Connect with us

DAKSHINA KANNADA

ಮಂಗಳೂರು : ಸಿಎಂ ಬದಲಾವಣೆ ವಿಚಾರ : ತನ್ನ ಮಾತಿಗೆ ಸ್ಪಷ್ಟನೆ ಕೊಟ್ಟ ಸಚಿವ ಜಾರಕಿಹೊಳಿ

Published

on

ಮಂಗಳೂರು : ಸಿಎಂ ಬದಲಾವಣೆ ವಿಚಾರ ಸದ್ಯ ಕಾಂಗ್ರೆಸ್ ಪಾಳಯದಲ್ಲಿ ಸದ್ದು ಮಾಡುತ್ತಿದೆ. ನಿನ್ನೆಯಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಸಿಎಂ ಸಿದ್ಧರಾಮಯ್ಯ ಜೊತೆಯಾಗಿ ಉಪಹಾರ ಸೇವಿಸುವ ಮೂಲಕ ಇಬ್ಬರು ಆತ್ಮೀಯರು ಎಂದು ಸಾರಿದ್ದರು.

ಇದೀಗ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ ನೀಡಿದ್ದಾರೆ. ಯಾರಿಗೂ ಅಧಿಕಾರ ಶಾಶ್ವತವಲ್ಲ. 30 ತಿಂಗಳ ನಂತರವಾದರೂ ಅಧಿಕಾರ ಬಿಡಬಹುದು.  ಅದಕ್ಕೂ ಮೊದಲೇ ಸಿಎಂ ಅಧಿಕಾರ ಬಿಡಬಹುದು ಯಾವಾಗಾದರೂ ಅಧಿಕಾರ ಬಿಡಬಹುದು. ಹೈಕಮಾಂಡ್ ಬಿಡಲೇಬೇಕು ಅಂದ್ರೆ ಬಿಡಬೇಕಾಗುತ್ತದೆ. ಎಲ್ಲಾ ಹೈಕಮಾಂಡ್ ನಿರ್ಧಾರ ಎಂದಿದ್ದರು. ಇದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ : BBK12: ಗಿಲ್ಲಿ ಗೆಳೆತನ ಮಾಡಿ ಬೇಸತ್ತ ಕಾವ್ಯಾ?

ಮಂಗಳೂರಿಗೆ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಅವರು ತಮ್ಮ ಮಾತುಗಳಿಗೆ ಸ್ಪಷ್ಟನೆ ನೀಡಿದ್ದಾರೆ.  ಮೂವತ್ತು ತಿಂಗಳು ಆಗಬಹುದು, ಹತ್ತು ವರ್ಷ ಆಗಬಹುದು ಅಂತ ಹೇಳಿದ್ದೇನೆ ಅಷ್ಟೇ ಎಂಬುದಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ  ಪ್ರಶ್ನೆಗೆ ಉತ್ತರಿಸಿದ್ದಾರೆ

DAKSHINA KANNADA

‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

Published

on

ಮಂಗಳೂರು: ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್‌ ಪ್ರಯುಕ್ತ “ನಶೆ ಮುಕ್ತ ಮಂಗಳೂರು’  ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಪೌಂಡೇಶನ್‌ನ ಸುಹೈಲ್ ಕಂದಕ್ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಅಭಿಯಾನದ ಉದ್ಘಾಟನೆಯನ್ನು ಸ್ಪೀಕರ್ ಯು ಟಿ ಖಾದರ್ ನೆರವೇರಿಸುವರು. ಸಂಸದ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್ ವಿ ದರ್ಶನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿರುತ್ತಾರೆ ಎಂದರು.

ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಅಭಿಯಾನವನ್ನು ಆಯೋಜಿಸುತ್ತಿದ್ದು ಇದರ ಅಂಗವಾಗಿ ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ಹಲವು ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರ ಎಸಿಪಿ ರವೀಶ್ ನಾಯಕ್, ಕಾಂಗ್ರೆಸ್ ನಾಯಕ ವಿಕಾಸ್ ಶೆಟ್ಟಿ, ಬಾರ್ನ್ ಅಗೇನ್ ರಿಕವರಿ ಸೆಂಟರ್, ಬೀನಾ ಸಲ್ದಾನ ಮೊದಲಾದವರಿದ್ದರು.

