Connect with us

LATEST NEWS

ಅಕ್ರಮ ಗೋ ಸಾಗಾಟ, ಕಾನೂನು ಬಾಹಿರ ಮತಾಂತರ: ಸಚಿವ ಸುನಿಲ್‌ ಸಭೆ

Published

on

ಉಡುಪಿ: ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಮತ್ತು ಕಾನೂನು ಬಾಹಿರ ಮತಾಂತರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ.

ಈ ನಿಟ್ಟಿನಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುವಂತೆ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ.


ಕಾರ್ಕಳ ಪ್ರವಾಸಿ ಬಂಗಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವರು,

ಜಿಲ್ಲೆ ಹಾಗೂ ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ಗಳನ್ನು ಹೆಚ್ಚಿಸಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡುವ ಮೂಲಕ ವಾಹನ ತಪಾಸಣೆ,

ಈ ಹಿಂದೆ ಅಕ್ರಮ ಗೋ ಸಾಗಾಣಿಕೆಯಲ್ಲಿ ಭಾಗಿಯಾಗಿದ್ದ ಶಂಕಿತರನ್ನು ಮತ್ತು ಮಧ್ಯವರ್ತಿಗಳನ್ನು ಠಾಣೆಗೆ ಕರೆಸಿ ವಿಚಾರಣೆಗೆ ಒಳಪಡಿಸುವಂತೆ ಸೂಚಿಸಿದರು.
ಪೊಲೀಸ್ ಠಾಣಾಧಿಕಾರಿಗಳ ಗಸ್ತಿಗೆ ಸುಸಜ್ಜಿತ ವಾಹನಗಳನ್ನು ಹಂಚಿಕೆ ಮಾಡುವಂತೆ ಸೂಚಿಸಿದಲ್ಲದೇ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಕೆಗಳ ವಿರುದ್ಧ ಜಾಗೃತಿ ಸಭೆಗಳನ್ನು ನಡೆಸುವಂತೆ ಸಲಹೆ ನೀಡಿದರು.
ಈ ಸಭೆಯಲ್ಲಿ ಕುಂದಾಪುರ ಸಹಾಯಕ ಕಮಿಷನರ್, ಕಾರ್ಕಳ ತಹಶೀಲ್ದಾರ್ ಹಾಗೂ ಜಿಲ್ಲೆಯ ಮೂರು ಪೊಲೀಸ್ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಉಪಸ್ಥಿತರಿದ್ದರು.

DAKSHINA KANNADA

ಜಪ್ಪಿನಮೊಗರು ನಾರಾಯಣಗುರು ಮಂದಿರದಲ್ಲಿ ಆರೋಗ್ಯ ತಪಾಸಣಾ ಶಿಬಿರ

Published

on

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಎನ್.ಜಿ. ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಮತ್ತು ಗುರುಗಳ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಭಾನುವಾರ(ಫೆ.08) ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಆಯೋಜಿಸಲಾಗಿತ್ತು.

ಕಂಕನಾಡಿ ಗರೋಡಿಯ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದ ಮೊಕ್ತೇಸರ ಚಂದ್ರನಾಥ್ ಅತ್ತಾವರ  ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯವನ್ನು ದೇವರು ಕರುಣಿಸುತ್ತಾರೆ ಎಂಬುದು  ನಮ್ಮ ನಂಬಿಕೆ. ಆದರೆ ಆರೋಗ್ಯವನ್ನು ಕಾಪಾಡಿಕೊಂಡು ಬರುವಲ್ಲಿ ನಮ್ಮ ಪಾತ್ರವೂ ಇದೆ. ಉತ್ತಮ ಜೀವನ ಶೈಲಿಯನ್ನು ರೂಢಿಸಿಕೊಂಡು ಬರುವುದು ನಮ್ಮ ಜವಾಬ್ದಾರಿ. ಹಾಗಿರುವಾಗ ಇಂತಹ ಶಿಬಿರಗಳು ಸಹಕಾರಿಯಾಗುತ್ತವೆ ಎಂದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ, ಜನರ ಆರೋಗ್ಯವನ್ನು ಕಾಪಾಡಿಕೊಂಡು ಬರಬೇಕೆಂಬ ಉದ್ದೇಶದಿಂದ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುತ್ತಿದೆ. ಸಹಕಾರಿ ಸಂಘಗಳ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ಪ್ರಯೋಜನ ಲಭಿಸುತ್ತಿದ್ದು, ಅದರ ಪ್ರಯೋಜನ ಪಡೆಯಬೇಕೆಂದರು.  ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಮನೋಜ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ :WATCH VIDEO : ಉಡುಪಿ : ಕಬ್ಯಾಡಿಯಲ್ಲಿ ಕಾಂಪೌಂಡ್‌ನಲ್ಲಿ ಅಡ್ಡಾಡಿದ ಚಿರತೆ; ವೀಡಿಯೋ ವೈರಲ್!

