Connect with us

ಶಾಸಕ ವೇದವ್ಯಾಸ ಕಾಮತ್ ಆಟಾಟೋಪಗಳಿಗೆ ಕಡಿವಾಣ ಹಾಕಬೇಕಿದೆ: ಮುನೀರ್ ಕಾಟಿಪಳ್ಳ ಫೈರ್

Published

on

ಶಾಸಕ ವೇದವ್ಯಾಸ ಕಾಮತ್ ಆಟಾಟೋಪಗಳಿಗೆ ಕಡಿವಾಣ ಹಾಕಬೇಕಿದೆ: ಮುನೀರ್ ಕಾಟಿಪಳ್ಳ ಫೈರ್

ಮಂಗಳೂರು: ಕೊರೊನಾ ಸೋಂಕು ಹರಡದಂತೆ ತಡೆಯಲು ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಆಡಳಿತ ಪಕ್ಷದ ಜನಪ್ರತಿನಿಧಿಗಳೇ ವಿಘ್ನಗಳನ್ನು ಒಡ್ಡುತ್ತಿದ್ದಾರೆ.

ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಜಿಲ್ಲಾಡಳಿತದ ಎಲ್ಲಾ ಕೆಲಸಗಳಿಗೆ ಅನಗತ್ಯ ಮೂಗು ತೂರಿಸುತ್ತಿದ್ದಾರೆ.

ಆರೋಗ್ಯ ಕಾರ್ಯಕರ್ತರು, ಜಿಲ್ಲಾಡಳಿತ ನೇಮಿಸಿರುವ ಸರಕಾರಿ ನೌಕರರಿಗೆ ಮಾತ್ರ ಪ್ರವೇಶ ಇರುವ ನಗರದ ಸೀಲ್ ಡೌನ್ ಆದ ಪ್ರದೇಶಗಳಿಗೆ ಶಾಸಕ ವೇದವ್ಯಾಸ್ ಕಾಮತ್ ತನ್ನ ಕಾರ್ಯಕರ್ತರ ದಂಡು ಕಟ್ಟಿಕೊಂಡು ಭೇಟಿ ನೀಡಿದ್ದಾರೆ.

ಇದು ಲಾಕ್ ಡೌನ್ ನಿಯಮ ಮಾತ್ರ ಅಲ್ಲ ಕೊರೊನಾ ತಡೆ ಮಾರ್ಗದರ್ಶಿ ಸೂತ್ರದ ಗಂಭೀರ ಉಲ್ಲಂಘನೆಯಾಗಿದ್ದು,

ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರೊಂದಿಗೆ ಸೀಲ್ ಡೌನ್ ಪ್ರದೇಶಗಳಿಗೆ ಭೇಟಿ ನೀಡಿದ ಬಿಜೆಪಿ ಕಾರ್ಯಕರ್ತರನ್ನು ತಕ್ಷಣವೇ ಕ್ವಾರಂಟೈನ್ ಮಾಡಬೇಕು.

ಹಾಗೂ ಮುಖ್ಯಮಂತ್ರಿಗಳು ಜಿಲ್ಲಾಡಳಿತದ ಕೆಲಸಗಳಲ್ಲಿ ಅನಗತ್ಯ ಮಧ್ಯ ಪ್ರವೇಶಿಸದಂತೆ ತನ್ನ ಪಕ್ಷದ ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.

ಆರಂಭದ ದಿನಗಳಲ್ಲೆ ಜಿಲ್ಲಾಡಳಿತದ ಕೈಕಟ್ಟಿ ಹಾಕುವ ಕೆಲಸಗಳನ್ನು ವೇದವ್ಯಾಸ ಕಾಮತ್ ಹಾಗೂ ಬಿಜೆಪಿಯ ಜನಪ್ರತಿನಿಧಿಗಳು ಮಾಡುತ್ತಾ ಬಂದಿದ್ದಾರೆ.

ಮೂರು ದಿನಗಳ ಸತತ ಕರ್ಫ್ಯೂ, ಪಾಸ್ ಗಳ ಬೇಕಾಬಿಟ್ಟಿ ವಿತರಣೆ, ಕೊರೊನಾ ಪೀಡಿತರ ಶವ ಸಂಸ್ಕಾರಕ್ಕೆ ಅಡ್ಡಿ ಮುಂತಾದ ವೈಫಲ್ಯಕ್ಕೆ ಈ ಮೂಗು ತೂರಿಸುವಿಕೆಯೇ ಕಾರಣ.

