Connect with us

LATEST NEWS

ವಿಶ್ವದಲ್ಲೇ ಬೃಹತ್ ಗಾತ್ರದ ಮೂತ್ರಕೋಶದ ಕಲ್ಲು ಹೊರತೆಗೆದ ಮಣಿಪಾಲ ವೈದ್ಯರು..!

Published

on

ಉಡುಪಿ: ವ್ಯಕ್ತಿಯೋರ್ವರ 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನಡೆಸಿ ಹೊರೆ ತೆಗೆದಿರುವ ಘಟನೆ ನಡೆದಿದೆ.
ಇದು ವಿಶ್ವದಲ್ಲಿ ಇಲ್ಲಿಯವರೆಗೆ ಮಹಿಳಾ ರೋಗಿಯಲ್ಲಿ ವರದಿಯಾಗಿರುವ ಅತಿ ದೊಡ್ಡ ಮೂತ್ರಕೋಶದ ಕಲ್ಲು ಎಂದು ಹೇಳಲಾಗಿದೆ.


60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರ ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಇತ್ತೀಚೆಗೆ ಕಸ್ತೂರಿ ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ರೋಗಿಗೆ ಸರಳ ಸಿಟಿ ಸ್ಕ್ಯಾನ್ ಮಾಡಿದಾಗ ಮೂತ್ರಕೋಶದಲ್ಲಿ ಕಲ್ಲು ಇರುವುದು ಪತ್ತೆಯಾಗಿದೆ.

ಮೂತ್ರಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಉಪ ವೈದ್ಯಕೀಯ ಅಧೀಕ್ಷಕ ಡಾ ಪದ್ಮರಾಜ್ ಹೆಗ್ಡೆ ಅವರ ಮಾರ್ಗದರ್ಶನದಲ್ಲಿ ಡಾ ಅಂಶುಮನ್, ಡಾ ಕಾಶಿ ವಿಶ್ವನಾಥ್, ಡಾ‌ ನಿಶಾ, ಡಾ ವಿವೇಕ್ ಪೈ ಮತ್ತು ಡಾ ಕೃಷ್ಣ ಅವರ ತಂಡವು ತೆರೆದ ಸಿಸ್ಟೊಲಿಥೊಟಮಿ ಶಸ್ತ್ರಚಿಕಿತ್ಸೆ ನಡೆಸಿ ಕಲ್ಲನ್ನ ಹೊರ ತೆಗೆದಿದ್ದಾರೆ.

ಎರಡನೇ ದಿನ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಈ ಬಗ್ಗೆ ಅಭಿನಂದನೆ ಸಲ್ಲಿಸಿರುವ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಇಲ್ಲಿಯವರೆಗೆ ಅತಿದೊಡ್ಡ ಮೂತ್ರಕೋಶದ ಕಲ್ಲು ಮುಂಬೈನ ಕೆಇಎಂ ಆಸ್ಪತ್ರೆಯಲ್ಲಿ (528 ಗ್ರಾಂ) ಪತ್ತೆಯಾಗಿತ್ತು. ಅಪರೂಪದ ಕ್ಲಿಷ್ಟಕರ ಶಸ್ತ್ರಚಿಕಿತ್ಸಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ ತಂಡವನ್ನು ಅಭಿನಂದಿಸುತ್ತೇನೆ’ ಎಂದು ಹೇಳಿದ್ದಾರೆ.

 

FILM

ಶ್ರೀಲೀಲಾ ಅಭಿನಯದ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟರ್!

Published

on

ಮಂಗಳೂರು/ಮುಂಬೈ: ಭಾರತೀಯ ಕ್ರಿಕೆಟಿಗರಿಗೂ ಸಿನಿಮಾಗೂ ಎಲ್ಲಿಲ್ಲದ ನಂಟಿದೆ. ಅನೇಕ ಕ್ರಿಕೆಟಿಗರೂ ಸಿನಿಮಾ ತಾರೆಯರನ್ನು ಮದುವೆಯಾದ ಉದಾಹರಣೆಯೂ ಇದೆ. ಅದರಲ್ಲೂ ಅನೇಕ ಕ್ರಿಕೆಟಿಗರು ಕ್ರಿಕೆಟ್ ಜೊತೆಗೆ ನಟನೆಯಲ್ಲೂ ಸೈ ಎನಿಸಿಕೊಂಡಿದ್ದಾರೆ. ಇದಕ್ಕೆ ಬೆಸ್ಟ್ ಎಕ್ಸಾಂಪಲ್ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶ್ರೀಶಾಂತ್.


ಇದೀಗ ವಿದೇಶಿ ಆಟಗಾರನೊಬ್ಬ ಭಾರತದ ಸಿನಿಮಾ ಒಂದರಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಸಿನಿಮಾದ ಚಿತ್ರಿಕರಣ ಮುಗಿದಿದ್ದು, ರಿಲೀಸ್ ಆಗಲು ಸಜ್ಜಾಗಿದೆ. ಈ ಬಗ್ಗೆ ಸಿನಿಮಾ ತಂಡ ಪೋಸ್ಟರ್ ಅನಾವರಣಗೊಳಿಸಿದೆ. ಅಷ್ಟಕ್ಕೂ ಆ ಆಟಗಾರ ಬೇರೆ ಯಾರು ಅಲ್ಲ. ಆಸ್ಟ್ರೇಲಿಯಾದ ಕ್ರಿಕೆಟರ್ ಡೇವಿಡ್ ವಾರ್ನರ್.

ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ, ಡ್ಯಾಶಿಂಗ್ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್. ಇದೀಗ ಕ್ರಿಕೆಟ್ ಜತೆ ಜತೆಗೆ ಚಿತ್ರೋದ್ಯಮಕ್ಕೆ ಎಂಟ್ರಿಕೊಟ್ಟಿದ್ದಾರೆ. ಭಾರತೀಯ ಸಿನಿಮಾಗಳನ್ನು ವೀಕ್ಷಿಸುವ ಹವ್ಯಾಸ ಹೊಂದಿದ್ದ ವಾರ್ನರ್, ತೆಲುಗಿನಲ್ಲಿ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರದ ಪುಷ್ಪರಾಜ್ ಪಾತ್ರಕ್ಕೆ ದೊಡ್ಡ ಅಭಿಮಾನಿಯಾಗಿದ್ದಾರೆ. ಐಪಿಎಲ್ ಪಂದ್ಯಗಳಲ್ಲಿ ಆಗಾಗ್ಗೆ ಅಲ್ಲು ಅರ್ಜುನ್‌ರನ್ನು ಅನುಕರಿಸುವ ಮೂಲಕ ಭಾರತೀಯ ಅಭಿಮಾನಿಗಳನ್ನು ರಂಜಿಸುವ ಡೇವಿಡ್, ಕಡೆಗೂ ಟಾಲಿವುಡ್‌ಗೆ ಲಗ್ಗೆಯಿಟ್ಟಿರುವುದು ಸದ್ಯ ಚಿತ್ರಪ್ರೇಮಿಗಳ ಕುತೂಹಲ ಕೆರಳಿಸಿದೆ.

ಬಹುತೇಕರು ಅಲ್ಲು ಅರ್ಜುನ್ ಅವರ ಮುಂಬರುವ ಯಾವುದಾದರೂ ಚಿತ್ರದಲ್ಲಿ ಡೇವಿಡ್ ವಾರ್ನರ್ ನಟಿಸಬಹುದು. ಪ್ರಮುಖ ಪಾತ್ರದಲ್ಲಿ ಅಲ್ಲದೇ ಹೋದರೂ ಅತಿಥಿ ಪಾತ್ರದಲ್ಲಿಯಾದರೂ ಮಿಂಚಬಹುದು ಎಂದು ನಿರೀಕ್ಷಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಬದಲಿಗೆ ಅದೇ ಚಿತ್ರರಂಗದ ಸ್ಮಾರ್ ಹೀರೋ ನಿತಿನ್, ನಟಿ ಶ್ರೀಲೀಲಾ ಅಭಿನಯದ ಕಾಮಿಡಿ ಚಿತ್ರ ‘ರಾಬಿನ್‌ಹುಡ್’ನಲ್ಲಿ ಡೇವಿಡ್ ವಾರ್ನರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಚಾರ ಇದೀಗ ಅಧಿಕೃತವಾಗಿದ್ದು, ಡೇವಿಡ್ ಅವರ ಪೋಸ್ಟರ್ ಅನಾವರಣಗೊಂಡಿದೆ.

ಇದನ್ನೂ ಓದಿ: ‘ಕೌನ್ ಬನೇಗಾ ಕರೋಡ್‌ಪತಿ-17’ರ ನಿರೂಪಕರ ಕುರಿತ ವದಂತಿಗೆ ತೆರೆ ಎಳೆದ ಬಿಗ್‌ ಬಿ

ಜಾಗತಿಕ ಮಟ್ಟದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿರುವ ಡೇವಿಡ್ ವಾರ್ನರ್, ಟಿಕ್‌ಟಾಕ್, ಇನ್ ಸ್ಟಾಗ್ರಾಮ್ ವಿಡಿಯೋ, ರೀಲ್‌ಗಳಿಂದ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿದ್ದಾರೆ. ರಾಬಿನ್‌ ಹುಡ್ ಚಿತ್ರದ ಮೂಲಕ ಭಾರತೀಯ ಚಿತ್ರೋದ್ಯಮಕ್ಕೆ ಪದಾರ್ಪಣೆ ಮಾಡಿರುವ ವಾರ್ನರ್ ತೆಲುಗು ಅಭಿಮಾನಿಗಳ ಹೃದಯ ಗೆಲ್ಲಲು ಎದುರುನೋಡುತ್ತಿದ್ದಾರೆ. ಈ ಚಿತ್ರ ಇದೇ ಮಾರ್ಚ್ 28ರಂದು ಬಹುತೇಕ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲು ಸಜ್ಜಾಗಿದೆ. ಇನ್ನು ಸಿನಿಮಾದಲ್ಲಿ ವಾರ್ನರ್ ಯಾವ ರೀತಿಯ ಪಾತ್ರ ಮಾಡಿದ್ದಾರೆ ಎಂದು ಚಿತ್ರ ರೀಲಿಸ್ ಆದ ನಂತರ ಗೊತ್ತಾಗಲಿದೆ.

