Connect with us

DAKSHINA KANNADA

ಶಾಸಕ ಮಂಜುನಾಥ ಭಂಡಾರಿಯವರ ಆರೋಗ್ಯ ವಿಚಾರಿಸಿದ ದಿ.ಆಸ್ಕರ್ ಫೆರ್ನಾಂಡಿಸ್ ಕುಟುಂಬದ ಸದಸ್ಯರು

Published

on

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಆರೋಗ್ಯ ವಿಚಾರಿಸಲು ಹಿರಿಯ ರಾಜಕೀಯ ಧುರೀಣ ದಿ.ಆಸ್ಕರ್ ಫೆರ್ನಾಂಡಿಸ್ ಅವರ ಕುಟುಂಬದ ಸದಸ್ಯರು ಭೇಟಿ ನೀಡಿದರು.

ಹಿರಿಯ ನಾಯಕರು ಹಾಗೂ ಮಾಜಿ ಕೇಂದ್ರ ಸಚಿವವಾಗಿದ್ದ ದಿವಂಗತ ಆಸ್ಕರ್ ಫೆರ್ನಾಂಡಿಸ್ ಅವರ ಪತ್ನಿ ಬ್ಲಾಸಮ್ ಫೆರ್ನಾಂಡಿಸ್, ಪುತ್ರ ಓಷನ್ ಫೆರ್ನಾಂಡಿಸ್ ಹಾಗೂ ಅಳಿಯ ಮಾರ್ಕ್ ಸಲ್ದಾನ್ ಭಂಡಾರಿಯವರ ಸದಾಶಿವನಗರದ ನಿವಾಸಕ್ಕೆ ಆಗಮಿಸಿ, ವಿಶ್ರಾಂತಿ ಪಡೆಯುತ್ತಿರುವ ಶಾಸಕರ ಕುಶಲೋಪರಿ ವಿಚಾರಿಸಿದರು.

ಇದನ್ನೂ ಓದಿ : ‘ಲಕ್ಷ್ಮೀ ನಿವಾಸ’ದಿಂದ ಹೊರಬಂದ ಮತ್ತೋರ್ವ ನಟಿ…ಕಾರಣ!

ಮಂಜುನಾಥ ಭಂಡಾರಿ ಅವರು ಕೆಳದಿನಗಳಿಂದ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ವೇಳೆ ಭೇಟಿ ನೀಡಿದ ಆಸ್ಕರ್ ಕುಟುಂಬದ ಸದಸ್ಯರು ಹಳೆಯ ಒಡನಾಟದ ಬಗ್ಗೆ ಕೆಲಕಾಲ ಚರ್ಚಿಸಿದರು. ಅಲ್ಲದೆ, ಮಂಜುನಾಥ ಭಂಡಾರಿಯವರು ಶೀಘ್ರವಾಗಿ ಗುಣಮುಖರಾಗಿ, ಸಾರ್ವಜನಿಕ ಜೀವನದಲ್ಲಿ ಮತ್ತೆ ಸಕ್ರಿಯವಾಗಿ ತೊಡಗಿಕೊಳ್ಳಲಿ ಎಂದು ಹಾರೈಸಿದರು.

DAKSHINA KANNADA

ರಾಜ್ಯದಲ್ಲಿ ಎಲ್ ಪಿಜಿ ಪೂರೈಕೆಯಲ್ಲಿ ವ್ಯತ್ಯಯ; ಕುಕ್ಕೆ ಕ್ಷೇತ್ರಕ್ಕೂ ತಟ್ಟಿದ ಬಿಸಿ.. ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ

Published

on

ಸುಬ್ರಹ್ಮಣ್ಯ: ಇರಾನ್-ಇಸ್ರೇಲ್ ಸಂಘರ್ಷದ ಕಾರಣದಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಇದೀಗ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ಇದರ ಬಿಸಿ ತಟ್ಟಿದೆ.


ಸುಬ್ರಹ್ಮಣ್ಯ ದೇಗುಲದಲ್ಲಿ ಪ್ರತಿದಿನ ಬೆಳಿಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು. ಇದೀಗ ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಇಂದಿನಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಬೇಯಿಸುವ ತಿನಿಸು ಬದಲಾಗಿ ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಗ್ಯಾಸ್ ಪೊರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೊರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಸಂಘರ್ಷ: ಮಾ.12ರಂದು ಮಂಗಳೂರು- ಮಧ್ಯ ಪ್ರಾಚ್ಯ ಮಾರ್ಗದ 14 ವಿಮಾನಗಳು ರದ್ದು

ಇದರ ನಡುವೆ ಪೊರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಭೋಜನ ಪ್ರಸಾದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬದಲಾವಣೆ ಮಾಡುವುದಿದ್ದಲ್ಲಿ ಈ ಬಗ್ಗೆ ದೇವಸ್ಥಾನದ ವತಿಯಿಂದ ಅಧಿಕೃತ ಮಾಹಿತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

