Connect with us

DAKSHINA KANNADA

ಮಂಗಳೂರು : 2 ಕಳವು ಪ್ರಕರಣ ಭೇದಿಸಿದ ಸಿಸಿಬಿ- 2 ಬಂಧನ,55 ಲಕ್ಷದ 1 ಕೆ.ಜಿ. ಚಿನ್ನಾಭರಣ ವಶ..!

Published

on

ಮಂಗಳೂರಿನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 1 ಕೆ. ಜಿ. ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು :  ಮಂಗಳೂರಿನ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 1 ಕೆ. ಜಿ. ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಮಂಗಳೂರು ಪೊಲೀಸ್‌ ಕಮಿಷನರ್‌ ಕುಲದೀಪ್‌ ಕುಮಾರ್‌ ಜೈನ್‌ ಸುದ್ದಿಗೋಷ್ಠೀಯಲ್ಲಿ ಮಾಹಿತಿ ನೀಡಿದ್ದಾರೆ.

2023 ಜನವರಿ 15 ರಂದು ರಾತ್ರಿ ಮಂಗಳೂರು ತಾಲೂಕು ಮೂಲ್ಕಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು ಒಳ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಸೇರಿದಂತೆ ಒಟ್ಟು 10 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದರು.

ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಮಂಗಳೂರು ನಗರ ಅಪರಾಧ ವಿಭಾಗ- ಸಿಸಿಬಿ ಗೆ ಹಸ್ತಾಂತರಿಸಲಾಗಿತ್ತು.

ಕ್ಲಿಷ್ಟಕರವಾದ ಹಾಗೂ ಯಾವುದೇ ಸುಳಿವು ಇಲ್ಲದ ಪ್ರಕರಣದ ತನಿಖೆಯನ್ನು ಕೈಗೆತ್ತಿಗೊಂಡ ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿ ಅರೋಪಿಗಳಾದ ಕಾರ್ಕಳ ನಿವಾಸಿ 26 ವರ್ಷ ಪ್ರಾಯದ ಗಣೇಶ ನಾಯ್ಕ್ ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಹಳೇ ಸಿದ್ದಾಪುರದ ಗುಯ್ಯಾ ಗ್ರಾಮದ ನಿವಾಸಿ 26 ವರ್ಷ ಪ್ರಾಯದ ರಂಜಿತ್ ಕೆ.ಆರ್. ಎಂಬವರನ್ನು ದಸ್ತಗಿರಿ ಮಾಡಿ ಅವರ ವಶದಲ್ಲಿದ್ದ ಕಳವು ಸೊತ್ತುಗಳ ಪೈಕಿ 55 ಲಕ್ಷ ರೂ. ಮೌಲ್ಯದ 1 ಕೆ.ಜಿ. ಚಿನ್ನಾಭರಣಗಳನ್ನು ವಶಪಡಿಸಿದ್ದಾರೆ.

ಅಲ್ಲದೆ 2 ಮೊಬೈಲ್ ಫೋನ್ ಗಳು, ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿ ಗಣೇಶ್ ನಾಯ್ಕ್ ಹಾಗೂ ಇತರ ಇಬ್ಬರು ಆರೋಪಿಗಳು ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲರಾಯಿ ಚರ್ಚ್ ರಸ್ತೆಯಲ್ಲಿನ ಮನೆಯೊಂದರ ಬಾಗಿಲಿನ ಬೀಗವನ್ನು ಒಡೆದು ಮನೆಯಲ್ಲಿನ ಬೆಲೆಬಾಳುವ ಸೊತ್ತುಗಳನ್ನು ಹಾಗೂ ಮಾರುತಿ ಬ್ರೀಝಾ ಕಾರನ್ನು ಕಳವುಗೈದ ಪ್ರಕರಣದಲ್ಲಿ ಭಾಗಿಯಾಗಿದ್ದು, ಈ ಪ್ರಕರಣವು ಕೂಡಾ ಪತ್ತೆಯಾಗಿರುತ್ತದೆ.

ಆರೋಪಿ ಗಣೇಶ್ ನಾಯ್ಕ್ ಎಂಬಾತನ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ.

ಇವರಿಬ್ಬರೂ ಜೈಲಿನಲ್ಲಿ ಇರುವಾಗ ಪರಿಚಿತರಾಗಿ ಬಳಿಕ ಕಳವು ಕೃತ್ಯವನ್ನು ಜೊತೆಯಾಗಿ ಸೇರಿ ಮಾಡಿದ್ದಾರೆ ಎಂದು ಕಮಿಷನರ್ ವಿವರಿಸಿದರು.

ಪ್ರಕರಣವನ್ನು ಬೇಧಿಸಿದ ತಂಡಕ್ಕೆ 10,000 ರೂಪಾಯಿ ನಗದು ಬಹುಮಾನವನ್ನು ಘೋಷಣೆ ಮಾಡಿರುವುದಾಗಿ ತಿಳಿಸಿದರು.

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

DAKSHINA KANNADA

ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್‌ ಪೂಂಜಾ ಒತ್ತಾಯ

Published

on

ಬೆಳ್ತಂಗಡಿ: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಬೆಳ್ತಂಗಡಿಯ ವಿದ್ಯಾಥಿಧನಿ ಆಕಾಂಕ್ಷ ಮೃತದೇಹ ಇಂದು ಬೆಳಗ್ಗೆ ಆಕೆಯ ಬೊಳಿಯಾರ್ ಮನೆಗೆ ತಲುಪಿದೆ. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

 

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸ ಬೇಕು. ಆಕಾಂಕ್ಷಳ ಸಾವಿಗೆ ನ್ಯಾಯ ಸಿಗ ಬೇಕು. ಕರ್ನಾಟಕದ ಗೃಹ ಸಚಿವರಿಗೆ ಆಗ್ರಹ ಮಾಡ್ತೇನೆ ಎಂದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವುದನ್ನು ಪತ್ತೆ ಮಾಡುವಂತೆ ಕರ್ನಾಟಕ ಸರಕಾರವು ಪಂಜಾಬ್ ಸರಕಾರವನ್ನು ಆಗ್ರಹಿಸ ಬೇಕೆಂದು ಒತ್ತಾಯಿಸಿದರು.

 

Continue Reading

DAKSHINA KANNADA

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ರಿಕ್ಷಾ

Published

on

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ರಾತ್ರಿ 10.30ರ ವೇಳೆಗೆ ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ.

ಇದನ್ನೂ ಓದಿ: ಕಂಡೆಕ್ಟರ್ ಜೊತೆಗೂಡಿ ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ತಳ್ಳಿದ ಮಹಿಳೆಯರು

ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ವಲ್ಪವಾಲಿದೆ. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page