Connect with us

DAKSHINA KANNADA

ಮಂಗಳೂರು ಪಾಲಿಕೆ ಕಮಿಷನರ್ ಎಲ್ಲೆ ಮೀರಿ ಸದನಕ್ಕೆ ಅಗೌರವ ತಂದಿದ್ದಾರೆ-J.R ಲೋಬೋ

Published

on

ಮಂಗಳೂರು: ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳ ಪ್ರಶ್ನೆ ಇದ್ದ ಸಂಶಯವನ್ನು ಕಾಂಗ್ರೆಸ್ ನಾಯಕ ವಿನಯರಾಜ್ ಅವರು ಸದನದಲ್ಲಿ ಪ್ರಶ್ನಿಸಿದಾಗ ಒಬ್ಬ ಆಯುಕ್ತ ಅವರನ್ನು ಕುಳಿತುಕೊಳ್ಳಿ ಎಂದು ಏರುದನಿಯಲ್ಲಿ ಹೇಳುವುದು ಎಷ್ಟು ಸರಿ ? ಇದು ಇಡೀ ಸದನಕ್ಕೆ ಆಗುವ ಅಗೌರವ. ಜನಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಉತ್ತರ ನೀಡುವ ಕೆಲಸ ಜನಪ್ರತಿನಿಧಿ ಆಗಿರುವ ಮೇಯರ್ ಕೆಲಸ. ಅವರಿಗೆ ಪೂರಕವಾಗಿ ಸಹಾಯ ಮಾಡುವವರು ಆಯುಕ್ತರು. ಆದರೆ ಆಯುಕ್ತರು ಒಬ್ಬ ಜನಪ್ರತಿನಿಧಿಯಲ್ಲಿ ಈ ರೀತಿ ವರ್ತಿಸುವುದು ತಪ್ಪು’ ಎಂದು ದಕ್ಷಿಣ ವಿಧಾನ ಸಭಾ ಕ್ಷೆತ್ರದ ಮಾಜಿ ಶಾಸಕ ಜೆ ಆರ್ ಲೋಬೋ ಹೇಳಿದ್ದಾರೆ.


ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮುಖ್ಯ ಕಾರ್ಯದರ್ಶಿ ಒಬ್ಬ ಶಾಸಕನಿಗೆ ನೀನು ಕೂತ್ಕೊ ಅಂತ ಹೇಳುವುದು ದೊಡ್ಡ ಅವಮಾನ. ಅವರಿಗಷ್ಟೇ ಅಲ್ಲ. ಸ್ಪೀಕರ್‌ಗೆ ಕೂಡಾ ಅವಮಾನ. ಇವತ್ತು ಇದನ್ನು ನಾನು ಸಮರ್ಥಿಸಿಕೊಂಡ್ರೆ ಮುಂದೆ ಜನಪ್ರತಿನಿಧಿಗಳ ಅವಸ್ಥೆ ಏನಾಗಬೇಡ.

ನಾನು ರಾಜಕೀಯ ವ್ಯಕ್ತಿಯಾಗಿ ಮಾತಾಡುತ್ತಿಲ್ಲ. ಓರ್ವ ಮಾಜಿ ಅಧಿಕಾರಿ ಆಗಿ ಮಾತನಾಡುತ್ತಿದ್ದೇನೆ. ಜನಪ್ರತಿನಿಧಿಗಳಿಗೆ ಮೇಯರ್ ನ್ಯಾಯ ಕೊಡಿಸಬೇಕು. ಆಗದಿದ್ದರೆ ಅಸಮರ್ಥ. ಇಂತಹ ಘಟನೆ ನಡೆದಾಗ ಮೇಯರ್ ಸರಿಯಾಗಿ ನಡೆಸದೇ ಇದ್ದರೆ ಬಿಜೆಪಿ ಪಕ್ಷ ಅಸಮರ್ಥವಾಗಿದೆ ಎಂದೇ ಅರ್ಥ.

