Connect with us

ತುಳು ಭಾಷೆಗೆ ಮಾನ್ಯತೆ ನೀಡಲು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಶಾಸಕ ಕಾಮತ್ ಮನವಿ

Published

on

ತುಳು ಭಾಷೆಗೆ ಮಾನ್ಯತೆ ನೀಡಲು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಶಾಸಕ ಕಾಮತ್ ಮನವಿ

ಬೆಂಗಳೂರು : ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ ಅವರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಸಲ್ಲಿಸಿದರು.

ಕರಾವಳಿ ಭಾಗದ ಜನರ ಮಾತೃಭಾಷೆಯಾಗಿರುವ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವುದು ಹಾಗೂ ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂಬ ಹೋರಾಟ ಬಹು ಕಾಲದಿಂದ ನಡೆಯುತ್ತಿದೆ.

ತುಳು ಭಾಷೆಯ ಕುರಿತು ಬಹಳಷ್ಟು ಪ್ರಚಾರ ಕಾರ್ಯದಲ್ಲಿ ತೊಡಗಿರುವ ಶಾಸಕ ಕಾಮತ್ ತುಳುವಿಗೆ ವಿಶೇಷ ಸ್ಥಾನಮಾನ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಯಿಸಿರುವ ಶಾಸಕ ಕಾಮತ್, ಸುಮಾರು 2500 ವರ್ಷಗಳ ಇತಿಹಾಸವಿರುವ ತುಳುಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನಕ್ಕೆ ಪೂರಕವಾಗಿ ರಾಜ್ಯ ಸರಕಾರವು ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವುದು ಅಗತ್ಯವಾಗಿದೆ.

1.5 ಕೋಟಿಗಿಂತಲೂ ಹೆಚ್ಚು ತುಳುಭಾಷಿಗರಿದ್ದು ತುಳುವಿಗೆ ತನ್ನದೇ ಆದ ಲಿಪಿಯಿದೆ. ತುಳುಭಾಷೆಯಲ್ಲಿ 14ನೇ ಶತಮಾನಕ್ಕಿಂತಲೂ ಹಿಂದಿನಿಂದಲೇ ಕಾವ್ಯಗಳು ಸೃಷ್ಟಿಯಾಗಿದೆ ಎಂದಿದ್ದಾರೆ.

ತುಳುಲಿಪಿಯಲ್ಲಿ ಸಾಹಿತ್ಯಿಕ ಪ್ರಕಾರಗಳು ರಾಮಾಯಣ, ಮಹಾಭಾರತದಂತಹ ಉದ್ಗ್ರಂಥಗಳು ಪ್ರಾಪ್ತಿಯಾಗಿದೆ. ತುಳು ಲಿಪಿಯ ಸಹಸ್ರಾರು ಶಿಲಾಶಾಸನಗಳು, ತಾಮ್ರ ಪತ್ರಗಳು, ತಾಡೆಯೋಲೆಗಳ ದಾಖಲೆಗಳು ಕರಾವಳಿ ಪ್ರದೇಶದಲ್ಲಿ ಲಭ್ಯವಿದೆ.

ನೀಲೇಶ್ವರದಿಂದ ಅಂಕೋಲ, ಮೂಡಣ ಘಟ್ಟ, ಪಡುವಣ ಕಡಲು, ಮೃದು ಮಣ್ಣಿನ ಈ ನೆಲವನ್ನು ತುಳುರಾಜ್ಯ ಎಂದೇ ಶಾಸನಗಳು ನಮಗೆ ಲಭ್ಯವಾಗಿರುವುದು. ಹಾಗಾಗಿ ರಾಜ್ಯದ ಅಧಿಕೃತ ಭಾಷೆಯಾಗಿ ಹಾಗೂ ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ಸಕಾಲವಾಗಿದೆ ಎಂದು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಪಸ್ಥಿತರಿದ್ದರು.

