Connect with us

ಚಿಟಿಕೆ ಹೊಡೆಯುವಷ್ಟರಲ್ಲಿ ಕೊರೊನಾ ಗೃಹಬಂಧನದಲ್ಲಿರುವವರ ಮಾಹಿತಿ: ಬೆಳ್ತಂಗಡಿ ತಾಲೂಕಿನಲ್ಲೊಂದು ವಿನೂತನ ಪ್ರಯೋಗ

Published

on

ಚಿಟಿಕೆ ಹೊಡೆಯುವಷ್ಟರಲ್ಲಿ ಕೊರೊನಾ ಗೃಹಬಂಧನದಲ್ಲಿರುವವರ ಮಾಹಿತಿ: ಬೆಳ್ತಂಗಡಿ ತಾಲೂಕಿನಲ್ಲೊಂದು ವಿನೂತನ ಪ್ರಯೋಗ

ಬೆಳ್ತಂಗಡಿ: ಕೊರೊನಾ ವೈರಸ್ ವಿರುದ್ಧ ಹೋರಾಡಲು ಬೆಳ್ತಂಗಡಿ ತಾಲೂಕು ಸಂಪೂರ್ಣ ಸಜ್ಜಾಗಿದೆ. ಈಗಾಗಲೇ ತಾಲೂಕಿನಲ್ಲಿ ಕೊರೊನಾ ಸೋಂಕಿತ ಪತ್ತೆಯಾದ ಬೆನ್ನಲ್ಲೇ ತಾಲೂಕು ಆಡಳಿತ ಮಂಡಳಿ ಮತ್ತಷ್ಟು ಅಲರ್ಟ್ ಆಗಿದೆ.

ಶಾಸಕ ಹರೀಶ್ ಪೂಂಜಾ ಹಾಗೂ ತಹಶೀಲ್ದಾರ್ ನೇತೃತ್ವದಲ್ಲಿ ಮಿನಿ ವಿಧಾನಸೌಧದಲ್ಲಿ ಕೊರೊನಾ ವಾರ್ ರೂಮ್ ಕೂಡ ಕಾರ್ಯನಿರ್ವಹಿಸುತ್ತಿದ್ದು, ಇದೀಗ ವಿಶೇಷವಾಗಿ ಹೊಸ ಆ್ಯಪ್ ಕೂಡ ಲಾಂಚ್ ಮಾಡಲಾಗಿದೆ.

ದೇಶದಲ್ಲಿಯೇ ಇದೊಂದು ವಿನೂತನ ಪ್ರಯೋಗವಾಗಿದೆ ಅಂತ ಶಾಸಕರು ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ವೆಬ್ ಆ್ಯಪ್ ಅನ್ನು ಇಂದು (ಮಾರ್ಚ್ 29) ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜಾ ಮಿನಿ ವಿಧಾನಸೌಧದಲ್ಲಿರುವ ವಾರ್ ರೂಮ್ ನಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಗಣಪತಿ ಶಾಸ್ತ್ರಿ, ತಾಲೂಕಿನ ಪೊಲೀಸ್ ವೃತ್ತ ನಿರೀಕ್ಷಕರಾದ ಸಂದೇಶ್ ಹಾಗೂ ಆ್ಯಪ್ ಸಿದ್ಧಪಡಿಸಿದ ಐಸರ್ಚ್ ನ ಪ್ರತಿನಿಧಿ ಅರವಿಂದ್ ಭಟ್, ಬಾಲಕೃಷ್ಣ ಶೆಟ್ಟಿ ತಾಲೂಕಿನ ಆರೋಗ್ಯಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಕೊರೊನ ಸೋಂಕು ಹೊಂದಿರುವರ ಜೊತೆ ಸಂಪರ್ಕ ಹೊಂದಿ, ಸೋಂಕಿಗೆ ತುತ್ತಾಗುವ ಸಾಧ್ಯತೆ ಇರುವ ಶಂಕಿತರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ.

ಹೀಗೆ ಪರಿವೀಕ್ಷಣೆಯಲ್ಲಿರುವವರ ಮಾಹಿತಿಗೆ ಜಿಪಿಎಸ್ ಆಧಾರಿತ ಆ್ಯಪ್ ಬಳಕೆಗೆ ಬೆಳ್ತಂಗಡಿ ತಾಲೂಕು ಸಜ್ಜಾಗಿದೆ.

ಕೊರೊನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೇಂದ್ರ ರಾಜ್ಯ ಸರಕಾರಗಳು ಆತಂಕಕ್ಕೆ ಒಳಗಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಸಾವಿರಾರು ಮಂದಿ ಹೋಮ್ ಕ್ವಾರಂಟೈನ್ ಅಂದರೆ ಗೃಹಬಂಧನದಲ್ಲಿದ್ದಾರೆ.

ಆದರೆ ಇತ್ತೀಚಿನ ಕೆಲವು ದಿನಗಳಿಂದ ಹೀಗೆ ಹೋಮ್ ಕ್ವಾರಂಟೈನ್ ಆಗಿರುವ ಕೆಲವು ಶಂಕಿತರು ಸೀಲ್ ಹಾಕಿದ್ರೂ ಓಡಾಟ ನಡೆಸುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ.

