Connect with us

DAKSHINA KANNADA

ಮಂಗಳೂರು ವಿ.ವಿ ಪದವಿ ಪರೀಕ್ಷಾ ಫಲಿತಾಂಶ ವಿಳಂಬ: ಸಿಂಡಿಕೇಟ್ ಸಭೆಗೆ ನುಗ್ಗಿದ ABVP ಕಾರ್ಯಕರ್ತರು-ಪರಿಸ್ಥಿತಿ ಕಂಟ್ರೋಲ್‌ ತರಲು ಪೊಲೀಸರು ಸುಸ್ತೋ ಸುಸ್ತು…

Published

on

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ವಿಳಂಬ ಪ್ರಶ್ನಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಇಂದು ಏಕಾಏಕಿ ಪ್ರತಿಭಟನೆ ನಡೆಯಿತು.

ವಿವಿ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಕೊಣಾಜೆಯ ಮಂಗಳೂರು ವಿ ವಿ ಯ ಆಡಳಿತ ಸೌಧಕ್ಕೆ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಸುಮಾರು 500ರಷ್ಟಿದ್ದ ಎಬಿವಿಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು.

ಮಂಗಳೂರು ವಿ.ವಿ ಆಡಳಿತ ಸೌಧದ ಆವರಣಕ್ಕೆ ಬಂದಾಗ ಪೊಲೀಸರ ಅವರಿಗೆ ತಡೆಯೊಡ್ಡಿದರು. ಈ ವೇಳೆ ಎಬಿವಿಪಿ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತಳ್ಳಿ ನುಗ್ಗಲು ಯತ್ನಿಸಿದ್ದಾರೆ.

ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದೆ. ಅಷ್ಟು ಹೊತ್ತಿಗೆ ವಿ.ವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಲ್ ಧರ್ಮ ಮತ್ತು ಕುಲಪತಿ ಪಿ.ಎಸ್ ಯಡಪಡಿತ್ತಾಯ ಆಗಮಿಸಿ ಚರ್ಚಿಸಿದರು.

ವಿ.ವಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವ ವಿವಿ ಕ್ರಮಕ್ಕೆ ಕಾರ್ಯಕರ್ತರು ಖಂಡಿಸಿದರು. ಅಂಕಪಟ್ಟಿ ಬಾರದೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲಾಗದೇ ಸಮಸ್ಯೆ ಎದುರಿಸುವಂತಾಗಿದೆ ಎಂದು ವಿದ್ಯಾರ್ಥಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

BANTWAL

2028ಕ್ಕೆ ರಮಾನಾಥ ರೈ ಅಭ್ಯರ್ಥಿ: ನಾವೂರು ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Published

on

ಬಂಟ್ವಾಳ: 2028ಕ್ಕೂ ನಾವೇ ಅಧಿಕಾರಕ್ಕೆ ಬಂದೇ ಬರ್ತೀವಿ. ನಾವು ಅಧಿಕಾರದಲ್ಲಿದ್ದಾಗ ಕಂಬಳಕ್ಕೆ ಏನು ಪ್ರೋತ್ಸಾಹ ನೀಡಬೇಕೋ ಅದಕ್ಕೆ ಪ್ರೋತ್ಸಾಹ ನೀಡುತ್ತೇವೆ. ಕಂಬಳಕ್ಕೆ ಹಣಕಾಸಿನ ನೆರವನ್ನೂ ಕೊಡ್ತೇವೆ, ರಮಾನಾಥ ರೈ ಅವರನ್ನು ಸೋಲಿಸಿದ್ದು ಬೇಸರ ತಂದಿದೆ, ಮುಂದಿನ ಚುನಾವಣೆಯಲ್ಲಿ ಅವರೇ ಅಭ್ಯರ್ಥಿಯಾಗ್ತಾರೆ, ಅವರನ್ನು ಮತ್ತೆ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಟ್ವಾಳದ ನಾವೂರು ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ನಡೆದ ಮುಡೂರು ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಮಾನಾಥ ರೈ ಅವರು ತಮ್ಮ ಶಾಸಕ,ಸಚಿವರಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಜನರು ಸೋಲಿಸಿರುವುದು ನೋವಿನ ಸಂಗತಿಯಾಗಿದೆ. ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ ಎಂದರು

