Connect with us

DAKSHINA KANNADA

ಸುದ್ದಿಪ್ರಕಟಿಸದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ಶಾಸಕರು ಮಾಡಿದ ಮಾನಹಾನಿ ಕಾರ್ಯ ಯಾವುದು..? ಎ ಸಿ ವಿನಯರಾಜ್‌ ಪ್ರಶ್ನೆ..!

Published

on

ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ತನ್ನ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದರ ಔಚಿತ್ಯವನ್ನು ದಕ. ಜಿಲ್ಲಾ ಕಾಂಗ್ರೆಸ್ ಪ್ರಶ್ನಿಸಿದೆ.

ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ತನ್ನ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದರ ಔಚಿತ್ಯವನ್ನು ದಕ. ಜಿಲ್ಲಾ ಕಾಂಗ್ರೆಸ್ ಪ್ರಶ್ನಿಸಿದೆ.

ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ತನ್ನ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ಮತ್ತು ದೃಶ್ಯಗಳನ್ನು ಪ್ರಸಾರ ಮಾಡದಂತೆ ಮುದ್ರಣ ಮತ್ತು ದೃಶ್ಯ ಮಾಧ್ಯಮ ಸೇರಿದಂತೆ ಒಟ್ಟು 67 ಮಾಧ್ಯಮಗಳ ಮೇಲೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದು, ಈ ರೀತಿ ತಡೆಯಾಜ್ಞೆ ತಂದಿರುವುದರ ಔಚಿತ್ಯವೇನು ಎಂದು ಜಿಲ್ಲಾ ಕಾಂಗ್ರೆಸ್‌ ವಕ್ತಾರ ಎ.ಸಿ. ವಿನಯರಾಜ್‌ ಪ್ರಶ್ನಿಸಿದ್ದಾರೆ.

ಅವರು ಇಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಧಾನ ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತರುವಂತಹ  ಯಾವ ಘನಂಧಾರಿ ಕೆಲಸವನ್ನು ವೇದವ್ಯಾಸ ಕಾಮತ್‌ ಅವರು ಮಾಡಿದ್ದಾರೆ ?  ಅಂತಹ ಯಾವ ತಪ್ಪು ಮಾಡಿದ್ದಾರೆ ?  ಆದನ್ನು ಅವರು ಮತದಾರರಿಗೆ ತಿಳಿಸ ಬೇಕು ಎಂದು ಒತ್ತಾಯಿಸಿದರು.

ಯಾವುದೇ ತಪ್ಪು ಮಾಡದಿದ್ದರೆ ತಡೆಯಾಜ್ಞೆ ತರುವ ಅಗತ್ಯವೇನಿದೆ ? ಮತದಾರರು ಕೂಡಾ ಜಾಗೃತರಾಗಬೇಕು ಎಂದರು.

ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು  ಜನ ಪ್ರತಿನಿಧಿ ಆಗುವವರು ಸಚ್ಚಾರಿತ್ರ್ಯವಂತರಾಗಿರಬೇಕು.

ಕಾಂಗ್ರೆಸ್ ಪಕ್ಷ ಎಂದಿಗೂ ಮಾಧ್ಯಮಕ್ಕೆ ಕಡಿವಾಣ ಹಾಕುವ ಕೆಲಸವನ್ನು ಮಾಡಿಲ್ಲ.

ನಮಗೆ ಇಂತಹ ನೀಚ ರಾಜಕಾರಣವೂ ಗೊತ್ತಿಲ್ಲ. ವೇದವ್ಯಾಸ ಕಾಮತರು ಒಳ್ಳೆಯ ಕೆಲಸವನ್ನು ಮಾಡಿದ್ದರೆ ಮಾಧ್ಯಮಗಳು ಅದನ್ನು ಬಿಂಬಿಸುತ್ತವೆ.

ಕೆಟ್ಟ ಕೆಲಸ ಮಾಡಿಲ್ಲ ಎಂದಾದರೆ ಶಾಸಕರಿಗೆ ಹೆದರಿಕೆ ಏಕೆ..?

ಅವರು ತನ್ನ ವಿರುದ್ದ ಸುದ್ದಿ, ಚಿತ್ರ, ವಿಡಿಯೋಗಳನ್ನು ಪ್ರಕಟಿಸದಂತೆ ತಡೆಯಾಜ್ಞೆ ತರುವ ಅಗತ್ಯ ಏನಿದೆ ಎಂದು ಎ ಸಿ. ವಿನಯರಾಜ್‌ ಪ್ರಶ್ನಿಸಿದರು.

