Connect with us

ಮಂಗಳೂರಿನ ಜನರ ಜೀವಕ್ಕೆ ಬೆಲೆ ಇಲ್ವಾ.?: ಜಿಲ್ಲಾಡಳಿತಕ್ಕೆ ಶಾಸಕ ಖಾದರ್ ಖಡಕ್ ಪ್ರಶ್ನೆ…

Published

on

ಮಂಗಳೂರಿನ ಜನರ ಜೀವಕ್ಕೆ ಬೆಲೆ ಇಲ್ವಾ.?: ಜಿಲ್ಲಾಡಳಿತಕ್ಕೆ ಶಾಸಕ ಖಾದರ್ ಖಡಕ್ ಪ್ರಶ್ನೆ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇದಿನೇ ಹೆಚ್ಚುತ್ತಿರುವ ಕೊರೊನಾ ಹಾವಳಿ ಹಿನ್ನಲೆ ಮಾಜಿ ಸಚಿವ, ಶಾಸಕ ಯುಟಿ ಖಾದರ್ ಗರಂ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೊರೊನಾದಿಂದ ದ.ಕ‌ ಜಿಲ್ಲೆಯಲ್ಲಿ 5 ಸಾವು ಆಗಿದೆ. ಜಿಲ್ಲಾಡಳಿತ, ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು.

ಪಾಸಿಟಿವ್ ಆದ ಮೂರೇ ದಿನದಲ್ಲಿ ಸಾಯುತ್ತಿದ್ದಾರೆ. ಮಂಗಳೂರಿನಲ್ಲಿ ಜನರ ಜೀವಕ್ಕೆ ಬೆಲೆ ಇಲ್ವಾ.

ಜಿಲ್ಲಾಡಳಿತ ಇದನ್ನು ತಮಾಷೆಯಾಗಿ ತೆಗೆದುಕೊಳ್ಳಬಾರದು. ಜನರು ಸಾವುಗೀಡಾಗಿರೋದಕ್ಕೆ ಕಾರಣ ಏನು?. ಇದನ್ನು ಆರೋಗ್ಯ ಇಲಾಖೆ ತನಿಖೆ ಮಾಡಲಿ ಎಂದವರು ಆಗ್ರಹಿಸಿದ್ದಾರೆ.

ಒಬ್ಬ ಸೋಂಕಿತ ಸತ್ರೆ 150 ಜನರಿಗೆ ಸೋಂಕು ತಗಲುತ್ತದೆ. ಇದು ವೈದ್ಯಕೀಯ ಅಧ್ಯಯನದಿಂದ ಧೃಡಪಟ್ಟಿದೆ.

ಹೀಗಿರುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮೂಲವನ್ನೇ ಪತ್ತೆ ಹಚ್ಚಲು ಆಗಿಲ್ಲ. ಅಷ್ಟೇ ಅಲ್ಲದೇ ಯಾವುದೇ ವಿಚಾರದಲ್ಲೂ ಜಿಲ್ಲಾಡಳಿತದಲ್ಲಿ ಸ್ಪಷ್ಟತೆ ಇಲ್ಲ ಎಂದು ಜಿಲ್ಲಾಡಳಿತದ ಬಗ್ಗೆ ಕಿಡಿಕಾರಿದ್ದಾರೆ.

ಬಳಿಕ ಮಾತು ಮುಂದುವರಿಸಿದ ಅವರು ಜನರಿಗೆ ಕಿಟ್ ಕೊಟ್ರೆ ವೈರಸ್ ಹೋಗೋದಿಲ್ಲ. ವೈರಸ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ ಎಂದು ದ.ಕ ಜಿಲ್ಲಾಡಳಿತ ದ ವಿರುದ್ಧ ಮಾಜಿ ಸಚಿವ ಯುಟಿ ಖಾದರ್ ಆರೋಪ ಹೊರಿಸಿದ್ದಾರೆ.

ಬಳಿಕ ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ವಿಚಾರದ ಬಗ್ಗೆ ಮಾತನಾಡಿದ ಖಾದರ್, ಎಲ್ಲಾ ದೇಶಗಳಂತೆ ಭಾರತದಲ್ಲೂ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಇದ್ರಲ್ಲಿ ರೈತನಿಗೆ ಸಾಲ ಜಾಸ್ತಿ ಯೇ ಹೊರತು ಬಡ್ಡಿ ಮನ್ನ ಮಾಡಲಿಲ್ಲ. ಆವತ್ತು ಪ್ರತಿಯೋರ್ವರ ಅಕೌಂಟ್ ಗೆ 15 ಲಕ್ಷ ಹಾಕೋದಾಗಿ ಹೇಳಿದ್ರಿ.