 

Continue Reading

DAKSHINA KANNADA

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ: ವಾರ್ಷಿಕ ಮಹೋತ್ಸವ

Published

on

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ ಇದರ ವಾರ್ಷಿಕ ಮಹೋತ್ಸವ ನಡೆಯಿತು. ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಅತೀ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜ, ವ್ಯಕ್ತಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಪ್ರೀತಿ, ತ್ಯಾಗ ಮತ್ತು ಏಕತೆಯೊಂದಿಗೆ ದೇವರ ಅನುಗ್ರಹವು ಬೇಕು. ಇದಕ್ಕಾಗಿ ಪ್ರತಿದಿನ ಮಾತೆ ಮರಿಯಮ್ಮನ ಜಪಮಾಲೆಯನ್ನು ಪಠಿಸುವುದರಿಂದ  ಇದನ್ನು ಗಳಿಸಬಹುದು ಎಂದರು.

ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ : ಕಾವ್ಯಾ ನಾಮಿನೇಟ್ ಮಾಡಿದ್ಯಾರನ್ನ ಗೊತ್ತಾ!? ರಣರಂಗವಾಯ್ತು ‘ಬಿಗ್’ ಮನೆ

ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ  ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು. ಊರ, ಪರವೂರ  ಅನೇಕ ಭಕ್ತರು ಭಾಗವಹಿಸಿದ್ದರು.

Continue Reading

DAKSHINA KANNADA

ಪುತ್ತೂರು: ನಿಲ್ಲಿಸಿದ ಲಾರಿಯಿಂದ 80 ಗೋಣಿ ಕಾಫಿ ಬೀಜ ಕಳವು; ಐವರು ಆರೋಪಿಗಳ ಅರೆಸ್ಟ್

Published

on

ಪುತ್ತೂರು: ಮೈಸೂರಿನ ಪಿರಿಯಾಪಟ್ಟಣದಿಂದ ಮಂಗಳೂರು ಬಂದರಿಗೆ ಕಾಫಿ ಬೀಜ ಸಾಗಿಸುತ್ತಿದ್ದ ಲಾರಿಯನ್ನು ಪುತ್ತೂರಿನಲ್ಲಿ ನಿಲ್ಲಿಸಿದ ಸಂದರ್ಭದಲ್ಲಿ ಲಾರಿಯಿಂದ 320 ಗೋಣಿ ಕಾಫಿ ಬೀಜಗಳ ಪೈಕಿ 21.44 ಲಕ್ಷ ರೂಪಾಯಿ ಮೌಲ್ಯದ 80 ಗೋಣಿ ಕಾಫಿ ಬೀಜ ಕಳವು ಮಾಡಿದ ಘಟನೆ ನಡೆದಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂಧಿಸಿ ಕಳವು ಮಾಡಿದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

ಪುತ್ತೂರಿನ ಪೆರ್ನಾಜೆಯ ಆಶ್ಲೇಷ ಭಟ್, ರಿಕ್ಷಾ ಚಾಲಕರಾದ ನಾರಾಯಣ್ ಶೆಟ್ಟಿಗಾರ್, ಮಿಥುನ್ ಕುಮಾ‌ರ್, ಸಹಾಯಕ ಸುಳ್ಯದ ಆಶ್ರಫ್ ಮತ್ತು ವಿಜಯ್ ಶೆಟ್ಟಿ ಬಂಧಿತ ಆರೋಪಿಗಳು.

ಪುತ್ತೂರು ನೆಹರೂನಗರ ಶೇವಿರೆ ನಿವಾಸಿ ತೃತೇಶ್ ಎಂಬವರು ಮಂಗಳೂರು ಪಣಂಬೂರಿನ ಭವಾನಿ ಶಿಪ್ಪಿಂಗ್ ಸರ್ವಿಸ್ ಏಜೆನ್ಸಿಗೆ ಸಂಬಂಧಿಸಿ ಪಿರಿಯಾಪಟ್ಟಣದಿಂದ ಮಂಗಳೂರಿನ ಬಂದರಿಗೆ ಕಾಫಿ ಬೀಜಗಳನ್ನು ಸಾಗಿಸಲು ಬುಕ್ಕಿಂಗ್ ಪಡೆದುಕೊಂಡು ತನ್ನ ಲಾರಿಯಲ್ಲಿ ಪಿರಿಯಾಪಟ್ಟಣದ ಹೈರೇಂಜ್ ಕಾಫಿ ಕ್ಯೂರಿಂಗ್‌ ಹೌಸ್‌ ಕಂಪೆನಿಯಿಂದ ಡಿಸೆಂಬರ್ 3ರಂದು 320 ಗೋಣಿ ಕಾಫಿ ಬೀಜಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ಹೊರಟಿದ್ದರು.

