Connect with us

DAKSHINA KANNADA

ಶಾಸಕ ಲಾಲಾಜಿ ಮೆಂಡನ್ ಗೆ ಸಚಿವ ಸ್ಥಾನ ನೀಡುವಂತೆ ಮೀನುಗಾರರ ವೇದಿಕೆಯ‌ ಒತ್ತಾಯ

Published

on

ಶಾಸಕ ಲಾಲಾಜಿ ಮೆಂಡನ್ ಗೆ ಸಚಿವ ಸ್ಥಾನ ನೀಡುವಂತೆ ಮೀನುಗಾರರ ವೇದಿಕೆಯ‌ ಒತ್ತಾಯ

ಮಂಗಳೂರು : ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಮಂಗಳೂರಿನ ಸಮಾನ ಮನಸ್ಕ ಮೀನುಗಾರರ ವೇದಿಕೆ ಆಗ್ರಹಿಸಿದೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ.ಕ ಮತ್ತು ಉಡುಪಿ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ಶರತ್ ಗುಡ್ಡೆಕೊಪ್ಲ ಅವರು ರಾಜ್ಯ ವಿಧಾನ ಸಭೆಯಲ್ಲಿ ಮೊಗವೀರ ಸಮುದಾಯಕ್ಕೆ ಸೇರಿದ ಮೀನುಗಾರ ಸಮುದಾಯದ ಆಡಳಿತ ಪಕ್ಷದ ಏಕೈಕ ಪ್ರತಿನಿಧಿಯಾಗಿರುವ ಮೂರು ಬಾರಿ ಶಾಸಕರಾಗಿ ಅನುಭವ ಹೊಂದಿರುವ ಅನುಭವಿ ಮತ್ತು ನಿಷ್ಕಳಂಕ ರಾಜಕಾರಣಿಯಾದ ಲಾಲಾಜಿ ಮೆಂಡನ್ ಅವರಿಗೆ ಸಚಿವ ಸ್ಥಾನ ದೊರೆಯಲೇಬೇಕೆಂದರು.

ಮೊಗವೀರ/ಗಂಗಾಮತ ಸಮುದಾಯಕ್ಕೆ ಸೇರಿದ 39 ವಿವಿಧ ಮೀನುಗಾರರ ಸಮುದಾಯದ ಕರ್ನಾಟಕದಲ್ಲಿ 80 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಮೊಗವೀರ ಸಮುದಾಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು. ಮೀನುಗಾರರ ಹಲವು ಬೇಡಿಕೆಗಳು ಇನ್ನೂ ಈಡೇರಿಲ್ಲ. ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕಾದರೆ ಲಾಲಾಜಿ ಮೆಂಡನ್ ಅವರು ಮಂತ್ರಿಯಾಗಬೇಕು. ಈ ಹಿಂದೆಯೂ ಲಾಲಾಜಿ ಮೆಂಡನ್ ಅವರಿಗೆ ಸ್ಥಾನ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದೆವು. ಆದರೆ ದೊರೆತಿರಲಿಲ್ಲ. ಈ ಬಾರಿಯಾದರೂ ಸಚಿವ ಸ್ಥಾನ ನೀಡಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮೊಗವೀರ ಸಮಾಜದ ಹಿರಿಯ ಮುಖಂಡ ನ್ಯಾಯವಾದಿ, ದಯಾನಾಥ್ ಕೋಟ್ಯಾನ್, ದ.ಕ ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷ ನ್ಯಾಯವಾದಿ ಗಂಗಾಧರ ಹೊಸಬೆಟ್ಟು, ಉಪಾಧ್ಯಕ್ಷ ದೇವದಾಸ್ ಬೋಳೂರು, ಮಂಗಳೂರು ಹದಿನಾಲ್ಕು ಪಟ್ನ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ರಾಜೀವ್ ಕಾಂಚನ್ , ಉರ್ವ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿಶ್ಚಂದ್ರ ಕರ್ಕೇರ ಉಪಸ್ಥಿತರಿದ್ದರು.