ಅಧಿಕಾರಿಗೆ ತನ್ನದೇ ಆದ ಗಡಿರೇಖೆಗಳಿವೆ. ಅಧಿಕಾರಿಗಳೇ ನೀವು ರಾಜಕೀಯ ವ್ಯಕ್ತಿಗಳ ಕೈಗೊಂಬೆ ಆಗಬೇಡಿ. ಇಂತಹ ದುರ್ವ್ಯವಸ್ಥೆಯಲ್ಲಿ ಮುಂದೆ ಸಿಕ್ಕಿಹಾಕಿಕೊಳ್ಳುವುದು ರಾಜಕೀಯ ವ್ಯಕ್ತಿಗಳಲ್ಲ. ಅವರು ಸುಲಭವಾಗಿ ಸೇವ್ ಆಗುತ್ತಾರೆ. ಅಧಿಕಾರಿಗಳು ಸಿಕ್ಕಿಹಾಕಿಕೊಳ್ಳುತ್ತಾರೆ. ಮುಂದೆ ನಾವು ಅಧಿಕಾರಕ್ಕೆ ಬಂದಲ್ಲಿ ಸ್ಮಾರ್ಟ್‌ಸಿಟಿಯ ಸಂಪೂರ್ಣ ಅವ್ಯವಹಾರದ ತನಿಖೆ ನಡೆಸುತ್ತೇವೆ ಎಂದರು.


ಇನ್ನು ಸ್ಮಾರ್ಟ್‌ ಸಿಟಿ ವ್ಯವಸ್ಥೆಯ ಬಗ್ಗೆ ಮಾತನಾಡಿ ‘ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಇಲ್ಲಿ ನಡೆಯುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ವಿಚಾರಗಳು ಬಂದಾಗ ಪ್ರತಿಪಕ್ಷವಾಗಿ ಕಾಂಗ್ರೆಸ್ ಅದರ ವಿರುದ್ಧ ದನಿ ಎತ್ತುತ್ತದೆ. ಸ್ಮಾರ್ಟ್‌ ಸಿಟಿಯಲ್ಲಿ 32 ಕೋಟಿ ರೂಪಾಯಿಯನ್ನು ಕಮಾಂಡ್ ಕಂಟ್ರೋಲ್‌ ಎಂದು ಖರ್ಚು ಮಾಡಿದ್ದಾರೆ.

ಆದರೆ ಇಲ್ಲಿ ಅಳವಡಿಸಲಾಗಿರುವ ಕ್ಯಾಮೆರಾಗಳೂ ಒಂದು ಕೂಡಾ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. 32 ಕೋಟಿ ಖರ್ಚು ಮಾಡುವಾಗ ಇದರ ಬಗ್ಗೆ ಏನು ಅಧ್ಯಯನ ಮಾಡಿದ್ದಾರೆ. ಮಿಲಾಗ್ರಿಸ್‌ನಲ್ಲಿ ಬ್ಲಾಕ್, ನಂತೂರಿನಲ್ಲಿ ಬ್ಲಾಕ್, ಕೆಪಿಟಿಯಲ್ಲಿ ಬ್ಲಾಕ್, ಲಾಲ್‌ಬಾಗ್‌ನಲ್ಲಿ ಬ್ಲಾಕ್ ಎಲ್ಲಿ ನೋಡಿದ್ರೂ ಬ್ಲಾಕ್. ಇಡೀ ನಗರವೇ ಅಸ್ತವ್ಯಸ್ತವಾಗಿದೆ. ಹಾಗಾದ್ರೆ ಇಷ್ಟರವರೆಗೆ ಇಷ್ಟು ಕೋಟಿ ಖರ್ಚು ಮಾಡಿದ್ರಲ್ವಾ ಅದಕ್ಕೆ ಅಡಿಟ್ ಇಲ್ವಾ..?

ಯಾವ ಸಿಗ್ನಲ್‌ಗಳೂ ನಡೆಯುತ್ತಿಲ್ಲ. ಸ್ಮಾರ್ಟ್ ಸಿಟಿಯ ಬಗ್ಗೆ ಹೇಳೋರಿಲ್ಲ. ಕೇಳೋರಿಲ್ಲ. ಇದರ ಬಗ್ಗೆ ದುಡ್ಡು ಮಾಡ್ಲಿಕ್ಕೆ ಯಾರು ಹೊರಟಿದ್ದಾರೆ ಗೊತ್ತಿಲ್ಲ.

