Connect with us

LATEST NEWS

ಮೀನುಗಾರರು ಬಲೆ ಹಾಕಿದ್ದು ಮೀನಿಗೆ, ಸಿಕ್ಕಿದ್ದು ಅಪಾಯಕಾರಿ ಹಾವು..!

Published

on

ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖ ಸಾಗರ ನಗರ ಬೀಚ್​ನಲ್ಲಿ ಅಪಾಯಕಾರಿ ಹಾವೊಂದು ಪತ್ತೆಯಾಗಿದ್ದು ಸುಮಾರು 5 ಅಡಿ ಉದ್ದವಿರುವ ಹಾವು ಸ್ಥಳೀಯ ಮೀನುಗಾರರ ಬಲೆಗೆ ಬಿದ್ದಿದೆ.

ಹೆಸರು ‘ಹೈಡ್ರೋಫಿಸ್ ಗ್ರಾಸಿಲಿಸ್’ ಎಂಬ ವೈಜ್ಞಾನಿಕ ಹೆಸರಿರುವ ಅಪಾಯಕಾರಿ ಹಾವೊಂದು ಮೀನುಗಾರರ ಬಲೆಗೆ ಬಿದ್ದಿದ್ದು ಇದನ್ನು ಮೀನುಗಾರರು ಮೀನು ಎಂದೇ ಭಾವಿಸಿದ್ದರು. ಆದರೆ ಹತ್ತಿರದಲ್ಲೇ ನೋಡಿಗಾದಲೇ ಅದು ವಿಷಕಾರಿ ಹಾವೆಂದು ತಿಳಿದುಬಂದಿದೆ.


ಬಳಿಕ ಆ ಮೀನನ್ನು ಮರಳಿ ಸಮುದ್ರಕ್ಕೆ ಬಿಡಲಾಯಿತು. ಹಾವಿನ ಬಗ್ಗೆ ಮೀನುಗಾರಿಕೆ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದ್ದು, ಅದೊಂದು ಅಪಾಯಕಾರಿ ಹಾವು ಎಂದಿದ್ದಾರೆ.

ಈ ಮೀನು ಹೆಚ್ಚಾಗಿ ಆಳ ಸಮುದ್ರದಲ್ಲಿ ಸುತ್ತಾಡುತ್ತವೆ. ಇದನ್ನು ಸ್ಥಳೀಯವಾಗಿ ಸಮುದ್ರ ಹಾವೆಂದು ಮೀನುಗಾರರು ಕರೆಯುತ್ತಾರೆ. ಸಣ್ಣ ಸಣ್ಣ ಮೀನುಗಳನ್ನು ತಿಂದು ಬದುಕುಳಿಯುತ್ತವೆ. ಆಹಾರವನ್ನು ಹುಡುಕಾಡುವ ಸಂದರ್ಭದಲ್ಲಿ ಈ ಹಾವು ಮೀನುಗಾರರ ಬಲೆಗೆ ಸಿಲುಕಿದೆ ಎನ್ನಲಾಗಿದೆ.

ಇನ್ನು ಈ ಹಾವು ಸಮುದ್ರದಲ್ಲಿ ಅತ್ಯಂತ ವೇಗವಾಗಿ ಚಲಿಸುತ್ತದೆ. ಅಂದರೆ, ಕಣ್ಣು ಮಿಟುಕಿಸುವುದರಲ್ಲಿ ನಮ್ಮಿಂದ ಮಾಯವಾಗಿಬಿಡುತ್ತವೆಯಂತೆ. ಈ ಹಾವೇನಾದರೂ ಕಡಿದರೆ, ತಕ್ಷಣ ವೈದ್ಯರ ನೆರವು ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಬಹು ಬೇಗ ಸಾವು ಸಂಭವಿಸುತ್ತದೆ.

ಈ ಹಾವು ಮುಂಜಾನೆ ಮೀನಿನ ಬಲೆಗೆ ಬಿದ್ದಿದೆ. ರಾತ್ರಿಯಾಗಿದ್ದರೆ ಕಾಣುತ್ತಿರಲಿಲ್ಲ. ಅದರಿಂದ ಅಪಾಯ ಉಂಟಾಗುವ ಸಾಧ್ಯತೆ ಇತ್ತು. ಸದ್ಯ ಗೊತ್ತಾಗಿದ್ದು, ಒಳ್ಳೆಯದಾಯಿತು ಎಂದು ಮೀನುಗಾರರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

hasana

ಕುಡಿದ ಮತ್ತಿನಲ್ಲಿ ಜಗಳ-ಸ್ನೇಹಿತನ ಕೊಲೆ: ಭೀಕರ ಸ್ಥಿತಿಯಲ್ಲಿ ಮೃತದೇಹ ಪತ್ತೆ

Published

on

ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿರುವ ಅಘಾತಕಾರಿ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದ ಕಬ್ಬೂರು ಗ್ರಾಮದಲ್ಲಿ ನಡೆದಿದೆ.


