Connect with us

LATEST NEWS

ಮಂಗಳೂರು: ಎಂಡಿಎಂಎ ಸಾಗಾಟ ಪ್ರಕರಣ; ಐವರು ಆರೋಪಿಗಳಿಗೆ ಕಠಿಣ ಸಜೆ ಮತ್ತು ದಂಡ

Published

on

ಮಂಗಳೂರು: ಮೂರು ವರ್ಷಗಳ ಹಿಂದೆ ದಾಖಲಾದ ಮಾದಕ ವಸ್ತು- ಎಂಡಿಎಂಎ ಸಾಗಾಟ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಲಯವು 12 ರಿಂದ 14 ವರ್ಷಗಳ ಕಠಿನ ಸಜೆ ವಿಧಿಸಿ ಶನಿವಾರ ತೀರ್ಪು ನೀಡಿದೆ.


ಸುಡಾನ್ ಪ್ರಜೆ ಲೂಯಲ್ ಡೇನಿಯಲ್ ಜಸ್ಟಿನ್ ಬೌಲೋ ಯಾನೆ ಡ್ಯಾನಿ (25), ಕಾಸರಗೋಡು ಉಪ್ಪಳದ ಮಹಮ್ಮದ್ ರಮೀಜ್(24), ಕಾಸರಗೋಡು ಶಿರಿಯಾದ ಮೊಹಿದ್ದೀನ್ ರಶೀದ್ (24), ಉಪ್ಪಳ ಮುಳಿಂಜದ ಅಬ್ದುಲ್ ರವೂಫ್ (35) ಮತ್ತು ತಮಿಳುನಾಡು ಊಟಿಯ ಸಬಿತಾ ಯಾನೆ ಚಿಂಚು (25) ಶಿಕ್ಷೆಗೊಳಗಾದ ಆರೋಪಿಗಳು.

2022 ಜೂನ್ 14 ರಂದು ಬೆಂಗಳೂರಿನಿಂದ ಮಂಗಳೂರಿಗೆ ಎಂಡಿಎಂಎ ಸಾಗಾಟ ಮಾಡಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಕಾರ್ಯಾಚರಣೆ ಮಾಡಿ ಈ ಐವರು ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳ ಬಳಿ 125 ಗ್ರಾಂ ಎಂ.ಡಿ.ಎಂ.ಎ. ಪತ್ತೆಯಾಗಿತ್ತು. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೆನ್‌ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ತನಿಖೆಯನ್ನು ಪೂರ್ಣಗೊಳಿಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಡಿಸೆಂಬರ್ 6 ರಂದು ನಡೆದಿದ್ದು, ಸರಕಾರದ ಪರವಾಗಿ ಪಬ್ಲಿಕ್‌ ಪ್ರಾಸಿಕ್ಯೂಟರ್ ಜುಡಿತ್ ಓಲ್ಗಾ ಮಾರ್ಗರೆಟ್ ಕ್ರಾಸ್ತಾ ಅವರು ವಾದ ಮಂಡಿಸಿದ್ದರು.

ಇದನ್ನೂ ಓದಿ: ಕಾರವಾರ ಜಿಲ್ಲಾಕಾರಾಗೃಹದಲ್ಲಿ ಖೈದಿಗಳಿಂದ ಸಿಬ್ಬಂದಿ ಮೇಲೆ ಹಲ್ಲೆ

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಅವರು ಆರೋಪಿಗಳಾದ ಲೂಯಲ್ ಡೇನಿಯಲ್ ಜಸ್ಟಿನ್ ಬೌಲೋ ಯಾನೆ ಡ್ಯಾನಿ, ಮೊಹಿದ್ದೀನ್ ರಶೀದ್ ಮತ್ತು ಸಬಿತಾ ಸಬಿತಾ ಯಾನೆ ಚಿಂಚು ಎಂಬ ಮೂವರಿಗೆ ತಲಾ 12 ವರ್ಷಗಳ ಕಠಿನ ಸಜೆ ಮತ್ತು 1.5 ಲಕ್ಷ ರೂಪಾಯಿ ದಂಡ, ಆರೋಪಿ ಮಹಮ್ಮದ್ ರಮೀಜ್ ಗೆ 14 ವರ್ಷ ಕಠಿನ ಸಜೆ ಮತ್ತು 1.45 ಲಕ್ಷ ರೂ. ದಂಡ ಹಾಗೂ ಆರೋಪಿ ಅಬ್ದುಲ್ ರವೂಫ್ ಗೆ 13 ವರ್ಷ ಕಠಿನ ಸಜೆ ಮತ್ತು 1.35 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿ ಆದೇಶಿಸಿದ್ದಾರೆ.

ಈ ಪ್ರಕರಣದ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page