Connect with us

ಕೊರೊನಾ ವಿಚಾರದಲ್ಲಿ ಕೇರಳ ಸರ್ಕಾರದ ಮಾದರಿಯ ಕ್ರಮಕ್ಕೆ ಒತ್ತಾಯ ಹೇರಿದ ಯುಟಿ ಖಾದರ್

Published

on

ಕೊರೊನಾ ವಿಚಾರದಲ್ಲಿ ಕೇರಳ ಸರ್ಕಾರದ ಮಾದರಿಯ ಕ್ರಮಕ್ಕೆ ಒತ್ತಾಯ ಹೇರಿದ ಯುಟಿ ಖಾದರ್

ಮಂಗಳೂರು: ಕೊರೊನಾ ವೈರಸ್ ಹಿನ್ನಲೆಯಲ್ಲಿ ಕೇವಲ ಸರ್ಕಾರಿ ನೌಕರರ ಜೀವನದ ಬಗ್ಗೆ ಮಾತ್ರ ಸರ್ಕಾರ ಮಾತನಾಡುತ್ತಿದೆ.

ಕೂಲಿಕಾರರು, ವಯೋವೃದ್ಧರು, ವ್ಯಾಪಾರಸ್ಥರ ಬಗ್ಗೆ ಸರ್ಕಾರ ಯೋಚಿಸುತ್ತಲೇ ಇಲ್ಲ.

ಇಂತಹ ಸಂದರ್ಭದಲ್ಲಿ ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರು ಕರ್ನಾಟಕ ರಾಜ್ಯ ಸರ್ಕಾರದ ಮುಂದೆ ತಮ್ಮ ಪ್ರಸ್ತಾಪವೊಂದನ್ನು ಇರಿಸಿದ್ದು, ಶಾಸಕರ ಪ್ರಸ್ತಾಪಕ್ಕೆ ಸಾರ್ವಜನಿಕರ ಬೆಂಬಲ ಕೂಡ ವ್ಯಕ್ತವಾಗಿದೆ.

ಕೂಲಿ ಕಾರ್ಮಿಕರು, ವಯೋವೃದ್ಧರು, ಸಣ್ಣ ವ್ಯಾಪಾರಸ್ಥರು ಕೊರೊನಾ ಭಯದ ಹಿನ್ನಲೆಯಲ್ಲಿ ದೈನಂದಿನ ಜೀವನ ನಡೆಸಲು ಕಷ್ಟಪಡುತ್ತಿದ್ದಾರೆ.

ಇಂತಹವರ ಸಹಾಯಕ್ಕೆ ಕೇರಳ ಸರ್ಕಾರದ ಮಾದರಿಯಲ್ಲಿ ಯೋಜನೆ ರೂಪಿಸಿ ಅನುದಾನ ನೀಡಬೇಕು ಎಂದು ಖಾದರ್ ಒತ್ತಾಯಿಸಿದ್ದಾರೆ.

ಯಾವುದೇ ತುರ್ತು ಘಟನೆಗಳಿರಲಿ, ಮೊದಲು ಸರ್ಕಾರವು, ಸರ್ಕಾರಿ ನೌಕರರ ಬಗ್ಗೆಯೇ ಮಾತನಾಡುತ್ತಿದೆ.

ಕೂಲಿಕಾರರ ಬಗ್ಗೆ ಬಡವರ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಕೇವಲ ಸರ್ಕಾರಿ ನೌಕರರು ಮಾತ್ರ ಕಾರ್ಮಿಕರು ಎನ್ನುವ ಸರ್ಕಾರದ ದೃಷ್ಟಿ ಸಾರ್ವಜನಿಕ ವಲಯದಲ್ಲಿ ಹಲವು ಬಾರಿ ಚರ್ಚೆಯಾಗಿದೆ.

ಸರ್ಕಾರಿ ನೌಕರರ ಬಗ್ಗೆ ಕಾಳಜಿವಹಿಸುವುದು ತಪ್ಪು ಎನ್ನುವುದು ಇದರ ಅರ್ಥವಲ್ಲ.

ಕೂಲಿ ಕಾರ್ಮಿಕರು ಕೂಡ ಸಾರ್ವಜನಿಕ ಬದುಕಿನಲ್ಲಿದ್ದಾರೆ ಎನ್ನುವುದು ಮತ್ತು ಅವರಿಗೂ ಜೀವನ ಇದೆ, ಅವರ ಜವಾಬ್ದಾರಿಯೂ ಸರ್ಕಾರದ್ದೇ ಎನ್ನುವುದನ್ನು ಸರ್ಕಾರ ಅರಿಯಲು ವಿಫಲವಾಗಿದೆ.

ಆದ್ರೆ ಕೇರಳ ರಾಜ್ಯವು ಜನತೆಗೆ ಸಹಾಯವಾಗುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ತಂದಿದ್ದಲ್ಲದೇ 20000 ಕೋಟಿ ರೂಪಾಯಿ ವಿಶೇಷ ಕೊರೊನಾ ಪ್ಯಾಕೇಜ್ ಅನುದಾನ ಬಿಡುಗಡೆ ಮಾಡಿದೆ.

ಈ ನಿಟ್ಟಿನಲ್ಲಿ ಖಾದರ್ ಅವರು ನೀಡಿರುವ ಹೇಳಿಕೆ ಪ್ರಮುಖವಾಗಿದ್ದು, ಕೂಲಿಕಾರರ ಬಗ್ಗೆ ನೀಡಿರುವ ಹೇಳಿಕೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಬೀದಿ ಬದಿ ವ್ಯಾಪಾರಿಗಳು, ಸಣ್ಣಪುಟ್ಟ ವ್ಯಾಪಾರಸ್ಥರು ಜೀವನ ನಡೆಸುವುದು ಕಷ್ಟವಾಗುತ್ತಿದೆ.

ಅಲ್ಲದೆ ವ್ಯಾಪಾರ ಗಣನೀಯವಾಗಿ ಇಳಿಕೆಯಾಗಿರುವುದರಿಂದ ಬಾಡಿಗೆ ಕಟ್ಟಲು ಕಷ್ಟವಾಗುತ್ತಿದೆ. ಮಾಲೀಕರು ಇಂತಹ ಕಷ್ಟದ ಸಂದರ್ಭದಲ್ಲಿ ಬಾಡಿಗೆಯನ್ನು ಶೇ.25ರಷ್ಟು ಕಡಿಮೆ ಮಾಡಬೇಕೆಂದು ಖಾದರ್ ಒತ್ತಾಯಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆವರು ಮಾರ್ಚ್ 22ರ ಭಾನುವಾರ, ಜನತಾ ಕಫ್ರ್ಯೂ ಪಾಲಿಸುವಂತೆ ಕರೆ ಕೊಟ್ಟಿದ್ದಾರೆ.

ಆದರೆ, ವೈರಸ್‍ಗೆ ಭಾನುವಾರ, ಸೋಮವಾರ, ಹಗಲು-ರಾತ್ರಿ ಎಂಬುದು ಗೊತ್ತಿಲ್ಲ. ವೈರಸ್‍ಗೆ ಜನರು ಸಿಗಬಾರದು.

ಸಿಕ್ಕಿದ್ದೇ ಆದರೆ, ಉಲ್ಬಣವಾಗುತ್ತದೆ. ವೈರಸ್‍ನಿಂದ ಜನರನ್ನು ದೂರವಿಡುವಂತಹ ಕೆಲಸವಾಗಬೇಕು ಎಂದು ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page