Connect with us

hasana

ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಶೃತಿ ಬಲಿ: ಕುಟುಂಬಸ್ಥರಿಂದ ತೀವ್ರ ಆಕ್ರೋಶ

Published

on

ಹಾಸನ: ಬಾಣಂತಿ ಮಹಿಳೆ ಸಾವನ್ನಪ್ಪಿರುವ ದುರಂತ ಘಟನೆ ಹಾಸನದ ಹಿಮ್ಸ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃತಿ(30) ಮೃತಪಟ್ಟ ಬಾಣಂತಿ ಮಹಿಳೆ.


ಹನುಮನಹಳ್ಳಿ ನಿವಾಸಿ, ಮತ್ತುಅತಿಥಿ ಶಿಕ್ಷಕಿಯಾಗಿದ್ದ ಶೃತಿ ಅವರು ಹೆರಿಗೆಗಾಗಿ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ಮಧ್ಯಾಹ್ನ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಆರೋಗ್ಯ ಕ್ಷೀಣಿಸಿತು. ಭಾನುವಾರವಾದ್ದರಿಂದ ತಜ್ಞ ವೈದ್ಯರು ಲಭ್ಯವಿರಲಿಲ್ಲ ಮತ್ತು ಚಿಕಿತ್ಸೆ ವಿಳಂಬವಾಯಿತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.


ವೈದ್ಯರು ಮೊದಲು ಶೃತಿ ಆರೋಗ್ಯವಾಗಿದ್ದಾರೆ ಎಂದು ತಿಳಿಸಿ, ನಂತರ ದಿಢೀರನೆ ಸ್ಥಿತಿ ಗಂಭೀರವಾಗಿದೆ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಶೃತಿ ಕೊನೆಯುಸಿರೆಳೆದಿದ್ದಾರೆ.


ಇದನ್ನೂ ಓದಿ: 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಕುಟುಂಬದವರು 6 ಯುನಿಟ್ ರಕ್ತ ನೀಡಿದ್ದರೂ ಸಹ ಸರಿಯಾದ ಚಿಕಿತ್ಸೆ ಸಿಗಲಿಲ್ಲ ಎಂಬುದು ಪತಿ ಪುನೀತ್ ಅವರ ದೂರು. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಪ್ರಕರಣವು ಹಾಸನ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ತನಿಖೆ ಮುಂದುವರೆಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.

hasana

ಕ್ಲಾಸ್ ರೂಮಲ್ಲೇ ಕುಸಿದು ಬಿದ್ದ ಶಿಕ್ಷಕ: ಪಾಠ ಹೇಳುತ್ತಿದ್ದಾಗಲೇ ಕೊನೆಯುಸಿರೆಳೆದ ಗುರು

Published

on

ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.


ಮೃತಪಟ್ಟ ಶಿಕ್ಷಕರನ್ನು ಕೇರಳಾಪುರ ಗ್ರಾಮದ ಸತೀಶ್(53) ಎಂದು ಗುರುತಿಸಲಾಗಿದೆ. ಅವರು ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಸತೀಶ್‌ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತ ಸಂಭವಿಸಿದೆ. ವಿದ್ಯಾರ್ಥಿಗಳ ಕಣ್ಣೆದುರೇ ಶಿಕ್ಷಕರು ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಕುರಿ ಶೆಡ್‌ಗೆ ಆಕಸ್ಮಿಕ ಬೆಂಕಿ; 30ಕ್ಕೂ ಹೆಚ್ಚು ಕುರಿಗಳು ಸಜೀವ ದಹನ

ಶಿಕ್ಷಕರ ಅಕಾಲಿಕ ನಿಧನದಿಂದ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Continue Reading

hasana

ಬುದ್ಧಿವಾದ ಹೇಳಿದ ಯುವಕರ ಮೇಲೆ ಕಾರು ಹರಿಸಿದ ಕಿಡಿಗೇಡಿಗಳು; ಓರ್ವ ಸಾವು

Published

on

ಹಾಸನ: ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಮನು(27) ಎಂದು ಗುರುತಿಸಲಾಗಿದೆ.


ಮೃತ ಮನು ನಡುರಾತ್ರಿ 12 ಗಂಟೆ ಸಮಯದಲ್ಲಿ ತನ್ನ ಸ್ನೇಹಿತರಾದ ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ಜತೆ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದರು. ಆ ವೇಳೆ ಕಾರಿನಲ್ಲಿ ವೇಗವಾಗಿ ಬಂದ ಕಿಡಿಗೇಡಿಗಳಿಗೆ ‘ನಿಧಾನವಾಗಿ ಕಾರು ಚಲಾಯಿಸಿ’ ಎಂದು ಬುದ್ಧಿವಾದ ಹೇಳಿದ್ದರು.

