Connect with us

DAKSHINA KANNADA

ಮಂಗಳೂರು ಕಂಬಳ: ಮಿಜಾರು ಶ್ರೀನಿವಾಸ ಗೌಡರ ದಾಖಲೆ ಮುರಿದ ಮಾಸ್ತಿಕಟ್ಟೆ ಸ್ವರೂಪ್!

Published

on

ಮಂಗಳೂರು: 9ನೇ ವರ್ಷದಲ್ಲಿ ನಡೆದ ರಾಮ ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳದಲ್ಲಿ ಈ ಬಾರಿ ಹೊಸ ದಾಖಲೆಯೊಂದು ಸೃಷ್ಟಿಯಾಗಿದೆ.
ಕಳೆದ ನಾಲ್ಕು ವರ್ಷಗಳ ಹಿಂದೆ ಇದ್ದ ಕಂಬಳದ ಅತಿ ವೇಗದ ಓಟದ ದಾಖಲೆ ಈಗ ಪತನವಾಗಿದ್ದು, ಮಂಗಳೂರು ರಾಮ ಲಕ್ಷ್ಮಣ ಜೋಡುಕರೆ ಕಂಬಳದ ನೇಗಿಲು ಹಿರಿಯ ವಿಭಾಗದ ಫೈನಲ್ ಸ್ಪರ್ಧೆಯಲ್ಲಿ 80 ಬಡಗಬೆಟ್ಟು ಶ್ರೀಕ ಸಂದೀಪ್ ಶೆಟ್ಟಿ ಅವರ ಕೋಣಗಳು ಹೊಸ ದಾಖಲೆ ಮಾಡಿವೆ.

ಮಂಗಳೂರು ಕಂಬಳದ ಕೊನೆಯ ಸ್ಪರ್ಧೆಯಲ್ಲಿ ಬಡಗಬೆಟ್ಟಿನ ಕಂಬಳ ಕೋಣಗಳು 125 ಮೀಟರ್ ಕರೆಯನ್ನು ಕೇವಲ 10.87 ಸೆಕೆಂಡ್ ಗಳಲ್ಲಿ ತಲುಪಿ ನೂತನ ದಾಖಲೆ ಬರೆದವು. ಅಂದರೆ 100 ಮೀಟರ್ ಓಟವನ್ನು 8.69 ಸೆಕೆಂಡ್ ಗಳಲ್ಲಿ ಓಡಿದವು. 80 ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ ಅವರ ಯಜಮಾನಿಕೆಯಲ್ಲಿ ಗಾಂಧಿ ಮೈದಾನ ಸಂತು ಮತ್ತು ಸುರತ್ಕಲ್ ಪಾಂಚ ಎಂಬ ಎರಡು ಕೋಣಗಳು ಈ ದಾಖಲೆ ಮಾಡಿದೆ. ಮಾಸ್ತಿಕಟ್ಟೆ ಸ್ವರೂಪ್ ಅವರು ಈ ಕೋಣಗಳನ್ನು ಓಡಿಸಿ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದೇ ಕಂಬಳದ ಸೆಮಿ ಫೈನಲ್ ರೇಸ್ ನಲ್ಲಿ ಇದೇ ನಂತು ಮತ್ತು ಪಾಂಚ ಕೋಣಗಳು 125 ಮೀಟರನ್ನು 11.06 ಸೆಕೆಂಡ್ ನಲ್ಲಿ ಕ್ರಮಿಸಿ ಈ ಸೀಸನ್ ನ ಅತಿ ವೇಗದ ಓಟ ಎಂಬ ದಾಖಲೆ ಬರೆದಿದ್ದವು. ಆದರೆ ಅದರ ಮುಂದಿನ ಓಟದಲ್ಲೇ ಎಲ್ಲಾ ದಾಖಲೆಗಳನ್ನು ಮೀರಿ ಹೊಸ ಕಂಬಳ ಸಾಧನೆ ಮಾಡಿದರು.

ಇದನ್ನೂ ಓದಿ: ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆಫ್ಟಿನೆಂಟ್ ಸಂಜಯ್ ಕುಮಾರ್ ಪುತ್ತೂರಿಗೆ ಆಗಮನ

ಈ ಹಿಂದೆ 2021ರ ಕಕ್ಯಪದವು ಕಂಬಳದಲ್ಲಿ ಈ ಹಿಂದಿನ ದಾಖಲೆ ನಿರ್ಮಾಣವಾಗಿತ್ತು. ಆಗ ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಅವರ ಕೋಣಗಳು 125 ಮೀಟರ್ ಓಟವನ್ನು 10.95 ಸೆಕೆಂಡ್ ಗಳಲ್ಲಿ 100 ಮೀಟರ್ ಗೆ 8.76 ಸೆಕೆಂಡ್‌ಗಳಲ್ಲಿ ಕ್ರಮಿಸಿ ದಾಖಲೆ ಬರೆದಿದ್ದವು. ಮಾಳ ಪುಟ್ಟ ಮತ್ತು ಮಿಜಾರ್ ಅಪ್ಪು ಕೋಣಗಳನ್ನು ಅಂದು ಓಡಿಸಿದ್ದ ಮಿಜಾರು ಶ್ರೀನಿವಾಸ ಗೌಡ ಅವರು ದಾಖಲೆ ಬರೆದಿದ್ದರು. ಈ ದಾಖಲೆ ಈಗ ಪತನವಾಗಿದೆ.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

