Connect with us

LATEST NEWS

ನಿರ್ಲಕ್ಷ್ಯದಿಂದ ಬೈಕ್‌ ಓಡಿಸಿ ಕಾಲು ಮುರಿಸಿಕೊಂಡ ತಾಯಿಯಿಂದಲೇ ಮಗನ ವಿರುದ್ಧ ದೂರು..!

Published

on

ಅಹಮದಾಬಾದ್: ಅತೀ ವೇಗವಾಗಿ ಬೈಕ್‌ ಚಲಾಯಿಸಿ ತನ್ನ ತೋಳು ಮುರಿತಕ್ಕೆ ಕಾರಣನಾದ ಮಗನ ವಿರುದ್ಧವೇ ತಾಯಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಘಟನೆ ಗುಜರಾತ್‌ನ ನಾಡಿಯಾಡ್‌ ಎಂಬಲ್ಲಿ ನಡೆದಿದೆ.


58 ವರ್ಷದ ಮೀನಾ ಪಟೇಲ್ 8 ತಿಂಗಳ ಹಿಂದಷ್ಟೇ ಪತಿಯನ್ನು ಕಳೆದುಕೊಂಡಿದ್ದರು. ಆಕೆಯ 34 ವರ್ಷ ವಯಸ್ಸಿನ ಮಗ ಆನಂದ್‌ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಮಗ ಆಫೀಸ್‌ಗೆ ಹೋಗುವ ದಾರಿಯಲ್ಲೇ ತಾಯಿಗೆ ಸ್ವಲ್ಪ ಕೆಲಸ ಇತ್ತು.

ಹೀಗಾಗಿ, ತನ್ನನ್ನು ಅಲ್ಲಿಗೆ ಡ್ರಾಪ್ ಮಾಡುವಂತೆ ಮಗನಿಗೆ ಮನವಿ ಮಾಡಿಕೊಂಡಿದ್ದಾರೆ. ಅಂದು ಆನಂದ್ ಅವರ ಬೈಕ್ ಕೆಟ್ಟು ಹೋಗಿದ್ದ ಕಾರಣ ಸ್ನೇಹಿತನ ಬೈಕ್ ಪಡೆದುಕೊಂಡು ತಾಯಿಯನ್ನು ಕೂರಿಸಿ ಅತಿ ವೇಗವಾಗಿ ವಾಹನ ಚಾಲನೆ ಮಾಡಿದ್ದಾನೆ.

ಈ ವೇಳೆ ಬೈಕ್‌ನ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ಆನಂದ್‌ನ ತಾಯಿ ಪದೇ ಪದೇ ನಿಧಾನವಾಗಿ ಬೈಕ್ ಚಲಾಯಿಸುವಂತೆ ಕೇಳಿಕೊಂಡಿದ್ದಾರೆ. ಆದರೆ, ಅಮ್ಮನ ಮಾತು ಕೇಳದ ಮಗ ಅತೀ ವೇಗದಲ್ಲಿ ಬೈಕ್ ಓಡಿಸಿಕೊಂಡು ಹೋಗಿ ರಸ್ತೆಯ ತಿರುವಿನಲ್ಲಿ ಬೈಕ್ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ತಾಯಿ ಹಾಗೂ ಮಗ ಇಬ್ಬರೂ ಗಾಯಗೊಂಡಿದ್ದಾರೆ.

ತಾಯಿಯ ತೋಳಿನ ಮೂಳೆ ಮುರಿದಿತ್ತು. ಹೀಗಾಗಿ, ಆಸ್ಪತ್ರೆಗೆ ದಾಖಲಾದ ಅವರು ಡಿಸ್ಚಾರ್ಜ್ ಆದವರೇ ಮನೆಗೆ ಹೋಗದೆ ನೇರವಾಗಿ ಪೊಲಿಸ್ ಠಾಣೆಗೆ ಹೋಗಿ ಮಗನ ವಿರುದ್ಧ ಅತಿ ವೇಗದ ಹಾಗೂ ನಿರ್ಲಕ್ಷ್ಯದ ವಾಹನ ಚಾಲನೆ ಆರೋಪ ಹೊರಿಸಿ ದೂರು ದಾಖಲಿಸಿದ್ದಾರೆ.

ಈ ವೇಳೆ ದೂರು ನೀಡದಂತೆ ಪದೇ ಪದೇ ಬೇಡಿಕೊಂಡರೂ ಆಕೆ ಮಗನ ಮಾತನ್ನು ಕಿವಿಗೆ ಹಾಕಿಕೊಳ್ಳದೆ ಮಗನ ವಿರುದ್ಧ ಐಪಿಸಿ ಸೆಕ್ಷನ್ 279ರ ಅಡಿ ಅತಿ ವೇಗದ ವಾಹನ ಚಾಲನೆ, 337ರ ಅಡಿ ಜೀವಕ್ಕೆ ಅಪಾಯ ತಂದ ಆರೋಪ ಹಾಗೂ ಸೆಕ್ಷನ್ 338ರ ಅಡಿ ವೈಯಕ್ತಿಕ ಸುರಕ್ಷತೆ ಕಾಪಾಡಿಕೊಳ್ಳದ ಆರೋಪದ ಮೇಲೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

