Connect with us

KADABA

ಕಡಬದಲ್ಲಿ ಮೊಬೈಲ್‌ ಎಗರಿಸಿದ ಯುವಕ: ಸಿಸಿಟಿವಿಯಲ್ಲಿ ಕೃತ್ಯ ಬಯಲು

Published

on

ಕಡಬ: ಬ್ಯಾಂಕಿನಲ್ಲಿ ಬಾಕಿಯಾಗಿದ್ದ ಮಹಿಳೆಯೊಬ್ಬರ ಮೊಬೈಲನ್ನು ಹೆಲ್ಮೆಟ್ ಧರಿಸಿದ ಯುವಕನೊಬ್ಬ ಎಗರಿಸಿದ ಘಟನೆ  ಜಿಲ್ಲೆಯ  ಕಡಬ ಠಾಣೆಯ ಮುಖ್ಯ ಪೇಟೆಯ ಎ.ಟಿ.ಎಂ ಕೇಂದ್ರದಲ್ಲಿ ನಡೆದಿದೆ.

ಕಡಬದ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ನ ಎಟಿಎಂ ಕೇಂದ್ರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆಯ ಸೇವಾ ಪ್ರತಿನಿಧಿ ರೇಖಾ ಎಂಬವರು  ಹಣ ಪಡೆಯಲು ಬಂದಿದ್ದರು. ಈ ಸಂದರ್ಭದಲ್ಲಿ ಹಣ ಬಾರದ ಹಿನ್ನೆಲೆಯಲ್ಲಿ  ಮೊಬೈಲ್ ಅಲ್ಲೆ ಬಿಟ್ಟು ಪಕ್ಕದಲ್ಲಿ ಇದ್ದ ಬ್ಯಾಂಕ್  ಸಿಬ್ಬಂದಿಯನ್ನು  ಕರೆಯಲು ಬ್ಯಾಂಕಿಗೆ ಹೋಗಿದ್ದರು. ಆದರೆ ವಾಪಾಸು ಬಂದು ನೋಡಿದಾಗ ಮೊಬೈಲ್ ಇಲ್ಲದಿರುವುದು ಗಮನಕ್ಕೆ ಬಂದಿದೆ. ಸದ್ಯ ಈ ಘಟನೆಯ ದೃಶ್ಯಗಳು ಎಟಿಎಂ ನಲ್ಲಿದ್ದ  ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಕೂಟಿಯಲ್ಲಿ ಬಂದ ಯುವಕ ಹೆಲ್ಮೆಟ್ ಧರಿಸಿಯೇ ಎಟಿಎಂ ಪ್ರವೇಶಿಸಿ ಹಣ ಪಡೆದಿದ್ದಾನೆ. ಜೊತೆಗೆ ಪಕ್ಕದ ಟೇಬಲ್ ನಲ್ಲಿ ಇರಿಸಿದ್ದ ಮೊಬೈಲನ್ನು ಎಗಸಿರಿದ್ದಾನೆ.  ಈ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಮೊಬೈಲ್ ಕಳೆದು ಹೋಗಿರುವ ಬಗ್ಗೆ ಕಡಬ ಠಾಣೆಯಲ್ಲಿ ದೂರು ನೀಡಲಾಗಿದೆ. ಸದ್ಯ ಹೆಲ್ಮೆಟ್ ಧರಿಸಿದ ಯುವಕನ ಪತ್ತೆಗೆ ಪೊಲೀಸರು ಶ್ರಮಿಸುತ್ತಿದ್ದಾರೆ.

KADABA

ಕುಮಾರಧಾರ ನದಿಯಲ್ಲಿ ಮುಳುಗಿ ಓರ್ವ ಯುವಕ ಸಹಿತ ಇಬ್ಬರು ಮೃತ್ಯು

Published

on

ಕಡಬ: ಕುಮಾರಧಾರ ನದಿಗೆ ಸ್ನಾನಕ್ಕಿಳಿದ ಓರ್ವ ಯುವಕ ಸೇರಿದಂತೆ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಭಾನುವಾರ ನಡೆದಿದೆ.


ಮೃತರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್(39) ಮತ್ತು ಸುಜಿತ್(28) ಎಂದು ಗುರುತಿಸಲಾಗಿದೆ.


ಮೃತರಿಬ್ಬರೂ ಅವಿವಾಹಿತರಾಗಿದ್ದು, ತಮ್ಮ ಸ್ನೇಹಿತರೊಂದಿಗೆ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲೆಂದು ಕುಲ್ಕುಂದಕ್ಕೆ ತೆರಳಿದ್ದರು. ಸುಜಿತ್‌ ಈಜಾಡಲು ನೀರಿಗೆ ಇಳಿದಿದ್ದು, ಈ ವೇಳೆ ಆತನಿಗೆ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ಹರಿಪ್ರಸಾದ್‌ ಎಂಬಾತ ನದಿ ನೀರಿಗೆ ಇಳಿದಿದ್ದಾನೆ. ಆದರೆ ಇಬ್ಬರೂ ನೀರಿನಿಂದ ಮೇಲಕ್ಕೆ ಬರಲಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಕಂಬಕ್ಕೆ ಕಾರು ಡಿ*ಕ್ಕಿ; ಇಬ್ಬರು ಸಾ*ವು

ನೀರಲ್ಲಿ ಮುಳುಗಿದ ಇಬ್ಬರ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಈ ಬಗ್ಗೆ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಜಯರಾಮ ಎಂಬವರು ನೀಡಿದ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

KADABA

ಆತ್ಮಹತ್ಯೆಗೆ ಯತ್ನಿಸಿದ ಕಳ್ಳ ಈಗ ಪೊಲೀಸರ ಅತಿಥಿ

Published

on

By

ಕಡಬ : ಪಕ್ಕದ ಮನೆಯಿಂದ ಹಣ ಮತ್ತು ಚಿನ್ನ ಕದ್ದು, ಆ ಹಣದಿಂದ ಸಾಲ ತೀರಿಸಿದ ಬಳಿಕ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಕಳ್ಳನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಅಂದ ಹಾಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಕಡಬ ತಾಲೂಕಿನ ಮರ್ದಾಳದ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಕಳೆದ ರವಿವಾರ ಅಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ್ ಅವರು ಪತ್ನಿ ಮತ್ತು ಮಗನೊಂದಿಗೆ ಮನೆಗೆ ಬೀಗ ಹಾಕಿ ಚರ್ಚ್ ಪ್ರಾರ್ಥನೆಗಾಗಿ ತೆರಳಿದ್ದ ವೇಳೆ ಅವರ ಮನೆಯ ಬಾಗಿಲು ಮುರಿದು ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು.

ಪ್ರಕರಣದ ಬೆನ್ನತ್ತಿದ ಕಡಬ ಪೊಲೀಸರು ಮಹತ್ವದ ಸುಳಿವುಗಳ ಆಧಾರದಲ್ಲಿಕಳ್ಳತನ ಆಗಿರುವ ಮನೆಯಿಂದ ಕೂಗಳತೆ ದೂರದಲ್ಲಿರುವ ಮನೆಯ ಯುವಕ ಬಜಕರೆಯ ಸಿನು ಕುರಿಯನ್ ಎಂಬಾತನನ್ನು ಬುಧವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಬೈಕ್ ನಲ್ಲಿ ಬಂದು ಕೊಟ್ಟಿಗೆಯಿಂದ ಪಿಕ್ಕಾಸು ತಂದು ಬಾಗಿಲು ಮುರಿದು ಕಳ್ಳತನ ಮಾಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ.

