Connect with us

ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರ ಅಶೀರ್ವಾದ ಪಡೆದ ಸಂಸದ ಕಟೀಲ್..!

Published

on

 ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರ ಅಶೀರ್ವಾದ ಪಡೆದ ಸಂಸದ ಕಟೀಲ್..!

ಮಂಗಳೂರು: ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ಅಭಿನಂದಿಸಿದ  ಬಿಜೆಪಿ ರಾಜ್ಯಾಧ್ಯಕ್ಷ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಹಾಜಬ್ಬರಿಂದ ಆಶೀರ್ವಾದ ಪಡೆದಿದ್ದಾರೆ.

ಸಭೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಸಂಸದರಿಗೆ ಸರಳ ಜೀವಿ, ಪದ್ಮಶ್ರೀ ಪುರಸ್ಕೃತ  ಹರೇಕಳ ಹಾಜಬ್ಬ ಎದುರಾಗಿದ್ದಾರೆ.

ಅಕ್ಷರ ಸಂತನನ್ನು ಕಂಡ ಸಂಸದರು ಆತ್ಮೀಯವಾಗಿ ಆಲಿಂಗನ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.ಈ ಅಪರೂಪ ವಿದ್ಯಮಾನಕ್ಕೆ ಸ್ಥಳದಲ್ಲಿದ್ದ ಮುಖಂಡರು, ಅಧಿಕಾರಿಗಳು, ಸಾರ್ಜನಿಕರು ಸಾಕ್ಷಿಯಾದರು.

ಮಂಗಳೂರಿನ ಹಳ್ಳಿಯೊಂದರಲ್ಲಿ ಹಣ್ಣುಗಳನ್ನು ಮಾರಿ ಬಂದ ಹಣದಿಂದ ಶಾಲೆಯನ್ನು ಕಟ್ಟಿದ ಹರೇಕಳ ಹಾಜಬ್ಬರ ಹೆಸರು ಇಂದು ದಿಲ್ಲಿವರೆಗೆ ತಲುಪಿದೆ.

ಇದೇ ಕಾರಣಕ್ಕೆ ಭಾರತ ಸರ್ಕಾರ ಅವರ ಸಾಧನೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಕಳೆದ 20 ವರ್ಷಗಳಿಂದ ದಕ್ಷಿಣ ಕನ್ನಡದ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ.

ವಿಶೇಷವೆಂದರೆ ತನಗಿಲ್ಲದ ಶಿಕ್ಷಣ ತನ್ನ ಊರಿನ ಮಕ್ಕಳಿಗೆ ಸಿಗಬೇಕು ಎನ್ನುವ ಮಹದಾಸೆಯಿಂದ ಕಿತ್ತಳೆ ಮಾರುತ್ತಿದ್ದ ಹರೇಕಳ ಹಾಜಬ್ಬ, ಜೀವನ ಸಾಗಿಸಿ ಉಳಿದ ಹಣದಿಂದಲೇ ಅಂಗನವಾಡಿ ಆರಂಭಿಸುವ ಮೂಲಕ ಶಿಕ್ಷಣ ನೀಡಿ ಅಕ್ಷರ ಸಂತನಾಗಿದ್ದಾರೆ.

ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ.

ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್ ಸರ್ಕಲಿನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದ್ದರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಮಹಿಳಾ, ಮಕ್ಕಳ ಆಸ್ಪತ್ರೆಯಲ್ಲಿ ಎನ್‌ ಆರ್‌ಸಿ ಕೇಂದ್ರ ಇಲ್ಲದಕ್ಕೆ ಗರಂ ಆದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ

Published

on

ಉಡುಪಿ:  ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ  ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ ಹೇಳಿದರು.

ಪ್ರತಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿಯೂ ಈ ಕೇಂದ್ರ ಇದೆ. ಆದರೆ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ಸುಪರ್ದಿಗೆ ಬಂದು  ನಾಲ್ಕು ವರ್ಷಗಳಾದರೂ ಇನ್ನೂ ಎನ್‌ ಆರ್‌ ಸಿಯನ್ನು ಆರಂಭಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಬಹಳ ಬೇಸರದ ಸಂಗತಿ. ಈ ಬಗ್ಗೆ ಜಿಲ್ಲಾಡಳಿತ, ಡಿಎಚ್‌ಓ, ಜಿಲ್ಲಾ ಸರ್ಜನ್ ಯಾವ ಕಾರಣಕ್ಕಾಗಿ ಇದನ್ನು ಇನ್ನೂ ಆರಂಭಿಸಿಲ್ಲ ಎಂಬುದರ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯಲ್ಲಿ ಮಕ್ಕಳು ದಾಖಲಾದ ಮೇಲೆ ಪ್ರತಿಯೊಂದು ಹೆಸರು, ತಾಯಿ ಹೆಸರು ದಾಖಲೆ ಮಾಡಿ, ಬಳಿಕ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಆದರೆ ಇಲ್ಲಿ ಕೇಸ್ ಶೀಟ್ ನೋಡಿದರೆ ಹಿನ್ನೆಲೆಯಲ್ಲಿ ಬರೆಯಲಾಗಿದೆ. ವಿವರ ಮಗುವಿನ ತಂದೆ ತಾಯಿ ಹೆಸರು ವಿಳಾಸ ಕೂಡ ಇಲ್ಲ. ಇದರಿಂದ ತಪ್ಪಾದ ಚಿಕಿತ್ಸೆ ನೀಡುವ ಸಾಧ್ಯತೆ ಹೆಚ್ಚು ಇರುತ್ತದೆ. ಇದರಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಅನಾವಶ್ಯಕವಾಗಿ ಆ ಮಗು ಅನಾರೋಗ್ಯಕ್ಕೆ ತುತ್ತಾಗುತ್ತದೆ. ಆದುದರಿಂದ ವೈದ್ಯರು ಈ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.

