Connect with us

DAKSHINA KANNADA

ಮಂಗಳೂರು : ದ್ವಿಚಕ್ರದಲ್ಲಿ ವಾಹನದಲ್ಲಿ ಪತಿಯೊಂದಿಗೆ ತೆರಳುತಿದ್ದ ಮಹಿಳೆ ರಸ್ತೆಗೆಸೆಯಲ್ಪಟ್ಟು ದಾರುಣ ಅಂತ್ಯ..!

Published

on

ದ್ವಿಚಕ್ರವಾಹನ ದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ.

ಮಂಗಳೂರು : ದ್ವಿಚಕ್ರವಾಹನ ದಿಂದ ಮಹಿಳೆಯೋರ್ವರು ಬಿದ್ದು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ.

ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ,

ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ದ್ವಿಚಕ್ರ ವಾಹನದಲ್ಲಿ ಬೆಳಿಗ್ಗೆ 5.30 ಬರುತ್ತಿದ್ದ ಸಂದರ್ಭ ಕಲ್ಲಕುಮೇರು ಬಳಿ ಹಪ್ಸ್ ಗಮನಿಸದ ಪತಿ ಒಂದೇ ವೇಗದಲ್ಲಿ ಬರುತ್ತಿದ್ದರು ಎನ್ನಲಾಗಿದೆ.  ಈ ಸಂದರ್ಭ ಹಿಂಬದಿ ಸವಾರರಾಗಿದ್ದ ಪತ್ನಿ ಮಮತಾ ಶೆಟ್ಟಿ ಆಯಾ ತಪ್ಪಿ ದ್ವಿಚಕ್ರ ವಾಹನದಿಂದ ಕೆಳಕ್ಕೆ ಎಸೆಯಲ್ಪಟ್ಟಿದ್ದಾರೆ,

ಕೂಡಲೇ ಸಮೀಪದ ಅಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಶೆಟ್ಟಿ‌ ಮೃತ ಪಟ್ಟಿದ್ದಾರೆ.

ಸ್ಥಳಿಯರಾದ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಂದರ ನಿಡ್ಡೋಡಿ, ಅಭಿಲಾಷ್ ಶೆಟ್ಟಿ ಕಟೀಲು ಅಸ್ಪತ್ರೆಗೆ ಭೇಟಿ ನೀಡಿ ಸಹಕರಿಸಿದ್ದಾರೆ.

ಮಮತಾ ಶೆಟ್ಟಿ ಅಂಗನವಾಡಿ ಕಾರ್ಯಕರ್ತೆಯಾಗಿದ್ದರು ಎಂದು ತಿಳಿದು ಬಂದಿದೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ನಾಳೆ(ಜ.21) ಕದ್ರಿ ಮ್ಯೂಸಿಕಲ್ ನೈಟ್ಸ್ 2026 : ರಿಷಬ್ ಶೆಟ್ಟಿ ಭಾಗಿ

Published

on

ಮಂಗಳೂರು : ಕದ್ರಿ ಶ್ರೀಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ  ಪ್ರಯುಕ್ತ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಕದ್ರಿ ಈವೆಂಟ್ಸ್ ಅರ್ಪಿಸುವ  ‘ಕದ್ರಿ ಮ್ಯೂಸಿಕಲ್ ನೈಟ್ಸ್ 2026’ ನಾಳೆ(ಜ.21) ಸಂಜೆ 7 ಗಂಟೆಯಿಂದ ಕದ್ರಿ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದೆ.

ಎಂದಿನಂತೆ ಈ ಬಾರಿಯೂ ತಾರಾ ಮೆರುಗು ಇರಲಿದ್ದು, ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಆಗಮಿಸಲಿದ್ದಾರೆ.

ಆಯೋಜಕ ಜಗದೀಶ್ ಕದ್ರಿ ಈ ಬಗ್ಗೆ ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ಕೂಡ ಕದ್ರಿ ಮ್ಯೂಸಿಕಲ್ ನೈಟ್ ಆಯೋಜನೆ ಮಾಡಿದ್ದೇವೆ. ಸಿನಿಮಾ ಸೆಲೆಬ್ರಿಟಿಗಳು, ಗಣ್ಯರು ಸೇರಿದಂತೆ ಹೆಸರಾಂತ ಗಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಇದನ್ನೂ ಓದಿ : BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

ಕನ್ನಡ, ತುಳು ಚಿತ್ರರಂಗದ ಕಲಾವಿದರಾದ ರೂಪೇಶ್ ಶೆಟ್ಟಿ, ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರ್ಜುನ್ ಕಾಪಿಕಾಡ್, ಶನಿಲ್ ಗುರು, ಪ್ರಕಾಶ್ ತೂಮಿನಾಡು, ಸ್ವರಾಜ್ ಶೆಟ್ಟಿ, ದೀಪಕ್ ರೈ ಪಾಣಾಜೆ, ವಿಜೆ ವಿನೀತ್, ಸಮತಾ ಅಮೀನ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Continue Reading