ಸಾಲದ ಸುಳಿಯಲ್ಲಿ ಸಿಲುಕಿದ ಕಾರಣ ಕಳ್ಳತನ ಮಾಡಿರುವುದಾಗಿ ಆತ ತಿಳಿಸಿದ್ದನು. ಕಡಬದ ಟೆಕ್ಸ್ ಟೈಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆತನ ಬಳಿಯಿಂದ ಸದ್ಯ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳ್ಳತನ ಮಾಡಿರುವ ಹಣದಲ್ಲಿ ಸಾಲವನ್ನು ತೀರಿಸಿ ಉಳಿದ ಹಣವನ್ನು ಸಿನು ಕುರಿಯನ್ ತನ್ನ ಬಳಿಯೇ ಇಟ್ಟುಕೊಂಡಿದ್ದ.

ಇದನ್ನೂ ಓದಿ: 14 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಕಳ್ಳ

ಇದೀಗ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಳ್ಳತನ ಮಾಡಿದ ಬಳಿಕ ಪೊಲೀಸರಿಗೆ ಸಿಕ್ಕಿಬೀಳುವ ಹಿನ್ನೆಲೆಯಲ್ಲಿ ಸಿನು ಕುರಿಯನ್ ಮಾನಸಿಕವಾಗಿ ಕುಗ್ಗಿ ಹೋಗಿದ್ದ. ಆತ ರೈಲು ಹಳಿಯತ್ತ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಹೋಗಿದ್ದ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

ಆದರೆ ಈ ವಿಚಾರವನ್ನು ಪೊಲೀಸರು ಇದನ್ನು ಖಚಿತ ಪಡಿಸಿಲ್ಲ. ಒಂದು ವೇಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೆ ಈ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿರಲಿಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

Continue Reading

KADABA

ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ ಬೈಕ್: ಸವಾರ ಸಾವು

Published

on

By

ಕಡಬ : ಅತಿ ವೇಗದಿಂದ ಚಾಲನೆ ಮಾಡಿದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದ ಪರಿಣಾಮ ಬೈಕ್ ಸವಾರ ಕಲ್ಲುಗುಡ್ಡೆ ವಿಶ್ವನಾಥ ಎಂಬವರ ಏಕೈಕ ಪುತ್ರ ಆಶೀಶ್‌(16) ಎಂಬಾತ ಸಾವನ್ನಪ್ಪಿದ್ದಾನೆ.

 

ಕಡಬದ ಪೇರಡ್ಕ ಬಳಿ ಈ ದುರಂತ ನಡೆದಿದ್ದು, ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಆಶೀಶ್‌ ಪೇರಡ್ಕ ಸಾಂತೋಮ್ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದ.

ಈತ ಶಾಲೆಗೆ ಬರುವಾಗಲೂ ಬೈಕ್ ಹಿಡಿದುಕೊಂಡೇ ಬರುತ್ತಿದ್ದು, ಅದರಂತೆ ಇಂದು ಕೂಡಾ ಶಾಲೆಗೆ ಬರುವಾಗ ಕುಕ್ಕೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬಂದಾಗ ನಿಯಂತ್ರಣ ತಪ್ಪಿದ ಬೈಕ್‌ ಮೋರಿಗೆ ಬಡಿದು ದುರಂತ ಸಂಭವಿಸಿದೆ.

ಇದನ್ನೂ ಓದಿ: ರಾಷ್ಟ್ರಿಯ ಹೆದ್ದಾರಿ 66ರ ಕಿನ್ನಿಮುಲ್ಕಿಯಲ್ಲಿ ಟ್ಯಾಂಕರ್ ವಾಹನ ಪಲ್ಟಿ

ಕಡಬದಲ್ಲಿ ಮಿತಿಮೀರಿದ ವಿದ್ಯಾರ್ಥಿಗಳ ಅತಿ ವೇಗದ ಬೈಕ್ ಸವಾರಿಯಿಂದ ನಿರಂತರ ದುರಂತಗಳಾಗುತ್ತಿವೆ. ವಿದ್ಯಾರ್ಥಿಗಳ ವಾಹನ ತಪಾಸಣೆ ಮಾಡದಿರುವ ಪೊಲೀಸರ ವಿರುದ್ಧ ಇಲ್ಲಿನ ಸಾರ್ವಜನಿಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page