Connect with us

LATEST NEWS

ಮಂಡ್ಯ : ಚಾರ್ಜ್‌ ಹಾಕಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ ಸ್ಫೋಟಗೊಂಡು 5 ಲಕ್ಷ ರೂ. ನಷ್ಟ..!

Published

on

ಮನೆಯಲ್ಲಿ ಚಾರ್ಜಿಂಗ್‌ ಮಾಡಲು ಹಾಕಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ ಸ್ಪೋಟಗೊಂಡು ಬೈಕ್‌ ಸೇರಿದಂತೆ, ಮನೆಯಲ್ಲಿನ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳೆಗೆರೆಹಳ್ಳಿಯಲ್ಲಿ ನಡೆದಿದೆ. 

ಮಂಡ್ಯ : ಮನೆಯಲ್ಲಿ ಚಾರ್ಜಿಂಗ್‌ ಮಾಡಲು ಹಾಕಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ ಸ್ಪೋಟಗೊಂಡು ಬೈಕ್‌ ಸೇರಿದಂತೆ, ಮನೆಯಲ್ಲಿನ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳೆಗೆರೆಹಳ್ಳಿಯಲ್ಲಿ ನಡೆದಿದೆ. 

ಮದ್ದೂರು ತಾಲೂಕಿನ ಮುತ್ತುರಾಜ್ ಎಂಬುವವರ ಮನೆಯಲ್ಲಿ ಪ್ರತಿನಿತ್ಯ ಸ್ಕೂಟರ್‌ ಅನ್ನು ಚಾರ್ಜಿಗೆ ಹಾಕುವಂತೆ ನಿನ್ನೆಯೂ ಕೂಡ ಎಲೆಕ್ಟ್ರಿಕ್‌ ಬ್ಯಾಟರಿಚಾಲಿತ ಸ್ಕೂಟರ್‌ ಅನ್ನು ಮನೆಯಲ್ಲಿ ಚಾರ್ಜಿಂಗ್‌ ಮಾಡಲು ಹಾಕಲಾಗಿದೆ.

ಆದರೆ, ರಾತ್ರಿವೇಳೆ ಚಾರ್ಜ್ ಹಾಕಿದ್ದ ಸ್ಕೂಟರ್‌ ಕೆಲವೇ ಗಂಟೆಗಳಲ್ಲಿ ಸ್ಫೋಟಗೊಂಡಿದೆ. ಈ ಸ್ಫೋಟದಿಂದ‌ ಬೈಕ್‌ ಸಂಪೂರ್ಣ ಹಾನಿಯಾಗಿದ್ದು, ಮನೆಯಲ್ಲಿದ್ದ ಇತರೆ ಗೃಹೋಪಯೋಗಿ ವಸ್ತುಗಳೂ ಕೂಡ ಸುಟ್ಟು ಕರಕಲಾಗಿವೆ.

ಇದರಿಂದ ಮನೆಯ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.ಇನ್ನು ಎಲೆಕ್ಟ್ರಿಕ್‌ ಬ್ಯಾಟರಿ ಹೊಂದಿದ ಬೈಕ್‌ ಅನ್ನು ಮನೆಯ ಒಳಗಡೆ ನಿಲ್ಲಿಸಲಾಗುತ್ತಿತ್ತು.

ಮನೆಯ ಒಳಗೆ ಒಂದು ಮೂಲೆಯಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಬಳಿ ಬೈಕ್‌ ನಿಲ್ಲಿಸಿ ಮುತ್ತುರಾಜ್‌ ಚಾರ್ಜ್‌ಗೆ ಹಾಕಿದ್ದನು.

ಇದಕ್ಕಿದ್ದ ಹಾಗೆ ಸ್ಕೂಟರ್ ಸ್ಫೋಟಗೊಂಡಿದೆ. ಇನ್ನು ಈ ಬೈಕ್‌ ಸ್ಪೋಟಗೊಂಡ ಸಂದರ್ಭದಲ್ಲಿ ಮನೆಯೊಳಗೆ ಕುಟುಂಬದ ಐವರು ಸದಸ್ಯರು ಇದ್ದರು.