DAKSHINA KANNADA

ನಾಳೆ ಒಟಿಟಿಯಲ್ಲಿ ರಿಲೀಸ್ ಆಗಲಿದೆ ಧರ್ಮ ಚಾವಡಿ ತುಳು ಸಿನಿಮಾ

Published

on

ಮಂಗಳೂರು:  ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಜಗದೀಶ್ ಅಮೀನ್ ನಿರ್ಮಾಣದ ಧರ್ಮ ಚಾವಡಿ ತುಳು ಸಿನಿಮಾ ಕಳೆದ ವರ್ಷ ಕರಾವಳಿಯಾದ್ಯಂತ ಬಿಡುಗಡೆಗೊಂಡು ಜನಮನ್ನಣೆ ಪಡೆದು ಯಶಸ್ವಿ ಚಿತ್ರಗಳ ಸಾಲಿಗೆ ಸೇರ್ಪಡೆಗೊಂಡಿದೆ. ಇದೀಗ ಈ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಿ ಜಗತ್ತಿನಾದ್ಯಂತ ಇರುವ ತುಳು ಸಿನಿಮಾ ಪ್ರೇಕ್ಷಕರಿಗೆ ವೀಕ್ಷಿಸಲು ಅವಕಾಶ ಕಲ್ಪಿಸಲು ಚಿತ್ರ ತಂಡ ನಿರ್ಧರಿಸಿದೆ.

ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ, ನಾಳೆ  ಅಂದರೆ ಮಾರ್ಚ್ 6 ರಂದು ಧರ್ಮ ಚಾವಡಿ ಸಿನಿಮಾ ಟಾಕೀಸ್ ಆ್ಯಪ್ ಒಟಿಟಿ ಮೂಲಕ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಮುಂಬಯಿಯಲ್ಲಿ ಧರ್ಮ ಚಾವಡಿ ಚಿತ್ರದ ಯಶಸ್ವೀ 14 ಶೋ ನೀಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ನೆರೆಯ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮತ್ತು ಕಾಸರಗೋಡಿನಲ್ಲಿಯೂ ಚಿತ್ರ ಯಶಸ್ವೀ  ಪ್ರದರ್ಶನ ಕಂಡಿದೆ.

ಮುಂದಿನ ದಿನಗಳಲ್ಲಿ ಈ ಸಿನಿಮಾವನ್ನು ಕನ್ನಡದಲ್ಲಿ ಡಬ್ ಮಾಡಿ ಕರ್ನಾಟಕದ ಇತರ ಭಾಗಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ವಿವರಿಸಿದರು. ಸುದ್ದಿಗೋಷ್ಟಿಯಲ್ಲಿ ನಟ ರಮೇಶ್ ರೈ ಕುಕ್ಕುವಳ್ಳಿ, ನಟಿ ನೇಹಾ ಕೋಟ್ಯಾನ್, ಟಾಕೀಸ್ ಆ್ಯಪ್ ಒಟಿಟಿ ಇದರ ಅಡ್ಮಿನ್ ಎಕ್ಸಿಕ್ಯೂಟಿವ್ ಚಿದಾನಂದ್ ಪೈ ಮತ್ತು ಇತರರು ಉಪಸ್ಥಿತರಿದ್ದರು.

Continue Reading

DAKSHINA KANNADA

ಸ್ಟೇಟ್ ಬ್ಯಾಂಕ್ ಮೀನು ಮಾರ್ಕೆಟ್ ಅವ್ಯವಸ್ಥೆ-ಅಸಮಾಧಾನ ವ್ಯಕ್ತಪಡಿಸಿದ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ

Published

on

ಮಂಗಳೂರು: ನಗರದ ಕೇಂದ್ರ ಭಾಗವಾದ ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಮಧ್ಯಾಹ್ನ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಹಸಿ ಹಾಗೂ ಒಣಮೀನು ಮಾರುಕಟ್ಟೆಯ ಪ್ರತಿ ಮೂಲೆಗೂ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳನ್ನು ಕಣ್ಣಾರೆ ಕಂಡು ಅಸಮಾಧಾನ ವ್ಯಕ್ತಪಡಿಸಿದರು. ದಶಕಗಳಿಂದ ಮೀನು ಮಾರಾಟ ಮಾಡುತ್ತ ಜೀವನ ಸಾಗಿಸುತ್ತಿರುವ ನೂರಾರು ಮಹಿಳೆಯರು ತಮ್ಮ ಸಮಸ್ಯೆಗಳನ್ನು  ಅವರ  ಮುಂದೆ ಹಂಚಿಕೊಂಡರು.

