ಮಂಗಳೂರು : ಮೊದಲೆಲ್ಲಾ ಮೊನಾಲಿಸಾ ಅಂದ್ರೆ ಎಲ್ಲರಿಗೂ ನೆನಪಾಗುವುದು ಲಿಯೊನಾರ್ಡೊ ಡಾ ವಿಂಚಿ ಅವರ ಚಿತ್ರಕಲೆಯ ಹೆಣ್ಣಿನ ಚಿತ್ರ ಕಣ್ಮುಂದೆ ಬರುತ್ತಿತ್ತು. ಗೂಗಲ್‌ನಲ್ಲಿಯೂ ಇದೇ ಪೇಂಟಿಂಗ್ ಕಾಣಿಸುತ್ತಿತ್ತು. ಆದ್ರೆ ಕಳೆದ ಕೆಲವು ದಿನಗಳಿಂದ ಎಲ್ಲವೂ ಬದಲಾಗಿ ಹೋಗಿದೆ.

ಗೂಗಲ್‌ನಲ್ಲಿ ಕುಂಭಮೇಳ ಎಂದು ಸರ್ಚ್ ಮಾಡಿದ್ರೆ ಮೊದಲಿಗೆ ಕಾಣೋದೇ ಈ ನೀಲಿ ಕಣ್ಗಳ ಚೆಲುವೆ. ಸೋಷಿಯಲ್ ಮೀಡಿಯಾಗಳಲ್ಲಂತೂ ಈಕೆಯದ್ದೇ ಹವಾ.
ಮಹಾಕುಂಭಮೇಳದಲ್ಲಿ ಪಾಲ್ಗೊಳ್ಳಲು ಬಂದಿದ್ದ ಸಾವಿರಾರು ಸಾಧು-ಸಂತರ ನಡುವೆ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ಯುವತಿ ತನ್ನ ಸೌಂದರ್ಯ ಮತ್ತು ಕಣ್ಣುಗಳಿಂದ ನೆಟ್ಟಿಗರ ಗಮನ ಸೆಳೆಯುತ್ತಿದ್ದಾಳೆ.
ಅಲ್ಲದೆ, ಈಕೆಗೆ ಇದೀಗ ಬಾಲಿವುಡ್‌ನಲ್ಲೂ ಆಫರ್ ಬರುತ್ತಿದೆ ಎನ್ನುವ ಸುದ್ದಿಗಳು ಪ್ರಸಾರವಾಗುತ್ತಿವೆ. ಇದರ ನಡುವೆ ಸ್ಯಾಂಡಲ್‌ವುಡ್‌ಗೂ ಮೊನಾಲಿಸಾ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿದೆ.
ಕುಂಭಮೇಳ ಸುಂದರಿಗೆ ಬಾಲಿವುಡ್‌ನಿಂದ ಆಫರ್
ಮಹಾಕುಂಭ ಮೇಳದಲ್ಲಿ ನೋಡುಗರ ಕಣ್ಮನ ಸೆಳೆದ ಮೊನಾಲಿಸಾಗೆ ಬಾಲಿವುಡ್‌ನಿಂದ ಆಫರ್‌ವೊಂದು ಬಂದಿದೆಯಂತೆ. ಬಾಲಿವುಡ್ ಸ್ಟಾರ್ ಡೈರೆಕ್ಟರ್ ಸಿನಿಮಾದಲ್ಲಿ ನಟಿಸಲು ಆಫರ್ ಬಂದಿದೆ.
ಮೊನಾಲಿಸಾ ಮುಂದಿನ ದಿನಗಳಲ್ಲಿ ಬಾಲಿವುಡ್ ಸಿನಿಮಾದಲ್ಲಿ ಮಿಂಚಲು ಸಜ್ಜಾಗಿದ್ದಾರಂತೆ. ಡೈರೆಕ್ಟರ್ ಸನೋಜ್ ಮಿಶ್ರಾರಿಂದ ಮೊನಾಲಿಸಾ ಆಫರ್ ಹೋಗಿದೆಯಂತೆ.
