Connect with us

LATEST NEWS

ನೆರೆಗೆ ಕೊಚ್ಚಿಹೋಗಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕ ರಘುಪತಿ ಭಟ್

Published

on

ನೆರೆಗೆ ಕೊಚ್ಚಿಹೋಗಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕ ರಘುಪತಿ ಭಟ್

ಉಡುಪಿ : ನೆರೆಗೆ ಕೊಚ್ಚಿಹೋಗಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಶಾಸಕ ಕೆ. ರಘುಪತಿ ಭಟ್ ಪರಿಹಾರ ವಿತರಣೆ ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿ ಸುಧಾಮ ಪೂಜಾರಿ ಎಂಬುವವರು ಇತ್ತೀಚೆಗೆ ಸುರಿದ ಭಾರಿ ಮಳೆಯ ನೆರೆಗೆ ಕೊಚ್ಚಿಹೋಗಿ ಮೃತಪಟ್ಟಿರುತ್ತಾರೆ.

ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಶಿಫಾರಸ್ಸು ಮಾಡಿರುವಂತೆ ಪ್ರಾಕೃತಿಕ ಪರಿಹಾರ ನಿಧಿಯಿಂದ ರೂ. 5 ಲಕ್ಷ ಮಂಜೂರಾಗಿರುತ್ತದೆ.

ಮೃತರ ಮನೆಗೆ ಭೇಟಿ ನೀಡಿದ ಶಾಸಕ ಕೆ. ರಘುಪತಿ ಭಟ್ ರವರು ಮೃತ ಸುಧಾಮ ಪೂಜಾರಿ ಅವರ ಕುಟುಂಬದವರಿಗೆ ರೂ. 5 ಲಕ್ಷ ಪರಿಹಾರ ಧನದ ಚೆಕ್ ವಿತರಿಸಿದರು.

ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಕಂದಾಯ ನಿರೀಕ್ಷಕರಾದ ವಿಶ್ವನಾಥ್, ಕಲ್ಯಾಣಪುರ ಗ್ರಾಮ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

LATEST NEWS

ಮನೆಯಲ್ಲೇ ಹರಿಯಿತು ರಕ್ತದೋಕುಳಿ: ಅವಳಿ ಸಹೋದರಿಯ ಮೇಲೆ 40ಕ್ಕೂ ಹೆಚ್ಚು ಬಾರಿ ಇರಿದ ಕಿರಾತಕ ಸಹೋದರ!

Published

on

ಮೊರಾದಾಬಾದ್: ಬ್ರೇಕಪ್ ಬಳಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಅವಳಿ ಸಹೋದರಿಯರಿಗೆ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.


ಮೊರಾದಾಬಾದ್‌ನ ಮಜೋಲಾ ಪೊಲೀಸ್ ಠಾಣೆ ವ್ಯಾಪ್ತಿಯ ಬುದ್ಧಿ ವಿಹಾರ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. 25 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಹಾರ್ದಿಕ್, ತನ್ನ ಅವಳಿ ಸಹೋದರಿ ಹಿಮಶಿಖಾಳನ್ನು 40ಕ್ಕೂ ಹೆಚ್ಚು ಬಾರಿ ಇರಿದು ಹತ್ಯೆ ಮಾಡಿದ್ದಾನೆ ಇಬ್ಬರೂ ಗುರುಗ್ರಾಮದಲ್ಲಿ ಕೆಲಸ ಮಾಡುತ್ತಿದ್ದು, ಹೋಳಿ ಆಚರಿಸಲು ಮನೆಗೆ ಬಂದಿದ್ದರು.

