Connect with us

LATEST NEWS

ಮಾ.1 ರಿಂದ 3 ರವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿ ಪ್ರಯುಕ್ತ ಮಾತೃ ವೈಭವ

Published

on

ಉಡುಪಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವಾರ್ಷಿಕ ವರ್ಧಂತಿಯ ಪ್ರಯುಕ್ತ ಮಾರ್ಚ್ 1 ರಿಂದ 3 ರ ವರೆಗೆ ಕಾಪುವಿನ ಅಮ್ಮನ ಸನ್ನಿದಾನದಲ್ಲಿ ಭಕ್ತರ ಸಹಕಾರದೊಂದಿಗೆ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ” ಮಾತೃ ವೈಭವ ” ವನ್ನು ವಿಜೃಂಭಣೆಯಿಂದ ಆಚರಿಸಲು ಭಾನುವಾರ ಶ್ರೀಮಾತಾ ಸಭಾಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಯಿತು.

ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಪ್ರಸ್ತಾವನೆಗೈದರು, ದೇಶ ವಿದೇಶಗಳಲ್ಲಿ ನೆಲೆಸಿರುವ ಭಕ್ತರು ಮತ್ತು ಕಾಪುವಿನ ಅಮ್ಮನ ಮಕ್ಕಳೆಲ್ಲರ ಸಹಕಾರದೊಂದಿಗೆ ಕಾಪು ಮಾರಿಯಮ್ಮನ ದೇವಸ್ಥಾನದ ಜೀರ್ಣೋದ್ಧಾರ, ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವೈಭವದಿಂದ ಸಂಪನ್ನಗೊಂಡಿದೆ. ಪ್ರತೀ ವರ್ಷ ಮಾರ್ಚ್ 1, 2, 3 ರಂದು ಪ್ರತಿಷ್ಠಾ ವರ್ಧಂತಿಯನ್ನು ವಿಜ್ರಂಭಣೆಯಿಂದ ಆಚರಿಸಲು ಎಲ್ಲರೂ ಒಗ್ಗೂಡಿಕೊಂಡು ಮಾತೃ ವೈಭವ ಉತ್ಸವ ಸಮಿತಿಯನ್ನು ರಚಿಸಿ, ವಾರ್ಷಿಕ ಉತ್ಸವವನ್ನು ಆಚರಿಸುವಂತಾಗಬೇಕು‌ ಎನ್ನುವುದು ನಮ್ಮ ಅಭಿಲಾಷೆಯಾಗಿದೆ. ಎಲ್ಲರ ಸಹಕಾರವಿರಲಿ ಎಂದರು.

ಸಮಿತಿ ಕಾರ್ಯಾಧ್ಯಕ್ಷ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯ ನಡೆದು ಬಂದಿದೆ. ದೇಶ ವಿದೇಶಗಳಲ್ಲಿಯೂ ಪ್ರಶಂಸೆ ವ್ಯಕ್ತವಾಗುತ್ತಿದೆ. ರಾಜ್ಯ, ಕೇಂದ್ರ ಸರಕಾರಗಳ ಪ್ರತಿ‌ನಿಧಿಗಳು, ಎಲ್ಲಾ ರಾಜಕಾರಣಿಗಳೂ ಮಾರಿಗುಡಿಯ‌ ಬಗ್ಗೆ ಧನಾತ್ಮಕ ಅಭಿಪ್ರಾಯ ಹೊಂದಿದ್ದಾರೆ. ಪ್ರತಿಷ್ಠಾ ವರ್ಧಂತಿಯನ್ನು ವಿಶೇಷವಾಗಿ ಕಾಪುವಿಗೆ ಪ್ರಸಿದ್ಧಿ ತರುವ ಉತ್ಸವವನ್ನಾಗಿ ಆಚರಿಸೋಣ. ಈ ಉತ್ಸವ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಮಾದರಿಯಾಗಿ ಆಯೋಜನೆಗೊಳ್ಳಬೇಕಿದೆ ಎಂದರು.

ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರವು ಎಲ್ಲರ ಸಹಕಾರದೊಂದಿಗೆ ತಪಸ್ಸಿನ ರೀತಿಯಲ್ಲಿ ಸಂಪನ್ನಗೊಂಡಿದೆ. ಅದರ ವಾರ್ಷಿಕ ವರ್ಧಂತಿಯನ್ನು ವಿಶೇಷ ರೀತಿಯಲ್ಲಿ ಆಚರಿಸುವ ಸಮಿತಿಯ ಉದ್ದೇಶ ಸ್ವಾಗತಾರ್ಹವಾಗಿದೆ. ಭಕ್ತರ ಸಹಕಾರದೊಂದಿಗೆ ವಿಜ್ರಂಭಣೆಯಿಂದ ಆಯೋಜನೆಗೊಳ್ಳುವಂತಾಗಲಿ ಎಂದು ಹಾರೈಸಿದರು.

ಇದನ್ನೂ ಓದಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ; ನವ ಪ್ರದಕ್ಷಿಣ ಸೇವೆಗೆ ಚಾಲನೆ, ಆರೋಗ್ಯ ವೃದ್ಧಿಗಾಗಿ ಸಂಕಲ್ಪ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಲಾಲಾಜಿ‌ ಆರ್. ಮೆಂಡನ್, ಅನಿಲ್ ಬಲ್ಲಾಳ್ ಕಾಪು ಬೀಡು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಎಸ್. ಶೆಟ್ಟಿ, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕ್ರಂ ಕಾಪು, ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ ಸಾಲ್ಯಾನ್, ಮನೋಹರ ರಾವ್ ಕಲ್ಯ, ರವೀಂದ್ರ ಮಲ್ಲಾರು, ಜಯಲಕ್ಷ್ಮೀ ಎಸ್. ಶೆಟ್ಟಿ, ಚರಿತಾ ದೇವಾಡಿಗ ಹಾಗೂ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿ ಸದಸ್ಯ ಮಾಧವ ಆರ್. ಪಾಲನ್‌ ಸ್ವಾಗತಿಸಿದರು. ಗೌರವ ಸಲಹೆಗಾರ ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page