ಇದನ್ನೂ ಓದಿ: ಹೊಸ ಲುಕ್‌ನಲ್ಲಿ ಮಹಾಕುಂಭಮೇಳದ ಸುಂದರಿ ‘ಮೊನಾಲಿಸಾ’
ಇನ್ನೂ, ಸನೋಜ್ ಮಿಶ್ರಾರ ಬಹು ನಿರೀಕ್ಷಿತ ಚಿತ್ರ ‘ಡೈರಿ ಆಫ್ ಮಣಿಪುರ’. ಈ ಸಿನಿಮಾಗಾಗಿ ಮುಗ್ದೆಯ ಪಾತ್ರಕ್ಕಾಗಿ ನಟಿಯನ್ನ ಹುಡುಕುತ್ತಿದ್ದಾರಂತೆ. ಇಂದೋರ್‌ಗೆ ತೆರಳಿ ಮೊನಾಲಿಸಾ ಜೊತೆ ಚರ್ಚಿಸಲಿದ್ದಾರಂತೆ. ಆಕೆಗೆ ಆ್ಯಕ್ಟಿಂಗ್ ಕ್ಲಾಸ್ ಕೊಡಿಸಿ, ಚಿತ್ರದಲ್ಲಿ ಚಾನ್ಸ್ ನೀಡುವ ಸಾಧ್ಯತೆ ಇದೆಯಂತೆ. ಶೀಘ್ರದಲ್ಲೇ ಡೈರೆಕ್ಟರ್ ಮೊನಾಲಿಸಾ ಅವರನ್ನು ಭೇಟಿಯಾಗಲಿದ್ದಾರಂತೆ. ಇನ್ನು ಮೊನಾಲಿಸಾಗೆ ಕನ್ನಡ ಸಿನಿಮಾದಲ್ಲೂ ಅವಕಾಶ ಸಿಕ್ಕಿದೆ ಎನ್ನಲಾಗಿದೆ.
ಸ್ಯಾಂಡಲ್‌ವುಡ್‌ಗೂ ಮೊನಾಲಿಸಾ ಎಂಟ್ರಿ
ಮೊನಾಲಿಸಾಗೆ ಕನ್ನಡ ಸಿನಿಮಾದಲ್ಲೂ ಆಫರ್‌ಗಳು ಬರುತ್ತಿವೆ ಎಂದು ಹೇಳಲಾಗಿದೆ. ಡಾ. ಶಿವರಾಜ್‌ಕುಮಾರ್ ಅವರ ಮುಂಬರುವ ಸಿನಿಮಾದಲ್ಲಿ ನೈಜ ಸುಂದರಿ, ಮುಖ್ಯಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಬುಚ್ಚಿ ಬಾಬು ಸನಾ ನಿರ್ದೇಶನದ ‘ಆರ್‌ಸಿ 16’ ಎಂಬ ತೆಲುಗು ಚಿತ್ರದಲ್ಲಿ ನಟ ಶಿವರಾಜ್‌ಕುಮಾರ್ ಹಾಗೂ ರಾಮ್ ಚರಣ್ ನಟಿಸುತ್ತಿದ್ದಾರೆ. ಈಗಾಗಲೇ ಈ ಚಿತ್ರದ ನಾಯಕಿಯಾಗಿ ಜಾನ್ವಿ ಕಪೂರ್ ಫಿಕ್ಸ್ ಆಗಿದ್ದಾರೆ. ಇದೀಗ ಮಧ್ಯಪ್ರದೇಶದ ಇಂದೋರ್‌ನ ಮೊನಾಲಿಸಾ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಿನಿಮಾದ ಎರಡನೇ ಶೆಡ್ಯೂಲ್ ಜನವರಿ 27ರಿಂದ ಪ್ರಾರಂಭವಾಗಲಿದ್ದು, ದಸರಾಗೆ ಚಿತ್ರ ಬಿಡುಗಡೆ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ. ಇದೇ ಚಿತ್ರದಲ್ಲಿ ಮೊನಾಲಿಸಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಮೊನ್ನೆ ಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರಲು ಬಂದಿದ್ದ ಮೊನಾಲಿಸಾ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಇದೇ ಅಲ್ವಾ ಲಕ್ ಅಂದ್ರೆ. ಯಾರ್ಯಾರ ಜೀವನ ಯಾವಾಗ ಚೇಂಜ್ ಆಗುತ್ತೆ ಅಂತ ಯಾರಿಗೂ ಹೇಳೋದಕ್ಕೆ ಆಗೋದಿಲ್ಲ.