Connect with us

ಕೆ.ಎಸ್.ಆರ್.ಟಿ.ಸಿ ಬಸ್, ತಲಪಾಡಿ ರೈಲು ನಿಲ್ದಾಣದಲ್ಲಿ ತಪಾಸಣೆಗೆ ಶಾಸಕ ಖಾದರ್ ಆಗ್ರಹ

Published

on

ಕೆ.ಎಸ್.ಆರ್.ಟಿ.ಸಿ ಬಸ್, ತಲಪಾಡಿ ರೈಲು ನಿಲ್ದಾಣದಲ್ಲಿ ತಪಾಸಣೆಗೆ ಶಾಸಕ ಖಾದರ್ ಆಗ್ರಹ

ಮಂಗಳೂರು: ಮಂಗಳೂರಿನ ಹರೇಕಳದಿಂದ ಅಡ್ಯಾರ್‌ವರೆಗೆ ಬ್ರಿಜ್‌ ಕಮ್‌ ಬ್ಯಾರೆಜ್‌ ನಿರ್ಮಾಣವಾಗಲಿದ್ದು, ಮಾರ್ಚ್‌ 24ರಂದು ಶಿಲಾನ್ಯಾಸ ನೆರವೇರಲಿದೆ.

ಈ ಬಗ್ಗೆ ಮಾಹಿತಿ ನೀಡಿದ ಶಾಸಕ ಯು.ಟಿ. ಖಾದರ್‌, ಹರೇಕಳದಿಂದ ಅಡ್ಯಾರ್‌ವರೆಗೆ ಬ್ರಿಜ್‌ ಕಮ್‌ ಬ್ಯಾರೆಜ್‌ ನಿರ್ಮಾಣವಾಗಲಿದ್ದು ಸಣ್ಣ ನೀರಾವರಿ ಸಚಿವ ಜೆ. ಮಾಧುಸ್ವಾಮಿ ಸಾಂಕೇತಿಕವಾಗಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜಿಲ್ಲೆಯ ಶಾಸಕರು, ಸಂಸದರು, ಸಚಿವರು ಭಾಗಿಯಾಗಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅತೀ ದೊಡ್ಡ ಯೋಜನೆ ಇದಾಗಿದ್ದು, 200 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದರು.

ಕೊರೊನಾ ಭೀತಿ:

ಇನ್ನು ಈ ವೇಳೆ ಕೊರೋನಾ ಭೀತಿ ಬಗ್ಗೆ ಮಾತನಾಡಿದ ಶಾಸಕ ಖಾದರ್‌, ರಾಜ್ಯ ಸರಕಾರ, ಜಿಲ್ಲಾಡಳಿತ ಹಲವು ಕ್ರಮ ಕೈಗೊಂಡಿದೆ.

ಜನ ಸಾಮಾನ್ಯರು ಇದಕ್ಕೆ ಸಹಕಾರ ನೀಡಬೇಕು. ಸ್ವಯಂ ನಿಯಂತ್ರಣದಿಂದ ರೋಗ ಹರಡದಂತೆ ನೋಡಿಕೊಳ್ಳಬೇಕು.

ರೋಗ ನಿರೋಧಕ ಶಕ್ತಿ ಇದ್ದವರಿಗೆ ಕೊರೋನಾ ಅಷ್ಟು ಸುಲಭವಾಗಿ ಬರೋದಿಲ್ಲ. ಅದಕ್ಕಾಗಿ ಪ್ರಕೃತಿಯಲ್ಲಿ ಸಿಗುವ ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.

 

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಬೇಕು.

ಉತ್ತರ ಕರ್ನಾಟಕದಿಂದ ಬರುವ ಬಸ್‌ಗಳ ಪ್ರಯಾಣವನ್ನು ಸ್ವಲ್ಪ ದಿನಗಳ ಮಟ್ಟಿಗೆ ತಡೆಯಬೇಕು.

ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಿಕರನ್ನು ತಪಾಸಣೆ ಮಾಡಬೇಕು. ಗಡಿಭಾಗ ತಲಪಾಡಿಯಿಂದ ಸೋಂಕಿತರು ಬಾರದಂತೆ ತಡೆಯಬೇಕು.

ಹಾಗಾಗಿ ತಲಪಾಡಿ, ರೈಲು ನಿಲ್ದಾಣದಲ್ಲಿ ತಪಾಸಣೆ ಮಾಡಬೇಕು. ಎಲ್ಲ ವಿಮಾನ ನಿಲ್ದಾಣದಲ್ಲಿ ವ್ಯವಸ್ಥಿತ ತಪಾಸಣೆ ಮಾಡಬೇಕು.

ಪ್ರತ್ಯೇಕ ಕಟ್ಟಡದಲ್ಲಿ ವಿಶೇಷ ವಾರ್ಡ್‌ ವ್ಯವಸ್ಥೆ ಮಾಡಬೇಕು. ಜನ ವಸತಿ ಕಡೆ ವಾರ್ಡ್ ಸ್ಥಾಪನೆ ಬೇಡ ಎಂದರು.

ಇನ್ನು ಕೊರೊನಾ ಅಟ್ಟಹಾಸದಿಂದ ದುಡಿಯುವ ವರ್ಗಕ್ಕೆ ಸಮಸ್ಯೆಯಾಗುತ್ತಿದೆ, ಹಾಗಾಗಿ ತಿಂಗಳ ಬಾಡಿಗೆಯನ್ನು ಸ್ವಲ್ಪ ಕಡಿಮೆ ಮಾಡಬೇಕು ಸರಕಾರ ಕೂಡ ದುಡಿಯುವ ವರ್ಗದ ಬಗ್ಗೆ ಕಾಳಜಿ ವಹಿಸಿ ಇದಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದರು.

ದಿಗ್ವಿಜಯ್ ಬಂಧನಕ್ಕೆ ಆಕ್ರೋಶ:

ಮಧ್ಯಪ್ರದೇಶದ ಕಮಲ್‌ನಾಥ್‌ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ 22 ಶಾಸಕರು ಬೆಂಗಳೂರಿನ ಯಲಹಂಕದ ರಮಡ ಹೋಟೆಲ್‌ನಲ್ಲಿ ತಂಗಿದ್ದಾರೆ.

ಈ ಹಿನ್ನಲೆ ಶಾಸಕರ ಮನವೊಲಿಸಲು ಹೋಟೆಲ್‌ಗೆ ನುಗ್ಗಲು ಯತ್ನಿಸಿದ ಮಾಜಿ ಸಿಎಂ ದಿಗ್ವಿಜಯ್‌ ಸಿಂಗ್‌ ಹಾಗೂ ಅವರ ಬೆಂಬಲಿಗರನ್ನು ಪೋಲಿಸರು ಬಂಧಿಸಿ, ಆನಂತರ ಬಿಡುಗಡೆಗೊಳಿಸಿದ್ದಾರೆ.

ಈ ಬಗ್ಗೆ ಕೂಡ ಪ್ರತಿಕ್ರಿಯಿಸಿದ ಶಾಸಕ ಯು.ಟಿ. ಖಾದರ್‌, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನಗತ್ಯವಾಗಿ ಯಾರನ್ನಾದರೂ ವಶಕ್ಕೆ ಪಡೆಯುವುದು ಖಂಡನೀಯ. ಅದು ‌ಕೂಡ ಕಾಂಗ್ರೆಸ್‌ನ ಹಿರಿಯ ಮುಖಂಡನನ್ನು ಬಂಧಿಸಿರುವುದು ಎಷ್ಟು ಸರಿ?. ನಾವು ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ಇದ್ದೇವೋ ಇಲ್ಲವೋ ಗೊತ್ತಾಗುತ್ತಿಲ್ಲ.