ಇವರನ್ನು ಮನೆಯಲ್ಲೇ ನಿಗಾ ಇರಿಸಲು ಕುಟುಂಬದವರು, ಪೊಲೀಸರು, ಆಶಾ ಕಾರ್ಯಕರ್ತೆಯರು, ವೈದ್ಯರು ಹರಸಾಹಸ ಪಡುತ್ತಿರುವ ಹಿನ್ನೆಲೆಯಲ್ಲಿ ಐಸರ್ಚ್ ಎಂಬ ಸಂಸ್ಥೆಯ ನೆರವಿನಿಂದ ಹೊಸ ಆಪ್ ಬಿಡುಗಡೆ ಮಾಡಲಾಗಿದೆ.

COVID-19 BLT DATABASE ಅನ್ನೊ ಈ ಆ್ಯಪ್ ಬೆಳ್ತಂಗಡಿ ತಾಲೂಕು ಆಡಳಿತ, ತಹಶೀಲ್ದಾರರು, ಪೊಲೀಸ್ ಇಲಾಖೆ, ಆರೋಗ್ಯ, ಕಂದಾಯ, ನಾಗರೀಕ ಸರಬರಾಜು ಇಲಾಖೆ,

ಶಾಸಕರ ಕಚೇರಿ ಹಾಗೂ ಐಸರ್ಚ್ ಸಹಯೋಗದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಜಿಪಿಎಸ್ ಆಧಾರಿತ ಆ್ಯಪ್ ಬಳಸಿ ಸೋಂಕಿತರ ಮೇಲೆ ನಿಗಾ ಇಡುವ ವಿಭಿನ್ನ ಕಾರ್ಯಕ್ಕೆ ಮುಂದಾಗಿದೆ.

‘ಬೆಳ್ತಂಗಡಿ ತಾಲೂಕಿನ 81 ಗ್ರಾಮಗಳಲ್ಲಿರುವ ಕೋವಿಡ್ 19 ಗೃಹಪರಿವೀಕ್ಷಣೆಯಲ್ಲಿರುವವರ ಸಂಪೂರ್ಣ ವರದಿ ಇನ್ನುಮುಂದೆ ಈ ವಿಶೇಷ ವೆಬ್ ಆ್ಯಪ್ ನಲ್ಲಿ ಲಭ್ಯವಾಗಲಿದೆ.

ದಿನಂಪ್ರತಿ ಆಶಾ ಕಾರ್ಯಕರ್ತೆಯರು ಹಾಗೂ ಬೀಟ್ ಪೊಲೀಸರು ಸಂಗ್ರಹಿಸಿದ ಮಾಹಿತಿಯನ್ನು ಈ ಆ್ಯಪ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ.

ಹಾಗಾಗಿ ಪ್ರತಿಯೊಬ್ಬರು ತಮ್ಮ-ತಮ್ಮ ಮನೆಯಲ್ಲಿಯೇ ಕುಳಿತು ತಾಲೂಕಿನಲ್ಲಿ ಕೊರೊನಾ ಶಂಕಿತರಾಗಿ ಗೃಹಬಂಧನದಲ್ಲಿರುವವರ ಹಾಗೂ ಅವರ ಮನೆಯವರ ಆರೋಗ್ಯದ ಬಗೆಗಿರುವ ಮಾಹಿತಿಯನ್ನು ಅಂಗೈಯಲ್ಲಿರುವ ಮೊಬೈಲ್ ಮೂಲಕ ಸಂಗ್ರಹಿಸಬಹುದಾಗಿದೆ.

ಈ ಅಪ್ ಕೋವಿಡ್ 19 (ಕೊರೊನಾ ವೈರಸ್) ಶಂಕಿತರನ್ನು ಟ್ರ್ಯಾಕ್ ಮಾಡುವ ಮುಖಾಂತರ ಸೋಂಕು ಇತರರಿಗೆ ಹರಡುವುದನ್ನು ತಡೆಗಟ್ಟಲು ಸಹಕರಿಸಲಿದೆ.

‘ಐಸರ್ಚ್ ಸೊಲ್ಯೂಷನ್ಸ್ ಪ್ರೈವೆಟ್ ಲಿಮಿಟೆಡ್’ ಸಂಸ್ಥೆಯು ಈ ವೆಬ್ ಆ್ಯಪ್ ಅನ್ನು ಸಿದ್ಧಪಡಿಸಿದ್ದು, ‘ಕಿಯೋನಿಕ್ಸ್ ಬಿಸಿನೆಸ್’ ಇದರ ಸಹಭಾಗಿತ್ವ ವಹಿಸಿಕೊಂಡಿದೆ.

ನಾಳೆಯಿಂದ ಪ್ಲೇ ಸ್ಟೋರ್ ನಲ್ಲಿ ಈ ಆ್ಯಪ್ ಲಭ್ಯವಾಗಲಿದ್ದು, ತಾಲೂಕಿನ ಜನತೆ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

video..

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page