Connect with us

ಚಾಲಕನ ಕೇರ್ ಲೆಸ್ ನಿಂದಾಗಿ ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಕೆ.ಎಸ್ಆರ್ ಟಿಸಿ ಬಸ್

Published

on

ಚಾಲಕನ ಕೇರ್ ಲೆಸ್ ನಿಂದಾಗಿ ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್

ಉಡುಪಿ: ಕೆಎಸ್ ಆರ್ ಟಿ ಸಿ ಬಸ್ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು (ಮೇ 29) ನಡೆದಿದೆ. ಈ ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದೆ.

ಮಂಗಳೂರಿನಿಂದ ಹುಬ್ಬಳ್ಳಿ, ಬೆಳಗಾವಿಗೆ ಪ್ರಯಾಣಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಯೊಂದಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಚಾಲಕನ ಅಜಾಗರೂಕತೆಯ ಚಾಲನೆ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದು, ಸದ್ಯ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಫ್ಲ್ಯಾಟ್, ಚಿನ್ನ ನೀಡುವುದಾಗಿ ನಂಬಿಸಿ ಉದ್ಯಮಿಗೆ ಕೋಟಿ ಕೋಟಿ ವಂಚನೆ

Published

on

ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿ ಎಂಬವರಿಗೆ ಉಡುಪಿ ಮೂಲದ ದಂಪತಿ ಸುಹಾಸಿನಿ ಶೆಟ್ಟಿ ಹಾಗೂ ಪತಿ ಪುನೀತ್ ಶೆಟ್ಟಿ ಎಂಬವರು ಸುಮಾರು 4.78 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ ಎಂದು ದಂಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿರುವ ಸುಹಾಸಿನಿ, 2024ರ ಜನವರಿಯಿಂದ ಜೂನ್‌ವರೆಗೆ ಹಂತ ಹಂತವಾಗಿ 4.78 ಕೋಟಿ ರೂಪಾಯಿ ಹಣ ವರ್ಗಾಯಿಸಿಕೊಂಡಿದ್ದಾರೆ. ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಹಾಗೂ ಸ್ಕ್ರಾಪ್ ವ್ಯವಹಾರದಲ್ಲಿ ಲಾಭಕರ ಹೂಡಿಕೆ ಮಾಡಿಕೊಡುವುದಾಗಿ ನೀಡಿದ ಭರವಸೆಯನ್ನು ನಂಬಿದ ಹಿನ್ನೆಲೆಯಲ್ಲಿ ತಾನು ಮೋಸ ಹೋಗಿದ್ದಾಗಿ ದೂರು ನೀಡಲಾಗಿದೆ. ಆಕೆ ಜೊತೆ ಪತಿ ಕೂಡಾ ಕೈಜೋಡಿಸಿದ್ದಾರೆ.

2024ರಲ್ಲಿ ಉಡುಪಿ ಸೈಬರ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ಪ್ರಕರಣಕ್ಕೆ ಸ್ಟೇ ಆದೇಶ ಪಡೆದಿದ್ದರು. ಈ ನಡುವೆ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎನ್ನುವವರ ಮೂಲಕ ಸಂಧಾನ ಮಾತುಕತೆ ನಡೆದಿದ್ದರೂ ಅದು ವಿಫಲವಾಗಿದೆ. ಇದೀಗ ಸುಹಾಸಿನಿ ಮತ್ತು ಪತಿ ಮಣಿಪಾಲದಿಂದ ಮಂಗಳೂರಿಗೆ ಸ್ಥಳಾಂತರಗೊಂಡು ಮಂಗಳೂರಿನಲ್ಲೂ ಇದೇ ರೀತಿ ಮೋಸ ಮಾಡಿದ್ದಾರೆ.

ಇದನ್ನೂ ಓದಿ: ಮದುವೆ ಮನೆ ಬಫೆ ಆ್ಯಪ್‌ ಅಭಿವೃದ್ಧಿಪಡಿಸಿದ ಬೆಂಗಳೂರು ಯುವಕನಿಗೆ ಕೊಲೆ ಬೆದರಿಕೆ!

ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ತನಗೆ ನ್ಯಾಯ ದೊರಕಿಸಿಕೊಡುವಂತೆ ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಮರು ತನಿಖೆಗೆ ಮನವಿ ಮಾಡಿರುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Continue Reading

LATEST NEWS

‘ಸಾರಿ ಮಮ್ಮಿ-ಪಾಪ, ಐ ಲವ್ ಯು’ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Published

on

ಬೀದರ್‌: 10ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ದುರದೃಷ್ಟಕರ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ ನಡೆದಿದೆ.