DAKSHINA KANNADA

ಮಂಗಳೂರು: ಡ್ರಗ್ಸ್‌ ನಿರ್ಮೂಲನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಬಸ್ಸು ಮಾಲಕರ ಸಂಘ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 110 ವರ್ಷಗಳ ಇತಿಹಾಸವನ್ನು ಹೊಂದಿರುವ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಿಕೊಂಡು ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ವತಿಯಿಂದ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಇದುವರೆಗೆ ಕೋಟಿಗಟ್ಟಲೆ ರೂಪಾಯಿಗಳ ರಿಯಾಯಿತಿ ದರದ ಬಸ್ಸು ಪಾಸುಗಳನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದೇವೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಲು ಮುಂದಾಗಿರುವ ನಗರ ಪೊಲೀಸ್‌ ಕಮಿಷನರ್‌ ಅವರ ಜೊತೆಗೆ ಜಿಲ್ಲಾ ಬಸ್ಸು ಮಾಲಕರ ಸಂಘವೂ ಕೈಜೋಡಿಸಿ ಡ್ರಗ್ ನಿರ್ಮೂಲನೆ ಮಾಡಲು ಬೀದಿ ನಾಟಕ ಪ್ರದರ್ಶನ ಮಾಡಲಿದ್ದೇವೆ ಎಂದು ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡ್ರಗ್ ಜಾಲಕ್ಕೆ ಕಡಿವಾಣ, ನಶೆಗೆ ಒಳಗಾಗುವ ವಿದ್ಯಾರ್ಥಿಗಳನ್ನು ಅದರಿಂದ ಹೊರತರುವ ಕೆಲಸ ಮಾಡುತ್ತಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ನುಡಿದರು. ಅಲ್ಲದೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆಗೆ ನಾವು ಕೈಜೋಡಿಸಿದ್ದೇವೆ. ಜನವರಿ 27ರ ಮಂಗಳವಾರ ರೋಶನಿ ನಿಲಯ ಕಾಲೇಜಿನ ಸಹಭಾಗಿತ್ವದೊಂದಿಗೆ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಹಲವು ಕಡೆ ಡ್ರಗ್‌ ವಿರೋಧಿ ಬೀದಿನಾಟಕ ಆಯೋಜನೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಮಂಗಳೂರು: ಹಂಚಿನ ಫ್ಯಾಕ್ಟರಿಯಲ್ಲಿ ಅ*ಗ್ನಿ ಅ*ವಘ*ಡ

ನಗರದ ಸೆಂಟ್ರಲ್‌ ಬಸ್ಸು ನಿಲ್ದಾಣ, ತೊಕ್ಕೊಟ್ಟು ಬಸ್ಸು ನಿಲ್ದಾಣ, ತಲಪಾಡಿ, ಉಳ್ಳಾಲ, ಲಾಲ್‌ಭಾಗ್‌ ಸೇರಿದಂತೆ ಹಲವು ಕಡೆಗಳ ಬಸ್ಸು ನಿಲ್ದಾಣಗಳಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎಲ್ಲಾ ಬಸ್ಸುಗಳಲ್ಲಿ ಸ್ಟಿಕ್ಕರ್‌ ಹಚ್ಚಿ ಜಾಗೃತಿ ಮೂಡಿಸಲಿದ್ದೇವೆ. ಇದಕ್ಕೆ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆಗಮಿಸಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ ರಾಮಚಂದ್ರ ನಾಯ್ಕ , ರಾಮಚಂದ್ರ ಪಿಲಾರ್ ಹಾಗೂ ಜೊತೆ ಕಾರ್ಯದರ್ಶಿ ರಾಜೇಶ್ ಟಿ ಯವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ರಿಗೆ ‘ಕನ್ನಡ ಪಯಸ್ವಿನಿ ಅವಾರ್ಡ್- 2026’ ಪ್ರದಾನ 

Published

on

ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026’ ಅಂತಾರಾಜ್ಯ ಪ್ರಶಸ್ತಿಯನ್ನು  ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆರಿಗೆ ಪ್ರದಾನ ಮಾಡಲಾಯಿತು.

ಕಾಸರಗೋಡು ನುಳ್ಳಿಪಾಡಿಯಲ್ಲಿ ನಡೆದ ಕನ್ನಡ ಭವನ ರಜತ ಸಂಭ್ರಮ – ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನುಅವರು  ಸ್ವೀಕರಿಸಿದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ  ಅಂಕಣಕಾರರಾಗಿ ಹಾಗೂ ಕ್ರೀಡಾ  ವಿಮರ್ಶಾತ್ಮಕ ಲೇಖನಗಳ  ಮೂಲಕ ಎಸ್. ಜಗದೀಶ್ಚಂದ್ರ ಅಂಚನ್ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

ಕಾರ್ಯಕ್ರಮದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಡಾ.ಕೆ.ವಾಮನ್ ರಾವ್, ನಿರ್ದೇಶಕ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ , ಕರ್ನಾಟಕ ಬ್ಯಾರಿ‌ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ , ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ , ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟ್ಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ , ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು  ಮೊದಲಾದವರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page