Connect with us

DAKSHINA KANNADA

MRPL ಚಿಮಿಣಿಯಲ್ಲಿ ‌ಬೆಂಕಿ ಸಹಿತ ದಟ್ಟ ಹೊಗೆ: ಭೀತಿಯಲ್ಲಿ ಗ್ರಾಮಸ್ಥರು..!

Published

on

ಮಂಗಳೂರು: ನಗರದ ಹೊರವಲಯದ ಎಂಆರ್‌ಎಲ್ ಚಿಮಿಣಿ ಕೊಳವೆಯಲ್ಲಿ ‌ಬೆಂಕಿ ಸಹಿತ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಭಯಭೀತರಾದ ಸ್ಥಳೀಯರು ಜಮಾಯಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.


ಜೋಕಟ್ಟೆ ಭಾಗದಲ್ಲಿರುವ ಎಂಆರ್‌ಪಿಎಲ್‌ನ ಚಿಮಿಣಿ ಕೊಳವೆಯಲ್ಲಿ ಬೆಂಕಿ ಉಗುಳುತ್ತಾ ದಟ್ಟ ಹೊಗೆ ಕಾಣಿಸಿಕೊಂಡಿದೆ.

ಈ ಸಂದರ್ಭ ಭಯಭೀತರಾದ ಸ್ಥಳೀಯ ಜನರು ಕಳವಾರು ಪರಿಸರದಲ್ಲಿ ಸಾಗುತ್ತಿದ್ದ ಎಂಆರ್‌ಪಿಎಲ್ ಅಧಿಕಾರಿಗಳನ್ನು ತಡೆದು ನಿಲ್ಲಿಸಿ ರಸ್ತೆಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾತ್ರಿ ಹೊತ್ತು ವಾರಕ್ಕೆ ಎರಡು ಬಾರಿಯಂತೆ ಈ ರೀತಿಯಲ್ಲಿ ಹೊಗೆ ಬಿಟ್ಟಲ್ಲಿ ಇಲ್ಲಿನ ಜನತೆ ಬದುಕುವುದಾದರೂ ಹೇಗೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

DAKSHINA KANNADA

ಲಕ್ಷ್ಮಣ ಮರಕಡರಿಗೆ ಯಕ್ಷ ಸವ್ಯಸಾಚಿ ಬಿರುದು ಪ್ರದಾನ

Published

on

ಮಂಗಳೂರು : ಶ್ರೀಕಟೀಲು ಮೇಳದ ಕಲಾವಿದ, ಯಕ್ಷ ಗುರು ಲಕ್ಷ್ಮಣ ಕುಮಾರ್ ಮರಕಡರಿಗೆ ಕದ್ರಿ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀಭಗವದ್ಗೀತಾಮೃತ ಪುರಸ್ಕಾರದೊಂದಿಗೆ “ಯಕ್ಷ ಸವ್ಯ ಸಾಚಿ” ಬಿರುದು ನೀಡಿ ಗೌರವಿಸಲಾಯಿತು.

ಶ್ರೀ ಮದ್ ಭಗವದ್ಗೀತೆಯ  ಪ್ರಚಾರಕ, ಆಧ್ಯಾತ್ಮಿಕ ಗುರು ಸುಬ್ರಾಯ  ನಂದ್ಯೋಡಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಲಕ್ಷ್ಮಣ ಅವರು ಗಣೇಶ ಪುರ, ಸುರತ್ಕಲ್ ಸದಾಶಿವ ಮಹಾಗಣಪತಿ, ತಲಕಳ, ಬಪ್ಪನಾಡು, ಉಳ್ಳಾಲ ಚೀರುಂಭ ಭಗವತೀ , ಸಸಿಹಿತ್ಲು ಭಗವತಿ, ಎಡನೀರು ಮೇಳಗಳಲ್ಲಿ ತಿರುಗಾಟ ಮಾಡಿ ಕಟೀಲು  ಮೇಳದಲ್ಲಿ ಈಗ 7ನೇ ವರ್ಷದ  ತಿರುಗಾಟ ಮಾಡುತ್ತಿರುವ ನಿಷ್ಠಾವಂತ ಕಲಾಸಾಧಕ.

