Connect with us

DAKSHINA KANNADA

ಮಂಗಳೂರು: ಚರ್ಮಗಂಟು ರೋಗ-ಮುನ್ನೆಚ್ಚರಿಕೆಗೆ ಸೂಚನೆ

Published

on

ಮಂಗಳೂರು: ಜಾನುವಾರುಗಳಿಗೆ ಬರುವ ಚರ್ಮಗಂಟು ರೋಗದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಕೆ.ಪಿ ಹೇಳಿದರು.


ಕುಲಶೇಖರ ಹಾಲು ಉತ್ಪಾದಕರ ಒಕ್ಕೂಟದ ಕಚೇರಿಯಲ್ಲಿ ಭಾನುವಾರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಆಶ್ರಯದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರಿಗಳು ಜಿಲ್ಲೆಯಲ್ಲಿರುವ ಜಾನುವಾರುಗಳಿಗೆ ಬರುವ ಚರ್ಮಗಂಟು ರೋಗದ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಹಾಗೂ ಅಗತ್ಯವಿರುವ ಲಸಿಕೆ ಮತ್ತು ಔಷಧಿಗಳನ್ನು ಒಕ್ಕೂಟದಿಂದ ಪೂರೈಸುವ ಬಗ್ಗೆ ಭರವಸೆ ನೀಡಿದರು.

ಜಿಲ್ಲಾ ಹಾಲು ಉತ್ಪಾದಕ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಡಾ. ನಿತ್ಯಾನಂದ, ಜಿಲ್ಲಾ ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಬಿಳಿಯೂರಿನಲ್ಲಿ ಮುಂಜಾಗ್ರತಾ ಕ್ರಮ:
ಬಂಟ್ವಾಳ ತಾಲ್ಲೂಕಿನ ಬಿಳಿಯೂರು ಗ್ರಾಮದಲ್ಲಿ ಚರ್ಮಗಂಟು ರೋಗದ ಒಂದು ಶಂಕಿತ ಪ್ರಕರಣ ದಾಖಲಾಗಿದ್ದು ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಹೇಳಿದರು.

ಈಗಾಗಲೇ ಆ ಗ್ರಾಮದ ಸುತ್ತಮುತ್ತಲಿನ 600ಜಾನುವಾರುಗಳಿಗೆ ಒಟ್ಟು 2000ಡೋಸ್ ಲಸಿಕೆ ಹಾಕಲಾಗಿದೆ. ರೋಗ ಹರಡಲು ಕಾರಣವಾಗುವ ಸೊಳ್ಳೆ, ನೊಣ ಹಾಗೂ ಉಣ್ಣೆ ನಿಯಂತ್ರಣಕ್ಕಾಗಿ ಫಾಗಿಂಗ್ ಹಾಗೂ ಕ್ರಿಮಿನಾಶಕ ಸಿಂಪಡಣೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

READ IN ENGLISH : https://www.nammakudlaenglish.com/entry-to-tourist-spots-in-belthangady-banned-from-today/

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

DAKSHINA KANNADA

ಸುರತ್ಕಲ್-ನಂತೂರು ಜಂಕ್ಷನ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿ ನಿಗದಿ

Published

on

ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್‌ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್‌ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್‌ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯ ಹಲವು ಭಾಗಗಳು ಕೆಟ್ಟು ಹೋಗಿವೆ. ಹಾಗಾಗಿ ಅಂತಹ ಭಾಗಗಳು ಅತಿ ವೇಗದ ಚಾಲನೆಗೆ ಸುರಕ್ಷಿತವಾಗಿಲ್ಲ. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಸಾಧ್ಯವಾದಷ್ಟು ಎಲ್ಲೆಲ್ಲಿ ಸರ್ವೀಸ್‌ ರಸ್ತೆಗಳಿವೆಯೋ ಅಲ್ಲಿ ಅದನ್ನೇ ಬಳಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚಿಸಿದೆ.

READ IN ENGLISH : https://www.nammakudlaenglish.com/speed-limit-imposed-on-surathkal-nanthur-junction-national-highway/

ಇದನ್ನೂ ಓದಿ: ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಸುರತ್ಕಲ್‌- ನಂತೂರು ನಡುವಣ ಹೆದ್ದಾರಿ ಕೆಟ್ಟು ಹೋಗಿದ್ದು, ಘನ ವಾಹನ, ಲಘುವಾಹನ, ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಎಲ್ಲಾ ವಾಹನಗಳು ಈ ಹೆದ್ದಾರಿಯನ್ನೇ ಬಳಸುತ್ತಿವೆ. ಕೆಲವೊಮ್ಮೆ ಹೊಂಡ ತಪ್ಪಿಸಲು ವಾಹನಗಳು ಅಡ್ಡಾದಿಡ್ಡಿ ಸಂಚರಿಸಿ ಅಪಘಾತಕ್ಕೆ ಕಾರಣವಾಗುತ್ತಿವೆ.

ಈ ಕಾರಣಕ್ಕಾಗಿ ಸರ್ವೀಸ್‌ ರಸ್ತೆ ಇರುವ ಪಣಂಬೂರು, ಸುರತ್ಕಲ್‌, ಬೈಕಂಪಾಡಿ, ಕೂಳೂರು ಭಾಗಗಳಲ್ಲಿ ಈ ಸರ್ವೀಸ್‌ ರಸ್ತೆಯನ್ನೇ ಬಳಸಿ ದ್ವಿಚಕ್ರ ವಾಹನಗಳು ಸಂಚರಿಸುವುದು ಸೂಕ್ತ ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

DAKSHINA KANNADA

ಭಾರೀ ಮಳೆಗೆ ಕದ್ರಿ ಕೈಬಟ್ಟಲ್ ಪರಿಸರದಲ್ಲಿ ಮನೆ ಮೇಲೆ ಗುಡ್ಡ ಕುಸಿತ

Published

on

ಮಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಹಲವು ಕಡೆಗಳಲ್ಲಿ ಅಪಾರ ಹಾನಿಗೂ ಕಾರಣವಾಗಿದೆ. ನಗರದ ಕದ್ರಿ ಕೈಬಟ್ಟಲ್ ಎಂಬಲ್ಲಿ ಮನೆಯ ಒಂದು ಭಾಗ ಕುಸಿತಕ್ಕೊಳಗಾಗಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಸಂಘರ್ಷ: ಅಡುಗೆ ಎಣ್ಣೆ ಬೆಲೆ 3-4ರೂ. ದಿಢೀರ್ ಹೆಚ್ಚಳ

ಉಷಾ ಅಶೋಕ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಯ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತಕ್ಕೊಳಗಾಗಿದೆ. ಮನೆಯ ಹಲವು ಸಾಮಾಗ್ರಿಗೆ ಹಾನಿ ಉಂಟಾಗಿದೆ.

ಮನೆಯಲ್ಲಿ ಜನರಿದ್ದ ವೇಳೆ ಅಡುಗೆ ಕೋಣೆಯಲ್ಲಿ ಗೋಡೆ ಕುಸಿತವಾಗಿದ್ದರೂ ಮನೆ ಮಂದಿ ಪ್ರಾಣಾಪಾಯದಿಂದ ಪಾರು ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page