ಈ ರೀತಿ ಜಿಲ್ಲಾಡಳಿತದ ಕೈಕಟ್ಟಿ ಹಾಕುವ ರಾಜಕೀಯ ಆಟಗಳಿಂದ ಜಿಲ್ಲೆಯಲ್ಲಿ ಪರಿಹಾರ ಕ್ರಮ, ಕೊರೊನಾ ವೈರಸ್ ಹರಡುವಿಕೆ ತಡೆಯುವಲ್ಲಿ ವೈಫಲ್ಯಗಳು ಎದ್ದು ಕಾಣುತ್ತಿವೆ.‌

ಈಗ ಜಿಲ್ಲೆಯನ್ನು ಕಂಗೆಡಿಸಿರುವ ಬಂಟ್ವಾಳ ಕೊರೊನಾ ಪಾಸಿಟಿವ್ ಪ್ರಕರಣದ ಮೂಲ ಹಾಗೂ ಟ್ರಾಕ್ ಪತ್ತೆ ಹಚ್ಚಲು ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ.

ಇದರಿಂದ ಕೊರೊನಾ ವ್ಯಾಪಕಗೊಳ್ಳುವ ಭೀತಿ ಜಿಲ್ಲೆಯನ್ನು ಆವರಿಸಿದೆ. ಜನತೆ ಭಯದಿಂದ ಬದುಕುವಂತಾಗಿದೆ.

ಇಂತಹ ಗಂಭೀರ ಸನ್ನಿವೇಶದಲ್ಲಿ‌ ಕೊರೊನಾ ಪಾಸಿಟಿವ್ ಪತ್ತೆಯಾದ ಪ್ರದೇಶಗಳನ್ನು ಸೀಲ್ ಡೌನ್ ಮಾಡಿ ರಾಷ್ಟ್ರೀಯ ನೀತಿಯಂತೆ,

ಅಂತಹ ಪ್ರದೇಶಗಳಿಗೆ ಹೊರಗಡೆಯ ಸಂಪರ್ಕವನ್ನು ಪೂರ್ಣವಾಗಿ ನಿಷೇಧಿಸಿ ವೈರಸ್ ಹರಡುವುದನ್ನು ತಡೆಯಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ.

ಸೀಲ್ ಡೌನ್ ಅಂದರೆ ಇಡೀ ಪ್ರದೇಶವೇ ಕ್ವಾರಂಟೈನ್ ಒಳಗಾದಂತೆ. ಅಲ್ಲಿನ ಜನರಿಗೆ ನೆರೆಹೊರೆಯ ಮನೆಗಳ ಸಂಪರ್ಕವೂ ಇರುವಂತಿಲ್ಲ.

ಮನೆಗಳಿಂದ ಹೊರ ಬರುವಂತಿಲ್ಲ. ಆರೋಗ್ಯ ಕಾರ್ಯಕರ್ತರು, ಜಿಲ್ಲಾಡಳಿತ ನೇಮಿಸಿರುವ ನೌಕರರು ಹೊರತುಪಡಿಸಿ ಮತ್ಯಾರೂ ಆ ಪ್ರದೇಶಕ್ಕೆ ಭೇಟಿ ನೀಡುವಂತಿಲ್ಲ.‌

ಕೊರೊನಾ ವೈರಸ್ ಹರಡುವ ಸಾಧ್ಯತೆ ಅತಿ ಹೆಚ್ಚಿರುವ ಅಂತಹ ಪ್ರದೇಶಗಳಿಗೆ ಭೇಟಿ ನೀಡುವುದು ದಂಡನಾರ್ಹ ಅಪರಾಧ.

ಇಷ್ಟೆಲ್ಲಾ ಅಪಾಯ ಇರುವ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ಕಾರ್ಯಕರ್ತರ ದಂಡು ಕಟ್ಟಿ ಅಂತಹ ಪ್ರದೇಶಗಳಿಗೆ ಭೇಟಿ ನೀಡುತ್ತಿರುವುದು ಜಿಲ್ಲಾಡಳಿತದ ಪ್ರಯತ್ನವನ್ನು ವ್ಯರ್ಥಗೊಳಿಸುತ್ತದೆ.