ಇತ್ತೀಚೆಗೆ ಹಾರ್ದಿಕ್ ತನ್ನ ಗೆಳತಿಯೊಂದಿಗೆ ಬ್ರೇಕ್ಅಪ್ ಮಾಡಿಕೊಂಡಿದ್ದನು. ತನ್ನ ಪ್ರೀತಿ ವಿಫಲವಾಗಲು ತನ್ನ ತಾಯಿ ಮತ್ತು ಸಹೋದರಿಯೇ ಕಾರಣ ಎಂದು ಆತ ನಂಬಿದ್ದನು. ಈ ದ್ವೇಷ ಹಾಗೂ ಬ್ರೇಕ್ಅಪ್‌ನಿಂದ ಉಂಟಾದ ಖಿನ್ನತೆಯಿಂದಾಗಿ ಆತ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಮನೆಯ ಬೆಡ್‌ರೂಮ್‌ನಿಂದ ಅಡುಗೆ ಮನೆಯವರೆಗೆ ರಕ್ತದ ಕಲೆಗಳು ಹರಡಿಕೊಂಡಿದ್ದವು. ಹಾರ್ದಿಕ್ ತನ್ನ ತಾಯಿಯ ಮೇಲೆಯೂ ಮಾರಣಾಂತಿಕ ದಾಳಿ ಮಾಡಿದ್ದು, ತಾಯಿಯ ಕಿರುಚಾಟ ಕೇಳಿ ಪಕ್ಕದ ಮನೆಯವರು ಒಳಗೆ ಓಡಿ ಬಂದು ದೃಶ್ಯ ನೋಡಿ ದಿಗ್ಭ್ರಮೆಗೊಂಡರು.

ಇದನ್ನೂ ಓದಿ: ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್: ಲಿಂಗಸೂಗೂರು ನ್ಯಾಯಾಲಯದಿಂದ ಆರೋಪಿಗೆ ಜೀವಾವಧಿ ಶಿಕ್ಷೆ

ತಕ್ಷಣವೇ ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಇಬ್ಬರನ್ನೂ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಹಿಮ್ಶಿಖಾ ದಾರಿ ಮಧ್ಯೆಯೇ ಮೃತಪಟ್ಟಿದ್ದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಶನಿವಾರದಂದು(ಮಾ.7) ಬಂಧಿಸಿದ್ದಾರೆ.

Continue Reading

LATEST NEWS

ಗುರ್ಮೆ VS ಸೊರಕೆ : ದೇವರ ಅಂಗಳ ತಲುಪಿದ ರಾಜಕೀಯ

Published

on

ಉಡುಪಿ : ಕಾಪು ಕ್ಷೇತ್ರದಲ್ಲಿ ರಾಜಕೀಯ ದೇವರ ಅಂಗಳ ತಲುಪಿದೆ. ತನ್ನ ಮೇಲೆ ನಡೆಯುತ್ತಿರುವ ವೈಯಕ್ತಿಕ ದಾಳಿಯಿಂದ ಬೇಸರಗೊಂಡು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ದೈವದ ಮೊರೆ ಹೋಗಿದ್ದಾರೆ. ವೈಯಕ್ತಿಕ ನಿಂದನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ವಿನಯ್ ಕುಮಾರ್ ಸೊರಕೆ ವಿರುದ್ಧ ಬೇಸರ  ವ್ಯಕ್ತಪಡಿಸಿದ್ದಾರೆ.

ಕಾಪು ಶ್ರೀ ಹೊಸ ಮಾರಿಗುಡಿ ಕ್ಷೇತ್ರಕ್ಕೆ ಭೇಟಿ ನೀಡಿ ಶಾಸಕರು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಳ್ಳು ಸಾಯಬೇಕು ಸತ್ಯ ಗೆಲ್ಲಬೇಕು. ಪ್ರತಿ ಬಾರಿ ತನ್ನ ಕುಟುಂಬದ ಬಗ್ಗೆ ಸುಳ್ಳು ಹೇಳಿಕೆ ನೀಡುತ್ತಾರೆ. ನಾನು ಯಾವುದೇ ಅನ್ಯಾಯ ಮಾಡಿಲ್ಲ. ಮಗನ ಆರ್ಥಿಕ ವ್ಯವಹಾರದ ಬಗ್ಗೆ ಸೊರಕೆ ಆರೋಪದಿಂದ ಮನನೊಂದು ದೇವರಿಗೆ ಶರಣಾಗಿದ್ದೇನೆ. ನನ್ನ ಕುಟುಂಬ ಯಾವುದೇ ಅವ್ಯವಹಾರದಲ್ಲಿ ತೊಡಗಿಲ್ಲ. ರಾಜಕೀಯ ನನಗೆ ಅನಿವಾರ್ಯ ಅಲ್ಲ. ಜನರಿಗೆ ನಾನು ಸತ್ಯ ದರ್ಶನ ಮಾಡಬೇಕಾಗಿತ್ತು. ತಪ್ಪು ಸಂದೇಶ ಹೋಗಬಾರದು ಎಂದು ದೇವರಿಗೆ ಮೊರೆ ಹೋಗಿದ್ದೇನೆ. ನಾನು ಮಾಡಿರುವುದು ಪ್ರಾರ್ಥನೆ ಹೊರತು ಆಣೆ ಪ್ರಮಾಣ ಅಲ್ಲ ಎಂದಿದ್ದಾರೆ.