Continue Reading

DAKSHINA KANNADA

ಕಾಲೇಜಿಗೆ ರಾಜಕೀಯ ಕೇಂದ್ರಿತ ವ್ಯಕ್ತಿಗಳ ಅನಗತ್ಯ ಪ್ರವೇಶ ಆರೋಪ; ಮಂಗಳೂರು ವಿ.ವಿ. ಕಾಲೇಜಿನಲ್ಲಿ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

Published

on

ಮಂಗಳೂರು: ಕಾಲೇಜಿನಲ್ಲಿ ರಾಜಕೀಯ ಕೇಂದ್ರಿತ ವ್ಯಕ್ತಿಗಳ ಅನಗತ್ಯ ಪ್ರವೇಶ ಮಾಡಿ ಗದ್ದಲ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಎ.ಬಿ.ವಿ.ಪಿ. ಸಂಘಟನೆಯ ವಿದ್ಯಾರ್ಥಿಗಳು ನಿನ್ನೆ ಹಂಪನಕಟ್ಟೆಯ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದರು.


ಮಾರ್ಚ್ 9 ರಂದು ರಾಜಕೀಯ ಪಕ್ಷ ಕೇಂದ್ರಿತ ಸುಮಾರು 15 ರಿಂದ 20 ಜನರ ಗುಂಪು ಆಗಮಿಸಿ ಕೆಲವು ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳ ಜತೆ ಸಂಭಾಷಣೆಯ ನೆಪದಲ್ಲಿ ಅನಾವಶ್ಯಕ ಗದ್ದಲವನ್ನು ಸೃಷ್ಟಿಸಿರುವುದು ವಿದ್ಯಾರ್ಥಿಗಳಲ್ಲಿ ಕಳವಳವನ್ನುಂಟು ಮಾಡಿದೆ. ಈ ರೀತಿ ಕಾಲೇಜಿಗೆ ಸಂಬಂಧ ಪಡದ, ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಗಳ ಕ್ಯಾಂಪಸ್ ಪ್ರವೇಶವು ಅತ್ಯಂತ ಖಂಡನೀಯ.

ಇಂತಹ ಘಟನೆಗಳು ಕಾಲೇಜಿನಲ್ಲಿ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ. ಈ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಇದಕ್ಕೆ ಅನುಮತಿ ನೀಡಿರುವ ಪ್ರಾಧ್ಯಾಪಕರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಎಬಿವಿಪಿ ಮುಖಂಡರು ಒತ್ತಾಯಿಸಿದರು.̇

ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತು ಹಾನಿ!

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲ ಗಣಪತಿ‌ ಗೌಡ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸಿದರು. ನಿನ್ನೆ ನಮ್ಮಿಂದ ಒಂದು ಆಚಾತುರ್ಯ ನಡೆದು ಹೋಗಿದೆ. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಬರ್ತಾರೆ ಅಂತಾ ಹೇಳಿದ್ದರು. ಆದರೆ ಘೋಷಣೆ ‌ಕೂಗಿದ ವಿಚಾರ ನಮಗೆ ಗೊತ್ತಾಗಿಲ್ಲ. ಸಾಂಕೇತಿಕವಾಗಿ ಸಿಹಿ ತಿಂಡಿ ವಿತರಿಸಿದ್ದಾರೆ. ನಿನ್ನೆ ನಡೆದ ಘಟನೆಯ ವರದಿಯನ್ನು ಉಪಕುಲಪತಿಯಯವರಿಗೆ ನೀಡ್ತೇವೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಪ್ರಾಂಶುಪಾಲರು ಆಶ್ವಾಸನೆ ನೀಡಿದರು.

Continue Reading

DAKSHINA KANNADA

ಉಳ್ಳಾಲ ನಗರಸಭೆ ಅಧ್ಯಕ್ಷರ ಕಾರು ಚಾಲಕ ಹೃದಯಾಘಾತದಿಂದ ನಿಧನ

Published

on

ಉಳ್ಳಾಲ: ಉಳ್ಳಾಲ ನಗರಸಭೆ ಯ ಅಧ್ಯಕ್ಷರ ಕಾರು ಚಾಲಕರಾಗಿ ಕಾರ್ಯನಿರ್ವಹಿಸುತಿದ್ದ, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯ ಅಶೋಕ್ ಉಳ್ಳಾಲಬೈಲ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಮೃತರು 2 ಮಕ್ಕಳನ್ನು ಅಗಲಿದ್ದಾರೆ.


ಕರ್ನಾಟಕ ರಾಜ್ಯ ವಿಧಾನ ಸಭಾ ಸಭಾಧ್ಯಕ್ಷ ಯು. ಟಿ. ಖಾದರ್, ಮಂಗಳೂರು ಮುಡ ಅಧ್ಯಕ್ಷ ಸದಾಶಿವ ಉಳ್ಳಾಲ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ಸಭಾಧ್ಯಕ್ಷರ ಆಪ್ತ ಸಹಾಯಕ ಮನ್ಸೂರ್ ಮಂಚಿಲ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇವರ ನಿಧನಕ್ಕೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page