ಶಾಸಕರ ಈ ಬೇಜವಾಬ್ದಾರಿತನ ಖಂಡನಾರ್ಹ. ಅಪಾಯಕಾರಿ ಸೀಲ್ ಡೌನ್ ಪ್ರದೇಶಗಳಲ್ಲಿ ಅಡ್ಡಾಡಿ, ಜನರೊಂದಿಗೆ ಬೆರೆತಿರುವ ವೇದವ್ಯಾಸ್ ಕಾಮತ್ ಮತ್ತವರ ತಂಡ ಕೊರೋನ ವೈರಸ್ ಅಪಾಯಕ್ಕೆ ತನ್ನನ್ನು ತಾನು ಒಡ್ಡಿಕೊಂಡಿದೆ.

ನಿಯಮದಂತೆ ಶಾಸಕರು ಹಾಗೂ ಅವರೊಂದಿಗೆ ಭೇಟಿ ನೀಡಿದ ತಂಡದಲ್ಲಿದ್ದ ಕಾರ್ಯಕರ್ತರನ್ನು ಕಡ್ಡಾಯ ಲಾಕ್ ಡೌನ್ ಗೆ ಒಳಪಡಿಸಬೇಕು

ಹಾಗೂ ಶಾಸಕರ ಆಟಾಟೋಪಗಳಿಗೆ ತಕ್ಷಣ ಕಡಿವಾಣ ಹಾಕಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ರಾಜ್ಯ ಸರಕಾರವನ್ನು ಅಗ್ರಹಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಮಹಿಳಾ, ಮಕ್ಕಳ ಆಸ್ಪತ್ರೆಯಲ್ಲಿ ಎನ್‌ ಆರ್‌ಸಿ ಕೇಂದ್ರ ಇಲ್ಲದಕ್ಕೆ ಗರಂ ಆದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

Published

on

ಉಡುಪಿ:  ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಹೇಳಿದರು.

ಪ್ರತಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿಯೂ ಈ ಕೇಂದ್ರ ಇದೆ. ಆದರೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ಸುಪರ್ದಿಗೆ ಬಂದು  ನಾಲ್ಕು ವರ್ಷಗಳಾದರೂ ಇನ್ನೂ ಎನ್‌ ಆರ್‌ ಸಿಯನ್ನು ಆರಂಭಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಬಹಳ ಬೇಸರದ ಸಂಗತಿ. ಈ ಬಗ್ಗೆ ಜಿಲ್ಲಾಡಳಿತ, ಡಿಎಚ್‌ಓ, ಜಿಲ್ಲಾ ಸರ್ಜನ್ ಯಾವ ಕಾರಣಕ್ಕಾಗಿ ಇದನ್ನು ಇನ್ನೂ ಆರಂಭಿಸಿಲ್ಲ ಎಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯಲ್ಲಿ ಮಕ್ಕಳು ದಾಖಲಾದ ಮೇಲೆ ಪ್ರತಿಯೊಂದು ಹೆಸರು, ತಾಯಿ ಹೆಸರು ದಾಖಲೆ ಮಾಡಿ, ಬಳಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಆದರೆ ಇಲ್ಲಿ ಕೇಸ್ ಶೀಟ್ ನೋಡಿದರೆ ಹಿನ್ನೆಲೆಯಲ್ಲಿ ಬರೆಯಲಾಗಿದೆ. ವಿವರ ಮಗುವಿನ ತಂದೆ ತಾಯಿ ಹೆಸರು ವಿಳಾಸ ಕೂಡ ಇಲ್ಲ. ಇದರಿಂದ ತಪ್ಪಾದ ಚಿಕಿತ್ಸೆ ನೀಡುವ ಸಾಧ್ಯತೆ ಹೆಚ್ಚು ಇರುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಅನಾವಶ್ಯಕವಾಗಿ ಆ ಮಗು ಅನಾರೋಗ್ಯಕ್ಕೆ ತುತ್ತಾಗುತ್ತದೆ. ಆದುದರಿಂದ ವೈದ್ಯರು ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.

Continue Reading

BELTHANGADY

ಶಿರಾಡಿ ಘಾಟ್ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

Published

on

ಶಿರಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ನಡೆದಿದೆ.