ವೀಡಿಯೋಗಾಗಿ

Advertisement
Click to comment

Leave a Reply

Your email address will not be published. Required fields are marked *

LATEST NEWS

ಸುಳ್ಯ: ಲೋ ಬಿಪಿ, ಕುಸಿದು ಬಿದ್ದು ಕಾಲೇಜು ಉಪನ್ಯಾಸಕ ನಿಧನ

Published

on

ಸುಳ್ಯ: ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನುನಡೆಸಿದ ಉಪನ್ಯಾಸಕರೋರ್ವರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಇಂದು ಸುಳ್ಯದಲ್ಲಿ ನಡೆದಿದೆ. ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮಂಜು ಪಿ. (42) ಮೃತ ಉಪನ್ಯಾಸಕ. ಲೋ ಬಿಪಿ ಅಥವಾ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಮೃತರು ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಬೇರ್ಯ ನಿವಾಸಿಯಾಗಿದ್ದರು. ಗುರುವಾರ ಎಂದಿನಂತೆ ಕಾಲೇಜಿಗೆ ಹಾಜರಾಗಿ ಮಧ್ಯಾಹ್ನದವರೆಗೆ ತರಗತಿಗಳನ್ನು ನಡೆಸಿದ್ದರು. ನಂತರ ಅಸೌಖ್ಯ ಕಾಣಿಸಿಕೊಂಡಿತ್ತು. ವಿದ್ಯಾರ್ಥಿಯೊಬ್ಬರ ಸಹಾಯದಿಂದ ತಮ್ಮ ಕೊಠಡಿಗೆ ತೆರಳಿ ವಿಶ್ರಾಂತಿ ಪಡೆಯುವುದಾಗಿ ತಿಳಿಸಿದ್ದರು. ಆದರೆ, ಸ್ವಲ್ಪ ಸಮಯದ ನಂತರ ಔಷಧ ಪಡೆಯಲು ಮೆಡಿಕಲ್ ಶಾಪ್‌ಗೆ ಬಂದಾಗ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಜು ಅವರು ಇವರು ಕಳೆದ 10 ವರ್ಷಗಳ ಕಾಲ ಕೆ.ಆರ್. ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರಾಗಿ ನೇಮಕಗೊಂಡು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

 

Continue Reading

LATEST NEWS

ಕಡಬ: ತೋಟಕ್ಕೆ ಬಂದ ಜಾನುವಾರುಗಳನ್ನು ಓಡಿಸಲು ಹೋಗಿ ಬಿದ್ದು ಮಹಿಳೆ ಸಾವು

Published

on

ಕಡಬ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದಾಗ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ. ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64) ಮೃತಪಟ್ಟ ದುರ್ದೈವಿ.

ಮಗನೊಂದಿಗೆ ವಾಸವಿದ್ದ ಮೃತ ಲೀಲಾವತಿ ಅವರು ಜಾನುವಾರುಗಳನ್ನು ಓಡಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ಇವರ ಮಗ ಹರೀಶ್ ಲಾರಿ ಚಾಲಕರಾಗಿದ್ದು, ರಾತ್ರಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಆದರೆ ತಾಯಿ ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಹರೀಶ್ ಅವರು ನೆರೆಮನೆಯವರ ಸಹಾಯದೊಂದಿಗೆ ಹುಡುಕಾಟ ನಡೆಸಿದಾಗ, ತೋಟದಲ್ಲಿ ಲೀಲಾವತಿ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತದೇಹ ಪತ್ತೆಯಾದಾಗ ಅವರ ಒಂದು ಕೈಯಲ್ಲಿ ಕಲ್ಲು ಹಾಗೂ ಇನ್ನೊಂದು ಕೈಯಲ್ಲಿ ದೊಣ್ಣೆ ಇತ್ತು ಎಂದು ತಿಳಿದುಬಂದಿದೆ. ತೋಟಕ್ಕೆ ನುಗ್ಗಿದ ಜಾನುವಾರುಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕಲ್ಲೇ ಅವರ ಹಣೆಗೆ ಬಲವಾಗಿ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಣಾಲು ಗ್ರಾಮದ ತಿರ್ಲೆ ಪರಿಸರದಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾನುವಾರುಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

 

Continue Reading

LATEST NEWS

ಕೃಷ್ಣ ಮಠಕ್ಕಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್; ದಿವಾನರು ಹೇಳಿದ್ದೇನು?

Published

on

ಉಡುಪಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿದೆ ಎನ್ನಲಾಗ್ತಿದೆ. ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪ್ರತಿದಿನ ಸಾವಿರಾರು ಜನ ಅನ್ನಪ್ರಸಾದ ಸ್ವೀಕರಿಸುತ್ತಾರೆ. ಅಡುಗೆ ಅನಿಲ ಬಳಸಿಕೊಂಡು ಇಲ್ಲಿ ಊಟಕ್ಕೆ ತಯಾರಿ ಮಾಡಲಾಗುತ್ತೆ. ಆದರೆ ಕಟ್ಟಿಗೆ ಬಳಸಿ ಅಡುಗೆ ಮಾಡುವುದು ಇಲ್ಲಿನ ಸಂಪ್ರದಾಯ.

ಸದ್ಯಕ್ಕೆ ಯಾವುದೇ ಅಡ್ಡಿ ಆಗಿಲ್ಲ ಆದರೂ, ಎಷ್ಟೇ ಸಾವಿರ ಜನ ಬಂದರೂ ಕಟ್ಟಿಗೆ ಬಳಕೆ ಮಾಡಿ ಅಡುಗೆ ತಯಾರಿಸಲಾಗುವುದು. ಉಡುಪಿ ಮಠದಲ್ಲಿ ಅಡುಗೆಗೆ ಕಟ್ಟಿಗೆ ಬಳಕೆಗೆಂದೇ ಕಾಡು ಬೆಳೆಸಲಾಗುತ್ತಿದೆ. 36 ವರ್ಷಕ್ಕೊಮ್ಮೆ ಕಾಡಿನಿಂದ ಕಟ್ಟಿಗೆ ಲಭ್ಯವಾಗುತ್ತದೆ. ಭಕ್ತರು ನಿರಾತಂಕವಾಗಿ ಕೃಷ್ಣ ದರ್ಶನ ಮಾಡಿ ಊಟಕ್ಕೆ ಬರಬಹುದು ಎಂದು ದಿವಾನರಾದ ಡಾ.ಉದಯ್ ಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page