ಇದಕ್ಕೆ ಉತ್ತರವನ್ನು ಅಭ್ಯರ್ಥಿ ವೇದವ್ಯಾಸ ಕಾಮತ್‌ ನೀಡಬೇಕು. ಇಲ್ಲದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಮನೆ ಮನೆಗೆ ಹೋಗಿ ಈ ವಿಚಾರದಲ್ಲಿ ವೇದವ್ಯಾಸ ತಡೆಯಾಜ್ಞೆ ತಂದ ವಿಚಾರದ ಬಗ್ಗೆ ಮತದಾರರಿಗೆ ತಿಳಿಸಲಾಗುವುದು ಎಂದು ವಿನಯರಾಜ್‌ ನುಡಿದರು.

https://youtu.be/gBCcotMbY0A

DAKSHINA KANNADA

ನಾಳೆ(ಜ.21) ಕದ್ರಿ ಮ್ಯೂಸಿಕಲ್ ನೈಟ್ಸ್ 2026 : ರಿಷಬ್ ಶೆಟ್ಟಿ ಭಾಗಿ

Published

on

ಮಂಗಳೂರು : ಕದ್ರಿ ಶ್ರೀಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ  ಪ್ರಯುಕ್ತ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಕದ್ರಿ ಈವೆಂಟ್ಸ್ ಅರ್ಪಿಸುವ  ‘ಕದ್ರಿ ಮ್ಯೂಸಿಕಲ್ ನೈಟ್ಸ್ 2026’ ನಾಳೆ(ಜ.21) ಸಂಜೆ 7 ಗಂಟೆಯಿಂದ ಕದ್ರಿ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದೆ.

ಎಂದಿನಂತೆ ಈ ಬಾರಿಯೂ ತಾರಾ ಮೆರುಗು ಇರಲಿದ್ದು, ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಆಗಮಿಸಲಿದ್ದಾರೆ.

ಆಯೋಜಕ ಜಗದೀಶ್ ಕದ್ರಿ ಈ ಬಗ್ಗೆ ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ಕೂಡ ಕದ್ರಿ ಮ್ಯೂಸಿಕಲ್ ನೈಟ್ ಆಯೋಜನೆ ಮಾಡಿದ್ದೇವೆ. ಸಿನಿಮಾ ಸೆಲೆಬ್ರಿಟಿಗಳು, ಗಣ್ಯರು ಸೇರಿದಂತೆ ಹೆಸರಾಂತ ಗಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಇದನ್ನೂ ಓದಿ : BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

ಕನ್ನಡ, ತುಳು ಚಿತ್ರರಂಗದ ಕಲಾವಿದರಾದ ರೂಪೇಶ್ ಶೆಟ್ಟಿ, ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರ್ಜುನ್ ಕಾಪಿಕಾಡ್, ಶನಿಲ್ ಗುರು, ಪ್ರಕಾಶ್ ತೂಮಿನಾಡು, ಸ್ವರಾಜ್ ಶೆಟ್ಟಿ, ದೀಪಕ್ ರೈ ಪಾಣಾಜೆ, ವಿಜೆ ವಿನೀತ್, ಸಮತಾ ಅಮೀನ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Continue Reading

DAKSHINA KANNADA

ಮಂಗಳೂರು: ಡ್ರಗ್ಸ್‌ ನಿರ್ಮೂಲನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಬಸ್ಸು ಮಾಲಕರ ಸಂಘ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 110 ವರ್ಷಗಳ ಇತಿಹಾಸವನ್ನು ಹೊಂದಿರುವ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಿಕೊಂಡು ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ವತಿಯಿಂದ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಇದುವರೆಗೆ ಕೋಟಿಗಟ್ಟಲೆ ರೂಪಾಯಿಗಳ ರಿಯಾಯಿತಿ ದರದ ಬಸ್ಸು ಪಾಸುಗಳನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದೇವೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಲು ಮುಂದಾಗಿರುವ ನಗರ ಪೊಲೀಸ್‌ ಕಮಿಷನರ್‌ ಅವರ ಜೊತೆಗೆ ಜಿಲ್ಲಾ ಬಸ್ಸು ಮಾಲಕರ ಸಂಘವೂ ಕೈಜೋಡಿಸಿ ಡ್ರಗ್ ನಿರ್ಮೂಲನೆ ಮಾಡಲು ಬೀದಿ ನಾಟಕ ಪ್ರದರ್ಶನ ಮಾಡಲಿದ್ದೇವೆ ಎಂದು ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡ್ರಗ್ ಜಾಲಕ್ಕೆ ಕಡಿವಾಣ, ನಶೆಗೆ ಒಳಗಾಗುವ ವಿದ್ಯಾರ್ಥಿಗಳನ್ನು ಅದರಿಂದ ಹೊರತರುವ ಕೆಲಸ ಮಾಡುತ್ತಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ನುಡಿದರು. ಅಲ್ಲದೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆಗೆ ನಾವು ಕೈಜೋಡಿಸಿದ್ದೇವೆ. ಜನವರಿ 27ರ ಮಂಗಳವಾರ ರೋಶನಿ ನಿಲಯ ಕಾಲೇಜಿನ ಸಹಭಾಗಿತ್ವದೊಂದಿಗೆ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಹಲವು ಕಡೆ ಡ್ರಗ್‌ ವಿರೋಧಿ ಬೀದಿನಾಟಕ ಆಯೋಜನೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಮಂಗಳೂರು: ಹಂಚಿನ ಫ್ಯಾಕ್ಟರಿಯಲ್ಲಿ ಅ*ಗ್ನಿ ಅ*ವಘ*ಡ

