Connect with us

ಶಹಾಪುರ ಪೊಲೀಸರ ಯಶಸ್ವಿ ಕಾರ್ಯಚರಣೆ: ಇಬ್ಬರು ಖದೀಮರು ಅರೆಸ್ಟ್ 

Published

on

ಶಹಾಪುರ ಪೊಲೀಸರ ಯಶಸ್ವಿ ಕಾರ್ಯಚರಣೆ: ಇಬ್ಬರು ಖದೀಮರು ಅರೆಸ್ಟ್ 

ಸುರಪುರ: ಕಳೆದ ಮೂರು ತಿಂಗಳುಗಳ ಹಿಂದೆ ಸುರಪುರ, ಶಹಾಪುರ, ಹುಣಸಗಿ ಪಟ್ಟಣಗಳಲ್ಲಿ ಕಳ್ಳತನ ಮಾಡಿಕೊಂಡು ತಲೆಯರೆಸಿಕೊಂಡಿದ್ದ ಚಾಲಾಕಿ ಕಳ್ಳರನ್ನು ಬಂಧಿಸುವಲ್ಲಿ ಸುರಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ ಭಗವಾನ್ ಸೋನಾವಣೆ ಹಾಗೂ ಡಿಎಸ್‌ಪಿ ವೆಂಕಟೇಶ್ ಉಗಿಬಂಡಿ ಮಾರ್ಗದರ್ಶನದಲ್ಲಿ ನಗರ ಠಾಣೆ ಪಿಎಸ್ಐ ಹನುಮರಡ್ಡೆಪ್ಪನವರ ನೇತೃತ್ವದಲ್ಲಿ, ಕ್ರೈಂ ಪಿಎಸ್ಐ ಪರಶುರಾಮ ಮತ್ತು ಆಡಳಿತ ವಿಭಾಗದ ಚಂದ್ರಕಾಂತ ಮ್ಯಾಕಲ್, ಪಿಸಿಗಳಾದ ನಾರಾಯಣ, ಬಾಬು ನಾಯ್ಕಲ್, ಸತೀಶ್ ಕುಮಾರ್ ನರಸನಾಯಕ, ಶರಣಪ್ಪ, ಭಾಗಪ್ಪ, ಗೋಕುಲ್ ಹುಸೇನಿ ಹುಸನಪ್ಪ ಕಾರ್ಯಚರಣೆ ನಡೆಸಿದ್ದಾರೆ.

ಗಸ್ತಿನಲ್ಲಿದ್ದಾಗ ಹಳೇ ತಹಶೀಲ್ ಕಛೇರಿ ಹತ್ತಿರದಲ್ಲಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದ ಇಬ್ಬರು ಯುವಕರನ್ನು ಕರೆ ತಂದು ವಿಚಾರಣೆ ನಡೆಸಿದಾಗ ಹಲವು ಪಟ್ಟಣಗಳಲ್ಲಿ ಕಳ್ಳತನ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಾದ ಗಂಗಪ್ಪ ಯಾನೆ ದುರ್ಗಪ್ಪ ಗೋರೆಬಾಳ (19) ಖಾಸಿಂ ಯಾನೆ ಸಂಜೀವಪ್ಪ(19) ಹುಣಸಗಿ ತಾಲ್ಲೂಕಿನ ರಸ್ತಾಪುರ ಗ್ರಾಮದಲ್ಲಿ ಜನವರಿಯಲ್ಲಿ ಪಲ್ಸರ್ ಬೈಕ್ ಮತ್ತು ಸೂಪರ್ ಸ್ಪ್ಲೆಂಡರ್ ಕಳವುಗೈದಿದ್ದಾರೆ.