ಆದರೆ, ಸ್ಪೋಟದ ಪರಿಣಾಮ ಒಮದು ಕೋಣೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳನ್ನು ಮಾತ್ರ ಹಾನಿಗೊಳಿಸಲು ಸೀಮಿತವಾಗಿದೆ.

ಈ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಎಲ್ಲ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಎಲೆಕ್ಟ್ರಿಕ್‌ ಸಾಮಾಗ್ರಿಗಳೆಲ್ಲವೂ ನಾಶ: ಇನ್ನು ಮನೆಯಲ್ಲಿ ಎಲೆಕ್ಟ್ರಿಕ್‌ ಚಾರ್ಜಿಂಗ್‌ ಬ್ಯಾಟರಿಯ ಸ್ಕೂಟರ್‌ ಸ್ಪೋಟ ಆಗುತ್ತಿದ್ದಂತೆ, ಮನೆಯಲ್ಲಿನ ಎಲ್ಲ ವಿದ್ಯುತ್‌ ಸಂಪರ್ಕಿಸುವ ವೈರಿಂಗ್‌ ಸುಟ್ಟು ಹಾನಿಗೀಡಾಗಿದೆ.

ಇದರಿಂದ ಎಲೆಕ್ಟ್ರಿಕ್‌ ಸಾಧನಗಳಾದ ಟಿವಿ, ಫ್ರಿಡ್ಜ್, ಫ್ಯಾನ್‌ಗಳು ಹಾಘೂ ಬಲ್ಪ್‌ಗಳು ಸಂಪೂರ್ಣ ಹಾನಿಗೀಡಾಗಿವೆ.

ಇನ್ನು ಸ್ಕೂಟರ್‌ ಪಕ್ಕದಲ್ಲಿಯೇ ಇದ್ದ ಡೈನಿಂಗ್‌ ಟೇಬಲ್‌ ಸೇರಿ ಅನೇಕ ಕಟ್ಟಿಗೆಯಿಂದ ಮಾಡಲಾದ ವಸ್ತುಗಳು ಕೂಡ ಸುಟ್ಟು ಕರಕಲಾಗಿವೆ.

ಇನ್ನು ಮನೆಯಲ್ಲಿದ್ದ ಇತರೆ ವಸ್ತುಗಳು ಬೇರೆಡೆ ಇದ್ದುದರಿಂದ ದೊಡ್ಡ ಪ್ರಮಾಣದಲ್ಲಿ ಅನಾಹುತ ಆಗುವುದು ತಪ್ಪಿದಂತಾಗಿದೆ.

ಚಾರ್ಜಿಗೆ ಹಾಕಿದ್ದ ಸ್ಕೂಟರ್‌ ಸ್ಪೋಟಕ್ಕೆ ಇಡೀ ಬೀದಿಯಲ್ಲಿ ದೊಡ್ಡ ಪ್ರಮಾಣದ ಶಬ್ದ ಉಂಟಾಗಿದೆ.

ಎಲ್ಲರೂ ಬಂದು ನೋಡುವಷ್ಟರಲ್ಲಿ ಮುತ್ತುರಾಜ್‌ ಅವರ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ.

ಕೂಡಲೇ ಮನೆಯವರು ಹಾಗೂ ಇತರೆ ನೆರೆಹೊರೆಯವರು ಸೇರಿಕೊಂಡು ನೀರಿನಿಂದ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ನಂತರ, ಮನೆಗೆ ಸಂಪರ್ಕ ಮಾಡಲಾಗಿದ್ದ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.

ಇನ್ನು ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಗ್ಯಾಸ್‌ ಹಾಗೂ ಇತರೆ ಬೆಂಕಿಯ ಜ್ವಾಲೆ ಹೆಚ್ಚಾಗುವಂತಹ ವಸ್ತುಗಳನ್ನು ಮನೆಯಿಂದ ಹೊರಗೆ ತರಲಾಗಿತ್ತು.

