Connect with us

DAKSHINA KANNADA

ಮಂಗಳೂರು: ಜನರಲ್ ಸ್ಟೋರ್ ಮಾಲಕ ನಾಪತ್ತೆ; ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲು

Published

on

ಮಂಗಳೂರು: ಸುರತ್ಕಲ್ ಇಡ್ಯಾದಲ್ಲಿರುವ ಅಲ್ ಶಿಫಾ ಜನರಲ್ ಸ್ಟೋರ್ ಮಾಲಕ 61 ವರ್ಷ ಪ್ರಾಯದ ಶೇಖಬ್ಬ ಎಂಬವರು ನವೆಂಬರ್ 27 ರಿಂದ ಕಾಣೆಯಾಗಿರುವುದಾಗಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಎಂದಿನಂತೆ ಗುರುವಾರ ಬೆಳಗ್ಗೆ ತನ್ನ ಮನೆ ಸಮೀಪದ ಜನರಲ್ ಸ್ಟೋರ್ ನ ಬಾಗಿಲು ತೆರೆಯಲು ಆವರು ಮನೆಯಿಂದ ತೆರಳಿದ್ದರು. ಆದರೆ ಶೇಖಬ್ಬ ಅವರು ಜನರಲ್ ಸ್ಟೋರ್ ಗೆ ಹೋಗದೆ, ಮನೆಗೂ ಮರಳಿ ಬಾರದೆ ಕಾಣೆಯಾಗಿದ್ದಾರೆ ಎಂದು ಶೇಖಬ್ಬ ಅವರ ಸಹೋದರ ಅಬ್ದುಲ್ ಖಾದರ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಲುಸಂಕ ಕುಸಿತ: ದೋಣಿಯಲ್ಲಿ ಹೋಗಿ ಪರಿಶೀಲಿಸಿದ ದ.ಕ. ಜಿಲ್ಲಾಧಿಕಾರಿ

ಶೇಖಬ್ಬ ಅವರು 5.9 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈ ಬಣ್ಣ, ಬೊಕ್ಕ ತಲೆಯವರಾಗಿದ್ದು, ಕನ್ನಡ, ಬ್ಯಾರಿ, ತುಳು ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೊರಗೆ ಹೋಗುವಾಗ ಕೆಂಪು ಬಣ್ಣದ ಟೀಶರ್ಟ್ ಮತ್ತು ಗ್ರೇ ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಅವರನ್ನು ಕಂಡವರು ಸುರತ್ಕಲ್ ಪೊಲೀಸ್ ಠಾಣೆಗೆ ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್‌ ಗೆ ಮಾಹಿತಿ ನೀಡಲು ಕೋರಲಾಗಿದೆ.

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

DAKSHINA KANNADA

‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

Published

on

ಮಂಗಳೂರು: ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್‌ ಪ್ರಯುಕ್ತ “ನಶೆ ಮುಕ್ತ ಮಂಗಳೂರು’  ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಪೌಂಡೇಶನ್‌ನ ಸುಹೈಲ್ ಕಂದಕ್ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಅಭಿಯಾನದ ಉದ್ಘಾಟನೆಯನ್ನು ಸ್ಪೀಕರ್ ಯು ಟಿ ಖಾದರ್ ನೆರವೇರಿಸುವರು. ಸಂಸದ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್ ವಿ ದರ್ಶನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿರುತ್ತಾರೆ ಎಂದರು.

ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಅಭಿಯಾನವನ್ನು ಆಯೋಜಿಸುತ್ತಿದ್ದು ಇದರ ಅಂಗವಾಗಿ ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ಹಲವು ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರ ಎಸಿಪಿ ರವೀಶ್ ನಾಯಕ್, ಕಾಂಗ್ರೆಸ್ ನಾಯಕ ವಿಕಾಸ್ ಶೆಟ್ಟಿ, ಬಾರ್ನ್ ಅಗೇನ್ ರಿಕವರಿ ಸೆಂಟರ್, ಬೀನಾ ಸಲ್ದಾನ ಮೊದಲಾದವರಿದ್ದರು.

 

Continue Reading

DAKSHINA KANNADA

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ: ವಾರ್ಷಿಕ ಮಹೋತ್ಸವ

Published

on

ಬಂಟ್ವಾಳ : ವೆಲಂಕಣಿ ಮಾತೆ ದೇವಾಲಯ ಫರ್ಲ ಇದರ ವಾರ್ಷಿಕ ಮಹೋತ್ಸವ ನಡೆಯಿತು. ದಿವ್ಯ ಬಲಿ ಪೂಜೆಯ ಪ್ರಧಾನ ಗುರುಗಳಾಗಿ ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಅತೀ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜ, ವ್ಯಕ್ತಿಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಪ್ರೀತಿ, ತ್ಯಾಗ ಮತ್ತು ಏಕತೆಯೊಂದಿಗೆ ದೇವರ ಅನುಗ್ರಹವು ಬೇಕು. ಇದಕ್ಕಾಗಿ ಪ್ರತಿದಿನ ಮಾತೆ ಮರಿಯಮ್ಮನ ಜಪಮಾಲೆಯನ್ನು ಪಠಿಸುವುದರಿಂದ  ಇದನ್ನು ಗಳಿಸಬಹುದು ಎಂದರು.

ಬಂಟ್ವಾಳ ವಲಯದ ಹಾಗೂ ಪಾಲಟಾಯ್ನ್ ಸಭೆಯ ಧರ್ಮಗುರುಗಳು ಬಲಿಪೂಜೆಯಲ್ಲಿ ಭಾಗವಹಿಸಿದರು.

ಇದನ್ನೂ ಓದಿ : ಕಾವ್ಯಾ ನಾಮಿನೇಟ್ ಮಾಡಿದ್ಯಾರನ್ನ ಗೊತ್ತಾ!? ರಣರಂಗವಾಯ್ತು ‘ಬಿಗ್’ ಮನೆ

ಫರ್ಲಾ ಧರ್ಮಕೇಂದ್ರದ ಧರ್ಮಗುರು ವಂದನೀಯ  ಮಾರ್ಕ್ ಅರುಣ್ ಡಿಸೋಜ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು ಹಾಗೂ ಹಾಗೂ ಗೌರವಾರ್ಥವಾಗಿ ಆಶೀರ್ವದಿಸಿದ ಮೇಣದ ಬತ್ತಿಯನ್ನು ವಿತರಿಸಲಾಯಿತು. ಊರ, ಪರವೂರ  ಅನೇಕ ಭಕ್ತರು ಭಾಗವಹಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page