 

Continue Reading

LATEST NEWS

ಉಪಸಭಾಪತಿ ರುದ್ರಪ್ಪ ಲಮಾಣಿ ಕಾರು ಅಪಘಾತ: ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್

Published

on

ಮಂಗಳೂರು/ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ವಿಧಾನಸಭೆ ಡೆಪ್ಯೂಟಿ ಸ್ಪೀಕರ್​ ರುದ್ರಪ್ಪ ಲಮಾಣಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.


ಕರ್ನಾಟಕ ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುವ ಮಾರ್ಗ ಮಧ್ಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆ.ಜೆ.ಹಳ್ಳಿ ಗ್ರಾಮದ ಬಳಿ ರಸ್ತೆ ಅಪಘಾತ ಸಂಭವಿಸಿದೆ.

ಕೂಡಲೇ ಅವರನ್ನು ದಾವಣಗೆರೆ ಎಸ್​ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಇದೀಗ ಇದ್ದಕ್ಕಿದ್ದಂತೆ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಸುಳ್ಯ : ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿ ಪಲ್ಟಿ; ಸವಾರ ಗಂಭೀರ

ಶುಕ್ರವಾರ (ಮಾ.14) ಬೆಂಗಳೂರಿನಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆಜೆ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಎಳನೀರು ಕುಡಿಯಲು ಕಾರಿನಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್​ ಡಿಕ್ಕಿ ಹೊಡೆದಿತ್ತು.

ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಬಿದ್ದ ಶಾಸಕ ರುದ್ರಪ್ಪ ಲಮಾಣಿ ಅವರಿಗೆ ತಲೆ, ಮಂಡಿ, ಮತ್ತು ಬಾಯಿ ಹತ್ತಿರ ಗಾಯಗಳಾಗಿದ್ದವು. ತಕ್ಷಣಕ್ಕೆ ಅವರಿಗೆ ಹಿರಿಯೂರಲ್ಲಿ ಚಿಕಿತ್ಸೆ ನೀಡಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್​ ಮೂಲಕ ರಾತ್ರಿ ದಾವಣಗೆರೆಯ ಎಸ್​ಎಸ್​ ಹೈಟೆಕ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ರುದ್ರಪ್ಪ ಲಮಾಣಿ ಅವರನ್ನು ದಾವಣಗೆರೆಯ ಎಸ್​ಎಸ್ ಆಸ್ಪತ್ರೆಯಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Continue Reading

bangalore

ದೇವಾಲಯದಲ್ಲಿ ದೇವರ ತಾಳಿ ಕದ್ದ ಆರೋಪಿ ಅಂದರ್..

Published

on

ಬೆಂಗಳೂರು : ದೇವಾಲಯಲ್ಲಿಯೇ ಕಳ್ಳನೋರ್ವ ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ಶ್ಯಾಮರಾಜಪುರದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲಹಂಕ ನ್ಯೂಟೌನ್‌ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.

ಸಂಜಯ್‌ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಸಂಜಯ್ ದೇವಸ್ಥಾನದಲ್ಲಿ ಮಾ.5 ರಂದು ದೇಗುಲದ ಬೆಳ್ಳಿ ತಟ್ಟೆ, 15 ಬೆಳ್ಳಿ ಬಟ್ಟಲು, ಬೆಳ್ಳಿ ಹಸುವಿನ ವಿಗ್ರಹ, 4 ತಾಳಿ, ಕಾಸಿನ ಸರವನ್ನು ಕದ್ದಿದ್ದ. ನಂತರ ಈತ ಪರಾರಿಯಾಗಿದ್ದ. ಆದರೆ ಸಿಸಿಟಿವಿ ದೃಶ್ಯಾವಳಿ ಮೂಲಕ ಆರೋಪಿಯ ಬಂಧನ ಮಾಡಲಾಗಿದೆ.

ಕಳ್ಳ ಸಂಜಯ್‌ ವಿರುದ್ಧ ಈ ಹಿಂದೆಯೂ ಹಲವು ಪ್ರಕರಣಗಳು, ವಾರೆಂಟ್‌ ಜಾರಿಯಾಗಿತ್ತು. ಆದರೆ ವಕೀಲರಿಗೆ ಕೊಡಲು ಹಣವಿಲ್ಲದ ಕಾರಣ ಮತ್ತೆ ಕಳ್ಳತನಕ್ಕೆ ಇಳಿದಿದ್ದ. ಸದ್ಯ ಪೊಲಿಸರು ಸಂಜಯ್‌ನನ್ನು ಬಮಧಿಸಿದ್ದು, ವಿಚಾರನರ ನಡೆಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page