Connect with us

ಕೊರೆನೋ ಭೀತಿ ಹಿನ್ನಲೆ: ದೇವರ ಮೊರೆ ಹೋದ ಶಾಸಕ ವೇದವ್ಯಾಸ್ ಕಾಮತ್

Published

on

ಕೊರೆನೋ ಭೀತಿ ಹಿನ್ನಲೆ: ದೇವರ ಮೊರೆ ಹೋದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ಜಗತ್ತನ್ನು ಕಾಡುತ್ತಿರುವ ಮಹಾ ಮಾರಿ ಕೊರೋನಾ ಭೀತಿ ನಿವಾರಣೆಗಾಗಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಜಗತ್ತನ್ನು ಕಾಡುತ್ತಿರುವ ಕೊರೆನೋ ಮಹಾಮಾರಿ ಭಾರತದ ವಿವಿಧ ಕಡೆಗಳಲ್ಲಿ ಹಬ್ಬುತ್ತಿರುವುದು ಆತಂಕ ಉಂಟಾಗಿದೆ. ಇತ್ತೀಚೆಗೆ ಕಲಬುರ್ಗಯಲ್ಲಿ ಕೊರೆನೋ ಸೋಂಕಿನಿಂದ ಒಬ್ಬ ಮೃತಪಟ್ಟಿರುವುದೂ ಕೂಡ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದರು.

ದೇಶದಲ್ಲಿ ಉಂಟಾಗಿರುವ ಕೊರೆನೋ ಭೀತಿ ದೂರವಾಗುವ ನಿಟ್ಟಿನಲ್ಲಿ ಮಂಗಳೂರಿನ ಎಲ್ಲಾ ದೇವಸ್ಥಾನ,ದೈವಸ್ಥಾನ, ಮಠ- ಮಂದಿರ,ಚರ್ಚ್, ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಆಡಳಿತ ಮಂಡಳಿ ಹಾಗೂ ನಾಗರಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಇಂದು ರಥಬೀದಿ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಲಿದೆ. ಹಾಗೂ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಶಾಸಕರು ಮನವಿ ಮಾಡಿಕೊಂಡಿದ್ದಾರೆ.

ಈ ಸಂಧರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಪ್ರೇಮಾನಂದ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶಕಿಲಾ ಕಾವಾ, ಮನೋಹರ್ ಶೆಟ್ಟಿ, ಬಿಜೆಪಿ ಮುಖಂಡರು ಹಾಗೂ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading

DAKSHINA KANNADA

ಪಡೀಲ್ : ಬೈಕ್‌ಗೆ ಗೂಡ್ಸ್ ಟೆಂಪೋ ಡಿ*ಕ್ಕಿ; ಸವಾರ ಸಾ*ವು

Published

on

ಮಂಗಳೂರು : ಗೂಡ್ಸ್‌ ಟೆಂಪೋವೊಂದು ಬೈಕ್‌ಗೆ ಡಿ*ಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಪಡೀಲ್ ಸಮೀಪ ಸಂಭವಿಸಿದೆ. ಸಚ್ಚೇರಿಪೇಟೆಯ ಕುದ್ರೋಟ್ ನಿವಾಸಿ, ಸಜೇಶ್ ಪೂಜಾರಿ ಮೃ*ತ ದುರ್ದೈವಿ.

ಐದು ತಿಂಗಳ ಹಿಂದೆಯಷ್ಟೇ ಹೊಸ ಮನೆ ಕಟ್ಟಿದ್ದ ಸಜೇಶ್ :

ಸಜೇಶ್, ಮಂಗಳೂರಿನ  ಶೋರೂಮ್‌ ಒಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ತನ್ನ ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಪಡೀಲ್ ಸಮೀಪ ತಿರುವಿನಲ್ಲಿ ಟೆಂಪೋ ಡಿ*ಕ್ಕಿ ಹೊಡೆದಿದ್ದು, ಬೈಕ್ ಸಮೇತ ರಸ್ತೆಗೆ ಬಿದ್ದ ಸಜೇಶ್  ಗಂ*ಭೀರವಾಗಿ ಗಾ*ಯಗೊಂಡಿದ್ದ ಸಜೇಶ್ ಕೊನೆಯು*ಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಬಾಲನಟನಾಗಿ ಖ್ಯಾತಿ ಗಳಿಸಿದ್ದ ಹರಿಮುರಳಿ ಶ*ವವಾಗಿ ಪತ್ತೆ