ಇದರಿಂದ ಆಕ್ರೋಶಗೊಂಡ ಕಾರು ಚಾಲಕ ಸ್ಬಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಮನು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾನೆ. ಇತರ ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಪ್ರೇಮಿಯ ಸಿಟ್ಟಿಗೆ ಬರ್ಬರವಾಗಿ ಕೊಲೆಯಾದ ಮಹಿಳೆ; ಆರೋಪಿಯ ಬಂಧನ

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕ್ರೋಶಗೊಂಡ ಸ್ಥಳೀಯರು ಘಟನೆಯ ನಂತರ ಪ್ರತಿಭಟನೆ ನಡೆಸಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Continue Reading

hasana

ಮಕ್ಕಳ ನಿರ್ಲಕ್ಷ್ಯಕ್ಕೆ ಬೇಸತ್ತು ರೈಲು ಹಳಿ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡ ವೃದ್ಧ ದಂಪತಿ

Published

on

ಹಾಸನ: ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ವೃದ್ಧ ದಂಪತಿ ರೈಲು ಹಳಿಯ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಹಾಸನ ನಗರದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರೇಹೊಸೂರು ಗ್ರಾಮದ ನಿವಾಸಿ, ಡೇನಿಯಲ್(85) ಮತ್ತು ಅವರ ಪತ್ನಿ ಮೇರಿ(84) ಮೃತಪಟ್ಟವರು.


ಡೇನಿಯಲ್ ಅವರು ಈ ಹಿಂದೆ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡಿ, ಕಷ್ಟಪಟ್ಟು ಕಾಫಿತೋಟ, ಆಸ್ತಿ ಹಾಗೂ ಮನೆ ಮಾಡಿದ್ದರು. ದಂಪತಿಗಳಿಗೆ ನೆಲ್ಸನ್ ಮತ್ತು ವಿಲ್ಸನ್‌ ಎಂಬ ಇಬ್ಬರು ಗಂಡು ಮಕ್ಕಳಿದ್ದು, ಅವರಿಗೆ ಉತ್ತಮ ಜೀವನ ರೂಪಿಸಿಕೊಟ್ಟಿದ್ದರು. ನೆಲ್ಸನ್‌ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದರೆ, ಇನ್ನೊಬ್ಬ ಮಗ ವಿಲ್ಸನ್‌ ಹಾರೇಹೊಸೂರಿನಲ್ಲಿ ಕಾಫಿ ತೋಟ ನೋಡಿಕೊಂಡಿದ್ದ. ಇತ್ತೀಚಿನ ವರ್ಷಗಳಲ್ಲಿ ಮಕ್ಕಳು ತಂದೆ-ತಾಯಿಯನ್ನು ಸರಿಯಾಗಿ ನೋಡಿಕೊಳ್ಳದೆ ನಿರ್ಲಕ್ಷಿಸಿದ್ದರು.

ಇದರಿಂದ ಬೇಸತ್ತ ದಂಪತಿ ಕೆಲ ಸಮಯ ವೃದ್ಧಾಶ್ರಮದಲ್ಲಿದ್ದರು. ಮಕ್ಕಳ ನಿರ್ಲಕ್ಷ್ಯಕ್ಕೆ ಬೇಸತ್ತ ದಂಪತಿ ಮಾನಸಿಕವಾಗಿ ತೀವ್ರ ಕುಗ್ಗಿದ್ದು, ವೃದ್ಧಾಶ್ರಮದಿಂದ ಹೊರಟು ಸಾರಿಗೆ ಬಸ್‌ನಲ್ಲಿ ಆಗಮಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಇಳಿದು ರೈಲು ಹಳಿ ಮೇಲೆ ಮಲಗಿ ಜೀವನ ಅಂತ್ಯಗೊಳಿಸಿದ್ದಾರೆ. ಹಾಸನ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪವಿರುವ ಕರೀಗೌಡ ಬಡಾವಣೆಯ ರೈಲು ಹಳಿಗಳ ಮೇಲೆ ದಂಪತಿಯ ಶವಗಳು ಪತ್ತೆಯಾಗಿವೆ.

ಇದನ್ನೂ ಓದಿ: ಕುಟುಂಬದೊಂದಿಗೆ ತಿಂಡಿ ತಿನ್ನುತ್ತಿದ್ದಾಗಲೇ ಕುಸಿದು ಬಿದ್ದು 21ರ ತರುಣ ಸಾವು!

ಮೃತದೇಹದ ಗುರುತು ಸಿಕ್ಕ ಬಳಿಕ ಮಕ್ಕಳಿಗೆ ವಿಷಯ ತಿಳಿಸಿದರೂ ಮೃತದೇಹಗಳನ್ನು ಕೊಂಡೊಯ್ಯಲು ಹಿಂದೇಟು ಹಾಕಿದ್ದರು. ಕಡೆಗೆ ಸಂಬಂಧಿಕರು ಹಾಗೂ ರೈಲ್ವೇ ಪೊಲೀಸರು ತರಾಟೆಗೆ ತೆಗೆದುಕೊಂಡಿದ್ದರಿಂದ ಶವಾಗಾರದ ಬಳಿ ಬಂದು ಒಂದು ಹನಿ ಕಣ್ಣೀರು ಹಾಕದೆ ತಂದೆ ಮೇಲೆಯೇ ಆರೋಪಿಸಿದ್ದಾರೆ. ಹಾಸನ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page