Connect with us

DAKSHINA KANNADA

ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟದ ಗಾಯಾಳುವಿಗೆ ಆಟೋ-ಚೆಕ್ ಹಸ್ತಾಂತರ..!

Published

on

ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಮತ್ತು 5 ಲಕ್ಷ ರೂಪಾಯಿ ಮೌಲ್ಯದ ಚೆಕ್ ಹಸ್ತಾಂತರಿಸಲಾಯಿತು. 

ಮಂಗಳೂರು : ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಮತ್ತು 5 ಲಕ್ಷ ರೂಪಾಯಿ ಮೌಲ್ಯದ ಚೆಕ್ ಹಸ್ತಾಂತರಿಸಲಾಯಿತು. 

ಈ ವೇಳೆ ಮಾತನಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಕುಕ್ಕರ್ ಬಾಂಬ್ ಸ್ಫೋಟಿಸುವ ಮೂಲಕ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡುವ ಹುನ್ನಾರ ಈಗಾಗಲೇ ಬಯಲಾಗಿದೆ.

ಎನ್‌ಐಎ ಅಧಿಕಾರಿಗಳೇ ಇದನ್ನು ಬಹಿರಂಗ ಪಡಿಸಿದ್ದು, ಕೃತ್ಯದ ಕುರಿತು ಅಪಹಾಸ್ಯ ಮಾಡಿದವರು, ಸ್ಫೋಟ ಮಾಡಿದವರನ್ನು ಅಮಾಯಕರು ಎಂದು ಹೇಳಿದ್ದ ಕಾಂಗ್ರೆಸಿಗರು ಈಗ ಏನು ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.

ಇನ್ನು ವೇಳೆ ಮುಂದುವರಿದ ಮತನಾಡಿದ ಅವರು ಇದೇ ಮತಬ್ಯಾಂಕ್, ತುಷ್ಠೀಕರಣದ ರಾಜಕೀಯವನ್ನು ಬಿಜೆಪಿ ಸಹಿಸುವುದಿಲ್ಲ ಎಂದರು. ಕಳೆದ ವರ್ಷ ನವೆಂಬರ್ 19 ರಂದು ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಸಂಭವಿಸಿತ್ತು.

ಘಟನೆಯಲ್ಲಿ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಸಂದೀಪ್ ಗರೋಡಿ, ಸುಧೀರ್ ಶೆಟ್ಟಿ, ಶರಣ್ ಪಂಪ್‌ವೆಲ್ ಮೊದಲಾದವರು ಉಪಸ್ಥಿತರಿದ್ದರು.

DAKSHINA KANNADA

ಫೆ.14ರಂದು 16ನೇ ವರ್ಷದ ಜಯ-ವಿಜಯ ಜೋಡುಕರೆ ಕಂಬಳ; ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಜಯ-ವಿಜಯ ಜೋಡುಕರೆ ಕಂಬಳ ಸಮಿತಿ (ರಿ) ಜಪ್ಪಿನಮೊಗರು ಮಂಗಳೂರು ಇವರ ನೇತೃತ್ವದಲ್ಲಿ ಮನ್ಕು ತೋಟಗುತ್ತು ಮತ್ತು ನಾಡಾಜೆಗುತ್ತು ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿಯವರ ಸ್ಮರಣಾರ್ಥ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಫೆ.14 ಮತ್ತು 15ರಂದು ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ ನಡೆಯಲಿದೆ.

ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ನಗರದ ಓಷಿಯನ್ ಪರ್ಲ್ ಹೊಟೇಲ್ ನಲ್ಲಿ ನಡೆಯಿತು. ಸುತೇಜ್ ಎಂಟರ್ ಪ್ರೈಸಸ್ ಮುಂಬಯಿ ಇದರ ಎಂಡಿ, ಹಾಗೂ ಕಂಬಳದ ಮಾರ್ಗದರ್ಶಕ ಎಚ್. ಸುಧಾಕರ್ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಮುಂದಾಳತ್ವದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿತು.