DAKSHINA KANNADA

ನಾಳೆ(ಜ.21) ಕದ್ರಿ ಮ್ಯೂಸಿಕಲ್ ನೈಟ್ಸ್ 2026 : ರಿಷಬ್ ಶೆಟ್ಟಿ ಭಾಗಿ

Published

on

ಮಂಗಳೂರು : ಕದ್ರಿ ಶ್ರೀಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ  ಪ್ರಯುಕ್ತ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಕದ್ರಿ ಈವೆಂಟ್ಸ್ ಅರ್ಪಿಸುವ  ‘ಕದ್ರಿ ಮ್ಯೂಸಿಕಲ್ ನೈಟ್ಸ್ 2026’ ನಾಳೆ(ಜ.21) ಸಂಜೆ 7 ಗಂಟೆಯಿಂದ ಕದ್ರಿ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದೆ.

ಎಂದಿನಂತೆ ಈ ಬಾರಿಯೂ ತಾರಾ ಮೆರುಗು ಇರಲಿದ್ದು, ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಆಗಮಿಸಲಿದ್ದಾರೆ.

ಆಯೋಜಕ ಜಗದೀಶ್ ಕದ್ರಿ ಈ ಬಗ್ಗೆ ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ಕೂಡ ಕದ್ರಿ ಮ್ಯೂಸಿಕಲ್ ನೈಟ್ ಆಯೋಜನೆ ಮಾಡಿದ್ದೇವೆ. ಸಿನಿಮಾ ಸೆಲೆಬ್ರಿಟಿಗಳು, ಗಣ್ಯರು ಸೇರಿದಂತೆ ಹೆಸರಾಂತ ಗಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಇದನ್ನೂ ಓದಿ : BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

ಕನ್ನಡ, ತುಳು ಚಿತ್ರರಂಗದ ಕಲಾವಿದರಾದ ರೂಪೇಶ್ ಶೆಟ್ಟಿ, ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರ್ಜುನ್ ಕಾಪಿಕಾಡ್, ಶನಿಲ್ ಗುರು, ಪ್ರಕಾಶ್ ತೂಮಿನಾಡು, ಸ್ವರಾಜ್ ಶೆಟ್ಟಿ, ದೀಪಕ್ ರೈ ಪಾಣಾಜೆ, ವಿಜೆ ವಿನೀತ್, ಸಮತಾ ಅಮೀನ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Continue Reading

DAKSHINA KANNADA

ಮಂಗಳೂರು: ಡ್ರಗ್ಸ್‌ ನಿರ್ಮೂಲನೆಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ ಬಸ್ಸು ಮಾಲಕರ ಸಂಘ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 110 ವರ್ಷಗಳ ಇತಿಹಾಸವನ್ನು ಹೊಂದಿರುವ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಿಕೊಂಡು ಬಂದಿರುವ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ವತಿಯಿಂದ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಇದುವರೆಗೆ ಕೋಟಿಗಟ್ಟಲೆ ರೂಪಾಯಿಗಳ ರಿಯಾಯಿತಿ ದರದ ಬಸ್ಸು ಪಾಸುಗಳನ್ನು ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದೇವೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕಲು ಮುಂದಾಗಿರುವ ನಗರ ಪೊಲೀಸ್‌ ಕಮಿಷನರ್‌ ಅವರ ಜೊತೆಗೆ ಜಿಲ್ಲಾ ಬಸ್ಸು ಮಾಲಕರ ಸಂಘವೂ ಕೈಜೋಡಿಸಿ ಡ್ರಗ್ ನಿರ್ಮೂಲನೆ ಮಾಡಲು ಬೀದಿ ನಾಟಕ ಪ್ರದರ್ಶನ ಮಾಡಲಿದ್ದೇವೆ ಎಂದು ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡ್ರಗ್ ಜಾಲಕ್ಕೆ ಕಡಿವಾಣ, ನಶೆಗೆ ಒಳಗಾಗುವ ವಿದ್ಯಾರ್ಥಿಗಳನ್ನು ಅದರಿಂದ ಹೊರತರುವ ಕೆಲಸ ಮಾಡುತ್ತಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ನುಡಿದರು. ಅಲ್ಲದೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆಗೆ ನಾವು ಕೈಜೋಡಿಸಿದ್ದೇವೆ. ಜನವರಿ 27ರ ಮಂಗಳವಾರ ರೋಶನಿ ನಿಲಯ ಕಾಲೇಜಿನ ಸಹಭಾಗಿತ್ವದೊಂದಿಗೆ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಹಲವು ಕಡೆ ಡ್ರಗ್‌ ವಿರೋಧಿ ಬೀದಿನಾಟಕ ಆಯೋಜನೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಮಂಗಳೂರು: ಹಂಚಿನ ಫ್ಯಾಕ್ಟರಿಯಲ್ಲಿ ಅ*ಗ್ನಿ ಅ*ವಘ*ಡ