ಕದ್ರಿಯ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ ಹಾಗೂ ಮುಕ್ಕ ಶ್ರೀನಿವಾಸ್ ಇನಿಸ್ಟಿಟ್ಯೂಟ್‌ ಆಫ್‌ ಡೆಂಟಲ್ ಸಾಯನ್ಸ್ ಇದರ ತಜ್ಞ ವೈದ್ಯರು ವೈದ್ಯಕೀಯ ತಪಾಸಣೆಯನ್ನು ನಡೆಡಿಕೊಟ್ಟರು.

Continue Reading

LATEST NEWS

ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ ನಲ್ಲಿ ಆಕಸ್ಮಿಕ ಬೆಂಕಿ ದುರಂತ

Published

on

ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಮಂಗಳೂರಿನಿಂದ ಗಜೇಂದ್ರ ಘಡಕ್ಕೆ ಸಂಚರಿಸುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.


ಬಸ್ ಚಲಿಸುತ್ತಿದ್ದ ವೇಳೆ ಇಂಜಿನ್ ಭಾಗದಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಚಾಲಕ ಸಮಯಪ್ರಜ್ಞೆ ಪ್ರದರ್ಶಿಸಿ ಬಸ್ಸನ್ನು ರಸ್ತೆಯ ಬದಿಗೆ ನಿಲ್ಲಿಸಿ, ಪ್ರಯಾಣಿಕರಿಗೆ ಸುರಕ್ಷಿತವಾಗಿ ಇಳಿಯಲು ಅವಕಾಶ ಮಾಡಿಕೊಟ್ಟರು. ಚಾಲಕನ ಬಾಗಿಲು ಮೂಲಕ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮದ್ಯವೆಂದು ಸ್ಪಿರಿಟ್ ಸೇವಿಸಿ ಯುವಕ ಸಾವು; ಇಬ್ಬರ ಬಂಧನ

ಚಾಲಕನ ತಕ್ಷಣದ ಕ್ರಮದಿಂದಾಗಿ ಸಂಭವಿಸಬಹುದಾದ ಭಾರಿ ಅವಘಡ ತಪ್ಪಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲವೆಂದು ವರದಿಯಾಗಿದೆ. ಘಟನೆಯ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

DAKSHINA KANNADA

ದೇಶದ ಆರ್ಥಿಕ ಪ್ರಗತಿಗೆ ಪೂರಕವಾಗಿದೆ ಕೇಂದ್ರ ಬಜೆಟ್ : ಎಸ್.ಎಸ್.ನಾಯಕ್

Published

on

ಮಂಗಳೂರು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಈ ವರ್ಷದ ಬಜೆಟ್‌ ದೇಶದ ಆರ್ಥಿಕ ಪ್ರಗತಿಗೆ ಪೂರಕವಾದ ಬಜೆಟ್‌ ಆಗಿದೆ ಎಂದು ಹಿರಿಯ ಲೆಕ್ಕಪರಿಶೋಧಕ, ಆರ್ಥಿಕ ತಜ್ಞ ಎಸ್‌. ಎಸ್‌. ನಾಯಕ್‌  ಅಭಿಪ್ರಾಯ ಪಟ್ಟಿದ್ದಾರೆ. ಮಂಗಳೂರು ಪ್ರಾಡಕ್ಟಿವಿಟಿ ಕೌನ್ಸಿಲ್‌ ವತಿಯಿಂದ ಲೇಡಿಹಿಲ್‌ ನ ಸೀ ವ್ಯೂ ಹೊಟೇಲ್‌ ಸಭಾಂಗಣದಲ್ಲಿ ಶನಿವಾರ(ಫೆ.07)ಏರ್ಪಡಿಸಿದ್ದ ಡಿ ಕೋಡಿಂಗ್ ಯೂನಿಯನ್ ಬಜೆಟ್ 2026 ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.