ಶರತ್ ಪರಮೇಶ್ವರ್(16), ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ನಿವಾಸಿ. ವಿದ್ಯಾರ್ಥಿಯು ಸಾಯುವ ಮೊದಲು “Sorry Mummy, Papa… I Love You” ಮತ್ತು “Keep Smile Forever” ಎಂದು ಬರೆದ ಹೃದಯವಿದ್ರಾವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಬಾಲಕ ಪರೀಕ್ಷೆಗೆ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕಂಡ್ಲೂರು ಸೇತುವೆ ಬಳಿ ಅಕ್ರಮ ಮರಳು ಅಡ್ಡೆಗೆ ದಾಳಿ; 11 ಮಂದಿ ಆರೋಪಿಗಳ ಬಂಧನ

ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಸತಿ ಶಾಲೆಯ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Continue Reading

bangalore

ಮದುವೆ ಮನೆ ಬಫೆ ಆ್ಯಪ್‌ ಅಭಿವೃದ್ಧಿಪಡಿಸಿದ ಬೆಂಗಳೂರು ಯುವಕನಿಗೆ ಕೊಲೆ ಬೆದರಿಕೆ!

Published

on

ಬೆಂಗಳೂರು: ಬೆಂಗಳೂರಿನ ಟೆಕ್ಕಿಯೊಬ್ಬರು ತಮಾಷೆಗಾಗಿ ರೂಪಿಸಿದ AI ಆಧಾರಿತ ಬಫೆ ಆ್ಯಪ್ ಆನ್‌ಲೈನ್‌ನಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಅವರಿಗೆ ಕೊಲೆ ಬೆದರಿಕೆಗಳು ಬಂದಿರುವ ಘಟನೆ ವರದಿಯಾಗಿದೆ.


ಬೆಂಗಳೂರಿನ ಪಂಕಜ್ ಎಂಬ ಟೆಕ್ಕಿ, ತಮಾಷೆಯಾಗಿ ಭಾರತೀಯ ವಿವಾಹಗಳ ಸಂಭ್ರಮಗಳಲ್ಲಿ ಬೃಹತ್ ಬಫೆ ವ್ಯವಸ್ಥೆ ನಿರ್ಹಿಸಿ, ಯಾವ ಆಹಾರವನ್ನು ಸೇವಿಸಬೇಕು ಮತ್ತು ಯಾವುದನ್ನು ಬಿಡಬೇಕು ಎಂದು ನಿರ್ಧರಿಸಲು ಸಹಾಯ ಮಾಡುವ ಬಫೆಟ್‌ ಎಂಬ ಕೃತಕ ಬುದ್ಧಿಮತ್ತೆ ಆಧಾರಿತ ಉಪಕರಣವನ್ನು ಅಭಿವೃದ್ಧಿಪಡಿಸಿದ್ದರು.

ಈ ಎಐ ಮಾದರಿಗಳನ್ನು ತರಬೇತುಗೊಳಿಸಲು ಹಾಗೂ ಬಳಸಲು ಹೆಚ್ಚಿನ ವಿದ್ಯುತ್ ಮತ್ತು ನೀರಿನ ಅಗತ್ಯವಿರುತ್ತದೆ. ಇಂತಹ ಉಪಯೋಗವಿಲ್ಲದ ಕೆಲಸಗಳಿಗೆ ಎಐ ಬಳಸುವ ಮೂಲಕ ಪರಿಸರವನ್ನು ಹಾನಿಮಾಡುತ್ತಿದ್ದೀರಿ ಎಂದು ಕೆಲವರು ಆರೋಪಿದ್ದಾರೆ. ಇನ್ನು ಕೆಲವರು AI ತಂತ್ರಜ್ಞಾನವನ್ನು ಇಂತಹ ಅತಿ ಸಣ್ಣ ಕೆಲಸಕ್ಕೆ ವ್ಯರ್ಥ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಐಟಿಐ ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ-ಇಬ್ಬರಿಗೆ ಗಾಯ

ತನಗೆ ಮತ್ತು ತನ್ನ ಕುಟುಂಬಕ್ಕೆ ಹತ್ತಾರು ಜನರು ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಂಕಜ್ X ಪೇಜ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. “ಕೇವಲ ವಾರಾಂತ್ಯದ ಒಂದು ಸಣ್ಣ ಪ್ರಾಜೆಕ್ಟ್‌ಗಾಗಿ ಇಷ್ಟೊಂದು ಕೆಳಮಟ್ಟಕ್ಕೆ ಇಳಿಯುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page