ಬೆಂಜನಪದವು ಕ್ರೀಡಾಂಗಣ
ಬೆಂಜನಪದವಿನಲ್ಲಿ ಹತ್ತು ಕೋಟಿ ರೂ ಮಂಜೂರಾಗಿತ್ತು, ಅದನ್ನು ಅನುಷ್ಠಾನ ಮಾಡಲು ಸಾಧ್ಯವಾಗಿಲ್ಲ. ಮತ್ತೊಮ್ಮೆ ಕ್ರೀಡಾಂಗಣ ನಿರ್ಮಾಣಕ್ಕೆ ನನಗೆ ಅವಕಾಶವನ್ನು ಮಾಡಿಕೊಡಬೇಕು ಎಂದು ಪ್ರಾಸ್ರಾವಿಕವಾಗಿ ಮಾತನಾಡಿದ ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ರಮಾನಾಥ ರೈ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ಈ ಬಾರಿ ಕ್ರೀಡಾಂಗಣ ನಿರ್ಮಾಣಕ್ಕೆ ನೆರವು ನೀಡುವುದಾಗಿ ಹೇಳಿದರು.

ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ.ಸಂತೋಷ್ ಗುರೂಜಿ, ಎಂ ಎಲ್ ಸಿ ಸಲೀಮ್ ಆಹ್ಮದ್, ಐವಾನ್ ಡಿಸೋಜ, ಶಾಸಕರುಗಳಾದ ಅಶೋಕ್ ಕುಮಾರ್ ರೈ ,ಟಿ.ಡಿ.ರಾಜೇಗೌಡ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿವಿಧ ನಿಗಮದ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್,ಟಿ.ಎಮ್ ಶಹೀದ್ ತೆಕ್ಕಿಲ್, ಮಮತಾ ಡಿ.ಎಸ್. ಗಟ್ಟಿ,ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಸಹಿತ ಪ್ರಮುಖರು ಹಾಜರಿದ್ದರು. ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಸ್ವಾಗತಿಸಿದರು.

WATCH VIDEO:

Continue Reading

DAKSHINA KANNADA

ಬಜೆಟ್ ನಲ್ಲಿ ದ.ಕ ಜಿಲ್ಲೆ ಸಹಿತ ಕರಾವಳಿ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ, ಇದು ಅಮಲುಪ್ರೇರಿತ ಸರ್ಕಾರ-ಸತೀಶ್ ಕುಂಪಲ

Published

on

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಪ್ರದೇಶವನ್ನು ಕಡೆಗಣಿಸಿದ್ದಾರೆ. ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಾತ್ರ ಗಮನ ಹರಿಸಿದ್ದಾರೆಯೇ ಹೊರತು ಅಭಿವೃದ್ಧಿ ಕೆಲಸಗಳಿಗೆ ಅನುದಾನ ಒದಗಿಸಿಲ್ಲ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.

ಶನಿವಾರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ಕರಾವಳಿಯ ಜನರು ಈ ಬಜೆಟ್ ಬಗ್ಗೆ ಬಹಳಷ್ಟು ನಿರೀಕ್ಷೆಗಳನ್ನು ಹೊಂದಿದ್ದರು. ಈ ಭಾಗದ ಶಾಸಕರು ವಿಧಾನ ಮಂಡಲದ ಅಧಿವೇಶನಗಳಲ್ಲಿ ಹಲವು ಪ್ರಸ್ತಾಪಗಳನ್ನು ಮುಂದಿಟ್ಟಿದ್ದರು. ಆದರೆ ಯಾವುದಕ್ಕೂ ಅನುದಾನ ಒದಗಿಸಿಲ್ಲ ಎಂದರು. ಅಲ್ಪ ಸಂಖ್ಯಾತ ಸಮುದಾಯಗಳನ್ನು ಅದರಲ್ಲೂ ಮುಖ್ಯವಾಗಿ ಮುಸ್ಲಿಮರನ್ನು ಓಲೈಸುವ ವೋಟ್ ಬ್ಯಾಂಕ್ ಬಜೆಟ್ ಇದಾಗಿದೆ.