ಈವಾಗ ಪ್ರತಿಯೋರ್ವರ ಅಕೌಂಟ್ ಗೆ 15 ಸಾವಿರ ರೂಪಾಯಿ ಹಾಕಿ. ಆವಾಗ ಎರಡೂ ಮಾತು ಉಳಿಸಿಕೊಂಡ ರೀತಿ ಆಗುತ್ತದೆ.

ಆದ್ರೆ ರಾಜ್ಯ ಸರ್ಕಾರ ಹೊಸ ಯೋಜನೆ ಘೋಷಣೆ ಮಾಡಿಲ್ಲ. ಮೀನುಗಾರಿಕೆ ಮತ್ತು ನೇಕಾರರಿಗೆ ಹಳೆಯ ಯೋಜನೆಯನ್ನೇ ಮತ್ತೊಮ್ಮೆ ಪ್ರಕಟಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಳಿಕ ‘ವಂದೆ ಮಾತರಂ’ ವಿಮಾನದ ಬಗ್ಗೆ ಪ್ರಸ್ತಾಪ ಮಾಡಿದ ಅವರು, ‘ವಂದೇ ಭಾರತ್ ಮಿಷನ್’ ನಲ್ಲಿ ಮಂಗಳೂರು ವಿಮಾನ ನಿಲ್ದಾಣ ನಿರ್ಲಕ್ಷ್ಯವಾಗಿದೆ.

ಡಿವಿ ಸದಾನಂದ ಗೌಡರ ಮುತುವರ್ಜಿಯಿಂದ ಕೇವಲ ಒಂದು ವಿಮಾನ ಬಂದಿದೆ. ಆದ್ರೆ ಕೇರಳದ ಕಣ್ಣೂರು ವಿಮಾನ ನಿಲ್ದಾಣ ಹತ್ತಾರು ವಿಮಾನ‌ ಬರುತ್ತಿದೆ.

ಮಂಗಳೂರಿಗೆ ಯಾವುದೇ ರಾಷ್ಟ್ರದಿಂದ ವಿಮಾನ ಬರುತ್ತಿಲ್ಲ. ಇದನ್ನೆಲ್ಲಾ ದ.ಕ ಸಂಸದ ರಿಗೆ ಕೂತಲ್ಲಿಯೇ ಕೆಲಸ ಮಾಡಬಹುದು.

ಆದ್ರೆ ಸಂಸದ ನಳಿನ್ ಕುಮಾರ್ ಕಟೀಲ್ ಕಿಟ್ ಕೊಡೋದ್ರಲ್ಲೇ ಬ್ಯುಸಿ ಇದ್ದಾರೆ. ಕಾರ್ಪೋರೆಟರ್ ಮಾಡುವ ಕೆಲಸವನ್ನು ಸಂಸದರು ಮಾಡುತ್ತಿದ್ದಾರೆ.

ಮಂಗಳೂರಿಗೆ ವಿಮಾನ ಕಡಿಮೆ ಸಂಖ್ಯೆಯಲ್ಲಿ ಬಂದರೆ ಅದಕ್ಕೆ ಸಂಸದರ ನಿರ್ಲಕ್ಷ್ಯವೇ ಕಾರಣ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಯುಟಿ ಖಾದರ್ ಆಕ್ರೋಶ ಹೊರಹಾಕಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