ಮಾಡಿದ್ದರೆ ಅದನ್ನು ಜನರ ಮುಂದೆ ಇಡಬೇಕು. ಜನರ ತೆರಿಗೆ ಹಣವನ್ನು ವಿನಾಕಾರಣ ಪೋಲು ಮಾಡಲು ಕಾಂಗ್ರೆಸ್ ಎಂದಿಗೂ ಬಿಡುವುದಿಲ್ಲ. ಇದರಲ್ಲಿ ಯಾರೆಲ್ಲ ದುಡ್ಡು ಮಾಡಲು ಮಾಡಲು ಮುಂದಾಗಿದ್ದಾರೆ. ? ಇದರ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ನಾಳೆ(ಜ.21) ಕದ್ರಿ ಮ್ಯೂಸಿಕಲ್ ನೈಟ್ಸ್ 2026 : ರಿಷಬ್ ಶೆಟ್ಟಿ ಭಾಗಿ

Published

on

ಮಂಗಳೂರು : ಕದ್ರಿ ಶ್ರೀಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ  ಪ್ರಯುಕ್ತ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಕದ್ರಿ ಈವೆಂಟ್ಸ್ ಅರ್ಪಿಸುವ  ‘ಕದ್ರಿ ಮ್ಯೂಸಿಕಲ್ ನೈಟ್ಸ್ 2026’ ನಾಳೆ(ಜ.21) ಸಂಜೆ 7 ಗಂಟೆಯಿಂದ ಕದ್ರಿ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದೆ.

ಎಂದಿನಂತೆ ಈ ಬಾರಿಯೂ ತಾರಾ ಮೆರುಗು ಇರಲಿದ್ದು, ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಆಗಮಿಸಲಿದ್ದಾರೆ.

ಆಯೋಜಕ ಜಗದೀಶ್ ಕದ್ರಿ ಈ ಬಗ್ಗೆ ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ಕೂಡ ಕದ್ರಿ ಮ್ಯೂಸಿಕಲ್ ನೈಟ್ ಆಯೋಜನೆ ಮಾಡಿದ್ದೇವೆ. ಸಿನಿಮಾ ಸೆಲೆಬ್ರಿಟಿಗಳು, ಗಣ್ಯರು ಸೇರಿದಂತೆ ಹೆಸರಾಂತ ಗಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಇದನ್ನೂ ಓದಿ : BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

ಕನ್ನಡ, ತುಳು ಚಿತ್ರರಂಗದ ಕಲಾವಿದರಾದ ರೂಪೇಶ್ ಶೆಟ್ಟಿ, ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರ್ಜುನ್ ಕಾಪಿಕಾಡ್, ಶನಿಲ್ ಗುರು, ಪ್ರಕಾಶ್ ತೂಮಿನಾಡು, ಸ್ವರಾಜ್ ಶೆಟ್ಟಿ, ದೀಪಕ್ ರೈ ಪಾಣಾಜೆ, ವಿಜೆ ವಿನೀತ್, ಸಮತಾ ಅಮೀನ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Continue Reading