ಸಾಲ ಮಾಡುವ ಕೆಲಸವನ್ನು ಮಾತ್ರ ಮಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದ ಸಾಲದ ಮೊತ್ತ 5 ಲಕ್ಷ ಕೋಟಿ ರೂಪಾಯಿಗೆ ಏರಿದೆ.  2013 ರಲ್ಲಿ ಸಿದ್ದರಾಮಯ್ಯ ಮುಖ್ಯ ಮಂತ್ರಿ ಆಗಿದ್ದ ಸಂದರ್ಭದಲ್ಲಿ ಸಾಲದ ಮೊತ್ತ 1.23 ಲಕ್ಷ ಕೋಟಿ ರೂಪಾಯಿ ಇತ್ತು. ಅಂದಿನಿಂದ ಸಾಲವನ್ನೇ ಮಾಡುತ್ತಾ ಬಂದಿದ್ದಾರೆ ಎಂದು ಟೀಕಿಸಿದರು.  ಹಾಲು ಉತ್ಪಾದಕರ ಪ್ರೋತ್ಸಾಹ ಧನ 9 ತಿಂಗಳುಗಳಿಂದ ಪಾವತಿಯಾಗಿಲ್ಲ.

ಸುಮಾರು 900 ಕೋಟಿ ರೂ. ಬಾಕಿ ಇದೆ. ವಿವಿಧ ನಿಗಮಗಳಿಗೆ ಅನುದಾನ ಕಡಿಮೆ ಮಾಡಿದೆ. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಮತ್ತು ವರ್ಗದವರ ನಿಗಮಗಳಿಗೆ ಅನುದಾನ ಕಡಿಮೆ ಮಾಡುವ ಮೂಲಕ ಅನ್ಯಾಯ ಎಸಗಿದೆ. ಇದೊಂದು ಅಮಲು ಪ್ರೇರಿತ ಸರಕಾರ. ಕಂಬಳ ಕ್ರೀಡೆಗೆ ಅನುದಾನ ಒದಗಿಸಿಲ್ಲ. ದ.ಕ. ಉಡುಪಿ ಜಿಲ್ಲೆಯಲ್ಲಿ ಐಟಿ ಉದ್ಯಮಕ್ಕೆ ಅನುದಾನ ನೀಡಿಲ್ಲ. ಮೀನುಗಾರಿಕೆಗೆ ಯಾವುದೇ ಹೊಸ ಯೋಜನೆ ಇಲ್ಲ. ಕಡಲ ಕೊರೆತ ಸಮಸ್ಯೆಗೆ ಪರಿಹಾರ ಇಲ್ಲ. ಅಭಿವೃದ್ಧಿಗೆ ಮಾರಕವಾದ ಬಜೆಟ್ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕೊಟ್ಟಾರಿ , ಬಿಜೆಪಿ ಮುಖಂಡ ನಿತಿನ್ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

 

Continue Reading

DAKSHINA KANNADA

ಬಿಜೆಪಿ ಮಾಡಿದ ಕೆಲಸಗಳಿಗೆ ಕಾಂಗ್ರೆಸ್‌ ಕ್ರೆಡಿಟ್ ಪಡೆದುಕೊಳ್ತಿರೋದು ನಾಚಿಕೇಡು-ಶಾಸಕ ಕಾಮತ್ ಗರಂ