ನಂತರ ಈ ಬಗ್ಗೆ ಸುಧಾಕರ್ ಶೆಟ್ಟಿ ಮಾತನಾಡಿ ಜಪ್ಪಿನಮೊಗರುವಿನಲ್ಲಿ ನಡೆಯುತ್ತಿರುವ ಕಂಬಳ ಅತ್ಯಂತ ವಿಶೇಷವಾದದ್ದು. ಯಾಕಂದ್ರೆ ಶಾಸಕ ವೇದವ್ಯಾಸ್ ಕಾಮತ್ ಅವರ ಸಹಕಾರದಿಂದ ವ್ಯವಸ್ಥಿತವಾಗಿ ಈಗ ನಡೆಯುತ್ತಿದೆ. ಕಂಬಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸ್ತಾರೆ. ಕಂಬಳವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: 33ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಗೌರವಾಧ್ಯಕ್ಷ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ ಶ್ರೀ ಅನಂತಪದ್ಮನಾಭ ಅಸ್ರಣ್ಣರ ಆಶೀರ್ವಚನದೊಂದಿಗೆ ವೇದಮೂರ್ತಿ ಬ್ರಹ್ಮ ಶ್ರೀ ವಿಠಲದಾಸ್ ತಂತ್ರಿವರ್ಯರಿಂದ ಕಂಬಳವು ಉದ್ಘಾಟನೆಗೊಳ್ಳಲಿದೆ. ಉದ್ಯಮಿಗಳು ಸೇರಿದಂತೆ ಸಿನಿಮಾ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುತ್ತದೆ. ಕಂಬಳದಲ್ಲಿ 150ಕ್ಕೂ ಹೆಚ್ಚಿನ ಸಂಖ್ಯೆಯ ಕೋಣಗಳು ಭಾಗವಹಿಸಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಯ ವಿಜಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಅನಿಲ್ ಶೆಟ್ಟಿ, ಕಾರ್ಯಾಧ್ಯಕ್ಷೆ ವೀಣಾಮಂಗಳ, ಮತ್ತೋರ್ವ ಕಾರ್ಯಾಧ್ಯಕ್ಷ ಪ್ರವೀಣ್ ಚಂದ್ರ ಆಳ್ವ ತಿರುವೈಲುಗುತ್ತು, ಸಂದೀಪ್ ಶೆಟ್ಟಿ ಎಕ್ಕೂರು ಮತ್ತಿತ್ತರರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕಾಂಗ್ರೆಸ್ ನಲ್ಲಿರುವ ಹಿಂದೂಗಳಿಗೆ ರಾಮ ದೇವರಲ್ಲವೇ: ಕಾಂಗ್ರೆಸ್ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ವಾಗ್ದಾಳಿ

Published

on

ಮಂಗಳೂರು: ರಾಮನ ಹೆಸರಿಟ್ಟರೆ ಕಾಂಗ್ರೆಸಿಗರಿಗೆ ಹೊಟ್ಟೆ ಉರಿ ಏಕೆ? ಕಾಂಗ್ರೆಸ್ ನಲ್ಲಿರುವ ಹಿಂದೂಗಳಿಗೆ ರಾಮ ದೇವರಲ್ಲವೇ ಎಂದು ಶಾಸಕ ವೇದವ್ಯಾಸ ಕಾಮತ್‌ ಕೇಂದ್ರ ಸರಕಾರದ ವಿಬಿ- ಜಿ- ರಾಮ್‌- ಜಿ- ಕಾಯ್ದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌ ನಾಯಕರನ್ನು ಪ್ರಶ್ನಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿ ರಾಮನ ಹೆಸರು ಬಂತು ಎಂದಾಗ ಕಾಂಗ್ರೆಸಿಗರು ಅಲರ್ಜಿ ತರ ಮಾತನಾಡುವುದೇಕೆ? ಮನ್ ರೇಗಾ ಹೆಸರನ್ನು ನರೇಗಾ ಎಂದು ಬದಲಿಸಿದ್ದು ಕಾಂಗ್ರೆಸ್ ಅಲ್ಲವೇ ಎಂದರು.

