗಾವತಿಯ ಸಿಪಿಐ ಉದಯರವಿ, ಕನಕಗಿರಿಯ ಪಿಎಸ್​ಐ ತಾರಾಬಾಯಿಗೆ ಕಡ್ಡಾಯ ರಜೆ ಶಿಕ್ಷೆ ನೀಡಿ ಎಸ್‌ಪಿ ಟಿ.ಶ್ರೀಧರ್ ಆದೇಶ ಹೊರಡಿಸಿದ್ದಾರೆ.

2015ರ ಜನವರಿ 11 ರಂದು ಯಲ್ಲಾಲಿಂಗನ ಹತ್ಯೆ ಪ್ರಕರಣದಲ್ಲಿ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಜಾಮೀನಿನ ಮೇಲೆ ಸದ್ಯ ಆರೋಪಿಗಳು ಹೊರಬಂದಿದ್ದು 2 ದಿನದ ಹಿಂದೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಆರೋಪಿಗಳಲ್ಲಿ ಒಬ್ಬರಾದ ಮಹಾಂತೇಶ್ ನಾಯಕ್ ವಿವಾಹ ಜರುಗಿತ್ತು,

ಈ ಮದುವೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭಾಗಿಯಾಗಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಹಿರಿಯ ಪೊಲೀಸ್ ಅಧಿಕಾರಿಗಳು ಮೂವರಿಗೆ ಕಡ್ಡಾಯ ರಜೆ ಶಿಕ್ಷೆ ನೀಡಿದ್ದಾರೆ.

LATEST NEWS

ಇನ್ನು ಮುಂದೆ 3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್‌!

Published

on

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ಹೆದ್ದಾರಿಯಲ್ಲಿ ತೊಂದರೆಯಿಲ್ಲದೆ ಪಯಾಣಕ್ಕೆ ಅನುಕೂಲವಾಗುವಂತೆ ಫಾಸ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ಘೋಷಿಸಿದೆ.

3 ಸಾವಿರ ರೂಪಾಯಿಗೆ ವಾರ್ಷಿಕ ಟೋಲ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಖಾತೆಯ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ.

ಈ ಪಾಸ್ ಅನ್ನು ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ. ನವೀಕರಣಕ್ಕಾಗಿ ಮೀಸಲಾದ ಲಿಂಕ್ ಅನ್ನು ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ.

ಇದನ್ನೂ ಓದಿ: 6 ವರ್ಷದ ಮಗುವಿನ ಸಾವಿಗೆ ಕಾರಣವಾಯಿತೇ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್!?

ಈ ಪಾಸ್‌ನಿಂದ 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ. ಟೋಲ್‌ಗಳಲ್ಲಿ ಕಾಯುವ ಸಮಯ ಮತ್ತು ದಟ್ಟಣೆ ಕಡಿಮೆ ಯಾಗಲಿದೆ.

Continue Reading

LATEST NEWS

ಉಡುಪಿ: ಶಾಲಾ ಬಸ್ ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

Published

on

ಉಡುಪಿ: ಖಾಸಗಿ ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ನಡೆದಿದೆ.


ಬ್ರಹ್ಮಾವರ ಜಿ.ಎಂ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿಂದ ಬಂದು ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವಾಗ ಹಿಂದಿನಿಂದ ಬಂದ ಲಾರಿ ಡಿ*ಕ್ಕಿಯಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

ಅಪಘಾತದ ಸಂದರ್ಭದಲ್ಲಿ ವ್ಯಾನ್‌ನಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

6 ವರ್ಷದ ಮಗುವಿನ ಸಾವಿಗೆ ಕಾರಣವಾಯಿತೇ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್!?

Published

on

ಬೆಂಗಳೂರು: ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್ ತಿಂದು 6 ವರ್ಷದ ಮಗು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಈ ಘಟನೆ ಬೆಂಗಳೂರು ನಗರದ ಕೆಪಿ ಅಗ್ರಹಾರದಲ್ಲಿ ನಡೆದಿದೆ.

ವಿನಯ್ (6) ಸಾವನ್ನಪ್ಪಿದ ಮಗು ಎಂದು ತಿಳಿದುಬಂದಿದೆ. ಕೇಕ್ ತಿಂದು ಮಂಗಳವಾರ ತೀವ್ರವಾಗಿ ಅಸ್ವಸ್ಥಗೊಂಡು ಇಂದು ಬೆಳಗ್ಗೆ ಸಾವನ್ನಪ್ಪಿದೆ.

ಕುಟುಂಬದಲ್ಲಿ ನಾಲ್ವರು ಇದ್ದು, ಒಂದು ಹೆಣ್ಣು ಮಗು ಸಂಬಂಧಿಕರ ಮನೆಗೆ ಹೋಗಿತ್ತು. ಮನೆಯಲ್ಲಿ ಮೂವರೇ ಇದ್ದ ಕಾರಣ ಮಂಗಳವಾರ ಸಂಜೆ ಆನ್‌ಲೈನ್‌ನಲ್ಲಿ ಕೇಕ್ ತರಿಸಿದ್ದರು. ಕೇಕ್ ತಿಂದ ಬಳಿಕ ಮಗು ತೀವ್ರವಾಗಿ ಅಸ್ವಸ್ಥಗೊಂಡು, ಬೆಳಿಗ್ಗೆ ಅಷ್ಟರಲ್ಲಿ ಸಾವನ್ನಪ್ಪಿತ್ತು. ಅದಾದ ಬಳಿಕ ತಂದೆ, ತಾಯಿ ಕೂಡ ಅಸ್ವಸ್ಥಗೊಂಡಿದ್ದರು. ಸದ್ಯ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಬಳಿಕ ಎಫ್‌ಎಸ್‌ಎಲ್‌ಗೆ ರವಾನಿಸಲಿದ್ದಾರೆ. ಕಿಮ್ಸ್ ವೈದ್ಯರು ದೇಹದ ಇತರೆ ಭಾಗಗಳನ್ನು ಪರೀಕ್ಷೆಗೆ ಒಳಪಡಿಸಿ ಸಾವಿಗೆ ನಿಖರವಾದ ಕಾರಣವನ್ನು ಪತ್ತೆ ಹಚ್ಚಲಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page