Published

on

ಮಂಗಳೂರು:  ದಕ್ಷಿಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಸಮಸ್ಯೆ ಇರುವ ಕಡೆಗಳಲ್ಲಿ ಅನುದಾನ ಮಂಜೂರು ಆಗಿದೆ ಎಂದು 28 ಜಾಗಗಳಿಗೆ ತೆರಳಿ ಕಾಮಗಾರಿಗೆ ಅನುದಾನ ನೀಡಲಾಗಿದೆ ಎಂದು ಹೇಳುತ್ತಿರುವ ಕಾಂಗ್ರೆಸ್ ನಾಯಕರು ದಿನನಿತ್ಯ ಪತ್ರಿಕೆಗಳಲ್ಲಿ ಪುಕ್ಕಟೆ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಈ ಮೂಲಕ ಅವರು ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನಿರಂತರವಾಗಿ ಒತ್ತಡ ಹೇರಿದ ಫಲವಾಗಿ ಪ್ರಕೃತಿ ವಿಕೋಪದಡಿ ಹಲವು ಕಡೆಗಳಲ್ಲಿ ಕಾಮಗಾರಿ ಮಾಡಲು ಅನುದಾನ ಮಂಜೂರು ಮಾಡಲಾಗಿದೆ. ಆದರೆ ಒಂದು ರೂಪಾಯಿ ಕೆಲಸ ಮಾಡದೆ ಅದರ ಕ್ರೆಡಿಟ್‌ ಅನ್ನು ಕಾಂಗ್ರೆಸ್ಸಿಗರು ಪಡೆಯುತ್ತಿದ್ದಾರೆ ಎಂದು ದೂರಿದರು.

ಸರಕಾರಕ್ಕೆ ಅದರದ್ದೇ ಆದ ನಿಯಮಗಳಿವೆ. ಅದನ್ನು ಮೀರಿ ಯಾರೂ ಹೋಗಬಾರದು. ಆದರೆ ವೇದವ್ಯಾಸ್ ಕಾಮತ್‌ ಪ್ರಯತ್ನ ಪಟ್ಟು ಈ ಬಗ್ಗೆ ಅಧಿವೇಶನದಲ್ಲಿ ಮಾತನಾಡಿ ಕಷ್ಟಪಟ್ಟು  ತಂದಿರುವ ಅನುದಾನದ ವಿಚಾರಗಳನ್ನು ತಮ್ಮದೆಂದು ಬಿಂಬಿಸುವುದನ್ನು ಖಂಡಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದಿಂದ ಯಾವುದೇ ಅನುದಾನವನ್ನು ತರಲಾಗದೆ ಹತಾಶರಾಗಿ ಕಾಂಗ್ರೆಸ್ ನಾಯಕರು  ಇದು ನಾನೇ ತಂದ್ದು ಎಂದು ಫೋಟೋ ಕ್ಲಿಕ್ಕಿಸಿ ಪತ್ರಿಕೆಗೆ ನೀಡೋದು ಸಣ್ಣತನ. ಕಾಂಗ್ರೆಸ್ಸಿಗರ  ಪ್ರಚಾರದ ಭರಾಟೆಯಲ್ಲಿ ನಿಜವಾಗಿಯೂ ಅನ್ಯಾಯವಾಗುತ್ತಿರುವ ಆಶಾ ಕಾರ್ಯಕರ್ತರಿಗೆ ಇವರೇನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ವೇದವ್ಯಾಸ್‌ ಆಶಾ ಕಾರ್ಯಕರ್ತರನ್ನು ಬೀದಿಪಾಲು ಮಾಡುವ ಕೆಲಸ ನಿಲ್ಲಿಸಿ. ಇದನ್ನು ಬಿಜೆಪಿ ಪಕ್ಷ ಒಪ್ಪಲ್ಲ.  ಮುಂದೆ ನಮ್ಮ ಸರ್ಕಾರ ಕೂಡಾ ಬರುತ್ತದೆ. ರಾಜ್ಯಸರ್ಕಾರದ ಆರೋಗ್ಯ ಇಲಾಖೆಯಿಂದ ಅನುದಾನ ತರುವ ಕೆಲಸ ನಾವು ಮಾಡುತ್ತೇವೆ. ಕೇಂದ್ರ ಸರಕಾರದ ಜೊತೆ ಮಾತನಾಡಿ ಅವರ ನೋವಿಗೆ ಬಿಜೆಪಿ ಸ್ಪಂದಿಸುವುದಾಗಿ ನುಡಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page