ದಿಗ್ವಿಜಯ್‌ ಸಿಂಗ್‌ ಶಾಸಕರನ್ನು ಭೇಟಿಯಾಗುವುದರಲ್ಲಿ ಏನು ತಪ್ಪಿದೆ?. ಇದು ಸಂವಿಧಾನ ವಿರೋಧಿ ನಡವಳಿಕೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ ಖಾದರ್ ಅಸಮಾಧಾನ ವ್ಯಕ್ತಪಡಿಸಿದರು.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

Published

on

ಪುತ್ತೂರು: ಕೃಷ್ಣ ಜೆ ರಾವ್ ನಿಂದ ವಂಚನೆಗೊಳಗಾದ ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಬಳಿಕ ಮಗು ಕೊಟ್ಟು ಇದೀಗ ಮದುವೆ ಆಗುವುದಿಲ್ಲ ಎಂದು ವಂಚನೆ ಮಾಡಿದ ಪ್ರಕರಣದ ಸಂತ್ರಸ್ತೆ ಮನೆಗೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಂತ್ರಸ್ತೆ ಜೊತೆ ಮಾತುಕತೆ ನಡೆಸಿದರು.

ಈ ವೇಳೆ ಸಂತ್ರಸ್ತೆಯ ಮಗುವನ್ನು ನಾಗಲಕ್ಷ್ಮಿ ಚೌಧರಿ ಮುದ್ದಾಡಿದರು. ಅಲ್ಲದೆ ಸಂತ್ರಸ್ತೆಯ ಎಲ್ಲಾ ರೀತಿಯ ಹೋರಾಟಕ್ಕೆ ಜೊತೆಯಾಗಿರುವುದಾಗಿ ಭರವಸೆ ನೀಡಿದರು.

ಸಂತ್ರಸ್ತೆಗೆ ಶಿಕ್ಷಣ ಮುಂದುವರಿಸುವಂತೆ ಸಲಹೆ

ಅಲ್ಲದೇ, ಶಿಕ್ಷಣ ಮುಂದುವರಿಸುವಂತೆ ಸಂತ್ರಸ್ತೆಗೆ ನಾಗಲಕ್ಷ್ಮೀ ಅವರು ಸೂಚಿಸಿದರು. ಗಟ್ಟಿಯಾಗಿ ನಿಂತು ಸಂಕಷ್ಟ ಎದುರಿಸುವಂತೆ ಸಂತ್ರಸ್ತೆ ಮತ್ತು ಆಕೆಯ ತಾಯಿಗೆ ಮನವಿ ಮಾಡಿದರು. ಶಿಕ್ಷಣ ಮುಂದುವರಿಸಲು ಬೇಕಾದ ಎಲ್ಲಾ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಯಾವುದೇ ಕಾರಣಕ್ಕೂ ಜೀವನದಲ್ಲಿ ಕುಗ್ಗಿ ಕೆಟ್ಟ ನಿರ್ಧಾರ ತೆಗೆದುಕೊಳ್ಳದಂತೆ ಸಂತ್ರಸ್ತೆಗೆ ನಾಗಲಕ್ಷ್ಮಿ ಧೈರ್ಯ ತುಂಬಿದ್ದಾರೆ.

ಸಂತ್ರಸ್ತ ಮಹಿಳೆಯರಿಗೆ ಆಯೋಗ ತಾಯಿಯಿದ್ದಂತೆ!

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮಹಿಳಾ ಆಯೋಗ ತಾಯಿಯಂತೆ ಸಂತ್ರಸ್ತೆಯ ಪರ ನಿಲ್ಲುತ್ತದೆ, ಎಲ್ಲಾ ಸಂತ್ರಸ್ತ ಮಹಿಳೆಯರಿಗೆ ಆಯೋಗ ತಾಯಿಯಿದ್ದಂತೆ. ತಾಯಿ ಸ್ಥಾನದಲ್ಲಿ ನಿಂತು ಮಹಿಳೆಯ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ. ಸಂತ್ರಸ್ತೆ ಯುವತಿಗೆ ಎಲ್ಲಾ ರೀತಿಯ ಸಹಾಯವನ್ನು ಆಯೋಗದ ಮುಖಾಂತರ ಮಾಡಲಾಗುವುದು ಎಂದರು.