ಇನ್ನು ಹುಣಸಗಿ ತಾಲೂಕಿನ ಕಲ್ಲದೇವನ ಹಳ್ಳಿಯಲ್ಲಿ ಪಲ್ಸರ್ ಬೈಕ್ ಹಾಗೂ ವಜ್ಜಲ್ ಗ್ರಾಮದಲ್ಲಿ ಹೀರೋ ಹೋಂಡಾ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಅವರಿಂದ ನಾಲ್ಕು ಬೈಕ್ ಗಳು ಮತ್ತು 12 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು 2 ಲಕ್ಷ 37 ಸಾವಿರ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿತರಿಬ್ಬರ ಮೇಲೆ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

Published

on

ಪುತ್ತೂರು: ಕೃಷ್ಣ ಜೆ ರಾವ್ ನಿಂದ ವಂಚನೆಗೊಳಗಾದ ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಬಳಿಕ ಮಗು ಕೊಟ್ಟು ಇದೀಗ ಮದುವೆ ಆಗುವುದಿಲ್ಲ ಎಂದು ವಂಚನೆ ಮಾಡಿದ ಪ್ರಕರಣದ ಸಂತ್ರಸ್ತೆ ಮನೆಗೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಂತ್ರಸ್ತೆ ಜೊತೆ ಮಾತುಕತೆ ನಡೆಸಿದರು.

ಈ ವೇಳೆ ಸಂತ್ರಸ್ತೆಯ ಮಗುವನ್ನು ನಾಗಲಕ್ಷ್ಮಿ ಚೌಧರಿ ಮುದ್ದಾಡಿದರು. ಅಲ್ಲದೆ ಸಂತ್ರಸ್ತೆಯ ಎಲ್ಲಾ ರೀತಿಯ ಹೋರಾಟಕ್ಕೆ ಜೊತೆಯಾಗಿರುವುದಾಗಿ ಭರವಸೆ ನೀಡಿದರು.

ಸಂತ್ರಸ್ತೆಗೆ ಶಿಕ್ಷಣ ಮುಂದುವರಿಸುವಂತೆ ಸಲಹೆ

ಅಲ್ಲದೇ, ಶಿಕ್ಷಣ ಮುಂದುವರಿಸುವಂತೆ ಸಂತ್ರಸ್ತೆಗೆ ನಾಗಲಕ್ಷ್ಮೀ ಅವರು ಸೂಚಿಸಿದರು. ಗಟ್ಟಿಯಾಗಿ ನಿಂತು ಸಂಕಷ್ಟ ಎದುರಿಸುವಂತೆ ಸಂತ್ರಸ್ತೆ ಮತ್ತು ಆಕೆಯ ತಾಯಿಗೆ ಮನವಿ ಮಾಡಿದರು. ಶಿಕ್ಷಣ ಮುಂದುವರಿಸಲು ಬೇಕಾದ ಎಲ್ಲಾ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಯಾವುದೇ ಕಾರಣಕ್ಕೂ ಜೀವನದಲ್ಲಿ ಕುಗ್ಗಿ ಕೆಟ್ಟ ನಿರ್ಧಾರ ತೆಗೆದುಕೊಳ್ಳದಂತೆ ಸಂತ್ರಸ್ತೆಗೆ ನಾಗಲಕ್ಷ್ಮಿ ಧೈರ್ಯ ತುಂಬಿದ್ದಾರೆ.

ಸಂತ್ರಸ್ತ ಮಹಿಳೆಯರಿಗೆ ಆಯೋಗ ತಾಯಿಯಿದ್ದಂತೆ!

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮಹಿಳಾ ಆಯೋಗ ತಾಯಿಯಂತೆ ಸಂತ್ರಸ್ತೆಯ ಪರ ನಿಲ್ಲುತ್ತದೆ, ಎಲ್ಲಾ ಸಂತ್ರಸ್ತ ಮಹಿಳೆಯರಿಗೆ ಆಯೋಗ ತಾಯಿಯಿದ್ದಂತೆ. ತಾಯಿ ಸ್ಥಾನದಲ್ಲಿ ನಿಂತು ಮಹಿಳೆಯ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ. ಸಂತ್ರಸ್ತೆ ಯುವತಿಗೆ ಎಲ್ಲಾ ರೀತಿಯ ಸಹಾಯವನ್ನು ಆಯೋಗದ ಮುಖಾಂತರ ಮಾಡಲಾಗುವುದು ಎಂದರು.