ಚಾರ್ಜಿಗೆ ಹಾಕಿದ್ದ ಸ್ಕೂಟರ್‌ ಸ್ಪೋಟಗೊಂಡಿದ್ದು, ಮಂಡ್ಯ ಸೇರಿ ಸುತ್ತಲಿನ ಹಳ್ಳಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Advertisement
2 Comments

Leave a Reply

Your email address will not be published. Required fields are marked *

LATEST NEWS

ಕೇರಳ: ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಆತ್ಮಹತ್ಯೆ ಪ್ರಕರಣ; ವ್ಲೋಗರ್ ಶಿಂಜಿತಾ ಮುಸ್ತಫಾ ಬಂಧನ

Published

on

ಕೋಝಿಕೋಡ್‌: ಗೋವಿಂದಪುರದ ದೀಪಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಬುಧವಾರ ವ್ಲೋಗರ್ ಶಿಂಜಿತಾ ಮುಸ್ತಫಾ ಅವರನ್ನು ಬಂಧಿಸಿದ್ದಾರೆ. ಶಿಂಜಿತಾ ಬಸ್ಸಿನೊಳಗೆ ಅವಮಾನಿಸಿದ ನಂತರ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿ ಮಹಿಳೆಯನ್ನು ವಡಕಾರದಲ್ಲಿ ಬಂಧಿಸಲಾಗಿದೆ. ಕೊಯಿಲಾಂಡಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಯ ನಂತರ, ಶಿಂಜಿತಾ ಮುಸ್ತಫಾಳನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಆಕೆಯ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ಹಲವಾರು ಅಪರಾಧಗಳ ಆರೋಪವನ್ನ ಹೊರಿಸಲಾಗಿದೆ.

ದೀಪಕ್‌ಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಸಾರ್ವಜನಿಕ ಪ್ರತಿಭಟನೆ ನಡೆದ ನಂತರ ಬಂಧನವಾಗಿದೆ. ಖಾಸಗಿ ಬಸ್ಸಿನಲ್ಲಿ ದೀಪಕ್‌ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಶಿಂಜಿತಾ ಮುಸ್ತಫಾ ಆರೋಪಿಸಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ದೀಪಕ್‌ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದನ್ನೂ ಓದಿ: ಹಾಸನ: ಶಾಲಾ ಬಾಲಕಿಯನ್ನು ಬೆನ್ನಟ್ಟಿದ ಪ್ರಕರಣ; ಕಿಡಿಗೇಡಿಯನ್ನು ಬಂಧಿಸಿದ ಪೊಲೀಸರು

ದೀಪಕ್‌ ಆತ್ಮಹತ್ಯೆ ಮಾಡಿದ ನಂತರ ಈ ಪ್ರಕರಣ ತಿರುವು ಪಡೆದುಕೊಂಡಿತ್ತು. ದೀಪಕ್‌ ಅವರದ್ದು ಯಾವುದೇ ತಪ್ಪಿಲ್ಲದೇ ಇದ್ದರೂ ಅವರ ಬಳಿಯೇ ಹೋಗಿ ಆಕೆ ವಿಡಿಯೋ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಪ್ರಚಾರಕ್ಕಾಗಿ ವಿಡಿಯೋ ಮಾಡಿ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದಕ್ಕೆ ಶಿಂಜಿತಾಳನ್ನು ಬಂಧಿಸಬೇಕೆಂಬ ಆಗ್ರಹ ಕೇಳಿಬಂದಿತ್ತು.

ತೀವ್ರ ಪ್ರತಿಭಟನೆಯ ನಂತರ ಎಚ್ಚೆತ್ತ ಪೊಲೀಸ್‌ ಇಲಾಖೆ ತಲೆಮರೆಸಿಕೊಂಡಿದ್ದ ಆರೋಪಿ ಮಹಿಳೆ ವ್ಲೋಗರ್ ಶಿಂಜಿತಾ ಮುಸ್ತಫಾಳನ್ನ ಬಂಧಿಸಿದೆ. ಅಷ್ಟೆ ಅಲ್ಲದೆ, ಈ ಪ್ರಕರಣಕ್ಕೆ ಇದೀಗ ಕೇರಳ ಮಾನವ ಹಕ್ಕುಗಳ ಆಯೋಗ ಕೂಡ ಎಂಟ್ರಿ ಕೊಟ್ಟಿದ್ದು, ಪ್ರಕರಣವನ್ನು ಸರಿಯಾಗಿ ತನಿಖೆ ಮಾಡಿ ವರದಿ ನೀಡುವಂತೆ ಡಿಐಜಿಗೆ ಆದೇಶಿಸಿದೆ.

