Connect with us

BELTHANGADY

ಬೆಳ್ತಂಗಡಿಯಲ್ಲಿ ಮೊಬೈಲ್ ಸಿಮ್ ಕಾರ್ಡ್ ತರಲು ಹೋಗಿದ್ದ ವಿವಾಹಿತೆ ನಾಪತ್ತೆ..!

Published

on

ಮೊಬೈಲ್‌ ಗೆ ಸಿಮ್ ಕಾರ್ಡ್ ತರಲು ಹೋದ ಮಹಿಳೆ ಏಕಾಎಕಿ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಂಭವಿಸಿದೆ.

ಬೆಳ್ತಂಗಡಿ: ಮೊಬೈಲ್‌ ಗೆ ಸಿಮ್ ಕಾರ್ಡ್ ತರಲು ಹೋದ ಮಹಿಳೆ ಏಕಾಎಕಿ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಂಭವಿಸಿದೆ.

ಗರ್ಡಾಡಿ ಗ್ರಾಮದ ಬಂಗಟ ಮನೆ ನಿವಾಸಿ ಜೋನ್ ಮೋನಿಸ್ ಎಂಬವರ ಪತ್ನಿ ಪ್ರಿಯಾ ಟಿ.ಎಂ (27) ಎಂಬವರು ನಾಪತ್ತೆಯಾದ ಮಹಿಳೆಯಾಗಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಡಿ.22ರಂದು ಮಡಂತ್ಯಾರಿಗೆ ಹೋಗಿ ಮೊಬೈಲ್ ಸಿಮ್ ಕಾರ್ಡ್ ತರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಂದಿಲ್ಲ.

ಅವರ ಬಳಿ ಇದ್ದ ಎರಡು ಮೊಬೈಲ್ ನಂಬರ್ ಗಳನ್ನು ಸ್ವಿಚ್ ಆಫ್ ಆಗಿದ್ದು, ಎಲ್ಲಾ ಕಡೆ ಹುಡುಕಾಡಿದರೂ ಇದುವರೆಗೆ ಪತ್ತೆಯಾಗಿಲ್ಲ ಎಂದು ಪತಿ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮನೆಯಿಂದ ಹೊರಟ ವೇಳೆ ನೀಲಿ ಬಣ್ಣದಲ್ಲಿ ಬಿಳಿಹೂಗಳಿರುವ ಚೂಡಿದಾರದ ಟಾಪ್ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದಾರೆ.

ಇವರು ಪತ್ತೆಯಾದಲ್ಲಿ ಕೂಡಲೆ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರ ಮೊಬೈಲ್ ನಂಬ್ರ: 9480805370 ಮತ್ತು ಬೆಳ್ತಂಗಡಿ ಪೊಲೀಸ್ ಠಾಣಾ ದೂರವಾಣಿ ಸಂಖ್ಯೆ 08256-232093ಯನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟನೆ ತಿಳಿಸಿದೆ.

Advertisement
Click to comment

Leave a Reply

Your email address will not be published. Required fields are marked *

BELTHANGADY

ಇಂದಿನಿಂದ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

 

ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

READ IN ENGLISH : https://www.nammakudlaenglish.com/entry-to-tourist-spots-in-belthangady-banned-from-today/

ಇದನ್ನೂ ಓದಿ: ಉಡುಪಿ: ಮಲಗಿದ್ದಾತನ ಮೇಲೆ ಕತ್ತಿಯಿಂದ ಹ*ಲ್ಲೆ ನಡೆಸಿದ ದುಷ್ಕರ್ಮಿ

Continue Reading

BELTHANGADY

ಬೆಳ್ತಂಗಡಿ: ಹಿಟಾಚಿಗೆ ಖಾಸಗಿ ಬಸ್ ಡಿ*ಕ್ಕಿ; ಓರ್ವ ಸಾ*ವು, ಹಲವರಿಗೆ ಗಾಯ

Published

on

ಬೆಳ್ತಂಗಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃ*ತಪಟ್ಟು ಹಲವರು ಗಂ*ಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ರವಿವಾರ ತಡ ರಾತ್ರಿ ನಡೆದಿದೆ.

ಮೃ*ತ ವ್ಯಕ್ತಿಯನ್ನು ಕಾರ್ಕಳ ಹೆರ್ಮುಂಡೆ ನಿವಾಸಿ ಶಂಕರ ನಾರಾಯಣ ಭಟ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಲಾವತ್ತಡ್ಕ ಎಂಬಲ್ಲಿ ಹೆದ್ದಾರಿ ಬದಿ ಲಾರಿಯಲ್ಲಿ ನಿಲ್ಲಿಸಲಾಗಿದ್ದ ಹಿಟಾಚಿಗೆ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಸಿಡಿಲು ಬ*ಡಿದು ಅವಳಿ ಹೆಣ್ಣುಮಕ್ಕಳ ಸಹಿತ ದಂಪತಿ ಸಜೀವ ದ*ಹನ!

ಘಟನೆಯಲ್ಲಿ ಹತ್ತಕ್ಕೂ ಹೆಚ್ವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಗಂಭೀರ ಗಾಯಗೊಂಡ ಶಂಕರ ನಾರಾಯಣ ಭಟ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃ*ತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಭಾರೀ ಮಳೆಗೆ ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ಬಿದ್ದ ಮರ

Published

on

ಬೆಳ್ತಂಗಡಿ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರ ಬಿದ್ದು ದಂಪತಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಾವು ಕೊಪ್ಪದ ಗಂಡಿ ಸಮೀಪ ನಡೆದಿದೆ.

ಕಡಿರುದ್ಯವಾರ ಗ್ರಾಮದ ಎರ್ಮಾಲ ಪಲ್ಕೆ ನಿವಾಸಿಗಳಾದ ಗುಮ್ಮಣ್ಣ ಮತ್ತು ವಿಮಲಾ ಗಾಯಗೊಂಡವರು. ತಾಲೂಕಿನಾದ್ಯಂತ ನಿನ್ನೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಮಣ್ಣು ಸಡಿಲಗೊಂಡು ಮರ ಬಿದ್ದಿದೆ.

ಇದನ್ನೂ ಓದಿ: ಕೇರಳ: ಬ್ರಿಟಿಷ್ ಎಫ್-35 ಫೈಟರ್ ಜೆಟ್ ತುರ್ತು ಭೂಸ್ಪರ್ಶ

ಸ್ಥಳೀಯರ ಸಹಕಾರದಿಂದ ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡ ಮರವೇ ಸ್ಕೂಟರ್ ಮೇಲೆ ಬಿದ್ದಿದ್ದು ಅದೃಷ್ಟವಶಾತ್ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page