ಮುಂದುವರಿದು, ಯುವತಿಯ ಮುಂದಿನ ಶಿಕ್ಷಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿ ಆಕೆಯನ್ನು ಆರ್ಥಿಕ, ಶೈಕ್ಷಣಿಕವಾಗಿ ಸದೃಢಗೊಳಿಸುವ ಪ್ರಯತ್ನವನ್ನೂ ಮಾಡುತ್ತೇನೆ. ಪ್ರಕರಣ ನ್ಯಾಯಾಲಯದ ಮುಂದೆ ಇರುವಾಗ ಇದಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Continue Reading

DAKSHINA KANNADA

ನಾಳೆ ಒಟಿಟಿಯಲ್ಲಿ ರಿಲೀಸ್ ಆಗಲಿದೆ ಧರ್ಮ ಚಾವಡಿ ತುಳು ಸಿನಿಮಾ

Published

on

ಮಂಗಳೂರು:  ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಜಗದೀಶ್ ಅಮೀನ್ ನಿರ್ಮಾಣದ ಧರ್ಮ ಚಾವಡಿ ತುಳು ಸಿನಿಮಾ ಕಳೆದ ವರ್ಷ ಕರಾವಳಿಯಾದ್ಯಂತ ಬಿಡುಗಡೆಗೊಂಡು ಜನಮನ್ನಣೆ ಪಡೆದು ಯಶಸ್ವಿ ಚಿತ್ರಗಳ ಸಾಲಿಗೆ ಸೇರ್ಪಡೆಗೊಂಡಿದೆ. ಇದೀಗ ಈ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಿ ಜಗತ್ತಿನಾದ್ಯಂತ ಇರುವ ತುಳು ಸಿನಿಮಾ ಪ್ರೇಕ್ಷಕರಿಗೆ ವೀಕ್ಷಿಸಲು ಅವಕಾಶ ಕಲ್ಪಿಸಲು ಚಿತ್ರ ತಂಡ ನಿರ್ಧರಿಸಿದೆ.

ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ, ನಾಳೆ  ಅಂದರೆ ಮಾರ್ಚ್ 6 ರಂದು ಧರ್ಮ ಚಾವಡಿ ಸಿನಿಮಾ ಟಾಕೀಸ್ ಆ್ಯಪ್ ಒಟಿಟಿ ಮೂಲಕ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಮುಂಬಯಿಯಲ್ಲಿ ಧರ್ಮ ಚಾವಡಿ ಚಿತ್ರದ ಯಶಸ್ವೀ 14 ಶೋ ನೀಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ನೆರೆಯ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮತ್ತು ಕಾಸರಗೋಡಿನಲ್ಲಿಯೂ ಚಿತ್ರ ಯಶಸ್ವೀ  ಪ್ರದರ್ಶನ ಕಂಡಿದೆ.

ಮುಂದಿನ ದಿನಗಳಲ್ಲಿ ಈ ಸಿನಿಮಾವನ್ನು ಕನ್ನಡದಲ್ಲಿ ಡಬ್ ಮಾಡಿ ಕರ್ನಾಟಕದ ಇತರ ಭಾಗಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ವಿವರಿಸಿದರು. ಸುದ್ದಿಗೋಷ್ಟಿಯಲ್ಲಿ ನಟ ರಮೇಶ್ ರೈ ಕುಕ್ಕುವಳ್ಳಿ, ನಟಿ ನೇಹಾ ಕೋಟ್ಯಾನ್, ಟಾಕೀಸ್ ಆ್ಯಪ್ ಒಟಿಟಿ ಇದರ ಅಡ್ಮಿನ್ ಎಕ್ಸಿಕ್ಯೂಟಿವ್ ಚಿದಾನಂದ್ ಪೈ ಮತ್ತು ಇತರರು ಉಪಸ್ಥಿತರಿದ್ದರು.