ಮುಂದುವರಿದು, ಯುವತಿಯ ಮುಂದಿನ ಶಿಕ್ಷಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿ ಆಕೆಯನ್ನು ಆರ್ಥಿಕ, ಶೈಕ್ಷಣಿಕವಾಗಿ ಸದೃಢಗೊಳಿಸುವ ಪ್ರಯತ್ನವನ್ನೂ ಮಾಡುತ್ತೇನೆ. ಪ್ರಕರಣ ನ್ಯಾಯಾಲಯದ ಮುಂದೆ ಇರುವಾಗ ಇದಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Continue Reading

DAKSHINA KANNADA

ನಾಳೆ ಒಟಿಟಿಯಲ್ಲಿ ರಿಲೀಸ್ ಆಗಲಿದೆ ಧರ್ಮ ಚಾವಡಿ ತುಳು ಸಿನಿಮಾ

Published

on

ಮಂಗಳೂರು:  ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಜಗದೀಶ್ ಅಮೀನ್ ನಿರ್ಮಾಣದ ಧರ್ಮ ಚಾವಡಿ ತುಳು ಸಿನಿಮಾ ಕಳೆದ ವರ್ಷ ಕರಾವಳಿಯಾದ್ಯಂತ ಬಿಡುಗಡೆಗೊಂಡು ಜನಮನ್ನಣೆ ಪಡೆದು ಯಶಸ್ವಿ ಚಿತ್ರಗಳ ಸಾಲಿಗೆ ಸೇರ್ಪಡೆಗೊಂಡಿದೆ. ಇದೀಗ ಈ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಿ ಜಗತ್ತಿನಾದ್ಯಂತ ಇರುವ ತುಳು ಸಿನಿಮಾ ಪ್ರೇಕ್ಷಕರಿಗೆ ವೀಕ್ಷಿಸಲು ಅವಕಾಶ ಕಲ್ಪಿಸಲು ಚಿತ್ರ ತಂಡ ನಿರ್ಧರಿಸಿದೆ.

ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ, ನಾಳೆ  ಅಂದರೆ ಮಾರ್ಚ್ 6 ರಂದು ಧರ್ಮ ಚಾವಡಿ ಸಿನಿಮಾ ಟಾಕೀಸ್ ಆ್ಯಪ್ ಒಟಿಟಿ ಮೂಲಕ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಮುಂಬಯಿಯಲ್ಲಿ ಧರ್ಮ ಚಾವಡಿ ಚಿತ್ರದ ಯಶಸ್ವೀ 14 ಶೋ ನೀಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ನೆರೆಯ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮತ್ತು ಕಾಸರಗೋಡಿನಲ್ಲಿಯೂ ಚಿತ್ರ ಯಶಸ್ವೀ  ಪ್ರದರ್ಶನ ಕಂಡಿದೆ.

ಮುಂದಿನ ದಿನಗಳಲ್ಲಿ ಈ ಸಿನಿಮಾವನ್ನು ಕನ್ನಡದಲ್ಲಿ ಡಬ್ ಮಾಡಿ ಕರ್ನಾಟಕದ ಇತರ ಭಾಗಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ವಿವರಿಸಿದರು. ಸುದ್ದಿಗೋಷ್ಟಿಯಲ್ಲಿ ನಟ ರಮೇಶ್ ರೈ ಕುಕ್ಕುವಳ್ಳಿ, ನಟಿ ನೇಹಾ ಕೋಟ್ಯಾನ್, ಟಾಕೀಸ್ ಆ್ಯಪ್ ಒಟಿಟಿ ಇದರ ಅಡ್ಮಿನ್ ಎಕ್ಸಿಕ್ಯೂಟಿವ್ ಚಿದಾನಂದ್ ಪೈ ಮತ್ತು ಇತರರು ಉಪಸ್ಥಿತರಿದ್ದರು.

