Connect with us

DAKSHINA KANNADA

ಮಂಗಳೂರು: ಡಾ. M.N ರಾಜೇಂದ್ರ ಎರಡನೆ ಬಾರಿ ಅಧ್ಯಕ್ಷರಾದ ಹಿನ್ನೆಲೆ ಗೌರವ ಸಮರ್ಪಣೆ-ಡಾ. ವಿರೇಂದ್ರ ಹೆಗ್ಗಡೆ ಗೌರವ ಉಪಸ್ಥಿತಿ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಇದಕ್ಕೆ ಎರಡನೇ ಬಾರಿ ಅಧ್ಯಕ್ಷರಾದ ಹಿನ್ನಲೆ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಇಂದು ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.


ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯ ಸಭಾ ಸದಸ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಅತಿಥಿ ಗಣ್ಯರ ಒಟ್ಟು ಸೇರಿಗೆಯಲ್ಲಿ ಕಾರ್ಯಕ್ರಮ ಉದ್ಘಾಟನೆಗೊಂಡಿತು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ಡಾ.ವೀರೇಂದ್ರ ಹೆಗ್ಗಡೆಯವರು ಡಾ.ಎಂ.ಎನ್ ರಾಜೇಂದ್ರ ಕುಮಾರ್ ರಿಗೆ ದ.ಕ.ಜಿ.ಕೇಂದ್ರ ಸಹಕಾರಿ ಬ್ಯಾಂಕ್ ನ ವತಿಯಿಂದ ಅತಿಥಿ ಗಣ್ಯರ ಜೊತೆಯಲ್ಲಿ ಗೌರವಿಸಿದರು.

ಎಂ. ಎನ್. ರಾಜೇಂದ್ರ ಕುಮಾರ್ ಮಾತನಾಡಿ, ತಾನು ಬದುಕಿನಲ್ಲಿ ಶಿಸ್ತು, ಸಮಯಕ್ಕೆ ಸರಿಯಾಗಿ ಕೆಲಸ ಕಾರ್ಯವನ್ನು ಮಾಡಲು ಕಲಿತಿದ್ದೇನೆ ಅಂದ್ರೆ ಅದಕ್ಕೆ ಕಾರಣ ಹೆಗ್ಗಡೆಯವರು.

ಸಮಸ್ಯೆ ಬರುವಾಗ ಅವರಲ್ಲಿ ಕೇಳುತ್ತಿದ್ದೆ. ಅಡಿ ಗಟ್ಟಿ ಇದ್ರೆ ದಡ ಸೇರಬಹುದು ಅನ್ನುವ ಮಾತು ಹೇಳಿಕೊಟ್ಟವರು ಅವರು. ನಾನು ಅನ್ನುವ ಪದವನ್ನು ಯಾರು ಬಳಸುತ್ತಾರೋ, ಅವರು ಮೇಲೆ ಬರಲು ಸಾದ್ಯವಿಲ್ಲ. ಎಲ್ಲರನ್ನೂ ಒಟ್ಟು ಸೇರಿಸಿ ಹೋದರೆ ಮಾತ್ರ ಮೇಲೆ ಬರಬಹುದು ಅಂತ ರಾಜೇಂದ್ರ ಕುಮಾರ್ ಹೇಳಿದರು.


ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷೀಯ ಭಾಷಣಗೈದು ಮಾತನಾಢಿ, ಸಹಕಾರಿ ರಂಗದಲ್ಲಿ ಮಹಾತ್ಮಾ ಗಾಂಧಿ ತುಂಬಾ ಸಹಕಾರ ನೀಡಿದವರು.

ದೇಶದ ಭವಿಷ್ಯದ ಬಾಗಿಲು ತೆಗೆಯಬೇಕಾದರೆ ಸಹಕಾರಿ ಸಂಘಗಳು ಬೆಳೆಯಬೇಕು ಅಂತ ಗಾಂಧಿ ಹೇಳಿದ್ದಾರೆ. ಎಲ್ಲರೂ ಒಟ್ಟಿಗೆ ಮುಂದುವರೆಯೋಣ. ಇದು ಸಹಕಾರಿ ತತ್ವ ಅಂತ ಹೇಳಿದ ಅವರು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತುಂಬಾ ದೊಡ್ಡ ಮಟ್ಟದಲ್ಲಿ ಬೆಳೆದು ಬರಲಿಕ್ಕೆ ರಾಜೇಂದ್ರ ಕುಮಾರ್ ಕಾರಣವಾಗಿದ್ದಾರೆ. ಅವರಿಗೆ ಮೆಚ್ಚುಗೆ ಸಲ್ಲಿಸುತ್ತೇನೆ ಅಂತ ಹೇಳಿದರು.


ಅರುಣ ರಾಜೇಂದ್ರ ಕುಮಾರ್, ಶಾಸಕ ಉಮಾನಾಥ ಕೋಟ್ಯಾನ್, ಶಾಸಕ ವೇದವ್ಯಾಸ ಕಾಮತ್, ಪೊಲೀಸ್ ಕಮಿಷನರ್ ಶಶಿಕುಮಾರ್, ಮಾಜಿ ಸಚಿವರಾದ ಅಭಯಚಂದ್ರ ಜೈನ್ ಹಾಗೂ ಬಿ. ನಾಗರಾಜ್ ಶೆಟ್ಟಿ, ಅದಾನಿ ಗ್ರೂಪ್ ದಕ್ಷಿಣ ಭಾರತದ ಅಧ್ಯಕ್ಷರಾದ ಕಿಶೋರ್ ಆಳ್ವ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಉಪಾಧ್ಯಕ್ಷ ವಿನಯ ಕುಮಾರ ಸೂರಿಂಜೆ ಹಾಗೂ ನಿರ್ದೇಶಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

DAKSHINA KANNADA

ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್‌ ಪೂಂಜಾ ಒತ್ತಾಯ

Published

on

ಬೆಳ್ತಂಗಡಿ: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಬೆಳ್ತಂಗಡಿಯ ವಿದ್ಯಾಥಿಧನಿ ಆಕಾಂಕ್ಷ ಮೃತದೇಹ ಇಂದು ಬೆಳಗ್ಗೆ ಆಕೆಯ ಬೊಳಿಯಾರ್ ಮನೆಗೆ ತಲುಪಿದೆ. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

 

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸ ಬೇಕು. ಆಕಾಂಕ್ಷಳ ಸಾವಿಗೆ ನ್ಯಾಯ ಸಿಗ ಬೇಕು. ಕರ್ನಾಟಕದ ಗೃಹ ಸಚಿವರಿಗೆ ಆಗ್ರಹ ಮಾಡ್ತೇನೆ ಎಂದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವುದನ್ನು ಪತ್ತೆ ಮಾಡುವಂತೆ ಕರ್ನಾಟಕ ಸರಕಾರವು ಪಂಜಾಬ್ ಸರಕಾರವನ್ನು ಆಗ್ರಹಿಸ ಬೇಕೆಂದು ಒತ್ತಾಯಿಸಿದರು.

 

Continue Reading

DAKSHINA KANNADA

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ರಿಕ್ಷಾ

Published

on

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ರಾತ್ರಿ 10.30ರ ವೇಳೆಗೆ ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ.

ಇದನ್ನೂ ಓದಿ: ಕಂಡೆಕ್ಟರ್ ಜೊತೆಗೂಡಿ ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ತಳ್ಳಿದ ಮಹಿಳೆಯರು

ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ವಲ್ಪವಾಲಿದೆ. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page