Continue Reading

DAKSHINA KANNADA

ಸ್ಟೇಟ್ ಬ್ಯಾಂಕ್ ಮೀನು ಮಾರ್ಕೆಟ್ ಅವ್ಯವಸ್ಥೆ-ಅಸಮಾಧಾನ ವ್ಯಕ್ತಪಡಿಸಿದ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ

Published

on

ಮಂಗಳೂರು: ನಗರದ ಕೇಂದ್ರ ಭಾಗವಾದ ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಮಧ್ಯಾಹ್ನ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಹಸಿ ಹಾಗೂ ಒಣಮೀನು ಮಾರುಕಟ್ಟೆಯ ಪ್ರತಿ ಮೂಲೆಗೂ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳನ್ನು ಕಣ್ಣಾರೆ ಕಂಡು ಅಸಮಾಧಾನ ವ್ಯಕ್ತಪಡಿಸಿದರು. ದಶಕಗಳಿಂದ ಮೀನು ಮಾರಾಟ ಮಾಡುತ್ತ ಜೀವನ ಸಾಗಿಸುತ್ತಿರುವ ನೂರಾರು ಮಹಿಳೆಯರು ತಮ್ಮ ಸಮಸ್ಯೆಗಳನ್ನು  ಅವರ  ಮುಂದೆ ಹಂಚಿಕೊಂಡರು.

ಪರಿಶೀಲನೆಯ ಬಳಿಕ ಮಾತನಾಡಿದ ಡಾ. ನಾಗಲಕ್ಷ್ಮಿ ಚೌಧರಿ , ಮಾರುಕಟ್ಟೆಯಲ್ಲಿ ಸಮರ್ಪಕ ನೈರ್ಮಲ್ಯದ ಕೊರತೆಯಿಂದ ದುರ್ವಾಸನೆ ವ್ಯಾಪಿಸಿದ್ದು, ದಿನವಿಡೀ ಕೆಲಸ ಮಾಡುವ ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ತಿಳಿಸಿದರು. ಮಾರುಕಟ್ಟೆ ಸ್ವಚ್ಛತೆಗೆ ಅಗತ್ಯವಾದ ನೀರಿನ ಸೌಲಭ್ಯವಿಲ್ಲದೆ ಇರುವುದೂ ಸಮಸ್ಯೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ವ್ಯಾಪಾರಕ್ಕೆ ತಕ್ಕಷ್ಟು ಸ್ಥಳಾವಕಾಶದ ಕೊರತೆ ಹಾಗೂ ಭದ್ರತಾ ವ್ಯವಸ್ಥೆಯ ಅಭಾವದಿಂದ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದಾಗಿ ಮಹಿಳೆಯರು ದೂರಿದರು. ಈ ಎಲ್ಲ ವಿಚಾರಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಿದ್ದೇನೆ. ಮೀನುಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ನೂತನ ಮಾರುಕಟ್ಟೆಯಲ್ಲಿ ಅಗತ್ಯವಿರುವ ವೈಜ್ಞಾನಿಕ ಬದಲಾವಣೆಗಳನ್ನು ಮಾಡಿಸುವಂತೆ ಒತ್ತಾಯಿಸುತ್ತೇನೆ. ಮೀನು ಮಾರಾಟಗಾರ ಮಹಿಳೆಯರ ಹಿತಾಸಕ್ತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ,” ಎಂದು ಡಾ. ನಾಗಲಕ್ಷ್ಮಿ ಚೌಧರಿ ಭರವಸೆ ನೀಡಿದರು.

 

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page