Continue Reading

LATEST NEWS

ಹಾಸನ: ಶಾಲಾ ಬಾಲಕಿಯನ್ನು ಬೆನ್ನಟ್ಟಿದ ಪ್ರಕರಣ; ಕಿಡಿಗೇಡಿಯನ್ನು ಬಂಧಿಸಿದ ಪೊಲೀಸರು

Published

on

ಹಾಸನ: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿ ಆತಂಕ ಸೃಷ್ಟಿಸಿದ್ದ ಅಪರಿಚಿತನನ್ನು ಪೊಲೀಸರು ಬಂಧಿಸಲಾಗಿದೆ.


ಕೋಲಾರ ಜಿಲ್ಲೆಯ ದಂಡಿಹಳ್ಳಿ ಹೋಬಳಿಯ ಪ್ರಸನ್ನ (38) ಬಂಧಿತ ಆರೋಪಿ.

ಜನವರಿ 17 ರಂದು ಹಾಸನದಲ್ಲಿ ಈ ಘಟನೆ ನಡೆದಿತ್ತು. ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಇದನ್ನು ಗಮನಿಸಿ ಬಾಲಕಿ ಭಯಭೀತಳಾಗಿ ಓಡೋಡಿ ಬಂದು ಮನೆ ಸೇರಿಕೊಂಡಿದ್ದಳು.

ಇದನ್ನೂ ಓದಿ: ಬಾರೊಂದರಲ್ಲಿ ನಡೆದ ಗಲಾಟೆ; ತೀವ್ರ ಹಲ್ಲೆಗೊಳಗಾಗಿ ವ್ಯಕ್ತಿ ಸಾವು!

ಮನೆ ಬಳಿ ಬಂದ ಆರೋಪಿ ಗೇಟ್ ಹೊರಗೆ ನಿಂತು ಒಳಗೆ ಇಣುಕಿ ನೋಡಿ ವಾಪಾಸು ಹೋಗಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು, ವೈರಲ್ ಆಗಿತ್ತು.
ಈ ಬಗ್ಗೆ ಪೆನ್‌ ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Continue Reading

LATEST NEWS

ಬಾರೊಂದರಲ್ಲಿ ನಡೆದ ಗಲಾಟೆ; ತೀವ್ರ ಹಲ್ಲೆಗೊಳಗಾಗಿ ವ್ಯಕ್ತಿ ಸಾವು!

Published

on

ಚಿಕ್ಕಮಗಳೂರು: ಬಾರ್ ಒಂದರಲ್ಲಿ ಬಿಹಾರಿ ಕಾರ್ಮಿಕರು ಹಾಗೂ ವ್ಯಕ್ತಿಯೊಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

ತೇಜು (40)  ಸಾವನ್ನಪ್ಪಿದ ವ್ಯಕ್ತಿ. ಬಾರ್‌ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ತೇಜು ಮೇಲೆ ಹಲ್ಲೆ ಮಾಡಿದ್ದಾರೆ. ಪರಿಣಾಮ ತೀವ್ರ ಅಸ್ವಸ್ಥಗೊಂಡ ಅವರನ್ನು ಒಂದು ಕಿಮೀ ದೂರದ ಪಟಾಕಿ ಮೈದಾನಕ್ಕೆ ಒಯ್ದು ಎಸೆದಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಆಂಧ್ರಪ್ರದೇಶ: ಖಾಸಗಿ ಸ್ಲೀಪರ್ ಬಸ್ ನಲ್ಲಿ ಅಗ್ನಿ ಅವಘಡ; ಮೂವರು ಸಜೀವ ದಹನ

ಆಟೋ ಚಾಲಕರೊಬ್ಬರು ತೇಜುವನ್ನು ನೋಡಿ ಉಸಿರಾಡುತ್ತಿರುವುದನ್ನು ಗಮನಿಸಿ ಆಸ್ಪತ್ರೆಗೆ ಸೇರಿಸಿದ್ದರು. ತೀವ್ರ ಹಲ್ಲೆಯಾಗಿದ್ದರಿಂದ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ತೇಜು ಕೊನೆಯುಸಿರೆಳೆದಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page