ಕಾಸರಗೋಡು ಮತ್ತು ಮಂಗಳೂರು ಪರಿಸರದಲ್ಲಿ ಯಕ್ಷಗಾನ ಶಿಕ್ಷಕನಾಗಿ ತರಗತಿ ನಡೆಸಿ ಸಮೃದ್ಧ ಶಿಷ್ಯ ಗಡಣ ಹೊಂದಿರುವ ಯಕ್ಷ ಗುರು.ಆಮೇರಿಕಾ, ಮಸ್ಕತ್, ಆಸ್ಟ್ರೇಲಿಯಾ, ದುಬೈ ದೇಶಗಳಲ್ಲಿ ಪುಂಡು, ಸ್ತ್ರೀ,ರಾಜವೇಷ,ಹಾಸ್ಯ, ಎದುರು ವೇಷಗಳೆಲ್ಲವನ್ನೂ ಸಮರ್ಥವಾಗಿ ನಿರ್ವಹಿಸುತ್ತಿರುವ  ಅಪೂರ್ವ ಯಕ್ಷ ಕಲಾ ಸಾಧಕ ಎಂದು ಕದ್ರಿ ನವನೀತ ಶೆಟ್ಟಿ ಅಭಿನಂದಿಸಿದರು.

ಇದನ್ನೂ ಓದಿ : ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಕಾರ್ಯಕ್ರಮದಲ್ಲಿ  ಯಕ್ಷಗಾನ ಅಕಾಡೆಮಿ ಸದಸ್ಯ ಮೋಹನ್ ಕೊಪ್ಪಳ ಕದ್ರಿ, ಡಾ.ಶಶಾಂಕ್ ಮತ್ತಿತ್ತರರು ಉಪಸ್ಥಿತರಿದ್ದರು. ಮೇಳದ ಎಲ್ಲಾ ಕಲಾವಿದರಿಗೆ ಸೇವಾಕರ್ತರಾದ ಗೀತಾ ಪ್ರಚಾರಕಿ ಸವಿತಾ ಕೊರಗಪ್ಪ ಅವರು ಅರ್ಥ ಸಹಿತ ಭಗವದ್ಗೀತೆಯನ್ನು ವಿತರಿಸಿದರು. ಕಟೀಲು ಮೇಳದವರಿಂದ ಶ್ರೀದೇವಿ ಮಹಾತ್ಮೆ ಸೇವೆ ಬಯಲಾಟ ಜರುಗಿತು.

 

Continue Reading

DAKSHINA KANNADA

ಜಪ್ಪಿನಮೊಗರುವಿನಲ್ಲಿ 16ನೇ ವರ್ಷದ ಜಯ ವಿಜಯ ಕಂಬಳಕ್ಕೆ ಚಾಲನೆ

Published

on

ಮಂಗಳೂರು :  ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 16 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು(ಫೆ.14) ಬೆಳಗ್ಗೆ ಚಾಲನೆ ದೊರೆತಿದೆ.

ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿ ಮೆನ್ನು ತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥಈ ಕಂಬಳ ನಡೆಯುತ್ತಿದೆ. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್‌ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಇದನ್ನೂ ಓದಿ : ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ನುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಕಟೀಲು ಕ್ಷೇತ್ರದ ಅನಂತಪದ್ಮನಾಭ ಆಸ್ರಣ್ಣ, ಬಿಜೆಪಿ ನಾಯಕ ಮೋನಪ್ಪ ಭಂಡಾರಿ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌, ಪ್ರವೀಣ್‌ಚಂದ್ರ ಆಳ್ವ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Continue Reading