ಗಣೇಶ್‌(46) ಮೃತ ದುರ್ದೈವಿ. ಅಶೋಕ್‌ ಮತ್ತು ಸುಧೀರ್‌ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪಿಗಳು.

ಸೋಮವಾರ(ಜ.19)ದಂದು ಜಮೀನು ಕಾಯಲು ಹೋದ ಗಣೇಶ್‌ ತನ್ನ ಸ್ನೇಹಿತರ ಜತೆ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿತ್ತು. ಆ ಸಂಧರ್ಭ ಸ್ನೇಹಿತರು ಗಣೇಶ್‌ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೃತದೇಹವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

ಬಳಿಕ ಕರ್ತವ್ಯದಲ್ಲಿದ್ದ ಅರಣ್ಯ ಸಿಬ್ಬಂದಿ ಶವವನ್ನು ಗಮನಿಸಿದಾಗ, ಮೃತದೇಹದ ತಲೆ ಮತ್ತು ಕುತ್ತಿಗೆ ಭಾಗವನ್ನು ಕಾಡು ಪ್ರಾಣಿಗಳು ಕಚ್ಚಿ ತಿಂದಿದ್ದವು. ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಬಂದು ಪರಿಶೀಲಿಸಿ, ಹಳ್ಳಿಮೈಸೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ.

Continue Reading

bangalore

ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

Published

on

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಹರಿಯಾಣ ಮೂಲದ ಸುಧೀರ್ ಕುಮಾರ್ ಬಂಧಿತ ಆರೋಪಿ. ಸಂತ್ರಸ್ತ ಯುವತಿ ಬೆಂಗಳೂರಲ್ಲಿ ಲೇಡಿ ಫಿಟ್ನೆಸ್, ನ್ಯೂಟ್ರೀಷಿಯನ್ ಇನ್‌ಫ್ಲೂಯೆನ್ಸರ್ ಆಗಿ ಕೆಲಸ ಮಾಡುತ್ತಿದ್ದು, ಇನ್‌ಸ್ಟಾ ಮೂಲಕ ಆತ ಲೈಂಗಿಕವಾಗಿ ಪ್ರಚೋದಿಸುವಂತೆ ಮೆಸೇಜ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್‌ಸ್ಟಾದಲ್ಲಿ ಯುವತಿಯನ್ನು ನೋಡಿ ಪೀಡಿಸಲು ಶುರುಮಾಡಿದ್ದ. ಜೊತೆಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸೆ ನೀಡುತ್ತಿದ್ದ. ಅದಾದ ಬಳಿಕ ವಾಟ್ಸಪ್ ನಂಬರ್ ಪಡೆದುಕೊಂಡು, ಪುನಃ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ. ದಿನ ಕಳೆದಂತೆ ಬೆಂಬಿಡದೇ ಯುವತಿಯನ್ನು ಕಾಡಲು ಶುರುಮಾಡಿದ್ದ. ಕೊನೆಗೆ ಯುವತಿಯನ್ನು ಹುಡುಕಿಕೊಂಡು ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ. ಬೆಂಗಳೂರಿಗೆ ಬಂದು ಜಿಮ್ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ.

ಇದನ್ನೂ ಓದಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಚಾರ ತಿಳಿಯುತ್ತಿದ್ದಂತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ದಕ್ಷಿಣ ವಿಭಾಗ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

Continue Reading

LATEST NEWS

10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Published

on

ಬೆಳ್ತಂಗಡಿ: ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸಲಾಗಿದೆ.


ಹಾಸನ ಚನ್ನರಾಯಪಟ್ಟಣ ನಿವಾಸಿ, ಎಸ್‌.ಎನ್‌.ಚಂದ್ರೆಗೌಡ ಆರೋಪಿ. ಈ ವಿಷಯದ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2009ರಲ್ಲಿ ದಾಖಲಾದ ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ: “ಸುಳ್ಳು ಆರೋಪಗಳಿಂದ ರಕ್ಷಿಸಿ”: ಕೇರಳದಲ್ಲಿ ಕಾರ್ಡ್‌ಬೋರ್ಡ್ ಧರಿಸಿ ಪುರುಷರ ವಿಭಿನ್ನ ಪ್ರತಿಭಟನೆ

ಇದೀಗ ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಜನವರಿ 20 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟನೆ ತಿಳಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page