ಪರಿಶೀಲನೆಯ ಬಳಿಕ ಮಾತನಾಡಿದ ಡಾ. ನಾಗಲಕ್ಷ್ಮಿ ಚೌಧರಿ , ಮಾರುಕಟ್ಟೆಯಲ್ಲಿ ಸಮರ್ಪಕ ನೈರ್ಮಲ್ಯದ ಕೊರತೆಯಿಂದ ದುರ್ವಾಸನೆ ವ್ಯಾಪಿಸಿದ್ದು, ದಿನವಿಡೀ ಕೆಲಸ ಮಾಡುವ ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ತಿಳಿಸಿದರು. ಮಾರುಕಟ್ಟೆ ಸ್ವಚ್ಛತೆಗೆ ಅಗತ್ಯವಾದ ನೀರಿನ ಸೌಲಭ್ಯವಿಲ್ಲದೆ ಇರುವುದೂ ಸಮಸ್ಯೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ವ್ಯಾಪಾರಕ್ಕೆ ತಕ್ಕಷ್ಟು ಸ್ಥಳಾವಕಾಶದ ಕೊರತೆ ಹಾಗೂ ಭದ್ರತಾ ವ್ಯವಸ್ಥೆಯ ಅಭಾವದಿಂದ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದಾಗಿ ಮಹಿಳೆಯರು ದೂರಿದರು. ಈ ಎಲ್ಲ ವಿಚಾರಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಿದ್ದೇನೆ. ಮೀನುಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ನೂತನ ಮಾರುಕಟ್ಟೆಯಲ್ಲಿ ಅಗತ್ಯವಿರುವ ವೈಜ್ಞಾನಿಕ ಬದಲಾವಣೆಗಳನ್ನು ಮಾಡಿಸುವಂತೆ ಒತ್ತಾಯಿಸುತ್ತೇನೆ. ಮೀನು ಮಾರಾಟಗಾರ ಮಹಿಳೆಯರ ಹಿತಾಸಕ್ತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ,” ಎಂದು ಡಾ. ನಾಗಲಕ್ಷ್ಮಿ ಚೌಧರಿ ಭರವಸೆ ನೀಡಿದರು.

 

 

 

 

Continue Reading

DAKSHINA KANNADA

ಭಾ.ಜ.ಪ ಜಿಲ್ಲಾ ಓಬಿಸಿ ಮೋರ್ಚಾ ಸಮಿತಿ : ಉಪಾಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ಆಯ್ಕೆ

Published

on

ಬಂಟ್ವಾಳ:  ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಓಬಿಸಿ ಮೋರ್ಚಾ ಸಮಿತಿ ಉಪಾಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ಆಯ್ಕೆಯಾಗಿದ್ದಾರೆ.

ಪುರುಷೋತ್ತಮ ಸಾಲ್ಯಾನ್  ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ : ಶಂಭೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ : ಪುರುಷೋತ್ತಮ ಸಾಲ್ಯಾನ್ ಅಧ್ಯಕ್ಷರಾಗಿ ಪುನರಾಯ್ಕೆ

ಅಷ್ಟೇ ಅಲ್ಲದೆ, ಧಾರ್ಮಿಕ ಹಾಗೂ ವಿವಿಧ ಸಾಮಾಜಿಕ ಕ್ಷೇತ್ರದಲ್ಲಿಯೂ ಮುಂಚೂಣಿಯಲ್ಲಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page