DAKSHINA KANNADA

ಮಂಗಳೂರು: ಡ್ರಗ್ಸ್‌ ನಿರ್ಮೂಲನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಬಸ್ಸು ಮಾಲಕರ ಸಂಘ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 110 ವರ್ಷಗಳ ಇತಿಹಾಸವನ್ನು ಹೊಂದಿರುವ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಿಕೊಂಡು ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ವತಿಯಿಂದ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಇದುವರೆಗೆ ಕೋಟಿಗಟ್ಟಲೆ ರೂಪಾಯಿಗಳ ರಿಯಾಯಿತಿ ದರದ ಬಸ್ಸು ಪಾಸುಗಳನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದೇವೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಲು ಮುಂದಾಗಿರುವ ನಗರ ಪೊಲೀಸ್‌ ಕಮಿಷನರ್‌ ಅವರ ಜೊತೆಗೆ ಜಿಲ್ಲಾ ಬಸ್ಸು ಮಾಲಕರ ಸಂಘವೂ ಕೈಜೋಡಿಸಿ ಡ್ರಗ್ ನಿರ್ಮೂಲನೆ ಮಾಡಲು ಬೀದಿ ನಾಟಕ ಪ್ರದರ್ಶನ ಮಾಡಲಿದ್ದೇವೆ ಎಂದು ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡ್ರಗ್ ಜಾಲಕ್ಕೆ ಕಡಿವಾಣ, ನಶೆಗೆ ಒಳಗಾಗುವ ವಿದ್ಯಾರ್ಥಿಗಳನ್ನು ಅದರಿಂದ ಹೊರತರುವ ಕೆಲಸ ಮಾಡುತ್ತಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ನುಡಿದರು. ಅಲ್ಲದೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆಗೆ ನಾವು ಕೈಜೋಡಿಸಿದ್ದೇವೆ. ಜನವರಿ 27ರ ಮಂಗಳವಾರ ರೋಶನಿ ನಿಲಯ ಕಾಲೇಜಿನ ಸಹಭಾಗಿತ್ವದೊಂದಿಗೆ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಹಲವು ಕಡೆ ಡ್ರಗ್‌ ವಿರೋಧಿ ಬೀದಿನಾಟಕ ಆಯೋಜನೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಮಂಗಳೂರು: ಹಂಚಿನ ಫ್ಯಾಕ್ಟರಿಯಲ್ಲಿ ಅ*ಗ್ನಿ ಅ*ವಘ*ಡ

ನಗರದ ಸೆಂಟ್ರಲ್‌ ಬಸ್ಸು ನಿಲ್ದಾಣ, ತೊಕ್ಕೊಟ್ಟು ಬಸ್ಸು ನಿಲ್ದಾಣ, ತಲಪಾಡಿ, ಉಳ್ಳಾಲ, ಲಾಲ್‌ಭಾಗ್‌ ಸೇರಿದಂತೆ ಹಲವು ಕಡೆಗಳ ಬಸ್ಸು ನಿಲ್ದಾಣಗಳಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎಲ್ಲಾ ಬಸ್ಸುಗಳಲ್ಲಿ ಸ್ಟಿಕ್ಕರ್‌ ಹಚ್ಚಿ ಜಾಗೃತಿ ಮೂಡಿಸಲಿದ್ದೇವೆ. ಇದಕ್ಕೆ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆಗಮಿಸಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ ರಾಮಚಂದ್ರ ನಾಯ್ಕ , ರಾಮಚಂದ್ರ ಪಿಲಾರ್ ಹಾಗೂ ಜೊತೆ ಕಾರ್ಯದರ್ಶಿ ರಾಜೇಶ್ ಟಿ ಯವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ರಿಗೆ ‘ಕನ್ನಡ ಪಯಸ್ವಿನಿ ಅವಾರ್ಡ್- 2026’ ಪ್ರದಾನ 

Published

on

ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026’ ಅಂತಾರಾಜ್ಯ ಪ್ರಶಸ್ತಿಯನ್ನು  ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆರಿಗೆ ಪ್ರದಾನ ಮಾಡಲಾಯಿತು.

ಕಾಸರಗೋಡು ನುಳ್ಳಿಪಾಡಿಯಲ್ಲಿ ನಡೆದ ಕನ್ನಡ ಭವನ ರಜತ ಸಂಭ್ರಮ – ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನುಅವರು  ಸ್ವೀಕರಿಸಿದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ  ಅಂಕಣಕಾರರಾಗಿ ಹಾಗೂ ಕ್ರೀಡಾ  ವಿಮರ್ಶಾತ್ಮಕ ಲೇಖನಗಳ  ಮೂಲಕ ಎಸ್. ಜಗದೀಶ್ಚಂದ್ರ ಅಂಚನ್ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

ಕಾರ್ಯಕ್ರಮದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಡಾ.ಕೆ.ವಾಮನ್ ರಾವ್, ನಿರ್ದೇಶಕ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ , ಕರ್ನಾಟಕ ಬ್ಯಾರಿ‌ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ , ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ , ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟ್ಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ , ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು  ಮೊದಲಾದವರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page