DAKSHINA KANNADA

ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

Published

on

ಬೆಳ್ತಂಗಡಿ : ಅಜ್ಜಿಯ ತಿಥಿಗೆ ಆಮೆಯನ್ನು ಸಾರು ಮಾಡಿ ಬಡಿಸಲು ನದಿಯಲ್ಲಿ ಅ*ಕ್ರಮವಾಗಿ ಆಮೆಗಳನ್ನು ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದ ನಾಲ್ವರನ್ನು  ಆಮೆಗಳ ಸಹಿತ ಬೆಳ್ತಂಗಡಿ ಠಾಣೆಯ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ಪೆರ್ಡಾಲ ನೀರ್ಚಾಲಿನ ನಿವಾಸಿ ಮಣಿಕಂಠ(42), ಮಂಗಳೂರು ಮೂಲ್ಕಿ ತಾಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ(54), ಮೂಡಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಮಕ್ಕಿ ನಿವಾಸಿ ವಿಘ್ನೇಶ್(32), ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ನಿವಾಸಿ ಪ್ರಶಾಂತ್(35)  ಬಂಧಿತರು.

ದಾ*ಳಿ ವೇಳೆ ಆರೋಪಿಗಳಿಂದ ನಾಲ್ಕು ಸುಟ್ಟ ಆಮೆಯನ್ನು ಜಪ್ತಿ ಮಾಡಿ ಮುಂದಿನ ತನಿಖೆಗಾಗಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಇದನ್ನೂ ಓದಿ : ಕೋಟ : ಗೂಗಲ್ ಮ್ಯಾಪ್ ಎಡವಟ್ಟು; ಕೊಲ್ಲೂರಿಗೆ ಹೊರಟವರು ತಲುಪಿದ್ದೆಲ್ಲಿಗೆ ಗೊತ್ತಾ?

ಫೆ.13 ರಂದು ಆರೋಪಿಗಳು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಂಟಿನಿ ನಿವಾಸಿ, ದೇವಮ್ಮ ಎಂಬವರ ಉತ್ತರಕ್ರಿಯೆ ಕಾರ್ಯಕ್ರಮಕ್ಕಾಗಿ ಆಗಮಿಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇವರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

Continue Reading

DAKSHINA KANNADA

ಪುತ್ತೂರು : ಹೃದಯಾಘಾತದಿಂದ ವ್ಯಕ್ತಿ ಸಾ*ವು

Published

on

ಪುತ್ತೂರು : ಹೃದಯಾ*ಘಾತಕ್ಕೆ ವ್ಯಕ್ತಿ ಬ*ಲಿಯಾಗಿರುವ ಘಟನೆ ಪುತ್ತೂರಿನ ಶಾಂತಿಗೋಡಿನಲ್ಲಿ ನಡೆದಿದೆ. 48 ವರ್ಷದ ರವಿ ಕುಮಾರ್ ಕಲ್ಕಾರ್ ಮೃ*ತ ವ್ಯಕ್ತಿ.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವೇಳೆ  ರವಿ  ಕುಸಿದು ಬಿ*ದ್ದಿದ್ದರು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯು*ಸಿರೆಳೆದಿದ್ದಾರೆಂದು ತಿಳಿದು ಬಂದಿದೆ.

ಇದನ್ನೂ ಓದಿ : ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ರವಿ ಕಲ್ಕಾರ್  ವಿದೇಶದಲ್ಲಿ ಹಲವಾರು ವರ್ಷ ದುಡಿದು ಬಳಿಕ ಶಾಂತಿಗೋಡು ಕಲ್ಕಾರ್ ಎಂಬಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದರು. ಪುತ್ತೂರು ತಾಲೂಕು ಬಿಲ್ಲವ ಸಂಘದ ವಿದ್ಯಾನಿಧಿ ಸಂಚಾಲಕರಾಗಿ, ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಯುವವಾಹಿನಿ ಪುತ್ತೂರು ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ, ಕೂಡುರಸ್ತೆ ಮುಂಡೋಡಿ ನವಶಕ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಹೀಗೆ ಹಲವು ಸಂಘಟನೆಗಳಲ್ಲಿ ರವಿ ಕಲ್ಕಾರ್  ಗುರುತಿಸಿಕೊಂಡಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page