ವೋಟ್‌ ಬ್ಯಾಂಕಿಗಾಗಿ ಕಾಂಗ್ರೆಸ್‌ ಮಾಡುತ್ತಿರುವ ರಾಜಕಾರಣ ಈಗ ಜನರಿಗೆ ಅರ್ಥವಾಗಿದೆ. ದೇಶದ ಬೆರಳೆಣಿಕೆಯ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಆಡಳಿತವಿದೆ. ಕಾಂಗ್ರೆಸಿಗರಿಗೆ ರಾಮನ ಶಾಪ ಇದೆ, ಇದನ್ನು ಸರಿ ಮಾಡಲು ಮೊದಲು ಕಲಿಯಿರಿ ಎಂದವರು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ದೇವಸ್ಥಾನದ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾಕಬಾರದೆಂಬ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಿದ ಮಾಜಿ ಸಚಿವ ಬಿ ರಮಾನಾಥ ರೈ

ಕಾಂಗ್ರೆಸ್ ನವರಿಗೆ ಮಾಡಲು ಬೇರೆ ಕೆಲಸವಿಲ್ಲ. ರಾಜ್ಯದಲ್ಲಿ ಅವರದೇ ಸರಕಾರವಿದೆ. ಆವರ ಆಡಳಿತ ವೈಫಲ್ಯಗಳನ್ನು ಸರಿಪಡಿಸುವ ಸಾಮರ್ಥ್ಯ ಅವರಿಗಿಲ್ಲ. ಮಂಗಳೂರಿನಲ್ಲಿ ಈ- ಖಾತಾ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಜೈಲಿನ ಜಾಮರ್ ಸಮಸ್ಯೆ ನಿವಾರಣೆ ಮಾಡುವ ಸಾಮರ್ಥ್ಯ ಇಲ್ಲ. ಮೂಡಾ, ತಾಲೂಕು ಕಚೇರಿಗಳು ಸಮಸ್ಯೆಗಳ ಆಗರವಾಗಿವೆ ಎಂದು ಟೀಕಿಸಿದರು.

Continue Reading

DAKSHINA KANNADA

33ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

Published

on

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯುತ್ತಿರುವ 33ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಇಂದು ಬೆಳಿಗ್ಗೆ ಆರಂಭಗೊಂಡಿದೆ.

ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಉದ್ಘಾಟನೆ ನರೆವೇರಿಸಿದರು.

ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ನಗರಸಭೆ ಮುಖ್ಯಾಧಿಕಾರಿ ವಿದ್ಯಾ ಕಾಳೆ, ಪದ್ಮನಾಭ ಶೆಟ್ಟಿ, ಜಯಂತ್ ನಡುಬೈಲು, ಸುಂದರ ಗೌಡ, ಉದ್ಯಮಿ ದಿವ್ಯಾ ಶೆಟ್ಟಿ, ಡಾ ಶರತ್‌ ಶೆಟ್ಟಿ, ಬಾಬು ಶೆಟ್ಟಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಡ್ವೆ ನಂದಿಕೂರು 33ನೇ ವರ್ಷದ “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟ; ಇಲ್ಲಿದೆ ಫಲಿತಾಂಶ

ನೇಗಿಲು ಹಿರಿಯ, ನೇಗಿಲು ಕಿರಿಯ, ಕನೆಹಲಗೆ, ಅಡ್ಡ ಹಲಗೆ, ಹಗ್ಗ ಕಿರಿಯ, ಹಗ್ಗ ಹಿರಿಯ ವಿಭಾಗಗಳಲ್ಲಿ ಕಂಬಳ ನಡೆಯಿತು. ಕಳೆದ ವರ್ಷ ಪುತ್ತೂರು ಕಂಬಳದಲ್ಲಿ ಕರೆಯಲ್ಲೆ ರಾಜ್ಯಮಟ್ಟದ ಕೆಸರು ಗದ್ದೆ ಓಟ ಸ್ಪರ್ಧೆ ಏರ್ಪಡಿಸಲಾಗಿತ್ತು . ಈ ವರ್ಷ ಇದರ ಜೊತೆಗೆ ಮೊದಲ ಬಾರಿ ರಿಲೇ ಸ್ಪರ್ಧೆ ಏರ್ಪಡಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page