ದಾರಿ ಮಧ್ಯೆ ರಾತ್ರಿ ನೆಹರೂನಗರ ಬಳಿ ಲಾರಿಯನ್ನು ನಿಲ್ಲಿಸಿ ಮನೆಗೆ ಹೋಗಿದ್ದರು. ಡಿಸೆಂಬರ್ 4 ರಂದು ಬೆಳಗ್ಗೆ ಮಂಗಳೂರು ಬಂದರು ತಲುಪಿದ್ದು, ಕಂಪೆನಿಯವರು ಕ್ವಾಲಿಟಿ ಚೆಕ್‌ ಮಾಡಿದಾಗ ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡುಬಂದಿತ್ತು. ಬಳಿಕ ಕಂಪೆನಿಯ ಮೇಲ್ವಿಚಾರಕರು ಲಾರಿಯ ಹಿಂಬದಿಯ ಬಾಗಿಲು ತೆರೆದು ನೋಡಿದಾಗ ಲಾರಿಯಲ್ಲಿದ್ದ 320 ಗೋಣಿ ಕಾಫಿ ಬೀಜಗಳ ಪೈಕಿ 21.44 ಲಕ್ಷ ರೂಪಾಯಿ ಮೌಲ್ಯದ 80 ಗೋಣಿ ಕಾಫಿ ಬೀಜ ಗಳು ಕಳವಾಗಿರುವುದು ಕಂಡುಬಂದಿತ್ತು.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿ ಕ್ಯಾಮರಾ ಆಧರಿಸಿ ಕಳ್ಳರ ಜಾಡು ಹಿಡಿದು ಕಳವಾಗಿದ್ದ ಕಾಫಿ ಬೀಜಗಳನ್ನು ಗೋಣಿಕೊಪ್ಪದಲ್ಲಿ ನಾಸಿರ್ ಎಂಬವರಿಗೆ ಸೇರಿದ ಗೋದಾಮಿನಲ್ಲಿ ಪತ್ತೆ ಮಾಡಿದ್ದಾರೆ.

ಇದನ್ನೂ ಓದಿ: ಎಂಡಿಎಂಎ ಮಾರಾಟ : ಮೂವರ ಬಂಧನ, ಓರ್ವ ಪರಾರಿ

ಲಾರಿಯಿಂದ ಕಳವಾದ 80 ಗೋಣಿ ಕಾಫಿ ಬೀಜ ಮತ್ತು ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು, ಎರಡು ಆಟೋ ರಿಕ್ಷಾಗಳನ್ನು ಪೊಲೀಸರು ಆರೋಪಿಗಳಿಂದ ವಶಕ್ಕೆ ಪಡೆದಿದ್ದಾರೆ. ಆಶ್ಲೇಷ್ ಭಟ್ ಪ್ರಮುಖ ಆರೋಪಿಯಾಗಿದ್ದು, ಆತ ಆಟೋ ರಿಕ್ಷಾಗಳನ್ನು ಬಾಡಿಗೆಗೆ ಗೊತ್ತುಪಡಿಸಿ ಕಾಫಿ ಬೀಜಗಳನ್ನು ಕಳವು ಮಾಡಿಸಿಕೊಂಡಿದ್ದು ನಾರಾಯಣ್ ಶೆಟ್ಟಿಗಾ‌ರ್ ಮತ್ತು ಮಿಥುನ್ ಕುಮಾ‌ರ್ ಆಟೋ ಚಾಲಕರಾಗಿ ಸಹಕರಿಸಿದ್ದರು. ಜತೆಗೆ ಪಿಕಪ್ ಜೀಪಿನಲ್ಲಿ ಬದಲಿ ಚಾಲಕನಾಗಿ ಕೆಲಸಕ್ಕೆ ಹೋಗುತ್ತಿದ್ದ ಸುಳ್ಯದ ಆಶ್ರಫ್ ಸಹಾಯಕನಾಗಿ ಬಂದಿದ್ದ ಎಂಬುದಾಗಿ ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page