Connect with us

LATEST NEWS

ಇದೇ ಕಾರಣಕ್ಕೆ ನಿಮಗೆ ಗೃಹಲಕ್ಷ್ಮಿ ಹಣ ಬಂದಿಲ್ಲ ಅನಿಸುತ್ತೆ

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಹಣದಿಂದ ಬೆಳಗಾವಿಯ ವೃದ್ಧೆಯೊಬ್ಬರು ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ್ದ ವಿಚಾರ ಸಿಎಂ ಸಿದ್ದರಾಮಯ್ಯವರೆಗೂ ತಲುಪಿತ್ತು. ಇದಕ್ಕೆ ಸಂತಸ ವ್ಯಕ್ತಪಡಿಸಿ ವೃದ್ಧೆಗೆ ಸನ್ಮಾನವೂ ಮಾಡಲಾಗಿದೆ. ಆದರೆ, ಕೆಲವು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂದು ಫಲಾನುಭವಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೂ ಹಲವರು ನಮಗೆ ಗೃಹಲಕ್ಷ್ಮಿ ಯೋಜನೆಯಿಂದ ಹಣ ಬರಲೇ ಇಲ್ಲ ಎಂದು ತಲೆಕೆಡಿಸಿಕೊಂಡವರೂ ಇದ್ದಾರೆ. ಈಗ ಇದಕ್ಕೆ ಕಾರಣವನ್ನು ಖುದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರೇ ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಅವರು, ಜಿಎಸ್‌ಟಿ ಹಾಗೂ ಆದಾಯ ತೆರಿಗೆ ತುಂಬುವವರಿಗೆ ಗೃಹಲಕ್ಷ್ಮಿ ಯೋಜನೆಯಡಿ ಹಣ ಬರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುವವರಿಗೆ ಕೆಲವು ನಿಯಮಗಳನ್ನು ರೂಪಿಸಲಾಗಿತ್ತು. ಜಿಎಸ್‌ಟಿ, ಆದಾಯ ತೆರಿಗೆ ತುಂಬುವವರು ಗೃಹಲಕ್ಷ್ಮಿ ಯೋಜನೆಯ ವ್ಯಾಪ್ತಿಗೆ ಸೇರುವುದಿಲ್ಲ ಎಂದು ಹೇಳಿದ್ದವು. ಆದರೂ ಜಿಎಸ್‌ಟಿ ಇದ್ದವರೂ ಸರ್ಕಾರದ ಪೋರ್ಟಲ್‌ನಲ್ಲಿ ಈ ಯೋಜನೆಗೆ ಅರ್ಜಿ ಹಾಕಿದ್ದರು. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ವಿವರಣೆ ನೀಡಿದ್ದಾರೆ.

ಈ ರೀತಿ ಗೃಹಲಕ್ಷ್ಮಿ ಯೋಜನೆಗೆ ಅನರ್ಹವಾದ ಸುಮಾರು 15 ಸಾವಿರಕ್ಕೂ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿದಾರರ ಹಿನ್ನೆಲೆ ಪರಿಶೀಲಿಸಿದಾಗ ಜಿಎಸ್‌ಟಿಗೆ ಒಳಪಟ್ಟಿರುವುದು ತಿಳಿಯಿತು. ಕೂಡಲೇ ಅಂತಹ ಅರ್ಜಿಗಳನ್ನು ರಿಜೆಕ್ಟ್‌ ಮಾಡಿದ್ದೇವೆ. ರಾಜ್ಯಾದ್ಯಂತ ಶ್ರೀಮಂತರು, ಜಿಎಸ್‌ಟಿ ಇದ್ದವರು ಸೇರಿ ಒಟ್ಟು 1.58 ಕೋಟಿ ಕುಟುಂಬಗಳಿವೆ ಎಂದು ಮಾಹಿತಿ ನೀಡಿದ್ದಾರೆ.

DAKSHINA KANNADA

ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಆರೋಪ; ಆರೋಪಿಯ ಬಂಧನ

Published

on

ಮಂಗಳೂರು : ವಿದ್ಯಾರ್ಥಿಗಳಿಗೆ ಮಾ*ದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಶನಿವಾರ(ಜ.17) ಬಂಧಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಮುತೊಲಪುರಂ ನಿವಾಸಿ 20 ವರ್ಷದ ಜೂಡ್ ಮಾಥ್ಯೂ ಬಂಧಿತ ಆರೋಪಿ. ಆತನಿಂದ 5.20 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಕೃ*ತ್ಯಕ್ಕೆ ಬಳಸಿದ  ಬೈಕ್ ಸಮೇತ ಒಟ್ಟು 70 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ : ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

ಮಂಗಳೂರಿನ ಪದವು ಗ್ರಾಮದ ಕೈಲಾಸ ಕಾಲನಿ ಸಮೀಪ ಯುವಕನೋರ್ವ ಮಾ*ದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

 

Continue Reading

LATEST NEWS

ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

Published

on

ಮಂಗಳೂರು/ಭಟ್ಕಳ :  ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿ*ಕ್ಕಿಯಾದ  ಪರಿಣಾಮ ಇಬ್ಬರು ಸಾ*ವನ್ನಪ್ಪಿದ ಘಟನೆ ಭಟ್ಕಳದ ವೆಂಕಟಾಪುರದ ಬಳಿ ನಡೆದಿದೆ.

ಭಟ್ಕಳದ ಆಜಾದ್ ನಗರ ನಿವಾಸಿ 15 ವರ್ಷದ ಬಿಲಾಲ್  ಹಾಗೂ 20 ವರ್ಷದ ಆಯಾನ್ ಮೃ*ತ ದುರ್ದೈ*ವಿಗಳು.

ಬಿಲಾಲ್ ಸ್ಥಳದಲ್ಲೇ ಸಾ*ವನ್ನಪ್ಪಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾ*ಯಗೊಂಡಿದ್ದ. ಆತನನ್ನು ಉಡುಪಿಯ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.‌

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪ*ಘಾತ ನಡೆದಿದೆ. ಅಪ*ಘಾತ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page