ನಗರದ ಸೆಂಟ್ರಲ್‌ ಬಸ್ಸು ನಿಲ್ದಾಣ, ತೊಕ್ಕೊಟ್ಟು ಬಸ್ಸು ನಿಲ್ದಾಣ, ತಲಪಾಡಿ, ಉಳ್ಳಾಲ, ಲಾಲ್‌ಭಾಗ್‌ ಸೇರಿದಂತೆ ಹಲವು ಕಡೆಗಳ ಬಸ್ಸು ನಿಲ್ದಾಣಗಳಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎಲ್ಲಾ ಬಸ್ಸುಗಳಲ್ಲಿ ಸ್ಟಿಕ್ಕರ್‌ ಹಚ್ಚಿ ಜಾಗೃತಿ ಮೂಡಿಸಲಿದ್ದೇವೆ. ಇದಕ್ಕೆ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆಗಮಿಸಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಕೆ ರಾಮಚಂದ್ರ ನಾಯ್ಕ , ರಾಮಚಂದ್ರ ಪಿಲಾರ್ ಹಾಗೂ ಜೊತೆ ಕಾರ್ಯದರ್ಶಿ ರಾಜೇಶ್ ಟಿ ಯವರು ಉಪಸ್ಥಿತರಿದ್ದರು.

Continue Reading

BIG BOSS

BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

Published

on

BBK12: ಟಾಪ್‌-06ನಲ್ಲಿ ಕಾವ್ಯಾ ಅವರು ಇರೋದಕ್ಕೆ ಅರ್ಹರಲ್ಲ ಎಂದು ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ ಹೇಳಿದ್ದಾರೆ.


ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ರನ್ನರ್‌ ಅಪ್‌ ಆಗಿ ರಕ್ಷಿತಾ ಶೆಟ್ಟಿ ಹೊರ ಹೊಮ್ಮಿದ್ದಾರೆ. ಬಿಗ್‌ ಬಾಸ್‌ ಮನೆಯಲ್ಲಿ ಇದ್ದಾಗ ಕಾವ್ಯಾ ಶೈವ ಅವರ ಜೊತೆ ರಕ್ಷಿತಾ ಶೆಟ್ಟಿ ಅವರಿಗೆ ಅಷ್ಟೊಂದು ಒಡನಾಟವಿರಲಿಲ್ಲ.

ನಾಮಿನೇಶನ್‌ ವಿಚಾರದಲ್ಲೂ ಕಾವ್ಯಾ ಮತ್ತು ರಕ್ಷಿತಾ ಅವರಿಗೆ ಆಗ್ಗಾಗೇ ಜಗಳವಾಗುತ್ತಿತ್ತು. ಅಲ್ಲದೆ ಗಿಲ್ಲಿ ಕಾವ್ಯಾ ಫ್ರೆಂಡ್‌ಶಿಪ್ ಕುರಿತು ರಕ್ಷಿತಾ ಅವರಿಗೆ ಅಸಮಾಧಾನವಿದೆ ಎಂದು ವೀಕ್ಷಕರು ಅಭಿಪ್ರಾಯ ಪಟ್ಟಿದ್ದರು. ಕಾವ್ಯಾ ಅವರ ಜೊತೆ ಇರುವ ಮುನಿಸು ರಕ್ಷಿತಾ ಅವರಿಗೆ ಕಡಿಮೆಯಾಗಿಲ್ಲ ಎನ್ನಬಹುದು.

ಇದನ್ನೂ ಓದಿ: ರಕ್ಷಿತಾ ಕ್ಷಮಾಪಣೆ ಪತ್ರದ ಬಗ್ಗೆ ಧ್ರುವಂತ್ ಪೋಸ್ಟ್: ನಮ್ಮಿಬ್ಬರದ್ದು ಒಂದೇ ರಾಶಿ-ನಕ್ಷತ್ರ!

ಇದೀಗ ಸಂದರ್ಶನವೊಂದರಲ್ಲಿ ಕಾವ್ಯಾ ಅವರು ಟಾಪ್‌ 6ನಲ್ಲಿ ಸ್ಥಾನ ಪಡೆಯಲು ಅರ್ಹರಲ್ಲ, ಅವರ ಬದಲಿಗೆ ಜಾನ್ವಿ ಅವರು ಇರಬೇಕಿತ್ತು. ಮಾಲು ಅಣ್ಣ ಇರಬಹುದಿತ್ತು. ಮಾಲು ಅವರು ಮಾತನಾಡುವುದು ಕಡಿಮೆ. ಆದರೆ ಅವರದ್ದು ಒಳ್ಳೆಯ ವ್ಯಕ್ತಿತ್ವ ಎಂದು ರಕ್ಷಿತಾ ಶೆಟ್ಟಿ ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page