ನಗರದ ಸೆಂಟ್ರಲ್‌ ಬಸ್ಸು ನಿಲ್ದಾಣ, ತೊಕ್ಕೊಟ್ಟು ಬಸ್ಸು ನಿಲ್ದಾಣ, ತಲಪಾಡಿ, ಉಳ್ಳಾಲ, ಲಾಲ್‌ಭಾಗ್‌ ಸೇರಿದಂತೆ ಹಲವು ಕಡೆಗಳ ಬಸ್ಸು ನಿಲ್ದಾಣಗಳಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎಲ್ಲಾ ಬಸ್ಸುಗಳಲ್ಲಿ ಸ್ಟಿಕ್ಕರ್‌ ಹಚ್ಚಿ ಜಾಗೃತಿ ಮೂಡಿಸಲಿದ್ದೇವೆ. ಇದಕ್ಕೆ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆಗಮಿಸಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ ರಾಮಚಂದ್ರ ನಾಯ್ಕ , ರಾಮಚಂದ್ರ ಪಿಲಾರ್ ಹಾಗೂ ಜೊತೆ ಕಾರ್ಯದರ್ಶಿ ರಾಜೇಶ್ ಟಿ ಯವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ರಿಗೆ ‘ಕನ್ನಡ ಪಯಸ್ವಿನಿ ಅವಾರ್ಡ್- 2026’ ಪ್ರದಾನ 

Published

on

ಮಂಗಳೂರು : ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026’ ಅಂತಾರಾಜ್ಯ ಪ್ರಶಸ್ತಿಯನ್ನು  ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆರಿಗೆ ಪ್ರದಾನ ಮಾಡಲಾಯಿತು.

ಕಾಸರಗೋಡು ನುಳ್ಳಿಪಾಡಿಯಲ್ಲಿ ನಡೆದ ಕನ್ನಡ ಭವನ ರಜತ ಸಂಭ್ರಮ – ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಪ್ರಶಸ್ತಿಯನ್ನುಅವರು  ಸ್ವೀಕರಿಸಿದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 32 ವರ್ಷ ಕ್ರೀಡಾ  ಅಂಕಣಕಾರರಾಗಿ ಹಾಗೂ ಕ್ರೀಡಾ  ವಿಮರ್ಶಾತ್ಮಕ ಲೇಖನಗಳ  ಮೂಲಕ ಎಸ್. ಜಗದೀಶ್ಚಂದ್ರ ಅಂಚನ್ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕಳೆದು ಹೋದ ಹಣ, ವಿವಿಧ ಡಾಕ್ಯುಮೆಂಟ್ಸ್ ಗಳಿದ್ದ ಪರ್ಸ್; ಸಿಕ್ಕಿದ್ದಲ್ಲಿ ಮರಳಿಸುವಂತೆ ಮನವಿ

ಕಾರ್ಯಕ್ರಮದಲ್ಲಿ ಕನ್ನಡ ಭವನ ಸ್ಥಾಪಕಾಧ್ಯಕ್ಷ ಡಾ.ಕೆ.ವಾಮನ್ ರಾವ್, ನಿರ್ದೇಶಕ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ , ಕರ್ನಾಟಕ ಬ್ಯಾರಿ‌ ಅಕಾಡೆಮಿಯ ಮಾಜಿ ಅಧ್ಯಕ್ಷೆ ಆಯಿಷಾ ಪೆರ್ಲ , ಶಿಕ್ಷಣ ತಜ್ಞ ವಿ.ಬಿ.ಕುಳವರ್ಮ , ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟ್ಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ , ಸಾಹಿತಿ ಜಯಾನಂದ ಪೆರಾಜೆ, ಕಾಸರಗೋಡು ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು  ಮೊದಲಾದವರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page