ರಾಜಕೀಯ ನನಗೆ ಗಂಜಿ ಕೇಂದ್ರ ಅಲ್ಲ :

ನನಗೆ ಬದುಕಿಗೆ ಬೇಕಾದಷ್ಟು ಸಂಪತ್ತು ಭಗವಂತ ಕೊಟ್ಟಿದ್ದಾನೆ. ನಾನು 40 ವರ್ಷದಿಂದ ಉದ್ಯಮ ನಡೆಸುತ್ತಿದ್ದೇನೆ. ರಾಜಕೀಯ ನನಗೆ ಗಂಜಿ ಕೇಂದ್ರ ಅಲ್ಲ. ಮಾರಿಯಮ್ಮನ ಮುಂದೆ ಸತ್ಯ ಸಮರ್ಪಿಸಿದ್ದೇನೆ. ಸೊರಕೆಗೆ ತಾಯಿ ಬುದ್ಧಿ ಕೊಡಲಿ ಎಂದು ಹೇಳಿದರು.

ಇದನ್ನೂ ಓದು : ಕಾಪು ಕಾಂಗ್ರೆಸ್ ಮುಖಂಡರ ನಿವಾಸದಲ್ಲಿ ಕಳವು ಪ್ರಕರಣ; ಇಬ್ಬರ ಬಂಧನ

ಪೇಟೆ ಬಿಟ್ಟು ಬಬ್ಬು ಸ್ವಾಮಿ ಕೊರಗಜ್ಜ ಸನ್ನಿಧಾನದಲ್ಲಿ ಕೂಡ ಅವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Continue Reading

LATEST NEWS

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್: ಲಿಂಗಸೂಗೂರು ನ್ಯಾಯಾಲಯದಿಂದ ಆರೋಪಿಗೆ ಜೀವಾವಧಿ ಶಿಕ್ಷೆ

Published

on

ರಾಯಚೂರು: ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಲಿಂಗಸುಗೂರು ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.


ವಿಜಯಲಕ್ಷ್ಮಿ ಮೃತ ಮಹಿಳೆ ಆಗಿದ್ದು, ಈಕೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಯರಡೋಣ ಗ್ರಾಮದ ಆರೋಪಿ ದೇವರಾಜ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಲಿಂಗಸುಗೂರು ಪೀಠ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ.

ಇದನ್ನೂ ಓದಿ: ರಾಡ್‌ನಿಂದ ಮನಬಂದಂತೆ ಹೊಡೆದ ವಿದ್ಯಾರ್ಥಿ: ಓರ್ವ ಬಲಿ, ಏಳು ಜನರಿಗೆ ಗಾಯ

ಮೃತ ಮಹಿಳೆ ಪತಿ ಮರಣದ ಬಳಿಕ ತವರು ಮನೆ ಯರಡೋಣದಲ್ಲಿ ವಾಸವಾಗಿದ್ದರು. ಈ ವೇಳೆ ಆಕೆಯೊಂದಿಗೆ ದೇವರಾಜು ಎಂಬಾತ ಅಕ್ರಮ ಸಂಬಂಧ ಹೊಂದಿದ್ದ. 2024ರ ಮಾ.1ರಂದು ಅಮವಾಸ್ಯೆಯದು ಇಬ್ಬರು ಛತ್ತರ ಹನುಮಪ್ಪ ದೇವಸ್ಥಾನಕ್ಕೆ ತೆರಳಿದ್ದು, ಗ್ರಾಮಕ್ಕೆ ಮರಳುವಾಗ ಲಿಂಗಸುಗೂರಿನಲ್ಲಿ ಹಳ್ಳದ ದಂಡೆಯ ಪೊದೆಯಲ್ಲಿ ತನ್ನ ಜೊತೆ ಮಲಗಲು ಸಹಕರಿಸದಿದ್ದಕ್ಕೆ ಆರೋಪಿ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದನು. ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Continue Reading
Advertisement

Trending

Copyright © 2025 Namma Kudla News

You cannot copy content of this page