 

ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ ,  ಉಜಿರೆ ನಿವಾಸಿಗಳಾದ ಶ್ರೀಧರ್ , ಜನಾರ್ದನ ಕೆರಿಮಾರ್ ಮೃತ ದುರ್ದೈವಿಗಳು. ಧರ್ಮಸ್ಥಳದಿಂದ ಮದ್ಯಾಹ್ನ 1.30ಕ್ಕೆ ಬೆಂಗಳೂರು ಮೂಲಕ ತಿರುಪತಿಗೆ ಹೊರಟಿದ್ದ ಕೆ.ಎಸ್. ಆರ್.ಟಿ.ಸಿ ರಾಜಹಂಸ ಬಸ್ ಮತ್ತು ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಗೆ ಬರುತ್ತಿದ್ದ ಕಾರು ಶಿರಾಡಿ ಘಾಟ್ ಗಡಿ ಸಮೀಪ ಮುಖಾಮುಖಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

 

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜಗುಜ್ಜಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ರೆ ಮತ್ತೋರ್ವರು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.  ಘಟನೆಯಲ್ಲಿ ಸುರೇಶ್ ಎಂಬವರಿಗೂ ಕೂಡಾ ಗಾಯಗಳಾಗಿವೆ ಎಂದು ತಿಳಿದುಬಂದಿದೆ.  ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

LATEST NEWS

ಸಿಲಿಂಡರ್ ಅಭಾವ: ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

Published

on

ಬೆಂಗಳೂರು: ಇಸ್ರೇಲ್‌, ಅಮೇರಿಕ ಮತ್ತು ಇರಾನ್‌ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಇದೀಗ ಗ್ಯಾಸ್ ಸಿಲಿಂಡರ್ ಕೊರತೆಯ ನಡುವೆ, ಗ್ರಾಹಕರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ಈಗ ಬೆಲೆ ಏರಿಕೆಯ ಬಿಸಿ ಮತ್ತೊಂದು ಶಾಕ್ ನೀಡುವ ಸಾಧ್ಯತೆಯಿದೆ.


ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್​ ಮಾಲೀಕರ ಸ್ಥಿತಿ ಅಯೋಮಯವಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್​​ಗಳು ಸಹ ಬಂದ್‌ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ ಅಂಗಡಿಯ ಸರದಿ ಶುರುವಾಗಿದೆ. ಕಮರ್ಷಿಯಲ್ ಗ್ಯಾಸ್​ನಂತೆ ಅಡುಗೆ ಆಯಿಲ್ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಅಡುಗೆ ಎಣ್ಣೆ ಮಾಲಿಕರೊಬ್ಬರು ಪ್ರತಿಕ್ರಿಯಿಸಿದ್ದು, ಕಳೆದ 1 ವಾರದಿಂದ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ. 100-200 ಬಾಕ್ಸ್‌ ಎಣ್ಣೆ ಬುಕ್‌ ಮಾಡಿದರೆ 20-50 ಬಾಕ್ಸ್‌ ಮಾತ್ರ ಕಳುಹಿಸುತ್ತಾರೆ. ಏಜೆಂಟರಲ್ಲಿ ಕೇಳಿದರೆ, ಸಪ್ಲೈ ಆಗುತ್ತಿಲ್ಲ. ಹೆಚ್ಚು ಬಾಕ್ಸ್‌ ನೀಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ 15-20 ರೂ. ದರ ಜಾಸ್ತಿ ಆಗಿರುವುದರಿಂದ ನಮಗೆ ತುಂಬಾ ಸಮಸ್ಯೆ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸೀಮೆಎಣ್ಣೆ ಹಂಚಿಕೆ ಮತ್ತು ಆಮದು ನೀತಿಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದ ಹೊಸ ನಿರ್ಧಾರ

ಗ್ಯಾಸ್ ಅಭಾವ ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಸಿಲಿಂಡರ್ ಖರೀದಿಸಬೇಕಾದ ಅನಿವಾರ್ಯತೆಯಿಂದಾಗಿ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುವ ಭೀತಿ ಎದುರಾಗಿದೆ. ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಕಾಡುತ್ತಿದೆ. ನಗರದ ಕೆಲವು ಹೋಟೆಲ್‌ಗಳು ಮತ್ತು ಪಿಜಿಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಇಲ್ಲದೆ ಮತ್ತೆ ಹಳೆಯ ಪದ್ಧತಿಯಂತೆ ಸೌದೆ ಒಲೆಗಳನ್ನು ಬಳಸುವ ಅನಿವಾರ್ಯತೆ ಎದುರಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page