ಸಜೇಶ್‌  ಸಣ್ಣ ವಯಸ್ಸಿನಲ್ಲೇ ತಂದೆ ತಾಯಿಯನ್ನು ಕಳೆದುಕೊಂಡಿದ್ದರು. ಐದು ತಿಂಗಳ ಹಿಂದೆಯಷ್ಟೇ ಹೊಸ ಮನೆಯೊಂದನ್ನು ಕಟ್ಟಿ ಒಬ್ಬರೇ ವಾಸಿಸುತ್ತಿದ್ದ ಎನ್ನಲಾಗಿದೆ.

Continue Reading

FILM

ಬಾಲನಟನಾಗಿ ಖ್ಯಾತಿ ಗಳಿಸಿದ್ದ ಹರಿಮುರಳಿ ಶ*ವವಾಗಿ ಪತ್ತೆ

Published

on

ಮಂಗಳೂರು/ಕೇರಳ : ಮಲಯಾಳಂ ಚಿತ್ರರಂಗದಲ್ಲಿ ಬಾಲನಟನಾಗಿ ಖ್ಯಾತಿ ಗಳಿಸಿದ್ದ ಹರಿಮುರಳಿ ತನ್ನ ಮನೆಯಲ್ಲಿ ಶ*ವವಾಗಿ ಪತ್ತೆಯಾಗಿದ್ದಾರೆ. ಅವರಿಗೆ 27 ವರ್ಷ ವಯಸ್ಸಾಗಿತ್ತು. ಕೇರಳದ ಪಯ್ಯನ್ನೂರಿನ ನಿವಾಸದಲ್ಲಿ ಹರಿಮುರಳಿ ಶ*ವ ಪತ್ತೆಯಾಗಿದೆ.

ಸಾ*ವಿಗೆ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬಾಲನಟನಾಗಿ ಖ್ಯಾತಿ : 

ಹರಿಮುರಳಿ, 2004 ರಲ್ಲಿ  ಲಾಲ್ ಜೋಸ್ ನಿರ್ದೇಶನದ ಹಾಗೂ ದಿಲೀಪ್ ಅಭಿನಯದ ಮಲಯಾಳಂ ಚಿತ್ರ ರಸಿಕನ್’ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಬಳಿಕ  ಅಣ್ಣನ್ ತಂಬಿ, ಮದಂಪಿ, ಡಾನ್ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲ ನಟನಾಗಿ ಅಭಿನಯಿಸಿ ಖ್ಯಾತರಾಗಿದ್ದರು.

ಇದನ್ನೂ ಓದಿ : ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಕೊನೆಗೊಳಿಸಿದ ‘ಬಿಂದಾಸ್‌’ ನಟಿ

ಬಳಿಕ  ಶಿಕ್ಷಣವನ್ನು ಮುಂದುವರಿಸುವ ಸಲುವಾಗಿ ಕೆಲವು ವರ್ಷ ನಟನೆಯಿಂದ ದೂರ ಉಳಿದಿದ್ದರು. ನಂತರ ಪೃಥ್ವಿರಾಜ್, ಸುಕುಮಾರನ್ ಅಭಿನಯದ ಅಮರ್ ಅಕ್ಬರ್ ಆ್ಯಂಟನಿ ಚಿತ್ರದಲ್ಲಿ ಕಿರಿಯ ಸಹೋದರನ ಪಾತ್ರದ ಮೂಲಕ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ್ದರು. ಅಲ್ಲದೇ, ಹರಿಮುರಳಿ ವಿಎಫ್ ಎಕ್ಸ್ ಆರ್ಟಿಸ್ಟ್ ಆಗಿಯೂ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page