kerala

ಮದ್ವೆಗೆ ಬಲವಂತ ಆರೋಪ-ಠಾಣೆ ಮೆಟ್ಟಿಲೇರಿದ ನೀಲಿ ಕಂಗಳ ಚೆಲುವೆ ಮೊನಾಲಿಸಾ

Published

on

ತಿರುವನಂತಪುರ: 2024ರಲ್ಲಿ ನಡೆದಿದ್ದ ಮಹಾಕುಂಭಮೇಳದಲ್ಲಿ  ರುದ್ರಾಕ್ಷಿ ಮಾರುತ್ತ ತನ್ನ ಸುಂದರ ಕಣ್ಣುಗಳ ಮೂಲಕವೇ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಹವಾ ಸೃಷ್ಟಿಸಿದ್ದ ಮೊನಾಲಿಸಾ ಬೋಂಸ್ಲೆ ಈಗ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ತನ್ನ ತಂದೆ ತೋರಿಸಿದ ಹುಡುಗನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಮೊನಾಲಿಸಾ ತನ್ನ ಗೆಳೆಯನ ಜೊತೆ ಬಂದು ತಂದೆ ವಿಜಯ್ ಸಿಂಗ್ ಭೋಸ್ಲೆ ವಿರುದ್ಧ ದೂರು ನೀಡಿದ್ದಾರೆ. ಯಾವುದೇ ದೈಹಿಕ ಕಿರುಕುಳ ನಡೆದಿಲ್ಲ. ಪ್ರಾಥಮಿಕವಾಗಿ ಬಲವಂತದ ವಿವಾಹ ಪ್ರಸ್ತಾಪವಾಗಿದೆ. ಮೊನಾಲಿಸಾ ತಂದೆ ತನ್ನ ಮೇಲೆ ಒತ್ತಡ ಹೇರುತ್ತಲೇ ಇದ್ದುದರಿಂದ ಪೊಲೀಸ್‌ ಠಾಣೆಗೆ ಬಂದು ದೂರು ನೀಡಿದ್ದಾರೆ. ನಾವು ಇನ್ನೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವೈರಲ್ ಆದ ಬಳಿಕ ಮೊನಾಲಿಸಾ ಅವರ ಬದುಕೇ ಬದಲಾಗಿದೆ. ಸಾಲು ಸಾಲು ಸಿನಿಮಾ ಆಫರ್ ಗಳು ಬರುತ್ತಿದೆ. ಪ್ರಸ್ತುತ ಶೂಟಿಂಗ್ ಗಾಗಿ ತಿರುವನಂತಪುರಕ್ಕೆ ಬಂದಿದ್ದ ಮೊನಾಲಿಸಾ ಇದೀಗ ಗೆಳೆಯನ ಜೊತೆ ಬಮದು ದೂರನ್ನು ನೀಡಿದ್ದಾರೆ.

Continue Reading

bangalore

6 ತಿಂಗಳಿನಿಂದ ಒಂದೇ ಮನೆಗೆ ಸ್ಕೆಚ್, 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಯುವಕ ಅರೆಸ್ಟ್

Published

on

ಬೆಂಗಳೂರು: ಮನೆಯವರು ಅಮೇರಿಕಾದಲ್ಲಿ ಇರುವುದನ್ನು ಖಚಿತಪಡಿಸಿಕೊಂಡ  ಕಳ್ಳನೋರ್ವ ಸುಮಾರು 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿನಿಮೀಯ ಶೈಲಿಯಲ್ಲಿಕಳ್ಳತನಗೈದ ರಾಜಸ್ಥಾನ ಮೂಲದ ವೇಲಾರಾಮ್ (19) ಬಂಧಿತ ಆರೋಪಿ. ನಿರ್ಮಾಣ ಹಂತದ ಕಟ್ಟಡದಲ್ಲಿ ಟೈಲ್ಸ್ ಕಟ್ ಮಾಡುತ್ತಿದ್ದ ವೇಲಾರಾಮ್ ಪಕ್ಕದ ಮನೆಯಲ್ಲಿ ಯಾರೂ ಇಲ್ಲದನ್ನ ಗಮನಿಸಿದ್ದ. ದಂಪತಿ ಅಮೇರಿಕಾದಲ್ಲಿ ಸೆಟಲ್ ಆಗಿರೋದನ್ನು ಖಚಿತಪಡಿಸಿಕೊಂಡು  ಬರೋಬ್ಬರಿ ಆರು ತಿಂಗಳು ಸ್ಕೆಚ್ ಹಾಕಿ ಒಮ್ಮೆಗೆ 3 ಕೋಟಿ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿದ್ದ.