DAKSHINA KANNADA

ಫೆ.21 ರಂದು ಕುದ್ರೋಳಿ ಕ್ಷೇತ್ರ ತೀರ್ಥಾಟನೆ

Published

on

ಮಂಗಳೂರು : 114 ವರ್ಷಗಳ ಹಿಂದೆ 1912 ರ ಫೆ.21 ರಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ಶಿವ ಲಿಂಗ ಪ್ರತಿಷ್ಠಾಪನೆ ಮಾಡಿ ಅವಕಾಶ ವಂಚಿತ ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯದ ಹೊಸ ದಿಕ್ಕನ್ನು ತೋರಿಸಿದ ಪುಣ್ಯ ಕ್ಷಣದ ಸ್ಮರಣಾರ್ಥ ಇದೇ ಫೆ.21 ರಂದು ಮಂಗಳೂರಿನಲ್ಲಿ ‘ಗುರುವಿನೆಡೆಗೆ ನಮ್ಮ ನಡಿಗೆ… ಸಮಾಜದ ಬೆಳಕಿನೆಡೆಗೆ ನಮ್ಮ ಪಯಣ’ ಎಂಬ ಸಂಕಲ್ಪದೊಂದಿಗೆ ಶ್ರೀ ಕುದ್ರೋಳಿ ಕ್ಷೇತ್ರ ತೀರ್ಥಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ನಾರಾಯಣ ಗುರುಗಳು ನೀಡಿದ ಸಂದೇಶದ ಅನುಷ್ಠಾನ ಈ ಕಾರ್ಯಕ್ರಮದ ಉದ್ದೇಶ. ತೀರ್ಥಾಟನೆಯ ಪಾದಯಾತ್ರೆಯು ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಿಂದ ಹೊರಟು ನೆಹರು ಮೈದಾನಕ್ಕೆ ಹಾಗೂ ಅಲ್ಲಿಂದ ಮುಂದುವರಿದು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಕುದ್ರೋಳಿ ಕ್ಷೇತ್ರಕ್ಕೆ ತಲುಪಲಿದೆ. ಸುಮಾರು 10 ಸಾವಿರ ಜನರು ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಶ್ರೀ ಗುರುಗಳ ಜ್ಞಾನದ ಸಂಕೇತವಾದ ಹಳದಿ ವಸ್ತ್ರ ಧಾರಣೆಯೊಂದಿಗೆ ‘ಓಂ ಶ್ರೀ ನಾರಾಯಣ ಪರಮ ಗುರುವೇ ನಮ:’ ಎಂಬ ಮಂತ್ರೋಚ್ಛಾರಣೆಯೊಂದಿಗೆ ನಡೆಯುವ ಈ ಯಾತ್ರೆ ಕೇವಲ ಪಾದಯಾತ್ರೆಯಲ್ಲ. ಅದು ಆತ್ಮ ಶುದ್ಧಿಯ ಪಥ, ಸಮಾಜ ಜಾಗೃತಿಯ ಸಂಕಲ್ಪ ಎಂದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿ, ಅಭಿವೃದ್ಧಿ ಸಮಿತಿ, ಎಲ್ಲಾ ಶ್ರೀ ನಾರಾಯಣಗುರು ಅನುಯಾಯಿ ಸಂಘಗಳು, ಗರೋಡಿಗಳು ಮತ್ತು ಸಮಾಜದ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಈ ತೀರ್ಥಾಟನೆಯನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ವರ್ಷಗಳಲ್ಲಿ ವರ್ಷಾವಧಿ ಜಾತ್ರೆಯ ಸಂದರ್ಭ ಇಂತಹ ತೀರ್ಥಾಟನೆಯನ್ನು ನಡೆಸುವ ಉದ್ದೇಶವಿದೆ ಎಂದು ಪದ್ಮರಾಜ್  ಆರ್. ತಿಳಿಸಿದರು.

ಇದನ್ನೂ ಓದಿ :ಸಾವಿನಲ್ಲೂ ಸಾರ್ಥಕತೆ ಮೆರೆದ ಪುಟ್ಟ ಕಂದಮ್ಮ: ದೇಶದ ಅತಿಕಿರಿಯ ಅಂಗಾಂಗ ದಾನಿ ಆಲಿನ್ ಶೆರಿನ್

ಸುದ್ದಿಗೋಷ್ಠಿಯಲ್ಲಿ ಕ್ಷೇತ್ರಾಡಳಿತ ಸಮಿತಿ ಹಾಗೂ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.

 

Continue Reading
Advertisement

Trending

Copyright © 2025 Namma Kudla News

You cannot copy content of this page