ಈ ಬಾರಿಯ ಬಜೆಟ್‌ನಲ್ಲಿ ವಿಶೇಷವಾಗಿ ಯಾವ ಕೊಡುಗೆಯನ್ನೂ ನೀಡಿಲ್ಲ ಎಂದು ಕೆಲವರು ಟೀಕೆ ಮಾಡುತ್ತಾರೆ. ಆದರೆ ಇಂತಹ ಆರೋಪದಲ್ಲಿ ಹುರುಳಿಲ್ಲ. ಏಕೆಂದರೆ ಬಜೆಟ್‌ನ್ನು ಪೂರ್ತಿಯಾಗಿ ಓದಿ ಆರ್ಥೈಸಿಕೊಳ್ಳದವರು ಮಾತ್ರ ಈ ರೀತಿಯಾಗಿ ಹೇಳಿಕೆ ನೀಡುತ್ತಾರೆ ಎಂದರು.

ಈ ಬಜೆಟ್‌ನಲ್ಲಿ ಅನೇಕ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಯಾವುದೇ ಹೆಚ್ಚುವರಿ ತೆರಿಗೆಯನ್ನು ಹಾಕದೆ ಜನರಿಗೆ ಅನೇಕ ಪ್ರಯೋಜನಗಳನ್ನು ನೀಡಿದೆ. ಭಾರತವು ಜಗತ್ತಿನ ಅತಿ ವೇಗದ ಆರ್ಥಿಕ ಶಕ್ತಿಯಾಗಿ ಮೂಡಿಬರುತ್ತಿದ್ದು, ಅದಕ್ಕೆ ಪೂರಕವಾಗಿ ಈ ಬಜೆಟ್‌ ಬಂದಿದೆ.  ಬಂಡವಾಳ ವೆಚ್ಚದಲ್ಲಿ ಏರಿಕೆಯಾಗಿದ್ದು, 12.20 ಲಕ್ಷ ಕೋಟಿ ರೂಪಾಯಿ  ಮೀಸಲಿಡಲಾಗಿದೆ. ಇದು ಬಜೆಟ್‌ ಗಾತ್ರದ ಶೇಕಡಾ 22.80 ಆಗಿದ್ದು, ಆರ್ಥಿಕ ಪ್ರಗತಿಗೆ ಪೂರಕವಾಗಿದೆ. ಮುಂಬರುವ ದಿನಗಳಲ್ಲಿ ದೇಶದ ನಂ.1 ಆರ್ಥಿಕ ಶಕ್ತಿಯಾಗಿ ಮೂಡಿಬರಲು ಸಹಾಯಕವಾಗಿದೆ ಎಂದರು.

ಇದನ್ನೂ ಓದಿ : ಮಂಗಳೂರು : ಕೆಎಂಸಿ ಆಸ್ಪತ್ರೆಯಲ್ಲಿ ‘ಕ್ಯಾನ್ಸರ್ ತಪ್ಪಿಸೋಣ’ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಕೆನರಾ ಬ್ಯಾಂಕ್‌ ಮಂಗಳೂರು ವೃತ್ತ ಕಚೇರಿಯ ಜನರಲ್‌ ಮ್ಯಾನೇಜರ್‌ ಮತ್ತು ಮುಖ್ಯಸ್ಥ  ಮಂಜುನಾಥ್‌ ಬಿ. ಸಿಂಘೈ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಒಮಾನ್ ದೇಶದ ಸಿಬಿಎಫ್‌ಎಸ್‌- ಸೆಂಟರ್‌ ಫಾರ್‌ ಟ್ರೈನಿಂಗ್‌ ಇದರ ನಿರ್ದೇಶಕ ಡಾ.ಕೆ. ರಾಜೇಶ್‌ ನಾಯಕ್‌, ಮಂಗಳೂರು ಪ್ರಾಡಕ್ಟಿವಿಟಿ ಕೌನ್ಸಿಲ್‌ನ ಅಧ್ಯಕ್ಷ ಯು.ರಾಮರಾವ್‌ ಮತ್ತಿತರರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page