ಲಾಕರ್ ಓಪನ್ ಮಾಡಿ 1.8 ಕೆಜಿಯ ಚಿನ್ನಾಭರಣ, ಡೈಮಂಡ್ ಹಾಗೂ ನಗದು ಎಲ್ಲವನ್ನು ದೋಚಿಕೊಂಡು ಹೋಗಿದ್ದ. ನಿರೀಕ್ಷೆಗಿಂತ ಹೆಚ್ಚು ಪ್ರಮಾಣದಲ್ಲಿ ಚಿನ್ನಾಭರಣ ಸಿಕ್ಕ ಖುಷಿಗೆ ಯಾರಿಗೂ ಹೇಳದೆ ಕೇಳದೆ ನೇರವಾಗಿ ರಾಜಸ್ಥಾನಕ್ಕೆ ಚಿನ್ನಾಭರಣ ಕೊಂಡೊಯ್ದು, ಮನೆಯಲ್ಲಿ ಬಚ್ಚಿಟ್ಟಿದ್ದ.

ಮನೆಯ ಸಿಸಿಟಿವಿಯನ್ನ ಅಮೆರಿಕದಲ್ಲಿದ್ದ ದಂಪತಿ ಮೊಬೈಲ್ ನಲ್ಲಿ ಪರಿಶೀಲಿಸಿದ ಸಂದರ್ಭ ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಸಿಸಿಟಿವಿ ಆಧರಿಸಿ ಆರೋಪಿ ವೇಲಾರಾಮ್‌ ನನ್ನ ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

Continue Reading

LATEST NEWS

ಸೆಕೆ ತಾಳಲಾರದೆ ತಂಪಾಗಲು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

Published

on

ಹುಬ್ಬಳ್ಳಿ: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಈಜಲು ಹೋಗಿ ನೀರಿನ ಗುಂಡಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಹೊರವಲಯದಲ್ಲಿ ನಡೆದಿದೆ.


ಮೃತಪಟ್ಟ ವಿದ್ಯಾರ್ಥಿಗಳನ್ನು ಸಮರ್ಥ್ ಮತ್ತು ಹರೀಶ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಗೋಪನಕೊಪ್ಪದ ಸರ್ಕಾರಿ ಪದವಪೂರ್ವ ಕಾಲೇಜಿನಲ್ಲಿ ಕಾಮರ್ಸ್ ವಿಭಾಗದಲ್ಲಿ ವಿದ್ಯಾರ್ಥಿಗಳು, ಪ್ರಥಮ ಪಿಯುಸಿ ಪರೀಕ್ಷೆ ಮುಗಿದಿರುವ ಕಾರಣ ಮನೆಯಲ್ಲಿದ್ದರು ಎನ್ನಲಾಗಿದೆ.

ಬೇಸಿಗೆಯ ಸೆಕೆ ತಾಳಲಾರದೆ ತಂಪಾಗಲು ಇಬ್ಬರು ಸ್ನೇಹಿತರು ಮನೆ ಸಮೀಪ ಇರುವ ನಿರ್ಮಾಣ ಹಂತದ RNS ಗಾಲ್ಫ್​​ ಮೈದಾನದಲ್ಲಿರೋ ಹೊಂಡಕ್ಕೆ ಈಜಲು ತೆರಳಿದ್ದರು. ಮಧ್ಯಾಹ್ನ ಮನೆಯಿಂದ ಹೋದವರು, ಸಂಜೆಯಾದರೂ ಮನೆಗೆ ಮರುಳಲಿಲ್ಲ. ಆ ವೇಳೆ ಇಬ್ಬರು ಹೊಂಡದಲ್ಲಿ ಬಿದ್ದಿರೋದನ್ನು ಗಮನಿಸಿದ ಅಲ್ಲಿನ ಕೆಲಸಗಾರರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆ ಹಾಲ್​​ನಲ್ಲಿ ಬುರ್ಖಾಧಾರಿ ಕಳ್ಳಿಯ ಕರಾಮತ್ತು..! ವಿಚಾರಣೆ ವೇಳೆ ಆಘಾತಕಾರಿ ವಿಚಾರ ಬೆಳಕಿಗೆ..!?

ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಮೃತಪಟ್ಟಿದ್ದರು ಎನ್ನಲಾಗಿದೆ. ಘಟನನಾ ಸ್ಥಳಕ್ಕೆ ಭೇಟಿ ನೀಡಿದ ನವನಗರ ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನೊಂದಿಗೆ ಮೃತದೇಹಗಳನ್ನು ಹೊರತೆಗೆಯಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page