Continue Reading

BELTHANGADY

ಶಿರಾಡಿ ಘಾಟ್ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

Published

on

ಶಿರಾಡಿ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ನಡೆದಿದೆ.

 

ಕೊಕ್ಕಡ ನಿವಾಸಿ ಚಂದ್ರಶೇಖರ್ ಗೌಡ ,  ಉಜಿರೆ ನಿವಾಸಿಗಳಾದ ಶ್ರೀಧರ್ , ಜನಾರ್ದನ ಕೆರಿಮಾರ್ ಮೃತ ದುರ್ದೈವಿಗಳು. ಧರ್ಮಸ್ಥಳದಿಂದ ಮದ್ಯಾಹ್ನ 1.30ಕ್ಕೆ ಬೆಂಗಳೂರು ಮೂಲಕ ತಿರುಪತಿಗೆ ಹೊರಟಿದ್ದ ಕೆ.ಎಸ್. ಆರ್.ಟಿ.ಸಿ ರಾಜಹಂಸ ಬಸ್ ಮತ್ತು ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಗೆ ಬರುತ್ತಿದ್ದ ಕಾರು ಶಿರಾಡಿ ಘಾಟ್ ಗಡಿ ಸಮೀಪ ಮುಖಾಮುಖಿ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

 

ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜಗುಜ್ಜಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ರೆ ಮತ್ತೋರ್ವರು ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.  ಘಟನೆಯಲ್ಲಿ ಸುರೇಶ್ ಎಂಬವರಿಗೂ ಕೂಡಾ ಗಾಯಗಳಾಗಿವೆ ಎಂದು ತಿಳಿದುಬಂದಿದೆ.  ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

LATEST NEWS

ಸಿಲಿಂಡರ್ ಅಭಾವ: ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

Published

on

ಬೆಂಗಳೂರು: ಇಸ್ರೇಲ್‌, ಅಮೇರಿಕ ಮತ್ತು ಇರಾನ್‌ ಯುದ್ಧದ ಕಿಚ್ಚು ಈಗಾಗಲೇ ಭಾರತದ ಅಡುಗೆ ಮನೆಯ ಬಾಗಿಲು ತಟ್ಟಿದೆ. ಇದೀಗ ಗ್ಯಾಸ್ ಸಿಲಿಂಡರ್ ಕೊರತೆಯ ನಡುವೆ, ಗ್ರಾಹಕರಿಗೆ ಮತ್ತು ಹೋಟೆಲ್ ಉದ್ಯಮಕ್ಕೆ ಈಗ ಬೆಲೆ ಏರಿಕೆಯ ಬಿಸಿ ಮತ್ತೊಂದು ಶಾಕ್ ನೀಡುವ ಸಾಧ್ಯತೆಯಿದೆ.


ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್​ ಮಾಲೀಕರ ಸ್ಥಿತಿ ಅಯೋಮಯವಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್​​ಗಳು ಸಹ ಬಂದ್‌ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ ಅಂಗಡಿಯ ಸರದಿ ಶುರುವಾಗಿದೆ. ಕಮರ್ಷಿಯಲ್ ಗ್ಯಾಸ್​ನಂತೆ ಅಡುಗೆ ಆಯಿಲ್ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಅಡುಗೆ ಎಣ್ಣೆ ಮಾಲಿಕರೊಬ್ಬರು ಪ್ರತಿಕ್ರಿಯಿಸಿದ್ದು, ಕಳೆದ 1 ವಾರದಿಂದ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ. 100-200 ಬಾಕ್ಸ್‌ ಎಣ್ಣೆ ಬುಕ್‌ ಮಾಡಿದರೆ 20-50 ಬಾಕ್ಸ್‌ ಮಾತ್ರ ಕಳುಹಿಸುತ್ತಾರೆ. ಏಜೆಂಟರಲ್ಲಿ ಕೇಳಿದರೆ, ಸಪ್ಲೈ ಆಗುತ್ತಿಲ್ಲ. ಹೆಚ್ಚು ಬಾಕ್ಸ್‌ ನೀಡಲು ಆಗಲ್ಲ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲದೇ 15-20 ರೂ. ದರ ಜಾಸ್ತಿ ಆಗಿರುವುದರಿಂದ ನಮಗೆ ತುಂಬಾ ಸಮಸ್ಯೆ ಆಗಿದೆ ಎಂದಿದ್ದಾರೆ.

ಇದನ್ನೂ ಓದಿ: ಸೀಮೆಎಣ್ಣೆ ಹಂಚಿಕೆ ಮತ್ತು ಆಮದು ನೀತಿಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದ ಹೊಸ ನಿರ್ಧಾರ

ಗ್ಯಾಸ್ ಅಭಾವ ಮತ್ತು ಕಪ್ಪು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಸಿಲಿಂಡರ್ ಖರೀದಿಸಬೇಕಾದ ಅನಿವಾರ್ಯತೆಯಿಂದಾಗಿ ಹೋಟೆಲ್ ಆಹಾರ ಪದಾರ್ಥಗಳ ಬೆಲೆ ಹೆಚ್ಚಳವಾಗುವ ಭೀತಿ ಎದುರಾಗಿದೆ. ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ಕಾಡುತ್ತಿದೆ. ನಗರದ ಕೆಲವು ಹೋಟೆಲ್‌ಗಳು ಮತ್ತು ಪಿಜಿಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಇಲ್ಲದೆ ಮತ್ತೆ ಹಳೆಯ ಪದ್ಧತಿಯಂತೆ ಸೌದೆ ಒಲೆಗಳನ್ನು ಬಳಸುವ ಅನಿವಾರ್ಯತೆ ಎದುರಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page