Continue Reading

DAKSHINA KANNADA

ಸ್ಟೇಟ್ ಬ್ಯಾಂಕ್ ಮೀನು ಮಾರ್ಕೆಟ್ ಅವ್ಯವಸ್ಥೆ-ಅಸಮಾಧಾನ ವ್ಯಕ್ತಪಡಿಸಿದ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ

Published

on

ಮಂಗಳೂರು: ನಗರದ ಕೇಂದ್ರ ಭಾಗವಾದ ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಮಧ್ಯಾಹ್ನ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಹಸಿ ಹಾಗೂ ಒಣಮೀನು ಮಾರುಕಟ್ಟೆಯ ಪ್ರತಿ ಮೂಲೆಗೂ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳನ್ನು ಕಣ್ಣಾರೆ ಕಂಡು ಅಸಮಾಧಾನ ವ್ಯಕ್ತಪಡಿಸಿದರು. ದಶಕಗಳಿಂದ ಮೀನು ಮಾರಾಟ ಮಾಡುತ್ತ ಜೀವನ ಸಾಗಿಸುತ್ತಿರುವ ನೂರಾರು ಮಹಿಳೆಯರು ತಮ್ಮ ಸಮಸ್ಯೆಗಳನ್ನು  ಅವರ  ಮುಂದೆ ಹಂಚಿಕೊಂಡರು.

ಪರಿಶೀಲನೆಯ ಬಳಿಕ ಮಾತನಾಡಿದ ಡಾ. ನಾಗಲಕ್ಷ್ಮಿ ಚೌಧರಿ , ಮಾರುಕಟ್ಟೆಯಲ್ಲಿ ಸಮರ್ಪಕ ನೈರ್ಮಲ್ಯದ ಕೊರತೆಯಿಂದ ದುರ್ವಾಸನೆ ವ್ಯಾಪಿಸಿದ್ದು, ದಿನವಿಡೀ ಕೆಲಸ ಮಾಡುವ ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ತಿಳಿಸಿದರು. ಮಾರುಕಟ್ಟೆ ಸ್ವಚ್ಛತೆಗೆ ಅಗತ್ಯವಾದ ನೀರಿನ ಸೌಲಭ್ಯವಿಲ್ಲದೆ ಇರುವುದೂ ಸಮಸ್ಯೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ವ್ಯಾಪಾರಕ್ಕೆ ತಕ್ಕಷ್ಟು ಸ್ಥಳಾವಕಾಶದ ಕೊರತೆ ಹಾಗೂ ಭದ್ರತಾ ವ್ಯವಸ್ಥೆಯ ಅಭಾವದಿಂದ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದಾಗಿ ಮಹಿಳೆಯರು ದೂರಿದರು. ಈ ಎಲ್ಲ ವಿಚಾರಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಿದ್ದೇನೆ. ಮೀನುಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ನೂತನ ಮಾರುಕಟ್ಟೆಯಲ್ಲಿ ಅಗತ್ಯವಿರುವ ವೈಜ್ಞಾನಿಕ ಬದಲಾವಣೆಗಳನ್ನು ಮಾಡಿಸುವಂತೆ ಒತ್ತಾಯಿಸುತ್ತೇನೆ. ಮೀನು ಮಾರಾಟಗಾರ ಮಹಿಳೆಯರ ಹಿತಾಸಕ್ತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ,” ಎಂದು ಡಾ. ನಾಗಲಕ್ಷ್ಮಿ ಚೌಧರಿ ಭರವಸೆ ನೀಡಿದರು.

 

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page